CAA: ಮುಂದಿನ ವಾರ ಪೌರತ್ವ ತಿದ್ದುಪಡಿ ಕಾಯಿದೆ ನಿಯಮಾವಳಿ ಜಾರಿ - Vistara News

ದೇಶ

CAA: ಮುಂದಿನ ವಾರ ಪೌರತ್ವ ತಿದ್ದುಪಡಿ ಕಾಯಿದೆ ನಿಯಮಾವಳಿ ಜಾರಿ

ಈ ತಿಂಗಳ ಆರಂಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಲೋಕಸಭೆ ಚುನಾವಣೆಗೆ ಮುನ್ನ ಸಿಎಎ (CAA) ನಿಯಮಗಳನ್ನು ಅಧಿಸೂಚನೆ ಮಾಡಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದರು.

VISTARANEWS.COM


on

amit shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಮುಂದಿನ ಎರಡು ವಾರಗಳಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ (The Citizenship Amendment Act – CAA) ಜಾರಿ ಮಾಡುವ ಕುರಿತ ಗೃಹ ವ್ಯವಹಾರಗಳ ಸಚಿವಾಲಯದಿಂದ (MHA) ನಿಯಮಗಳ ಕುರಿತ ಸೂಚನೆ ಹೊರಡಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ (model code of conduct – ಎಂಸಿಸಿ) ಜಾರಿಗೆ ಬರುವ ಮೊದಲು ಈ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಗೊತ್ತಾಗಿದೆ. ಲೋಕಸಭೆ ಚುನಾವಣೆಯ (Lok sabha Election 2024) ದಿನಾಂಕಗಳನ್ನು ಘೋಷಿಸಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರುತ್ತದೆ.

ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಅರ್ಜಿದಾರರಿಗೆ ಅಗತ್ಯವಿರುವ ಪುರಾವೆಗಳನ್ನು ನಿಯಮಗಳು ರೂಪಿಸುತ್ತವೆ. ಡಿಸೆಂಬರ್ 31, 2014ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಂತಹ ನೆರೆಯ ಮುಸ್ಲಿಂ-ಬಹುಸಂಖ್ಯಾತ ದೇಶಗಳಿಂದ ವಲಸೆ ಬಂದ ಹಿಂದೂಗಳು, ಸಿಖ್‌ಗಳು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವವನ್ನು CAA ಒದಗಿಸುತ್ತದೆ. ಹೀಗೆ ಮಾಡುವಂತೆ 1955ರ ಪೌರತ್ವ ಕಾಯಿದೆಗೆ ತಿದ್ದುಪಡಿ ಮಾಡಲಾಗಿದೆ.

CAAಯ ಜಾರಿಯು ಭಾರತದಾದ್ಯಂತ ಭಾರೀ ವಿವಾದ ಮತ್ತು ವ್ಯಾಪಕ ಪ್ರತಿಭಟನೆಯನ್ನು ಹುಟ್ಟುಹಾಕಿತ್ತು. ಇದು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ. ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜಾತ್ಯತೀತ ತತ್ವಗಳನ್ನು ದುರ್ಬಲಗೊಳಿಸುತ್ತದೆ ಎಂದು ವಿಪಕ್ಷಗಳು ವಾದಿಸಿ ಪ್ರತಿಭಟನೆ ನಡೆಸಿದ್ದವು. ಮತ್ತೊಂದೆಡೆ, ನೆರೆಯ ದೇಶಗಳಿಂದ ಕಿರುಕುಳಕ್ಕೊಳಗಾದ ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಮಾನವೀಯ ಕ್ರಮ ಇದು ಎಂದು ಸರ್ಕಾರವು ಕಾನೂನನ್ನು ಸಮರ್ಥಿಸಿತು.

ಕಾಯಿದೆಯ ಪ್ರಕಾರ, ಪೌರತ್ವ ಕೋರಿದವರು ಧಾರ್ಮಿಕ ಕಿರುಕುಳ ಹೊಂದಿದ್ದಾರೆ ಎಂಬುದಕ್ಕೆ ಸಾಕ್ಷ್ಯ ಕೇಳಲಾಗುವುದಿಲ್ಲ. ವಲಸೆ ಬಂದವರು ಕಿರುಕುಳ ಅಥವಾ ಕಿರುಕುಳದ ಭಯದಿಂದ ಹಾಗೆ ಮಾಡಿದ್ದಾರೆ ಎಂದು ಗ್ರಹಿಸಲಾಗುತ್ತದೆ. CAA ಅನ್ನು ಡಿಸೆಂಬರ್ 11, 2019ರಂದು ಸಂಸತ್ತು ಅಂಗೀಕರಿಸಿತು. ಅದೇ ವರ್ಷದ ಡಿಸೆಂಬರ್ 12ರಂದು ಅಧಿಸೂಚನೆಯನ್ನು ನೀಡಲಾಯಿತು. ಆದರೆ, ನಿಯಮಾವಳಿಗಳನ್ನು ತಿಳಿಸದ ಕಾರಣ ವಿವಾದಾತ್ಮಕ ಕಾನೂನು ಜಾರಿಗೆ ಬಂದಿಲ್ಲ.

ಈ ತಿಂಗಳ ಆರಂಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಲೋಕಸಭೆ ಚುನಾವಣೆಗೆ ಮುನ್ನ ಸಿಎಎ ನಿಯಮಗಳನ್ನು ಅಧಿಸೂಚನೆ ಮಾಡಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದರು. ದೆಹಲಿಯಲ್ಲಿ ನಡೆದ ಇಟಿ-ನೌ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆಯಲ್ಲಿ (ಜಿಬಿಎಸ್) ಮಾತನಾಡಿದ್ದ ಶಾ, ಸಿಎಎ ಕುರಿತು ಚುನಾವಣೆಗೆ ಮುನ್ನ ಸೂಚನೆ ನೀಡಲಾಗುವುದು. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದಿದ್ದರು.

“ಈ ಕಾನೂನು ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಮತ್ತು ಅವರಿಗೆ ಭಾರತೀಯ ಪೌರತ್ವವನ್ನು ಒದಗಿಸಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಅವರು ಆ ಭರವಸೆಯಿಂದ ಹಿಂದೆ ಸರಿದರು” ಎಂದು ಶಾ ಹೇಳಿದ್ದರು.

ಇದನ್ನೂ ಓದಿ: CAA: ದೇಶಾದ್ಯಂತ ಒಂದೇ ವಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ; ಕೇಂದ್ರ ಮಹತ್ವದ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Delhi Temperature: ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ವಿದ್ಯುತ್‌ ಬೇಡಿಕೆ ಪ್ರಮಾಣವೂ ದಾಖಲೆಯಾಗಿದೆ. ದೆಹಲಿಯ ವಿದ್ಯುತ್‌ ಬಳಕೆಯು ಗುರುವಾರ ಮಧ್ಯಾಹ್ನದ 3.36ರ ಸುಮಾರಿಗೆ 8,300 ಮೆಗಾವ್ಯಾಟ್‌ ದಾಟಿದೆ. ಇದು ದೆಹಲಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಳಕೆಯಾದ ವಿದ್ಯುತ್‌ ಪ್ರಮಾಣ ಎಂಬ ದಾಖಲೆಯಾಗಿದೆ. ತಾಪಮಾನ ಹೆಚ್ಚಾದ ಕಾರಣ ಜನ ನಿರಂತರವಾಗಿ ಫ್ಯಾನ್‌, ಕೂಲರ್‌ ಹಾಗೂ ಎ.ಸಿಗಳ ಮೊರೆ ಹೋಗಿದ್ದಾರೆ.

VISTARANEWS.COM


on

Delhi Temperature
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಇರುವುದೇ ಹಾಗೆ. ಮಳೆ ಬಂದರೆ ಅತಿಯಾದ ಮಳೆ, ಚಳಿಗಾಲದಲ್ಲಿ ವಿಪರೀತ ಚಳಿ ಹಾಗೂ ಬೇಸಿಗೆಯಲ್ಲಿ ವಿಪರೀತ ಬಿಸಿಲು. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯ ಮಂಗೇಶ್‌ಪುರದಲ್ಲಿ (Mungeshpur) ಬುಧವಾರ (ಮೇ 29) ಮಧ್ಯಾಹ್ನ 2.30ರ ಸುಮಾರಿಗೆ 52.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ (Delhi Temperature) ದಾಖಲಾಗಿದ್ದು, ದೇಶದ ಇತಿಹಾಸದಲ್ಲಿಯೇ ಗರಿಷ್ಠ ತಾಪಮಾನ ಇದಾಗಿದೆ ಎಂದು ತಿಳಿದುಬಂದಿದೆ. ಚುರುಗುಡುವ ಬಿಸಿಲು, ಮನೆಯಲ್ಲಿ ಕೂತರೂ ಬೆವರುವ ಪರಿಸ್ಥಿತಿ ಎದುರಾದ ಕಾರಣ ರಾಜಧಾನಿ ಜನ ಪರಿತಪಿಸುವಂತಾಗಿದೆ ಎಂದು ತಿಳಿದುಬಂದಿದೆ.

ದೆಹಲಿಯತ್ತ ಉಷ್ಣಮಾರುತ ಅಪ್ಪಳಿಸುತ್ತಿದೆ. ಮಳೆಯೂ ಇಲ್ಲದ ಕಾರಣ ಬಿಸಿಲು ಮತ್ತಷ್ಟು ಜೋರಾಗಿದೆ. ನಿರೀಕ್ಷೆಗಿಂತ ಬರೋಬ್ಬರಿ 9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಹೆಚ್ಚಾಗಿರುವುದು ಜನ ಹೈರಾಣಾಗುವಂತೆ ಮಾಡಿದೆ. ದೆಹಲಿಯಲ್ಲಿ 2002ರಲ್ಲಿ 49.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದೇ ಇದುವರೆಗಿನ ದಾಖಲೆಯಾಗಿತ್ತು. ಆದರೀಗ, ತಾಪಮಾನವು 50 ಡಿಗ್ರಿ ಸೆಲ್ಸಿಯಸ್‌ ದಾಟಿರುವುದು ಜನರಿಗೆ ಚಿಂತೆಯಾಗಿದೆ. ತಾಪಮಾನದ ಕುರಿತು ದೆಹಲಿಯ ಹವಾಮಾನ ಇಲಾಖೆಯ ಕಚೇರಿಯು ಮಾಹಿತಿ ನೀಡಿದೆ.

ವಿದ್ಯುತ್‌ ಬೇಡಿಕೆಯಲ್ಲೂ ದಾಖಲೆ

ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ವಿದ್ಯುತ್‌ ಬೇಡಿಕೆ ಪ್ರಮಾಣವೂ ದಾಖಲೆಯಾಗಿದೆ. ದೆಹಲಿಯ ವಿದ್ಯುತ್‌ ಬಳಕೆಯು ಗುರುವಾರ ಮಧ್ಯಾಹ್ನದ 3.36ರ ಸುಮಾರಿಗೆ 8,300 ಮೆಗಾವ್ಯಾಟ್‌ ದಾಟಿದೆ. ಇದು ದೆಹಲಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಳಕೆಯಾದ ವಿದ್ಯುತ್‌ ಪ್ರಮಾಣ ಎಂಬ ದಾಖಲೆಯಾಗಿದೆ. ವಿದ್ಯುತ್‌ ಪೂರೈಕೆ ಕಂಪನಿಗಳ ಪ್ರಕಾರ ದೆಹಲಿಗೆ ನಿತ್ಯ 8,200 ಮೆಗಾ ವ್ಯಾಟ್‌ ವಿದ್ಯುತ್ ಬೇಕಾಗುತ್ತಿತ್ತು. ಆದರೆ, ತಾಪಮಾನ ಜಾಸ್ತಿಯಾದ ಕಾರಣ ಪ್ರತಿಯೊಂದು ಮನೆಯಲ್ಲೂ ನಿರಂತರವಾಗಿ ಫ್ಯಾನ್‌, ಕೂಲರ್‌ ಹಾಗೂ ಎ.ಸಿ ಬಳಸುತ್ತಿರುವ ಕಾರಣ ವಿದ್ಯುತ್‌ ಬೇಡಿಕೆಯೂ ದಾಖಲೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೆಹಲಿಯ ನಜಾಫ್‌ಗಢ, ಮಂಗೇಶ್‌ಪುರ ಹಾಗೂ ನರೇಲಾದಲ್ಲಿ ಗುರುವಾರ 45 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಕನಿಷ್ಠ ಎಂಬಂತಾಗಿದೆ. ಇದರಿಂದಾಗಿ ಬಹುತೇಕ ನಗರಗಳಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದೆ. ಇನ್ನು ಹೆಚ್ಚು ಮರುಭೂಮಿ ಹೊಂದಿರುವ ರಾಜಸ್ಥಾನದ ಫಲೋಡಿಯಲ್ಲಿ ಗರಿಷ್ಠ 51 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಬಂಗಾಳ ಕೊಲ್ಲಿಯಿಂದ ತಂಪು ಗಾಳಿ ಬೀಸುತ್ತಿರುವ ಕಾರಣ ಉತ್ತರ ಪ್ರದೇಶದಲ್ಲಿ ತಾಪಮಾನ ನಿಯಮಿತವಾಗಿದೆ ಎಂದು ತಿಳಿದುಬಂದಿದೆ.

ಅಗ್ನಿ ದುರಂತಗಳ ಸಂಖ್ಯೆಯೂ ಜಾಸ್ತಿ

ಗರಿಷ್ಠ ತಾಪಮಾನ ದಾಖಲಾಗುತ್ತಿರುವ ಕಾರಣ ದೆಹಲಿಯಲ್ಲಿ ಅಗ್ನಿ ದುರಂತಗಳ ಸಂಖ್ಯೆಯೂ ಜಾಸ್ತಿಯಾಗುತ್ತಿವೆ ಎಂಬುದಾಗಿ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. “ಪ್ರತಿದಿನ ಅಗ್ನಿ ಅವಘಡಗಳ ಕುರಿತು ಸರಾಸರಿ 200ಕ್ಕೂ ಅಧಿಕ ಕರೆಗಳು ಬರುತ್ತಿವೆ. ಇದು ಕಳೆದ 10 ವರ್ಷಗಳಲ್ಲೇ ಗರಿಷ್ಠವಾಗಿದೆ. ಇನ್ನೂ ಒಂದು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾದರೂ ಕರೆಗಳ ಸಂಖ್ಯೆ 250 ದಾಟಬಹುದು. ಹಾಗಾಗಿ, ದೆಹಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಯನ್ನು ಇನ್ನಷ್ಟು ಹೆಚ್ಚಿಸಲಾಗುತ್ತಿದೆ” ಎಂದು ದೆಹಲಿ ಫೈರ್‌ ಡಿಪಾರ್ಟ್‌ಮೆಂಟ್‌ ನಿರ್ದೇಶಕ ಅತುಲ್‌ ಗರ್ಗ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Continue Reading

ವೈರಲ್ ನ್ಯೂಸ್

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Viral News: ಕಾಲುವೆಯ ಗೇಟ್‌ ದಾಟಿ ಜನ ನಿಬಿಡ ಪ್ರದೇಶಕ್ಕೆ ಬಂದಿದ್ದ ಸುಮಾರು 10 ಅಡಿ ಉದ್ದದ ಮೊಸಳೆ ಮರಳಿ ನೀರಿನತ್ತ ತೆರಳಲು ಪ್ರಯತ್ನಪಡುವ ದೃಶ್ಯ ಸದ್ಯ ವೈರಲ್‌ ಆಗಿದೆ. ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಘಾಟ್ ಬಳಿ ಈ ಘಟನೆ ನಡೆದಿದೆ. ಗಂಗಾ ಕಾಲುವೆಯಿಂದ ಆಕಸ್ಮಿಕವಾಗಿ ಹೊರಗೆ ಬಂದ ಈ ಬೃಹತ್‌ ಗಾತ್ರದ ಮೊಸಳೆ ನರೋರಾ ಬ್ಯಾರೇಜ್ ಕೆಳಗಿನ ಗಂಗಾ ನದಿಗೆ ಹಾರಲು ಪ್ರಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೊ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral News
Koo

ಲಕ್ನೋ: ಮೊಸಳೆ- ಈ ಹೆಸರು ಕೇಳಿದರೆ ಸಾಕು ದೈತ್ಯ ದೇಹ, ಚೂಪಾದ ಹಲ್ಲು, ಸದಾ ಬೇಟೆಯಾಡಲು ಹೊಂಚು ಹಾಕುತ್ತಿರುವ ದೃಶ್ಯವೇ ಕಣ್ಣ ಮುಂದೆ ಬರುತ್ತದೆ. ಮೃಗಾಲಯದಲ್ಲಿ ದೂರದಿಂದ ಮೊಸಳೆಯನ್ನು ನೋಡಿ ಅದರ ಅಗಾಧ ಶಕ್ತಿಗೆ ಬೆರಗಾಗುತ್ತೇವೆ. ಅದು ಬಿಟ್ಟು ಕೋಟಿ ರೂ. ಕೊಡುತ್ತೇವೆ ಎಂದರೆ ಯಾರೂ ಮೊಸಳೆ ಸಮೀಪಕ್ಕೆ ಸುಳಿಯುವ ದುಸ್ಸಾಹಸ ಮಾಡುವುದಿಲ್ಲ. ಹೀಗಿರುವಾಗ ನಗರದ ಮಧ್ಯೆ ದೈತ್ಯ ದೇಹಿ ಮೊಸಳೆ ಕಂಡು ಬಂದರೆ ಏನಾಗಬೇಡ? ಹೌದು, ಇಂತಹದ್ದೊಂದು ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕಾಲುವೆಯ ಗೇಟ್‌ ದಾಟಿ ಜನ ನಿಬಿಡ ಪ್ರದೇಶಕ್ಕೆ ಬಂದಿದ್ದ ಸುಮಾರು 10 ಅಡಿ ಉದ್ದದ ಮೊಸಳೆ ಮರಳಿ ನೀರಿನತ್ತ ತೆರಳಲು ಪ್ರಯತ್ನಪಡುವ ದೃಶ್ಯ ನೋಡಿ ನೆಟ್ಟಿಗರು ರೋಮಾಂಚನಗೊಂಡಿದ್ದಾರೆ (Viral News).

ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಘಾಟ್ ಬಳಿ ಈ ಘಟನೆ ನಡೆದಿದೆ. ಗಂಗಾ ಕಾಲುವೆಯಿಂದ ಆಕಸ್ಮಿಕವಾಗಿ ಹೊರಗೆ ಬಂದ ಈ ಬೃಹತ್‌ ಗಾತ್ರದ ಮೊಸಳೆ ನರೋರಾ ಬ್ಯಾರೇಜ್ ಕೆಳಗಿನ ಗಂಗಾ ನದಿಗೆ ಹಾರಲು ಪ್ರಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಡಿಯೊದಲ್ಲಿ ಏನಿದೆ?

ಅದು ನರೋರಾ ಘಾಟ್‌ನ ನರೋರಾ ಬ್ಯಾರೇಜ್. ಕಾಲುವೆ ಸುತ್ತಲೂ ಕಬ್ಬಿಣದ ಸರಳುಗಳ ಗೇಟ್‌ ಅಳವಡಿಸಲಾಗಿದೆ. ಹೇಗೋ ಗೇಟ್‌ ದಾಟಿ ಈಚೆ ಬಂದ ಮೊಸಳೆಯೊಂದು ಸಿಮೆಂಟ್‌ ನೆಲದ ಮೇಲೆ ಒದ್ದಾಡುತ್ತಿರುವುದನ್ನು ತೋರಿಸುವ ಮೂಲಕ ದೃಶ್ಯ ಆರಂಭವಾಗುತ್ತದೆ. ನೀರಿಗೆ ಹೋಗಲು ಆ ಗೇಟ್‌ ದಾಟಲು ಮೊಸಳೆ ಪ್ರಯತ್ನಿಸುತ್ತದೆ. ಸರಳು ಹತ್ತಿ ಇನ್ನೇನು ಆಚೆ ಜಿಗಿಯಬೇಕು ಎನ್ನುವಷ್ಟರಲ್ಲಿ ನಿಯಂತ್ರಣ ತಪ್ಪಿ ದೈತ್ಯ ದೇಹದೊಂದಿಗೆ ದೊಪ್ಪೆಂದು ಸಿಮೆಂಟ್‌ ನೆಲಕ್ಕೆ ಬೀಳುತ್ತದೆ. ಮತ್ತೂ ಕೂಡ ಅದು ತನ್ನ ಪ್ರಯತ್ನವನ್ನು ಬಿಡುವುದಿಲ್ಲ. ಗೇಟ್‌ ಆಚೆ ಹಾರಲು ಯತ್ನಿಸುತ್ತದೆ. ಅಲ್ಲೇ ಸಮೀಪದಲ್ಲಿರುವ ಅಧಿಕಾರಿಯೊಬ್ಬರು ದೊಣ್ಣೆ ಹಿಡಿದು ಮೊಸಳೆ ಜನರತ್ತ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ಇದಿಷ್ಟು ವಿಡಿಯೊದಲ್ಲಿ ದಾಖಲಾಗಿದೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಅದನ್ನು ಸುರಕ್ಷಿತವಾಗಿ ನೀರಿಗೆ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಾಚರಣೆ ಹೇಗಿತ್ತು?

ಈ ಮೊಸಳೆಯನ್ನು ನೀರಿಗೆ ಸಾಗಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಹರ ಸಾಹಸವನ್ನೇ ಪಡಬೇಕಾಯಿತು. ಆರಂಭದಲ್ಲಿ ಅದರ ತಲೆಯನ್ನು ಬಟ್ಟೆಯಿಂದ ಮುಚ್ಚಿ ಅದರ ಕಾಲುಗಳನ್ನು ಹಗ್ಗದಿಂದ ಕಟ್ಟಲಾಯಿತು. ಬಳಿಕ ನಾಲ್ವರು ಅರಣ್ಯ ಅಧಿಕಾರಿಗಳು ಮೊಸಳೆಯ ತಲೆ ಮತ್ತು ಮುಂಭಾಗದ ಕಾಲುಗಳನ್ನು ಬಿಗಿದಿರುವ ಹಗ್ಗಗಳನ್ನು ಹಿಡಿದರು. ಈ ವೇಳೆ ಇನ್ನೊಬ್ಬ ಅಧಿಕಾರಿ ಅದರ ಹಿಂದಿನ ಕಾಲುಗಳಿಗೆ ಹಗ್ಗವನ್ನು ಸುತ್ತಿದರು. ಇಬ್ಬರು ಮೊಸಳೆಯ ಬಾಲವನ್ನು ಎತ್ತಿಕೊಂಡರು. ಹೀಗೆ ಕೆಲವು ಗಂಟೆಗಳ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸುರಕ್ಷಿತವಾಗಿ ನೀರಿಗೆ ಬಿಡಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹುಲಿ-ಮೊಸಳೆ ಮಧ್ಯೆ ರಣ ರೋಚಕ ಕದನ; ಕೊನೆಯಲ್ಲಿ ಗೆದ್ದವರು ಯಾರು?

ಹಲವರು ವಿಡಿಯೊ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪಾಪ ಮೊಸಳೆ ಹಸಿದಿರಬೇಕು. ಆಹಾರ ಅರಸಿಕೊಂಡು ಬಂದಿದೆ ಎಂದು ಹಲವರು ಕರುಣೆ ತೋರಿದ್ದಾರೆ. ಇನ್ನು ಕೆಲವರು ಇದು ಫೇಕ್‌ ವಿಡಿಯೊ, ಕೃತಕ ಬುದ್ಧಿಮತ್ತೆ ಬಳಸಿ ತಯಾರಿಸಲಾಗಿದೆ ಎಂದೂ ಹೇಳಿದ್ದಾರೆ. ಅದೇನೇ ಇರಲಿ ಇಷ್ಟು ದೈತ್ಯ ದೇಹಿ ಮೊಸಳೆ, ಅದರ ಸಾಹಸವನ್ನು ನೋಡಿ ಹಲವರು ರೋಮಾಂಚನಗೊಂಡಿದ್ದು ಸುಳ್ಳಲ್ಲ.

Continue Reading

ದೇಶ

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

PM Narendra Modi: ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

PM Narendra Modi
Koo

ಪಾಟ್ನಾ: ಲೋಕಸಭೆ ಚುನಾವಣೆ(Lok Sabha Election 2024)ಯ ಕೊನೆಯ ಹಂತಕ್ಕೆ ತಲುಪಿದ್ದು, ರಾಜಕೀಯ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಯನ್ನೂ ಎದುರಿಸುತ್ತಿರುವ ಒಡಿಶಾದಲ್ಲಿ ಕೊನೆಯ ಹಂತದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸಿಎಂ ನವೀನ್‌ ಪಟ್ನಾಯಕ್‌ (Naveen Patnaik) ಅವರ ಆರೋಗ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಈ ವಿಡಿಯೂ ದೇಶವ್ಯಾಪಿ ಬಹಳ ಸದ್ದು ಮಾಡುತ್ತಿದೆ.

ಒಡಿಶಾದ ಮಯೂರ್‌ಭಂಜ್‌ನಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಡಿಶಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹಾಲಿ ಸಿಎಂ ನವೀನ್‌ ಪಟ್ನಾಯಕ್‌ ಅವರ ಆರೋಗ್ಯ ಕ್ಷೀಣಿಸಲು ಕಾರಣ ಏನೆಂಬುದರ ಬಗ್ಗೆ ತನಿಖೆಗೆ ಆದೇಶಿಸುತ್ತೇವೆ ಎಂದು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಕಳೆದೊಂದು ವರ್ಷಗಳಿಂದ ನವೀನ್‌ ಬಾಬು(ಪಟ್ನಾಯಕ್‌) ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡುತ್ತಿರುವ ಬಗ್ಗೆ ಅವರ ಹಿತೈಷಿಗಳು ಇತ್ತೀಚೆಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಕಳೆದೊಂಡು ವರ್ಷಗಳಿಂದ ಪಟ್ನಾಯಕ್‌ ಅವರ ಪರಿಚಯಸ್ಥರು ಯಾರೇ ನನ್ನನ್ನು ಭೇಟಿ ಮಾಡಿದರೂ ಅವರ ಆರೋಗ್ಯದ ಬಗ್ಗೆ ಚರ್ಚೆ ಮಾಡುತ್ತಾರೆ. ಈಗೀಗ ಅವರಿಗೆ ತಮ್ಮ ಸ್ವಂತ ಕೆಲಸಗಳನ್ನೂ ಮಾಡಿಕೊಳ್ಳಲಾಗದಂತಹ ಅನಾರೋಗ್ಯ ಕಾಡುತ್ತಿದೆ ಎಂಬುದು ಅವರ ಆಪ್ತರಿಂದ ತಿಳಿದಿದೆ.

ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ. ಜೂ.10ರ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ನವೀನ್‌ ಬಾಬು ಅವರ ಅನಾರೋಗ್ಯಕ್ಕೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ವಿಶೇಷ ಸಮಿತಿ ರಚಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಒಡಿಶಾದಲ್ಲಿ ಬಿಜೆಡಿಯ 25 ವರ್ಷಗಳ ಆಡಳಿತ ಅಂತ್ಯಗೊಳ್ಳುವುದು ಖಚಿತ. ಬಿಜೆಪಿಯ ವ್ಯಕ್ತಿ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಒಡಿಶಾಗೆ ಒಡಿಯಾ ವ್ಯಕ್ತಿಯೇ ಸಿಎಂ ಆದರೆ ಚೆಂದ. ಹೊರಗಿನವರ ಕೈಗೆ ಅಧಿಕಾರ ಕೊಡಲು ಜನರಿಗೂ ಮನಸಿಲ್ಲ ಎಂದು ಪರೋಕ್ಷವಾಗಿ ಬಿಜೆಡಿ ಸಿಎಂ ಸ್ಥಾನದ ಆಕಾಂಕ್ಷಿ ಪಾಂಡಿಯನ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ:Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Continue Reading

ದೇಶ

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Arvind Kejriwal: ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ ಎಂಬುದಾಗಿ ಅರವಿಂದ್‌ ಕೇಜ್ರಿವಾಲ್‌ ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ. ಇದು ಈಗ ಭಾರಿ ಸಂಚಲನ ಮೂಡಿಸಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಶತಾಯ ಗತಾಯ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟದಲ್ಲಿ (India Bloc) ಆರಂಭದಿಂದಲೂ ಭಿನ್ನಮತ, ಭಿನ್ನಾಭಿಪ್ರಾಯ ತಲೆದೋರುತ್ತಿವೆ. ನಿತೀಶ್‌ ಕುಮಾರ್‌ (Nitish Kumar) ಇಂಡಿಯಾ ಒಕ್ಕೂಟ ತೊರೆದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಿದ್ದೇ ಇದಕ್ಕೆ ನಿದರ್ಶನಗಳಾಗಿವೆ. ಇದರ ಬೆನ್ನಲ್ಲೇ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ ಜತೆಗಿನ ನಮ್ಮ ಮದುವೆಯು (ಆಪ್‌-ಕಾಂಗ್ರೆಸ್‌ ಮೈತ್ರಿ) (AAP Congress Alliance) ಶಾಶ್ವತ ಅಲ್ಲ” ಎಂದು ಹೇಳುವ ಮೂಲಕ ಮೈತ್ರಿ ಮುರಿದುಕೊಳ್ಳುವ ಸೂಚನೆ ನೀಡಿದ್ದಾರೆ.

ಇಂಡಿಯಾ ಟುಡೇ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅರವಿಂದ್‌ ಕೇಜ್ರಿವಾಲ್‌ ಅವರು ಹೀಗೆ ಹೇಳಿದ್ದಾರೆ. “ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ. ಬಿಜೆಪಿಯನ್ನು ಸೋಲಿಸುವ ದೃಷ್ಟಿಯಿಂದ ಮಾತ್ರ ನಾವು ಮೈತ್ರಿ ಮಾಡಿಕೊಂಡಿದ್ದೇವೆ” ಎಂದು ಹೇಳಿರುವುದು ಭಾರಿ ಸಂಚಲನ ಮೂಡಿಸಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ

ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದಾಗಿ ಬಿಜೆಪಿ ಆಗ್ರಹಿಸುತ್ತಿದೆ. ಇದರ ಕುರಿತು ಪ್ರತಿಕ್ರಿಯಿಸಿದ ಅವರು, “ಬಿಜೆಪಿ ಹೇಳಿತು ಎಂದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅಷ್ಟಕ್ಕೂ, ನಾನು ಜೈಲಿಗೆ ಹೋಗುತ್ತೇನೆ ಎಂಬುದು ಮುಖ್ಯ ವಿಷಯವಲ್ಲ. ದೇಶದ ಭವಿಷ್ಯದ ಬಗ್ಗೆ ನನಗೆ ಚಿಂತೆ ಇದೆ. ಅವರಿಗೆ ಎಷ್ಟು ದಿನ ಬೇಕೋ, ಅಷ್ಟು ದಿನ ನನ್ನನ್ನು ಜೈಲಿನಲ್ಲಿ ಇರಿಸಲಿ. ನಾವು ಯಾವುದೇ ಕಾರಣಕ್ಕೂ ಕುಗ್ಗುವುದಿಲ್ಲ, ಹೋರಾಟ ನಿಲ್ಲಿಸಲ್ಲ” ಎಂದಿದ್ದಾರೆ. ಕೇಜ್ರಿವಾಲ್‌ ಅವರು ಜೂನ್‌ 2ರಂದು ಮತ್ತೆ ಜೈಲಿಗೆ ಹೋಗಲಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆಗೆ ದೀದಿ ಗೈರು

ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆ ಮುಗಿಯಲಿದೆ. ಇನ್ನು, ಕೊನೆಯ ಹಂತದ ಮತದಾನದ ದಿನವಾದ ಜೂನ್‌ 1ರಂದೇ ಇಂಡಿಯಾ ಒಕ್ಕೂಟದ ಪಕ್ಷಗಳ ಸಭೆ ನಡೆಯಲಿದೆ. ಆದರೆ, ಇಂಡಿಯಾ ಒಕ್ಕೂಟದ ಮಹತ್ವದ ಸಭೆಗೆ ಗೈರಾಗಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಇದು ಕೂಡ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Continue Reading
Advertisement
Cannes 2024 Sandalwood Actress Interview
ಫ್ಯಾಷನ್50 seconds ago

Cannes 2024 Sandalwood Actress Interview: ಕಾನ್‌ನಲ್ಲಿ ಹ್ಯಾಟ್ರಿಕ್‌ ವಾಕ್‌ ಮಾಡಿದ ಸ್ಯಾಂಡಲ್‌ವುಡ್‌ ನಟಿ ಇತಿ ಆಚಾರ್ಯ ಹೇಳಿದ್ದೇನು?

Delhi Temperature
ದೇಶ6 mins ago

Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Babar Azam
ವೈರಲ್ ನ್ಯೂಸ್23 mins ago

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Madhu Chopra on Priyanka Chopra-Nick Jonas' age gap
ಬಾಲಿವುಡ್31 mins ago

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Tamarind Fruit Benefits
ಆರೋಗ್ಯ31 mins ago

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

Karnataka Weather
ಮಳೆ47 mins ago

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Viral News
ವೈರಲ್ ನ್ಯೂಸ್1 hour ago

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Rashmika Mandanna shares why she doesn’t speak English
ಸಿನಿಮಾ1 hour ago

Rashmika Mandanna: ಸಮಾರಂಭಗಳಲ್ಲಿ ರಶ್ಮಿಕಾ ಇಂಗ್ಲೀಷ್‌ ಏಕೆ ಮಾತನಾಡಲ್ಲ? ನಟಿ ಕೊಟ್ಟ ಸ್ಪಷ್ಟನೆ ಏನು?

Bhavani Revanna
ಕರ್ನಾಟಕ1 hour ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Team India's T20 WC Jersey
ಕ್ರೀಡೆ1 hour ago

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ22 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌