ನವದೆಹಲಿ: ಕೆನಡಾ ರಾಷ್ಟ್ರವು ಭಯೋತ್ಪಾದಕರಿಗೆ ಸುರಕ್ಷಿತ ತಾಣವಾಗಿ ಬೆಳೆಯುತ್ತಿರುವುದಕ್ಕೆ ಖ್ಯಾತಿಯಾಗುತ್ತಿದೆ (Canada Safe haven for terrorist) ಎಂದು ನಾನು ಭಾವಿಸುತ್ತೇನೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ (MEA spokesperson Arindam Bagchi) ಅವರು ಹೇಳಿದ್ದಾರೆ. ಈ ಮೂಲಕ, ಕೆನಡಾ ಉಗ್ರರ ತಾಣವಾಗಿ ಬದಲಾಗುತ್ತಿದೆ ಎಂದು ಭಾರತವು ಲೆಬಲ್ ಮಾಡಿದೆ. ಜೂನ್‌ನಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಅವರ ಸಾವಿಗೆ ಭಾರತೀಯ ಸರ್ಕಾರಿ ಏಜೆಂಟರು ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡೋ ಅವರ “ಆರೋಪಗಳ” ತನಿಖೆಯ ಹೇಳಿಕೆಯ ಕುರಿತು ಭಾರತದ ವಿದೇಶಾಂಗವು (Ministry of External Affairs) ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ(India Canada Row).
ಈ ವಿಷಯವನ್ನು ನಿರ್ವಹಣೆ ಮಾಡುವುದರಲ್ಲಿ ಕೆನಡಾ ಸರ್ಕಾರವು ಪೂರ್ವಗ್ರಹಪೀಡಿತವಾಗಿದೆ. ಹರ್ದೀಪ್ ಸಿಂಗ್ ನಿಜ್ಜರ್ ಪ್ರಕರಣದ ಕುರಿತು ಕೆನಡಾ ಸರ್ಕಾರವು, ಭಾರತದೊಂದಿಗೆ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಆರೋಪಿಸಿದ್ದಾರೆ.
ನಿಜ, ಈ ಪ್ರಕರಣದಲ್ಲಿ ಪೂರ್ವಾಗ್ರಹವೇ ಹೆಚ್ಚಾಗಿದೆ ಎಂದು ನಾನು ಭಾವಿಸುತ್ತೇನೆ. ಅವರು ಆರೋಪಗಳನ್ನು ಮಾಡಿದ್ದಾರೆ ಮತ್ತು ರಾಜತಾಂತ್ರಿಕವಾಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ನಮಗೆ(ಭಾರತ) ಏನು ಅನ್ನಿಸುತ್ತದೆ ಎಂದರೆ ಕೆನಡಾ ಸರ್ಕಾರದ ಈ ಆರೋಪಗಳು ಮೂಲಭೂತವಾಗಿ ರಾಜಕೀಯ ಪ್ರೇರಿತ ಆರೋಪಗಳಂತೆ ತೋರುತ್ತಿವೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ರಾಜತಾಂತ್ರಿಕ ಸಂಬಂಧಗಳು ಸಂಘರ್ಷಕ್ಕೀಡಾಗಿವೆ. ಖಲಿಸ್ತಾನಿ ಉಗ್ರ ನಾಯಕನ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡವಿರುವ ಸಾಧ್ಯತೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೊಡೋ ಅವರು ಆರೋಪಿಸಿದ್ದರು. ಆ ಬಳಿಕ ಉಭಯ ರಾಷ್ಟ್ರಗಳ ನಡುವೆ ವಿವಾದ ಭುಗಿಲೆದ್ದಿತ್ತು.
India Canada Row: ಕೆನಡಾಗೆ ಭಾರತ ಮತ್ತೊಂದು ಗುದ್ದು; ವೀಸಾ ಸೇವೆಯೇ ರದ್ದು
ಭಾರತದ ಜತೆಗಿನ ಒಪ್ಪಂದವನ್ನು ಮುಂದೂಡಿ, ಭಾರತದ ರಾಯಭಾರಿಯನ್ನು ಉಚ್ಚಾಟಿಸಿ, ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದೆಲ್ಲ ಆರೋಪ ಮಾಡುತ್ತಿರುವ ಕೆನಡಾ ಸರ್ಕಾರಕ್ಕೆ (India Canada Row) ಭಾರತ ಸರ್ಕಾರ ಮತ್ತೊಂದು ಪೆಟ್ಟು ನೀಡಿದೆ. ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನೇ (Visa Services) ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಆ ಮೂಲಕ ದಿನಕ್ಕೊಂದು ಉಪಟಳ ಮಾಡುತ್ತಿರುವ ಕೆನಡಾಗೆ ತಿರುಗೇಟು ನೀಡಿದೆ.
ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಕೆನಡಾ ಸರ್ಕಾರ ಭಾರತದ ವಿರುದ್ಧ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮುಂದಿನ ಆದೇಶದವರೆಗೆ ಅಥವಾ ಅನಿರ್ದಿಷ್ಟಾವಧಿವರೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನು ಸ್ಥಗಿತಗೊಳಿಸಿದೆ. ಈ ಕುರಿತು ಭಾರತ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸದಿದ್ದರೂ, ಕೆನಡಾದಲ್ಲಿ ವೀಸಾ ಅಪ್ಲಿಕೇಶನ್ ಸೆಂಟರ್ ಹೊಂದಿರುವ ಬಿಎಲ್‌ಎಸ್ ಇಂಟರ್‌ನ್ಯಾಷನಲ್ ಸಂಸ್ಥೆಯು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪೋಸ್ಟ್ ಮಾಡಿದೆ.
ಈ ಸುದ್ದಿಯನ್ನೂ ಓದಿ: India Canada Row: ಖಲಿಸ್ತಾನಿ ಬೆದರಿಕೆಗೆ ಹಿಂದೂಗಳು ಹೆದರಲ್ಲ ಎಂದ ತುಮಕೂರು ಮೂಲದ ಕೆನಡಾ ಸಂಸದ ಆರ್ಯ
ಕೆನಡಾದಿಂದ ಭಾರತೀಯ ರಾಯಭಾರಿಯನ್ನು ಉಚ್ಚಾಟಿಸಿದ ಜಸ್ಟಿನ್ ಟ್ರುಡೊ ಕ್ರಮಕ್ಕೆ ಪ್ರತೀಕಾರವಾಗಿ ಕೆನಡಾದ ರಾಯಭಾರಿಯನ್ನು ಭಾರತ ಆಚೆಗಟ್ಟಿದೆ. ಇದರೊಂದಿಗೆ ಭಾರತ- ಕೆನಡಾ ಸಂಬಂಧ ಇನ್ನಷ್ಟು ಬಿಗಡಾಯಿಸಿದೆ. ಭಾರತೀಯ ವಿದೇಶಾಂಗ ಇಲಾಖೆಯು ಕೆನಡಾದ ರಾಯಭಾರಿಯನ್ನು ಕರೆಸಿಕೊಂಡು, ಇನ್ನು ಐದು ದಿನದಲ್ಲಿ ದೇಶ ಬಿಟ್ಟು ಆಚೆಗೆ ಹೋಗುವಂತೆ ಆದೇಶ ನೀಡಿದೆ. ಭಾರತದ ಆಂತರಿಕ ವ್ಯವಹಾರಗಳಲ್ಲಿ ಕೆನಡಾದ ಹಸ್ತಕ್ಷೇಪವನ್ನು ಖಂಡಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಕೆಲ ದಿನಗಳ ಹಿಂದಷ್ಟೇ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಜಸ್ಟಿನ್ ಟ್ರುಡೋ ಅವರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಮಾತಕತೆ ನಡೆಸಿದ್ದರು. ಇದೇ ವೇಳೆ, “ಕೆನಡಾದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಬೇಕು” ಎಂದು ಹೇಳಿದ್ದರು. ಖಲಿಸ್ತಾನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪರೋಕ್ಷವಾಗಿ ಆಗ್ರಹಿಸಿದ್ದರು. ಇದೇ ಕಾರಣಕ್ಕಾಗಿ ಕೆನಡಾ ಸರ್ಕಾರವು ಭಾರತದ ಜತೆಗಿನ ಒಪ್ಪಂದವನ್ನು ಮುಂದೂಡಿದೆ ಹಾಗೂ ಶೀತಲ ಸಮರ ಸಾರಿದೆ ಎಂದು ಹೇಳಲಾಗುತ್ತಿದೆ.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.