ನವದೆಹಲಿ: ಸನಾತನ ಧರ್ಮದ (Sanatana Dharma) ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ (Tamil Nadu CM MK Stalin) ಅವರ ಪುತ್ರರೂ ಆಗಿರುವ ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ವಿರುದ್ದ ಮತ್ತೊಂದು ಪ್ರಕರಣವು ದಾಖಲಾಗಿದೆ. ದಿಲ್ಲಿಯಲ್ಲಿ ಕೇಸ್ ದಾಖಲಾದ ಬೆನ್ನಲ್ಲೇ ಬಿಹಾರದ ಮುಝಫ್ಪರ್ಪುರ (Muzaffarpur Lawyer) ಮೂಲಕ ವಕೀಲ ಸುಧೀರ್ ಕುಮಾರ್ ಅವರು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ದ ಕೋರ್ಟ್ಗೆ (Muzaffarpur Court) ದೂರು ನೀಡಿದ್ದಾರೆ.
ಸುಧೀರ್ ಕುಮಾರ್ ಓಝಾ ಅವರು ಮುಝಾಫ್ಪರ್ಪುರದ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪಂಕಜ್ ಕುಮಾರ್ ಅವರ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಉದಯನಿಧಿ ಅವರು ಆಡಿರುವ ಮಾತುಗಳು ಹಿಂದೂಗಳ ಭಾವನೆಗೆ ಧಕ್ಕೆ ತಂದಿವೆ. ಭಾರತೀಯ ದಂಡ ಸಂಹಿತೆಯ ಅನುಸಾರ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. ವಿಚಾರಣೆಯನ್ನು ಸೆಪ್ಟೆಂಬರ್ 14 ಮುಂದೂಡಲಾಗಿದೆ.
ಮುಝಫ್ಪರ್ಪುರದ ಈ ವಕೀಲ ಸುಧೀರ್ ಕುಮಾರ್ ಓಝಾ ಅವರು, ಹಿರಿಯ ರಾಜಕೀಯ ನಾಯಕರು ಮತ್ತು ಸಿನಿಮಾ ನಟರು, ಇತರ ಸೆಲೆಬ್ರಿಟಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಮೂಲಕ ಆಗಾಗ ಸುದ್ದಿಯಲ್ಲಿರುತ್ತಾರೆ.
ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಸಚಿವರೂ ಆದ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ (Sanatan Dharma) ಕುರಿತು ನೀಡಿದ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. “ಸನಾತನ ಧರ್ಮವು ಮಲೇರಿಯಾ, ಕೊರೊನಾ ಹಾಗೂ ಡೆಂಗ್ಯೂ ಇದ್ದಂತೆ” ಎಂದು ಉದಯನಿಧಿ (Udhayanidhi Stalin) ಸ್ಟಾಲಿನ್ ಹೇಳಿದ್ದು, ಅವರ ಹೇಳಿಕೆಗೆ ತೀವ್ರ ವಿರೋಧ, ಟೀಕೆ ವ್ಯಕ್ತವಾಗಿವೆ.
Udhayanidhi Stalin, son of Tamilnadu CM MK Stalin, and a minister in the DMK Govt, has linked Sanatana Dharma to malaria and dengue… He is of the opinion that it must be eradicated and not merely opposed. In short, he is calling for genocide of 80% population of Bharat, who… pic.twitter.com/4G8TmdheFo
— Amit Malviya (@amitmalviya) September 2, 2023
ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡಿದರು. “ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದರು.
“ಕೆಲವು ವಿಷಯಗಳನ್ನು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಒಳ್ಳೆಯದು. ನಾವು ಡೆಂಗ್ಯೂ, ಸೊಳ್ಳೆ, ಮಲೇರಿಯಾ ಅಥವಾ ಕೊರೊನಾದಂತಹ ಸೋಂಕನ್ನು ವಿರೋಧಿಸಬಾರದು. ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು” ಎಂದು ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ಭಾಷಣ ಮಾಡಿದರು.
ಈ ಸುದ್ದಿಯನ್ನೂ ಓದಿ: Udhayanidhi Stalin: ಉದಯನಿಧಿ ರಾವಣನ ವಂಶಸ್ಥ! ಬಾಗೇಶ್ವರ ಬಾಬಾ ವಾಗ್ದಾಳಿ
ರಾಹುಲ್, ನಿತೀಶ್ ಮೌನವೇಕೆ? ಕೆಣಕಿದೆ ಬಿಜೆಪಿ
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇಂಡಿಯಾ ಕೂಟಕ್ಕೆ ಕಾರಣವಾಗಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಮೌನವನ್ನು ಪ್ರಶ್ನಿಸಿದೆ. ಸನಾತನ ಧರ್ಮವನ್ನು ಅವಹೇಳನ ಮಾಡಿರುವ, ಇಂಡಿಯಾ ಕೂಟದ ಪಾಲುದಾರ ಪಕ್ಷ ಡಿಎಂಕೆ ನಾಯಕನ ವಿರುದ್ಧ ರಾಹುಲ್ ಗಾಂಧಿ ಮತ್ತು ನಿತೀಶ್ ಕುಮಾರ್ ಏಕೆ ಮೌನ ವಹಿಸಿದ್ದಾರೆಂದು ಪ್ರಶ್ನಿಸಿದೆ.