Site icon Vistara News

Caught on Cam: ದಿಲ್ಲಿಯ ಕ್ಷೌರಿಕ ಅಂಗಡಿಯಲ್ಲಿ ಗುಂಡಿನ ದಾಳಿ, ಇಬ್ಬರ ಹತ್ಯೆ

Caught on Cam, Shot out at salon and two people injured

ನವದೆಹಲಿ: ಇಲ್ಲಿನ ದ್ವಾರಕ ಪ್ರದೇಶದ ಕ್ಷೌರಿಕರ ಅಂಗಡಿಯಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ (Shot out at Salon) ನಡೆದಿದ್ದು, ಅವರು ಮೃತರಾಗಿದ್ದಾರೆ ಎಂದು ದಿಲ್ಲಿಯ ಹಿರಿಯ ಪೊಲೀಸ್ ಅಧಿಕಾರಿಯು (Delhi Police) ಹೇಳಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದ್ವಾರಕ ಪ್ರದೇಶದ ಇಂದಿರಾ ಪಾರ್ಕ್ ಪಿಲ್ಲರ್ ನಂ.80ರ ಬಳಿ ಕ್ಷೌರಿಕ ಅಂಗಡಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಠಾಣೆಗೆ ಕರೆ ಬಂದಿತ್ತು ಎಂದು ಅವರು ತಿಳಿಸಿದ್ದಾರೆ. ಈ ಗುಂಡಿನ ದಾಳಿಯ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ(video viral).

ಗುಂಡಿನ ದಾಳಿಯಲ್ಲಿ ಮೃತಪಟ್ಟವರನ್ನು ಸೋನು ಮತ್ತು ಆಶೀಶ್ ಎಂದು ಗುರುತಿಸಲಾಗಿದೆ. ಹೆಚ್ಚಿನ ತನಿಖೆಯನ್ನು ಮಾಡಲಾಗುತ್ತಿದೆ.

ಕ್ರೈಮ್ ಮತ್ತು ಎಫ್‌ಎಸ್‌ಎಲ್ ತಂಡಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ ಎಂದು ದಿಲ್ಲಿ ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.

ಫೇಸ್‌ಬುಕ್‌ ಲೈವ್‌ನಲ್ಲಿದ್ದಾಗಲೇ ಉದ್ದವ್ ಠಾಕ್ರೆ ಬಣದ ಸೇನಾ ನಾಯಕನ ಪುತ್ರನಿಗೆ ಗುಂಡಿಟ್ಟು ಹತ್ಯೆ!

ಫೇಸ್‌ಬುಕ್ ಲೈವ್‌ನಲ್ಲಿದ್ದಾಗಲೇ (Facebook Live) ಉದ್ದವ್ ಠಾಕ್ರೆ ಬಣದ ಶಿವಸೇನಾ ನಾಯಕನ ಪುತ್ರರೊಬ್ಬರನ್ನು (Shiv Sena UBT leader son shot dead) ಗುಂಡು ಹೊಡೆದು ಹತ್ಯೆ ಮಾಡಿದ ಘಟನೆ ಗುರುವಾರ ಮುಂಬೈನಲ್ಲಿ (Mumbai) ನಡೆದಿದೆ. ಶಿವಸೇನೆಯ ಯುಬಿಟಿ ನಾಯಕನ ಮಗ ಅಭಿಷೇಕ್ ಘೋಸಲ್ಕರ್ ಅವರೊಂದಿಗೆ ಫೇಸ್‌ಬುಕ್ ಲೈವ್ ಮಾಡುತ್ತಿದ್ದ ವ್ಯಕ್ತಿಯೇ ಅವರಿಗೆ ಶೂಟ್ ಮಾಡಿದ್ದಾನೆ. ಬಳಿಕ ತಾನು ಶೂಟ್ ಮಾಡಿಕೊಂಡು ಸಾವಿಗೀಡಾಗಿದ್ದಾನೆ. ಫೇಸ್‌ಬುಕ್ ಲೈವ್‌ನಲ್ಲಿ ಚಿತ್ರೀಕರಣದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘೋಸಲ್ಕರ್ ಮತ್ತು ಅವರ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಇಬ್ಬರು ಮೃತಪಟ್ಟಿದ್ದಾರೆ. ಮುಂಬೈನ ದಹಿಸರ್ ಪ್ರದೇಶದ ಎಂಎಚ್‌ಬಿ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಅಭಿಷೇಕ್ ಅವರು ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಮಾಜಿ ಕೌನ್ಸಿಲರ್ ವಿನೋದ್ ಘೋಸಲ್ಕರ್ ಅವರ ಪುತ್ರರಾಗಿದ್ದಾರೆ.

‘ಮಾರಿಸ್ ಭಾಯ್’ ಎಂದು ಜನಪ್ರಿಯವಾಗಿ ಕರೆಯಲಾಗುವ ಮಾರಿಸ್ ನೊರೊನ್ಹಾ ಅವರ ಕಚೇರಿಗೆ ಅಭಿಷೇಕ್ ಘೋಸಲ್ಕರ್ ಅವರು ಹೋಗಿದ್ದರು. ಈ ವೇಳೆ, ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕೆಲವು ಭಿನ್ನಾಭಿಪ್ರಾಯಗಳ ನಂತರ ಇಬ್ಬರು ಇತ್ತೀಚೆಗೆ ಹೊಂದಾಣಿಕೆ ಮಾಡಿಕೊಂಡಿದ್ದರು ಮತ್ತು ವೆಬ್‌ಕಾಸ್ಟ್ ಆಗುತ್ತಿರುವ ಕಾರ್ಯಕ್ರಮಕ್ಕಾಗಿ ಘೋಸಲ್ಕರ್ ಅವರನ್ನು ಅವರ ಕಚೇರಿಗೆ ಆಹ್ವಾನಿಸಲಾಗಿತ್ತು. ಈ ವೇಳೆ ಅವರ ಮೇಲೆ ಗುಂಡು ಹೊಡೆದು ಸಾಯಿಸಲಾಯಿತು. ಆದರೆ, ಗುಂಡಿನ ದಾಳಿಯ ಹಿಂದಿನ ಕಾರಣ ಏನು ಎಂಬುದು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಮಸೀದಿ ಎದುರೇ ಗುಂಡಿನ ದಾಳಿಗೆ ಮೌಲ್ವಿ ಬಲಿ; ಯಾವ ಕಾರಣಕ್ಕೆ ಹತ್ಯೆ?

Exit mobile version