CBI Raids: ಕಾರ್ತಿ ಚಿದಂಬರಂಗೆ ಸೇರಿದ 9 ಕಚೇರಿಗಳ ಮೇಲೆ ದಾಳಿ - Vistara News

ದೇಶ

CBI Raids: ಕಾರ್ತಿ ಚಿದಂಬರಂಗೆ ಸೇರಿದ 9 ಕಚೇರಿಗಳ ಮೇಲೆ ದಾಳಿ

ಕಾಂಗ್ರೆಸ್‌ ನಾಯಕ ಕಾರ್ತಿ ಚಿದಂಬರಂ ಅವರಿಗೆ ಸೇರಿದ 9 ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಲಂಚ ಸ್ವೀಕರಿಸಿ 250 ಚೀನಾ ನಾಗರಿಕರಿಗೆ ಭಾರತ ಪ್ರವೇಶ ಅವಕಾಶ ನೀಡಿದ್ದು ಅವರ ಮೇಲಿರುವ ಪ್ರಮುಖ ಆರೋಪ.

VISTARANEWS.COM


on

ಕಾರ್ತಿ ಚಿದಂಬರಂ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಪುತ್ರ, ಕಾಂಗ್ರೆಸ್‌ ನಾಯಕ ಕಾರ್ತಿ ಚಿದಂಬರಂ ಅವರಿಗೆ ಸಂಬಂಧಿಸಿದ ಒಂಬತ್ತು ಆಸ್ತಿಗಳ ಮೇಲೆ ಮಂಗಳವಾರ ಏಕಕಾಲದಲ್ಲಿ ಸಿಬಿಐ ದಾಳಿ ನಡೆದಿದೆ. ಇದರಲ್ಲಿ ಬೆಂಗಳೂರಿನ ಒಂದು ಕಚೇರಿಯೂ ಸೇರಿದೆ. ದಿಲ್ಲಿಯ ಒಂದು, ಚೆನ್ನೈಯ ಮೂರು, ಮುಂಬಯಿಯ ಮೂರು, ಪಂಜಾಬಿನ ಒಂದು ಮತ್ತು ಒಡಿಶಾದ ಒಂದು ಕಚೇರಿಗಳಿಗೆ ಏಕಕಾಲದಲ್ಲಿ ದಾಳಿ ನಡೆದಿದೆ.

ಕಾರ್ತಿ ಅವರು 2010 ಮತ್ತು 2014ರ ನಡುವೆ ವಿದೇಶದಿಂದ ಸ್ವೀಕರಿಸಿದ ದೊಡ್ಡ ಮೊತ್ತದ ಹಣಕ್ಕೆ ಸಂಬಂಧಿಸಿದ ಕೇಸಿನಲ್ಲಿ ಈ ದಾಳಿ ನಡೆದಿದೆ. ಕಾರ್ತಿ ಅವರು ಸಾಬು ಎಂಬ ವ್ಯಕ್ತಿಯಿಂದ 50 ಲಕ್ಷ ರೂ.ಯನ್ನು ಸ್ವೀಕರಿಸಿದ್ದರು ಎಂದು ಸಿಬಿಐ ಮೂಲಗಳು ತಿಳಿಸಿವೆ. ಅದರ ಜತೆಗೆ, ಯುಪಿಎ-2 ಸರಕಾರದಲ್ಲಿ ಪಿ. ಚಿದಂಬರಂ ಅವರು ಗೃಹ ಸಚಿವರಾಗಿದ್ದಾಗ ಕಾರ್ತಿ ಚಿದಂಬರಂ ಅವರು 250 ಚೀನಾ ನಾಗರಿಕರಿಗೆ ವೀಸಾ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಹೊಸ ಕೇಸು ದಾಖಲಿಸಿಕೊಳ್ಳಲು ಸಿಬಿಐ ಮುಂದಾಗಿದೆ.

ಕಾರ್ತಿ ಚಿದಂಬರಂ ಅವರ ಮೇಲೆ ಸಿಬಿಐ ದಾಳಿ ನಡೆಯುವುದು ಇದು ಮೊದಲ ಸಲವೇನೂ ಅಲ್ಲ. 2019ರಲ್ಲಿ ಅವರಿಗೆ ಸೇರಿದ 16 ಆಸ್ತಿಗಳ ಮೇಲೆ ಸಿಬಿಐ ರೇಡ್‌ ನಡೆದಿತ್ತು. 2007ರಲ್ಲಿ ಯುಪಿಎ ಸರಕಾರವಿದ್ದಾಗ ಕೇಂದ್ರದ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯ ಮೂಲಕ ಮಾಧ್ಯಮ ವಲಯಕ್ಕೆ ವಿದೇಶಿ ಹೂಡಿಕೆಗೆ ಅವಕಾಶ ನೀಡುವಲ್ಲಿ ದೊಡ್ಡ ಮೊತ್ತದ ಲಂಚ ಸ್ವೀಕರಿಸಿದ್ದಾರೆಂದು ಆರೋಪಿಸಲಾಗಿತ್ತು. ಐಎನ್‌ಎಕ್ಸ್‌ ಮೀಡಿಯಾಕ್ಕೆ ಈ ಅನುಮತಿ ನೀಡಲಾಗಿತ್ತು.

ಲೋಧಿ ಎಸ್ಟೇಟ್‌ಗೆ ಲಗ್ಗೆ..
ಚಿದಂಬರಂ ಅವರಿಗೆ ಸೇರಿದ ದಿಲ್ಲಿಯ 80, ಲೋಧಿ ಎಸ್ಟೇಟ್‌ಗೆ ಮಂಗಳವಾರ ಮುಂಜಾನೆ 7.30ರ ಹೊತ್ತಿಗೆ ಏಳು ಮಂದಿಯ ಸಿಬಿಐ ಟೀಮ್‌ ಲಗ್ಗೆ ಇಟ್ಟಿತ್ತು. ಅಲ್ಲಿದ್ದ ಸಿಬ್ಬಂದಿಯನ್ನು ಪ್ರಶ್ನಿಸಿದ ತಂಡ ಕೆಲವು ದಾಖಲೆಗಳನ್ನು ತೆಗೆದುಕೊಂಡು ಹೋಗಿದೆ ಎಂದು ಮೂಲಗಳು ತಿಳಿಸಿವೆ. ದಾಳಿಯ ವೇಳೆ ಕಾರ್ತಿ ಚಿದಂಬರಂ ಅವರು ಮನೆಯಲ್ಲಿ ಇರಲಿಲ್ಲ.

ತೃಣಮೂಲ ಮುಖಂಡನ ಹತ್ಯೆ ಪ್ರಕರಣವೂ ಸಿಬಿಐಗೆ

ಎಷ್ಟು ಬಾರಿ ದಾಳಿಯೋ, ಲೆಕ್ಕ ತಪ್ಪಿದೆ!
ಈ ನಡುವೆ, ತಮ್ಮ ಆಸ್ತಿಗಳ ಮೇಲೆ ನಡೆದ ದಾಳಿಯ ಬಗ್ಗೆ ಕಾರ್ತಿ ಚಿದಂಬರಂ ಅವರು ಟ್ವಿಟರ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ. ʻʻಎಷ್ಟು ಬಾರಿ ದಾಳಿ ಮಾಡಿದರು ಎಂದು ನನಗೇ ಲೆಕ್ಕ ತಪ್ಪಿದೆ. ಬಹುಶಃ ಇದು ದಾಖಲೆಯಾಗಿರಬೇಕುʼʼ ಎಂದು ಬರೆದುಕೊಂಡಿದ್ದಾರೆ.

ಏನಿದು ಪ್ರಕರಣ?
ಯಾವುದೇ ದೇಶದ ನಾಗರಿಕರನ್ನು ದೇಶದೊಳಗೆ ಬಿಟ್ಟುಕೊಳ್ಳುವುದಕ್ಕೆ ಸಾಕಷ್ಟು ರೀತಿ ನಿಯಮಗಳು ಇರುತ್ತವೆ. ಪಾಸ್‌ ಪೋರ್ಟ್‌, ವೀಸಾ ವ್ಯವಸ್ಥೆಗಳೊಂದಿಗೆ ಬರಬೇಕು. ದೇಶದೊಳಗೆ ಬಂದ ವ್ಯಕ್ತಿ ಎಷ್ಟು ಸಮಯ ಇಲ್ಲಿರಬಹುದು ಎನ್ನುವುದಕ್ಕೂ ಮಿತಿಗಳಿವೆ. ಆದರೆ, ಈ ನಿಯಮಗಳಲ್ಲಿ ಸಡಿಲಿಕೆ ಮಾಡಿ ಕಾರ್ತಿ ಚಿದಂಬರಂ ಅವರು 250 ಚೀನಾ ಪ್ರಜೆಗಳನ್ನು ದೇಶದೊಳಗೆ ಬರಲು ಅವಕಾಶ ಮಾಡಿಕೊಟ್ಟಿದ್ದರು ಎನ್ನುವುದು ಆರೋಪ. ಒಬ್ಬ ಏಜೆಂಟ್‌ ಮೂಲಕ ಈ ವ್ಯವಹಾರ ನಡೆದಿದ್ದು, ಇದಕ್ಕಾಗಿ ಕಾರ್ತಿ ಪಡೆದಿರುವ ಲಂಚದ ಮೊತ್ತ 50 ಲಕ್ಷ ರೂ. ಎನ್ನಲಾಗುತ್ತಿದೆ.

ಇನ್ನೂ ಹಲವರ ಮೇಲೆ ದಾಳಿ?
ಇದೇ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಹಲವರ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಐಎನ್‌ಎಕ್ಸ್‌ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ಮಂಡಳಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಕೂಡಾ ಈ ಹಿಂದೆ ಬಂಧಿಸಿತ್ತು. ಕೆಲವು ದಿನಗಳ ಕಾಲ ಅವರಿಗೆ ಜಾಮೀನು ಸಿಕ್ಕಿತ್ತು.

ಬಿರ್‌ಭೂಮ್‌ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್‌ ಆದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Navneet Rana:15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: ಬಿಜೆಪಿ ನಾಯಕಿ ನವನೀತ್‌ ರಾಣಾ(Navneet Rana) ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ(Asaduddin Owaisi) ನಡುವಿನ ವಾಕ್ಸಮರ ಮುಂದುವರೆದಿದೆ. 15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮನನ್ನು ನಾನು ಮಾತ್ರ ನಿಯಂತ್ರಿಸಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಹೋದರ ಅಸಾದುದ್ದೀನ್‌ ಓವೈಸಿ ಹೇಳುತ್ತಿದ್ದಾರೆ. ಇದು ಒಳ್ಳೆಯ ವಿಚಾರ. ಇದು ನಿಮಗೆ ಅರ್ಥ ಆಗಿದ್ದು ಒಳ್ಳೆಯದ್ದಾಯಿತು. ಇಲ್ಲದಿದರೆ ರಾಮ ಭಕ್ತರು ಮತ್ತು ಮೋದಿಯವರ ಸಿಂಹಗಳು ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನೆ ಮೂಡಿಸಿದೆ.

‍ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಓವೈಸಿ ನಾನು ಇಲ್ಲೇ ನಿಂತಿದ್ದೇನೆ ಅದೇನು ಮಾಡುತ್ತೀರೋ ಮಾಡಿ ಎಂದು ಟಾಂಗ್‌ ಕೊಟ್ಟಿದ್ದರು. ಮಹಾರಾಷ್ಟ್ರದಿಂದ ಬಂದ ಎಂಪಿ ಸಾಹೇಬರು ಇಲ್ಲಿ ನಮ್ಮ ವಿರುದ್ಧ ಏನೇನೋ ಮಾತನಾಡುತ್ತಿದ್ದಾರೆ. ನನ್ನ ತಮ್ಮ ಅಕ್ಬರುದ್ದೀನ್‌ ಓವೈಸಿ ಪರಿಸ್ಥಿತಿಯನ್ನು ಅವನದ್ದೇ ರೀತಿಯಲ್ಲಿ ತಿಳಿಗೊಳಿಸಲು ಮುಂದಾಗಿದ್ದ. ಆದರೆ ನಾನೇ ಅವನನ್ನು ತಡೆದು ನಿಲ್ಲಿಸಿದೆ ಎಂದು ಹೇಳಿದ್ದರು.

Continue Reading

ದೇಶ

Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Arvind Kejriwal: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು. ಜತೆಗೆ ತಾಯಿ ಅವರನ್ನು ಹೂ ಮಾಲೆ ಹಾಕಿ ಮನೆಯೊಳಗೆ ಬರಮಾಡಿಕೊಂಡರು. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ (ED) ಬಂಧಿಸಲ್ಪಟ್ಟ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme court) ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಏಳು ಹಂತದ ಲೋಕಸಭೆ ಚುನಾವಣೆಯ (Lok Sabha Election 2024) ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿದೆ. ಹೀಗಾಗಿ ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು. ಜತೆಗೆ ತಾಯಿ ಅವರನ್ನು ಹೂ ಮಾಲೆ ಹಾಕಿ ಮನೆಯೊಳಗೆ ಬರಮಾಡಿಕೊಂಡರು. ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral Video).

ತಿಹಾರ್‌ ಜೈಲಿನಿಂದ ಕೇಜ್ರಿವಾಲ್‌ ಶುಕ್ರವಾರ ಸಂಜೆ ಸುಮಾರು 7 ಗಂಟೆಗೆ ಹೊರ ಬಂದರು. ನೆರೆದಿದ್ದ ಸಾವಿರಾರು ಕಾರ್ಯಕರ್ತರು ಜಯಘೋಷದೊಂದಿಗೆ ಅವರನ್ನು ಸ್ವಾಗತಿಸಿದರು. ಕೇಜ್ರಿವಾಲ್‌ ಮನೆಗೆ ಆಗಮಿಸುತ್ತಿದ್ದಂತೆ ಆಪ್‌ ಸಂಸದ ಸಂಜಯ್‌ ಸಿಂಗ್‌ ಎದುರುಗೊಂಡರು. ಜತೆಗೆ ಅರವಿಂದ್ ಕೇಜ್ರಿವಾಲ್ ಅವರ ತಾಯಿ ಮತ್ತು ಪತ್ನಿ ಆರತಿ ಬೆಳಗಿ, ಹಾರ ಹಾಕಿ ಮನೆಗೆ ಸ್ವಾಗತಿಸಿದರು.

ಬಾಗಿಲ್ಲೇ ಕಾದು ನಿಂತಿದ್ದ ತಾಯಿ

ಮಗನ ಬರುವಿಕೆಗಾಗಿ ಕೇಜ್ರಿವಾಲ್‌ ಅವರ ತಾಯಿ ಮನೆ ಬಾಗಿಲ ಬಳಿಯಲ್ಲೇ ಹೂ ಹಾರ ಹಿಡಿದು ಕಾದು ನಿಂತಿದ್ದರು. ಸಂಬಂಧಿಕರು ಆರತಿ ಎತ್ತಿದರು. ಒಳ ಬರುತ್ತಲೇ ಕೇಜ್ರಿವಾಲ್‌ ತಮ್ಮ ತಾಯಿ, ತಂದೆಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದರು. ಕೇಜ್ರಿವಾಲ್ ಅವರ ತಂದೆ ಮಗನನ್ನು ತಬ್ಬಿಕೊಂಡರು. ಮಗನ ಬೆನ್ನನ್ನು ಆತ್ಮೀಯವಾಗಿ ತಟ್ಟಿದರು.

ದೇವಸ್ಥಾನಕ್ಕೆ ಭೇಟಿ ನೀಡಿದ ಕೇಜ್ರಿವಾಲ್‌

ಅರವಿಂದ್‌ ಕೇಜ್ರಿವಾಲ್‌ ಇಂದು (ಶನಿವಾರ) ದೆಹಲಿಯ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಲೋಕಸಭಾ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಿದರು. ಈ ವೇಳೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಅವರೊಂದಿಗಿದ್ದರು.

ಷರತ್ತು ಅನ್ವಯ

ಜಾಮೀನು ನೀಡುವ ಮೊದಲು ನ್ಯಾಯಾಲಯ ಯಾವುದೇ ಕಡತಗಳಿಗೆ ಸಹಿ ಹಾಕಬಾರದು ಎಂಬುದು ಸೇರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹಲವು ಷರತ್ತುಗಳನ್ನು ವಿಧಿಸಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಕೇಜ್ರಿವಾಲ್‌, “ನಾನು ನಿಮಗೆಲ್ಲ ಧನ್ಯವಾದ ಹೇಳಲು ಬಯಸುತ್ತೇನೆ. ನೀವೆಲ್ಲರೂ ನನಗೆ ಆಶೀರ್ವಾದ ಮಾಡಿದ್ದೀರಿ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೂ ನಾನು ಧನ್ಯವಾದ ತಿಳಿಸುತ್ತೇನೆ. ಅವರಿಂದಾಗಿಯೇ ನಾನು ಈಗ ಜೈಲಿನಿಂದ ಬಿಡುಗಡೆಯಾಗಿದ್ದೇನೆ. ಸರ್ವಾಧಿಕಾರದಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಹೋರಾಡೋಣ” ಎಂದು ಹೇಳಿದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. 

ಇದನ್ನೂ ಓದಿ: Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

Continue Reading

ದೇಶ

Election Commission: ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಡ್ಡಿಪಡಿಸುವ ಪ್ರಯತ್ನ; ಖರ್ಗೆ ಪತ್ರಕ್ಕೆ EC ತಿರುಗೇಟು

Election Commission: ಲೋಕಸಭೆ ಚುನಾವಣೆಯ ಮೊದಲ 2 ಹಂತದಲ್ಲಿ ನಡೆದ ಮತದಾನ ಪ್ರಮಾಣದ ಬಗ್ಗೆ ತಡವಾಗಿ ಮಾಹಿತಿ ನೀಡಿರುವ ಆಯೋಗಕ್ಕೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತದಾನ ಮುಗಿದು ಒಂದು ವಾರದ ಬಳಿಕ ಮೊದಲ ಹಂತದಲ್ಲಿ ಶೇ. 5.5ರಷ್ಟು, ಎರಡನೇ ಹಂತದಲ್ಲಿ ಶೇ. 5.74ರಷ್ಟು ಮತ ಪ್ರಮಾಣ ಹೆಚ್ಚಳ ಮಾಡಿ ದತ್ತಾಂಶ ಬಿಡುಗಡೆ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದರು.

VISTARANEWS.COM


on

Election Commission
Koo

ನವದೆಹಲಿ: ಮತದಾನ ಪ್ರಮಾಣ ವರದಿ ಬಿಡುಗಡೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ(AICC President) ಮಲ್ಲಿಕಾರ್ಜುನ ಖರ್ಗೆ (Mallikarjun Kharge)ಗೆ ಭಾರತೀಯ ಚುನಾವಣಾ ಆಯೋಗ(Election Commission) ಪ್ರತಿಕ್ರಿಯಿಸಿದ್ದು, ನ್ಯಾಯ ಸಮ್ಮತ ಚುನಾವಣೆ ಕೈಗೊಳ್ಳಲು ಅಡೆತಡೆ ಸೃಷ್ಟಿಸಲು ನಡೆಸುತ್ತಿರುವ ಪ್ರಯತ್ನ ಎಂದು ಟಾಂಗ್‌ ಕೊಟ್ಟಿದೆ. ಖರ್ಗೆ ಪತ್ರಕ್ಕೆ ಪತ್ರದ ಮೂಲಕ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು ಚುನಾವಣಾ ಆಯೋಗದ ಬಗ್ಗೆ ಸಲ್ಲದ ಆರೋಪ ಮಾಡುವ ಮೂಲಕ ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಕೈಗೊಳ್ಳಲು ಅಡೆತಡೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಕಿಡಿಕಾರಿದೆ.

ಖರ್ಗೆ ಪತ್ರ ಬರೆದಿದ್ದೇಕೆ?

ಲೋಕಸಭೆ ಚುನಾವಣೆಯ ಮೊದಲ 2 ಹಂತದಲ್ಲಿ ನಡೆದ ಮತದಾನ ಪ್ರಮಾಣದ ಬಗ್ಗೆ ತಡವಾಗಿ ಮಾಹಿತಿ ನೀಡಿರುವ ಆಯೋಗಕ್ಕೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತದಾನ ಮುಗಿದು ಒಂದು ವಾರದ ಬಳಿಕ ಮೊದಲ ಹಂತದಲ್ಲಿ ಶೇ. 5.5ರಷ್ಟು, ಎರಡನೇ ಹಂತದಲ್ಲಿ ಶೇ. 5.74ರಷ್ಟು ಮತ ಪ್ರಮಾಣ ಹೆಚ್ಚಳ ಮಾಡಿ ದತ್ತಾಂಶ ಬಿಡುಗಡೆ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ಹೇಳಿದ್ದರು.

EC ಪ್ರತಿಕ್ರಿಯೆ ಏನು?

ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕೇಂದ್ರ ಚುನಾವಣಾ ಆಯೋಗ, ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಖರ್ಗೆಯವರು ಇಂತಹ ಗೊಂದಲಗಳನ್ನು ಜನರಲ್ಲಿ ಹುಟ್ಟು ಹಾಕೋದು ಸರಿಯಲ್ಲ. ಅವರು ಬರೆದಿರುವ ಪತ್ರ ರಾಜಕೀಯ ಪ್ರೇರಿತವಾಗಿದೆ. ಸಾರ್ವಜನಿಕವಾಗಿ ಸಂಶಯ ವ್ಯಕ್ತಪಡಿಸುವ ಮೂಲಕ ದೇಶದಲ್ಲಿ ಅರಾಜಕ ಪರಿಸ್ಥಿತಿ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಇಂತಹ ನಿರಾಧಾರ ಹೇಳಿಕೆಗಳಿಂದ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಡ್ಡಿ ಆತಂಕ ಉಂಟು ಮಾಡಿದ್ದಾರೆ ಎಂದು ಕಿಡಿ ಕಾರಿದೆ.

ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ ಪ್ರಮಾಣದ ದತ್ತಾಂಶಗಳ ಬಗ್ಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ವೋಟರ್‌ ಟರ್ನ್‌ ಔಟ್‌ ಆಪ್‌ನಲ್ಲಿ ಸಾರ್ವಜನಿಕವಾಗಿ ಈ ಮಾಹಿತಿ ಲಭ್ಯವಿದೆ. ಪ್ರತಿ ಬೂತ್‌ ಏಜೆಂಟ್‌ಗಳಿಗೆ ಮತದಾನ ಪ್ರಮಾಣದ ಬಗ್ಗೆ ಪೂರ್ಣ ವಿವರ ನೀಡಲು ಸೂಚಿಸಲಾಗಿರುತ್ತದೆ. ಇದೇ ಅಂಶಗಳನ್ನು ಮುಂದಿಟ್ಟುಕೊಂಡು ಮತ ಎಣಿಕೆ ಮಾಡಲಾಗುತ್ತದೆ. ಇಲ್ಲಿ ಸಂಶಯ ಪಡುವಂತಹ ಯಾವುದೇ ಕಾರ್ಯ ನಡೆಯುವುದಿಲ್ಲ. ಪದೇ ಪದೆ ದತ್ತಾಂಶಗಳನ್ನು ಬದಲಿಸಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ:Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

ಇನ್ನು ಈ ಬಗ್ಗೆ ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಪ್ರತಿಕ್ರಿಯಿಸಿದ್ದು, ಚುನಾವಣಾ ಆಯೋಗದೊಂದಿಗೆ ಇಂಡಿಯಾ ಮಿತ್ರಪಕ್ಷಗಳ ನಿಗದಿತ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪತ್ರ ಮತ್ತು ಪ್ರತಿಕ್ರಿಯೆಯನ್ನು ಪಕ್ಷವು ಪ್ರಸ್ತಾಪಿಸಲಿದೆ ಎಂದು ಹೇಳಿದ್ದಾರೆ.

Continue Reading

ದೇಶ

Rahul Gandhi: ನರೇಂದ್ರ ಮೋದಿ ಪ್ರಧಾನಿಯಲ್ಲ, ಮಹಾರಾಜ ಎಂದ ರಾಹುಲ್ ಗಾಂಧಿ

Rahul Gandhi: ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜ. ಅವರಿಗೆ ಸಂಪುಟ, ಸಂಸತ್‌ ಅಥವಾ ಸಂವಿಧಾನ ಇದ್ಯಾವುದೂ ಸಂಬಂಧವೇ ಇಲ್ಲ. ಅವರು 21ನೇ ಶತಮಾನ ಮಹಾರಾಜ. ನಿಜವಾದ ಅಧಿಕಾರವನ್ನು ತಮ್ಮ ಕೈಯಲ್ಲಿಟ್ಟುಕೊಂಡಿರು ಒಂದಿಬ್ಬರು ಶ್ರೀಮಂತರ ಎದುರು ಅವರು ಮಹಾರಾಜ. ನಾನು ಪ್ರಧಾನಿ ಮೋದಿವರಿಗೆ ಚರ್ಚೆಗೆ ಬರುವಂತೆ ಬಹಿರಂಗ ಸವಾಲು ಎಸೆಯುತ್ತಿದ್ದೇನೆ ಎಂದು ರಾಹುಲ್‌ ಗಾಂಧಿ ಹೇಳಿದರು.

VISTARANEWS.COM


on

Rahul Gandhi
Koo

ಲಕ್ನೋ: ಲೋಕಸಭಾ ಚುನಾವಣೆಯ(Lok Sabha election 2024) ಪ್ರಚಾರದ ವೇಳೆ ನಾಯಕರ ನಡುವೆ ಪರಸ್ಪರ ಟೀಕಾ ಪ್ರಹಾರ, ವಾಗ್ದಾಳಿ ಬಿರುಸಿನಿಂದ ಸಾಗಿದೆ. ಇಷ್ಟು ದಿನ ತಮ್ಮನ್ನು ಶೆಹಜಾದೆ(ರಾಜಕುಮಾರ) ಎಂದು ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರ(Narendra Modi)ಯವರನ್ನು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ರಾಜ ಎಂದು ಕರೆದಿದ್ದಾರೆ. ಲಕ್ನೋದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಅಲ್ಲ.. ಅವರು ರಾಜ ಇದ್ದಂತೆ ಎಂದು ವ್ಯಂಗ್ಯವಾಡಿದ್ದಾರೆ

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜ. ಅವರಿಗೆ ಸಂಪುಟ, ಸಂಸತ್‌ ಅಥವಾ ಸಂವಿಧಾನ ಇದ್ಯಾವುದೂ ಸಂಬಂಧವೇ ಇಲ್ಲ. ಅವರು 21ನೇ ಶತಮಾನ ಮಹಾರಾಜ. ನಿಜವಾದ ಅಧಿಕಾರವನ್ನು ತಮ್ಮ ಕೈಯಲ್ಲಿಟ್ಟುಕೊಂಡಿರು ಒಂದಿಬ್ಬರು ಶ್ರೀಮಂತರ ಎದುರು ಅವರು ಮಹಾರಾಜ. ನಾನು ಪ್ರಧಾನಿ ಮೋದಿವರಿಗೆ ಚರ್ಚೆಗೆ ಬರುವಂತೆ ಬಹಿರಂಗ ಸವಾಲು ಎಸೆಯುತ್ತಿದ್ದೇನೆ ಎಂದರು. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 180 ಸ್ಥಾನಗಳನ್ನೂ ಪಡೆಯುವುದಿಲ್ಲ. ಅಲ್ಲದೇ ಈ ಬಾರಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದಿಲ್ಲ ಎಂಬುದನ್ನು ನಾನು ಬೇಕಿದ್ದರೆ ಬರೆದು ಕೊಡುತ್ತೇನೆ ಎಂದ್ ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ ರಾಹುಲ್‌ ಗಾಂಧಿ ಹಾಗೂ ಅಖಿಲೇಶ್‌ ಯಾದವ್‌ ಅವರನ್ನು ರಾಜಕುಮಾರರು ಎಂದು ಟೀಕಿಸಿದ್ದರು. ತುಷ್ಠೀಕರಣ ರಾಜಕೀಯ ನಡೆಸುವ ಉದ್ದೇಶದಿಂದ ಇಬ್ಬರು ರಾಜಕುಮಾರರು ಒಗ್ಗೂಡಿದ್ದಾರೆ ಎಂದು ಅವರು ಹೇಳಿದ್ದರು.

ಕಾಂಗ್ರೆಸ್‌ ತಪ್ಪು ಮಾಡಿದೆ, ತಿದ್ದಿಕೊಳ್ಳುತ್ತೇವೆ

ಇದೇ ವೇಳೆ ಅವರು ಹಿಂದೆ ಕಾಂಗ್ರೆಸ್‌ ತಪ್ಪುಗಳು ಮಾಡಿವೆ. ಅದನ್ನು ತಿದ್ದಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು. ಕಾಂಗ್ರೆಸ್‌ನಲ್ಲಿ ಬದಲಾವಣೆ ಬೇಕಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಬಹಳಷ್ಟು ಬದಲಾವಣೆಗಳನ್ನು ಅಳವಡಿಸಿಕೊಳ್ಳಲಿದೆ. ನಾನೊಬ್ಬ ಕಾಂಗ್ರೆಸ್ಸಿಗನಾಗಿ ಕಾಂಗ್ರೆಸ್‌ ಪಕ್ಷ ಕೂಡ ತಪ್ಪುಗಳನ್ನು ಮಾಡಿದೆ ಎಂದು ನಾನು ಹೇಳುತ್ತೇನೆ ಎಂದರು. ನಾನು ಅಧಿಕಾರಗಳ ನಡುವೆಯೇ ಹುಟ್ಟಿದವನು. ಆದರೂ ನನಗೆ ಅಧಿಕಾರದ ಬಗ್ಗೆ ಯಾವುದೇ ವ್ಯಾಮೋಹ ಇಲ್ಲ. ಇದು ಜನರಿಗೆ ಸಹಾಯ ಮಾಡಲು ಇರುವ ವ್ಯವಸ್ಥೆ ಅಷ್ಟೇ ಎಂದರು.

ಇದನ್ನೂ ಓದಿ: Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ; ಯಾವ ದೇಶದಲ್ಲಿದ್ದರೂ ಅರೆಸ್ಟ್‌ ಮಾಡಲು ಸಿದ್ಧತೆ?

Continue Reading
Advertisement
Actor Upendra
ಸಿನಿಮಾ25 mins ago

Actor Upendra: ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ರಿ-ರಿಲೀಸ್‌ ಆಗಲಿದೆ ಈ ಕ್ಲಾಸಿಕ್‌ ಸಿನಿಮಾ

Bengaluru News
ಬೆಂಗಳೂರು51 mins ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Madhu Bangarappa
ಕರ್ನಾಟಕ1 hour ago

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

Navneet Rana
ದೇಶ1 hour ago

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Murder Case in kodagu
ಕೊಡಗು2 hours ago

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Arvind Kejriwal
ದೇಶ2 hours ago

Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Siddaramaiah
ಕರ್ನಾಟಕ2 hours ago

Siddaramaiah: ಮೋದಿ ಸುಳ್ಳಿನ ಸರದಾರ, ಭಾವನಾತ್ಮಕ ಆಟ ನಡೆಯಲ್ಲ; ಸಿದ್ದರಾಮಯ್ಯ ತಿರುಗೇಟು

accident case
ಕ್ರೈಂ3 hours ago

Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

Chinese app
ವಿದೇಶ3 hours ago

Chinese Apps: ಟಿಕ್‌ಟಾಕ್‌ ಮಾತ್ರ ಅಲ್ಲ.. ಚೀನಾದ ಈ ಆಪ್‌ಗಳೂ ಅಷ್ಟೇ ಡೇಂಜರಸ್‌; ಶಾಕಿಂಗ್‌ ವರದಿ ಔಟ್‌

Jyoti Rai
ಕಿರುತೆರೆ3 hours ago

Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌