Site icon Vistara News

Bharat Ratna: ನರಸಿಂಹರಾವ್, ಚರಣ್‌ಸಿಂಗ್, ಸ್ವಾಮಿನಾಥನ್‌ಗೆ ಭಾರತರತ್ನ ಗರಿ

Vistara Editorial, Three Bharat Ratna who have made valuable contributions to the country

ನವದೆಹಲಿ: ಭಾರತದ ಮೂವರು ಮಹಾನ್‌ ವ್ಯಕ್ತಿಗಳಿಗೆ ಕೇಂದ್ರ ಸರ್ಕಾರವು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತರತ್ನ (Bharat Ratna) ಪ್ರಶಸ್ತಿ ಘೋಷಿಸಿದೆ. ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್‌ (PV Narasimha Rao), ಚೌಧರಿ ಚರಣ್‌ ಸಿಂಗ್‌ (Charan singh chaudhary) ಹಾಗೂ ಹಸಿರು ಕ್ರಾಂತಿ ಪಿತಾಮಹ ಎಂ.ಎಸ್.ಸ್ವಾಮಿನಾಥನ್‌ (MS Swaminathan) ಅವರಿಗೆ ಭಾರತರತ್ನ ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.

ಹಸಿರು ಕ್ರಾಂತಿ ಮೂಲಕ ಭಾರತದ ಕೃಷಿಗೆ ಮಹೋನ್ನತ ಕೊಡುಗೆ ನೀಡಿದ ಎಂ.ಎಸ್.ಸ್ವಾಮಿನಾಥನ್‌, ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ಪಿ.ವಿ.ನರಸಿಂಹರಾವ್‌ ಹಾಗೂ ಸ್ವಾತಂತ್ರ್ಯ ಹೋರಾಟ, ದೇಶದಲ್ಲಿ ಉತ್ತಮ ಆಡಳಿತ ನೀಡಿದ ಚೌಧರಿ ಚರಣ್‌ ಸಿಂಗ್‌ ಅವರಿಗೆ ಭಾರತರತ್ನ ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ದೇಶದ ಮೂವರೂ ಗಣ್ಯರಿಗೆ ಕೇಂದ್ರ ಸರ್ಕಾರವು ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿ ಘೋಷಿಸಿದೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಕರ್ಪೂರಿ ಠಾಕೂರ್ (ಮರಣೋತ್ತರ), ಬಿಜೆಪಿಯ ವರಿಷ್ಠ ನಾಯಕ ಎಲ್‌.ಕೆ.ಅಡ್ವಾಣಿ ಅವರಿಗೆ ಭಾರತರತ್ನ ಘೋಷಿಸಿತ್ತು. ಈಗ ಮತ್ತೆ ಮೂವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಭಾರತರತ್ನ ಕೊಡದೆ ನಮಗೆ ತಾವೇ ಪ್ರಶಸ್ತಿ ಕೊಟ್ಟುಕೊಂಡರು! ಕಾಂಗ್ರೆಸ್‌ಗೆ ಮೋದಿ ಚಾಟಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version