ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಕೇಂದ್ರ ಸರ್ಕಾರವು ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ (Padma Awards 2023) ಪ್ರಶಸ್ತಿ ಘೋಷಿಸಿದೆ. ಹಾಗೆಯೇ, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಹಾಗೂ ಸರಸ್ವತಿ ಸಮ್ಮಾನ್ ಪುರಸ್ಕೃತ ಖ್ಯಾತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.
ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿಗೆ ಸಾರ್ವಜನಿಕ ಸೇವೆಗಾಗಿ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರಿಗೆ ಸಮಾಜಸೇವೆ ಹಾಗೂ ಎಸ್.ಎಲ್.ಭೈರಪ್ಪ ಅವರಿಗೆ ಶಿಕ್ಷಣ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.
ಇದನ್ನೂ ಓದಿ: Republic Day Tableau : ಸತತ 14 ವರ್ಷ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪ್ರದರ್ಶಿಸಿದ ಏಕಮಾತ್ರ ರಾಜ್ಯ ಕರ್ನಾಟಕ