Site icon Vistara News

JEE NEET | ಜೆಇಇ, ನೀಟ್‌ ವಿಲೀನ ಮಾಡಲಾಗುತ್ತದೆಯೇ? ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಹೇಳಿದ್ದೇನು?

JEE

ನವದೆಹಲಿ: ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಜಂಟಿ ಪ್ರವೇಶ ಪರೀಕ್ಷೆ (JEE) ಹಾಗೂ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET)ಯನ್ನು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) ಜತೆ ವಿಲೀನಗೊಳಿಸಲಾಗುತ್ತದೆ ಎಂಬ ಸುದ್ದಿಗಳು ಕೇಳಿಬಂದಿರುವ ಬೆನ್ನಲ್ಲೇ ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

“ಜೆಇಇ ಹಾಗೂ ನೀಟ್‌ಅನ್ನು ಸಿಯುಇಟಿ ಜತೆ ವಿಲೀನಗೋಳಿಸುವ ಕುರಿತು ಕೇಂದ್ರ ಸರ್ಕಾರದ ಮುಂದೆ ಯಾವುದೇ ಯೋಜನೆ ಇಲ್ಲ. ಈ ಕುರಿತು ಚಿಂತನೆ ನಡೆಸಲಾಗುತ್ತಿದೆಯೇ ಹೊರತು, ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಎರಡು ವರ್ಷಗಳವರೆಗೆ ಈ ಕುರಿತು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ” ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಿಳಿಸಿದ್ದಾರೆ.

ಜೆಇಇ ಹಾಗೂ ನೀಟ್‌ಅನ್ನು ವಿಲೀನಗೊಳಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (UGC) ಚೇರ್ಮನ್‌ ಎಂ. ಜಗದೀಶ್ ಕುಮಾರ್‌ ಅವರು ಕಳೆದ ತಿಂಗಳು ಹೇಳಿದ್ದರು. ಹಾಗಾಗಿ, ಏಕಾಏಕಿ ವಿಲೀನಗೊಳಿಸಿದರೆ ಪರಿಸ್ಥಿತಿ ಏನು ಎಂಬ ಆತಂಕ ವಿದ್ಯಾರ್ಥಿಗಳಲ್ಲಿ ಮನೆಮಾಡಿತ್ತು. ಹಾಗಾಗಿ, ಪ್ರಧಾನ್‌ ಸ್ಪಷ್ಟನೆ ನೀಡಿದ್ದಾರೆ. “ವಿಲೀನಗೊಳಿಸಲು ತೀರ್ಮಾನ ತೆಗೆದುಕೊಂಡರೂ ಅದು ಜಾರಿಗೆ ಬರಲು ಎರಡು ವರ್ಷ ಬೇಕಾಗುವುದರಿಂದ ವಿದ್ಯಾರ್ಥಿಗಳು ಆತಂಕಪಡಬೇಕಿಲ್ಲ” ಎಂದಿದ್ದಾರೆ.

ಇದನ್ನೂ ಓದಿ | ಪರೀಕ್ಷಾ ಕೇಂದ್ರದಲ್ಲಿ ಬ್ರಾ ಬಿಚ್ಚಿ, ಮಾನಸಿಕ ಹಿಂಸೆಗೆ ಒಳಗಾಗಿದ್ದ ವಿದ್ಯಾರ್ಥಿನಿಯರಿಗೆ ನೀಟ್​ ಮರು ಪರೀಕ್ಷೆ

Exit mobile version