Site icon Vistara News

DA Hike:‌ ಕೇಂದ್ರ ನೌಕರರಿಗೆ ಗುಡ್‌ ನ್ಯೂಸ್;‌ ಶೇ.4ರಷ್ಟು ಡಿಎ ಹೆಚ್ಚಳದ ಜತೆಗೆ ಹಲವು ಬಂಪರ್‌!

Dearness Allowance

Central Government Hikes 4 pc to 50 pc; new rate effective January 1

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು (Central Government) ಬಂಪರ್‌ ಕೊಡುಗೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರ (Central Government Employees) ತುಟ್ಟಿಭತ್ಯೆಯನ್ನು (DA Hike) ಶೇ.4ರಷ್ಟು ಏರಿಕೆ ಮಾಡಿದ್ದು, ಈಗ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಲಕ್ಷಾಂತರ ನೌಕರರು ಹಾಗೂ ಪಿಂಚಣಿದಾರರಿಗೆ ಭರ್ಜರಿ ಅನುಕೂಲವಾಗಲಿದೆ.

ತುಟ್ಟಿ ಭತ್ಯೆಯ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್‌ (HRA) ಕೂಡ ಏರಿಕೆ ಮಾಡಿದೆ. ಅಷ್ಟೇ ಅಲ್ಲ, ಗ್ರ್ಯಾಚುಟಿ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಲಿದೆ.

ಇದನ್ನೂ ಓದಿ: Grama Sahayaka: ಗ್ರಾಮ ಸಹಾಯಕರ ವೇತನ 13,000 ರಿಂದ 15,000ಕ್ಕೆ ಹೆಚ್ಚಳ: ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು ಸರ್ಕಾರವು ತನ್ನ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ನೀಡುತ್ತದೆ. ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಇದನ್ನು ಲೆಕ್ಕಹಾಕಲಾಗುತ್ತದೆ. ಇದು ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ನೀಡುತ್ತದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿದೆ ಎಂದು ತಿಳಿದುಬಂದಿದೆ.

2023ರ ಮಾರ್ಚ್‌ನಲ್ಲೂ ಕೇಂದ್ರ ಸರ್ಕಾರವು ನೌಕರರು ಹಾಗೂ ಪಿಂಚಣಿದಾರರಿಗೆ ನೀಡುವ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿತ್ತು. ಇದರಿಂದ ನೌಕರರಿಗೆ ಸಿಗುವ ತುಟ್ಟಿಭತ್ಯೆಯು ಶೇ.38ರಿಂದ ಶೇ.42ಕ್ಕೆ ಏರಿಕೆಯಾಗಿತ್ತು. ಅಲ್ಲದೆ, ಕಳೆದ ವರ್ಷದ ಜುಲೈನಲ್ಲಿ ನೌಕರರು ಹಾಗೂ ಪಿಂಚಣಿದಾರರಿಗೆ ನೀಡುವ ತುಟ್ಟಿಭತ್ಯೆಯನ್ನು ಶೇ.42ರಿಂದ ಶೇ.46ಕ್ಕೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ತುಟ್ಟಿಭತ್ಯೆಯನ್ನು ಏರಿಕೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version