Site icon Vistara News

Cabinet Meeting: 10 ಸಾವಿರ ಇ-ಬಸ್ ಪೂರೈಸಲು ಕೇಂದ್ರ ಒಪ್ಪಿಗೆ, ಯಾವ ನಗರಗಳಿಗೆ ಲಾಭ?

Electric bus

ನವದೆಹಲಿ: ದೇಶದ ನೂರು ನಗರಗಳಿಗೆ (100 City) ಸಾವಿರ ಎಲೆಕ್ಟ್ರಿಕ್ ಬಸ್‌ಗಳ (Electric Buses) ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಪಿಎಂ ಇ-ಬಸ್ ಸೇವಾ (PM e-bus Seva) ಯೋಜನೆಯಡಿ ಈ 10 ಸಾವಿರ ಎಲೆಕ್ಟ್ರಿಕ್ ಬಸ್‌ಗಳನ್ನು ಪೂರೈಸಲಾಗುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Union I&B minister Anurag Thakur) ಅವರು ಹೇಳಿದ್ದಾರೆ.

ಕೇಂದ್ರ ಸಚಿವ ಸಂಪುಟದ ಕುರಿತು ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು, ಪಿಎಂ ಇ-ಬಸ್ ಸೇವೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದೆ. ಈ ಮೂಲಕ ಹಸಿರು ಸಾರಿಗೆ ಉತ್ತೇಜನ ನೀಡಲಾಗುತ್ತದೆ. ಇದಕ್ಕಾಗಿ ಕೇಂದ್ರ ಸರ್ಕಾರವು 57,613 ಕೋಟಿ ರೂ. ವೆಚ್ಚ ಮಾಡಲಿದೆ ಎಂದು ಅವರು ತಿಳಿಸಿದರು.

ಪಿಎಂ ಇ-ಬಸ್ ಸೇವಾ ಯೋಜನೆಗೆ ಮಾಡಲಾಗುವ ವೆಚ್ಚದಲ್ಲಿ 57,613 ಕೋಟಿ ರೂ. ಪೈಕಿ ಕೇಂದ್ರ ಸರ್ಕಾರವು 20 ಸಾವಿರ ಕೋಟಿ ರೂ. ಒದಗಿಸಲಿದೆ. ಮೂರು ಲಕ್ಷ ಮತ್ತು ಅದಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಿಗೆ ಇ-ಬಸ್‌ಗಳನ್ನು ನೀಡಲಾಗುತ್ತದೆ. ಈ ಯೋಜನೆಯಡಿಯಲ್ಲಿ, ಸಾರ್ವಜನಿಕ ಖಾಸಗಿ ಸಹಭಾಗಿತ್ವದ (PPP) ಮಾದರಿಯಲ್ಲಿ 10,000 ಇ-ಬಸ್‌ಗಳೊಂದಿಗೆ ಸಿಟಿ ಬಸ್ ಕಾರ್ಯಾಚರಣೆಗಳನ್ನು ಮಾಡಲಾಗುತ್ತದೆ. ಈ ಯೋಜನೆಯು 10 ವರ್ಷಗಳ ಕಾಲ ಬಸ್ ಕಾರ್ಯಾಚರಣೆಗಳನ್ನು ಬೆಂಬಲಿಸುತ್ತದೆ ಎಂದು ಅನುರಾಗ್ ಠಾಕೂರ್ ಅವರು ಮಾಹಿತಿ ನೀಡಿದರು.

ಈ ಸುದ್ದಿಯನ್ನೂ ಓದಿ: Tata Motors | ಬಿಎಂಟಿಸಿಗೆ 921 ಎಲೆಕ್ಟ್ರಿಕ್​ ಬಸ್​ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡ ಟಾಟಾ ಮೋಟಾರ್ಸ್​

Cabinet Meeting: ವಿಶ್ವ ಕರ್ಮ ಯೋಜನೆಗೆ ಒಪ್ಪಿಗೆ

ಕೇಂದ್ರ ಸಚಿವ ಸಂಪುಟ ಸಭೆಯು ವಿಶ್ವಕರ್ಮ ಯೋಜನೆಗೂ ತನ್ನ ಒಪ್ಪಿಗೆಯನ್ನು ನೀಡಿದೆ ಎಂದು ಕೇಂದ್ರ ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಕೇಂದ್ರ ಸಚಿವ ಸಂಪುಟ ನಿರ್ಧಾರಗಳ ಕುರಿತು ಮಾಹಿತಿ ನೀಡಿದ ಅವರು, ವಿಶ್ವ ಕರ್ಮನ ಯೋಜನೆಯಡಿ ಕೇಂದ್ರ ಸರ್ಕಾರವು ಕುಂಬಾರಿಕೆ, ಕಂಬಾರಿಕೆ, ನಿರ್ಮಾಣ, ಟೈಲರಿಂಗ್, ನೌಕೆ ನಿರ್ಮಾಣ ಸೇರಿದಂತೆ ಸಾಂಪ್ರದಾಯಿಕ ಕುಶಲ ಕೆಲಸಗಳನ್ನು ಉತ್ತೇಜಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version