Site icon Vistara News

ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Bomb Threat

Centre calls for detailed SOP, monitoring of emails to combat hoax bomb threats

ನವದೆಹಲಿ: ಕರ್ನಾಟಕ, ದೆಹಲಿ, ಗುಜರಾತ್‌ ಸೇರಿ ದೇಶದ ಹಲವೆಡೆ ಶಾಲೆಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ದಾಳಿ ಬೆದರಿಕೆ ಒಡ್ಡಲಾಗಿದೆ. ಇದರಿಂದ ಶಾಲೆಗಳ (Schools) ಆಡಳಿತ ಮಂಡಳಿಗಳು ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಿದ, ಪೋಷಕರು ಆತಂಕ್ಕಕೀಡಾದ ಪ್ರಕರಣಗಳು ಹೆಚ್ಚಾಗಿವೆ. ಇನ್ನು, ಬಳಿಕ ಇವು ಹುಸಿ ಬಾಂಬ್ ಕರೆಗಳು (Hoax Bomb Threats) ಎಂದು ಪೊಲೀಸರು ತನಿಖೆ ಕೈಬಿಟ್ಟಿದ್ದಾರೆ. ಇದರ ಬೆನ್ನಲ್ಲೇ, ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡುವುದನ್ನು ತಡೆಯುವ ದಿಸೆಯಲ್ಲಿ ಕೇಂದ್ರ ಸರ್ಕಾರವು (Central Government) ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ದೆಹಲಿ, ಅಹಮದಾಬಾದ್‌ ಸೇರಿ ಹಲವೆಡೆ ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಿದ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವಾಲಯವು, ಈ ಕುರಿತು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿದೆ. ಅದರಲ್ಲೂ, ಈ ಕುರಿತು ದೆಹಲಿ ಪೊಲೀಸರು ತಪ್ಪು ಮಾಹಿತಿ ತಡೆದು, ಅನಗತ್ಯ ಆತಂಕವನ್ನು ನಿವಾರಿಸಲು ದೆಹಲಿ ಪೊಲೀಸರು ಹಾಗೂ ಶಾಲೆಗಳ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಶಾಲೆಗಳಲ್ಲಿ ಸಿಸಿಟಿವಿಗಳ ಅಳವಡಿಕೆ, ಅವುಗಳ ಮೇಲೆ ನಿಗಾ ಇರಿಸುವುದು, ಶಾಲೆಗಳ ಇ-ಮೇಲ್‌ ವಿಳಾಸಗಳನ್ನು ಪದೇಪದೆ ಪರಿಶೀಲಿಸುವುದು ಸೇರಿ ಹಲವು ಸೂಚನೆಗಳನ್ನು ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ದೆಹಲಿ ಪೊಲೀಸ್‌ ಆಯುಕ್ತರು ಸಭೆ ನಡೆಸಿ, ಹುಸಿ ಬಾಂಬ್‌ ಬೆದರಿಕೆ ಕರೆ, ಇ-ಮೇಲ್‌ಗಳನ್ನು ನಿಯಂತ್ರಿಸುವ ಕ್ರಮಗಳ ಕುರಿತು ಚರ್ಚಿಸಿದ ಬಳಿಕ ಸೂಚನೆ ನೀಡಲಾಗಿದೆ. ದೆಹಲಿ ಶಾಲೆಗಳಿಗೆ ಬೆದರಿಕೆ

ಮೇ 1ರಂದು ದೆಹಲಿ- ಎನ್‌ಸಿಆರ್ ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿತ್ತು. ಬಾಂಬ್ ಬೆದರಿಕೆ ಇ ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದು.

ಬಾಂಬ್‌ ದಾಳಿ ಕುರಿತ ಬೆದರಿಕೆ ಇ ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದ್ದರು.

ಇದನ್ನೂ ಓದಿ: Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Exit mobile version