ನವದೆಹಲಿ: ಕೊಲಿಜಿಯಂ ಶಿಫಾರಸುಗಳಿಗೆ ಅನುಮೋದನೆ ನೀಡುವ ಕುರಿತು ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿರುವ ಬೆನ್ನಲ್ಲೇ ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ ಜಡ್ಜ್‌ಗಳನ್ನಾಗಿ ನೇಮಿಸಲು (Judges Appointment) ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ. ಆ ಮೂಲಕ, ನ್ಯಾಯಾಂಗ ಹಾಗೂ ಕೇಂದ್ರದ ನಡುವಿನ ಬಿಕ್ಕಟ್ಟು ತುಸು ತಣ್ಣಗಾದಂತಾಗಿದೆ.
ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸಿನ ಅನ್ವಯ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಅನುಮೋದನೆ ಸಿಕ್ಕಿದೆ. ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಟನಾ ಮುಖ್ಯ ನ್ಯಾ.ಸಂಜಯ್ ಕರೋಲ್, ಮಣಿಪುರ್ ಹೈಕೋರ್ಟ್ ಚೀಫ್ ಜಸ್ಟಿಸ್ ಪಿ.ವಿ.ಸಂಜಯ್ ಕುಮಾರ್, ಪಟನಾ ಹೈಕೋರ್ಟ್ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.
10 ದಿನ ಗಡುವು ನೀಡಿದ್ದ ಸುಪ್ರೀಂ
ಕೊಲಿಜಿಯಂ ಅನ್ವಯ ಮಾಡಿದ ಶಿಫಾರಸುಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿರುವ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಹಾಗೆಯೇ, ಶಿಫಾರಸುಗಳಿಗೆ ೧೦ ದಿನಗಳಲ್ಲಿ ಅನುಮೋದನೆ ನೀಡಬೇಕು ಎಂಬ ಗಡುವು ನೀಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ.
ಇದನ್ನೂ ಓದಿ: Supreme Court | 9 ಹೈಕೋರ್ಟ್ ಜಡ್ಜ್‌ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು, ಈ ಪೈಕಿ ಇಬ್ಬರು ಕರ್ನಾಟಕಕ್ಕೆ!