ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ (Rajiv Gandhi Assassination Case) ಅಪರಾಧಿಗಳನ್ನು ಬಿಡುಗಡೆ ಮಾಡಿದ ಕುರಿತು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಅಪರಾಧಿಗಳ ಬಿಡುಗಡೆ ಕುರಿತು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.
“ಅಪರಾಧಿಗಳ ಬಿಡುಗಡೆ ಕುರಿತು ಸಮರ್ಪಕವಾಗಿ ವಿಚಾರಣೆ ನಡೆದಿಲ್ಲ. ಅಪರಾಧಿಗಳ ಬಿಡುಗಡೆಯು ನ್ಯಾಯದಾನದ ನೈಸರ್ಗಿಕ ತತ್ವಕ್ಕೆ ವಿರುದ್ಧವಾಗಿದೆ. ಹಾಗಾಗಿ, ಬಿಡುಗಡೆ ಕುರಿತು ಮರು ಪರಿಶೀಲನೆ ನಡೆಸಬೇಕು. ಪ್ರಕರಣದಲ್ಲಿ ವಾದ ಮಂಡಿಸಲು ಸಿದ್ಧ” ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.
1991ರಲ್ಲಿ ರಾಜೀವ್ ಗಾಂಧಿ ಹತ್ಯೆಯಾದ ಬಳಿಕ ಅಪರಾಧಿಗಳಾದ ನಳಿನಿ ಶ್ರೀಹರನ್, ಆಕೆಯ ಪತಿ ಮುರುಗನ್ ಸೇರಿ ಆರು ಜನರನ್ನು ನವೆಂಬರ್ 11ರಂದು ತಮಿಳುನಾಡಿನ ಹಲವು ಜೈಲುಗಳಿಂದ ಬಿಡುಗಡೆಗೊಳಿಸಲಾಗಿತ್ತು. ಇದಾದ ಬಳಿಕ ನಳಿನಿ ಶ್ರೀಹರನ್, ಕೇಂದ್ರ ಹಾಗೂ ತಮಿಳುನಾಡು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದರು. ಈಗ ಕೇಂದ್ರ ಸರ್ಕಾರವೇ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದೆ.
ಇದನ್ನೂ ಓದಿ | Nalini Sriharan | ರಾಜೀವ್ ಗಾಂಧಿ ಹತ್ಯೆ ಕೇಸ್‌ನಲ್ಲಿ ಜೈಲಿನಿಂದ ಹೊರಬಂದ ನಳಿನಿ ಶ್ರೀಹರನ್ ಹೇಳಿದ್ದೇನು?