Digital Media | ಡಿಜಿಟಲ್‌ ಮಾಧ್ಯಮ ನಿಯಂತ್ರಣ, ಡಿಜಿಟಲ್‌ ಪತ್ರಕರ್ತರಿಗೂ ಮಾನ್ಯತೆ, ಸಚಿವ ಅನುರಾಗ್‌ ಘೋಷಣೆ ಏನು? - Vistara News

ದೇಶ

Digital Media | ಡಿಜಿಟಲ್‌ ಮಾಧ್ಯಮ ನಿಯಂತ್ರಣ, ಡಿಜಿಟಲ್‌ ಪತ್ರಕರ್ತರಿಗೂ ಮಾನ್ಯತೆ, ಸಚಿವ ಅನುರಾಗ್‌ ಘೋಷಣೆ ಏನು?

ಮಾಧ್ಯಮ ಸಂಸ್ಥೆಗಳ ನೋಂದಣಿ ಪ್ರಕ್ರಿಯೆ ಸುಲಭಗೊಳಿಸುವುದು, ಡಿಜಿಟಲ್‌ ಮೀಡಿಯಾ (Digital Media) ನಿಯಂತ್ರಣ ಸೇರಿ ಹಲವು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅನುರಾಗ್‌ ಠಾಕೂರ್‌ ಮಾಹಿತಿ ನೀಡಿದರು.

VISTARANEWS.COM


on

Anurag Minister Digital Media
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಡಿಜಿಟಲ್‌ ಮಾಧ್ಯಮ (Digital Media) ಕ್ಷೇತ್ರದ ವ್ಯಾಪ್ತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಡಿಜಿಟಲ್‌ ಮೀಡಿಯಾ ನಿಯಂತ್ರಣದ ಕುರಿತು ಶೀಘ್ರವೇ ಕಾನೂನು ರೂಪಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಘೋಷಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಬದಲಾದ ಕಾಲಘಟ್ಟದಲ್ಲಿ ಜನರಿಗೆ ಸುದ್ದಿ ತಲುಪಿಸುವ ರೀತಿಯೇ ಬದಲಾಗಿದೆ. ಒಂದು ಸಣ್ಣ ಹಳ್ಳಿಯ ಸುದ್ದಿಯು ಡಿಜಿಟಲ್‌ ಮಾಧ್ಯಮದ ಮೂಲಕ ದೇಶಾದ್ಯಂತ ಪಸರಿಸುತ್ತಿದೆ. ಡಿಜಿಟಲ್‌ ಮಾಧ್ಯಮವು ಹತ್ತಾರು ಅವಕಾಶಗಳನ್ನು ಸೃಷ್ಟಿಸುವ ಜತೆಗೆ ಸವಾಲುಗಳನ್ನೂ ತಂದೊಡ್ಡಿದೆ. ಸಮತೋಲನ ಕಾಪಾಡುವ ಹಾಗೂ ಡಿಜಿಟಲ್‌ ಮಾಧ್ಯಮವನ್ನು ನಿಯಂತ್ರಿಸುವ ದಿಸೆಯಲ್ಲಿ ಶೀಘ್ರವೇ ವಿಧೇಯಕ ಮಂಡಿಸಲಾಗುತ್ತದೆ” ಎಂದು ಮಾಹಿತಿ ನೀಡಿದರು.

ಡಿಜಿಟಲ್‌ ಪತ್ರಕರ್ತರಿಗೂ ಮಾನ್ಯತೆ

“ಮುದ್ರಣ ಹಾಗೂ ಟಿವಿ ಮಾಧ್ಯಮದ ಪತ್ರಕರ್ತರಂತೆ ಡಿಜಿಟಲ್‌ ಮೀಡಿಯಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೂ ಮಾನ್ಯತೆ ನೀಡಲಾಗುವುದು” ಎಂದು ಅನುರಾಗ್‌ ಠಾಕೂರ್‌ ಹೇಳಿದ್ದಾರೆ. ಹಾಗೆಯೇ, “ಕಂಪನಿಗಳ ನೋಂದಣಿ ಪ್ರಕ್ರಿಯೆ ಸುಲಭಗೊಳಿಸುವುದು ಸೇರಿ ಹತ್ತಾರು ಯೋಜನೆಗಳು ಕೇಂದ್ರ ಸರ್ಕಾರದ ಮುಂದಿವೆ” ಎಂದಿದ್ದಾರೆ.

ಇದನ್ನೂ ಓದಿ | ಡಿಜಿಟಲ್‌ ಮಾಧ್ಯಮದಲ್ಲಿ ಪ್ರಯೋಗಶೀಲತೆಯಿಂದಲೇ ಗೆಲುವು: ವಿಸ್ತಾರ ಸಂವಾದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

ಕಾರ್ಖಾನೆಗಳು, ಸಾರ್ವಜನಿಕ ತಾಣಗಳಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ್ಳುವುದು ನಮ್ಮಲ್ಲಿ ಇನ್ನೂ ರೂಢಿಯಾಗಿಲ್ಲ. ನಮ್ಮಲ್ಲಿ ನಗರಗಳು ಜನದಟ್ಟಣೆಯ ಕೇಂದ್ರಗಳಾಗಿವೆ. ಆದರೆ ಸೂಕ್ತ ನಗರ ಯೋಜನೆಯ ಕೊರತೆಯಿದೆ. ಕಟ್ಟಡಗಳ ನಡುವೆ ಸಾಕಷ್ಟು ಸೆಟ್‌ಬ್ಯಾಕ್ ಬಿಡಬೇಕು ಎಂಬುದು ನಿಯಮ. ಈ ನಿಯಮದ ಪಾಲನೆ ಆಗದಿರುವುದರಿಂದ, ಒಂದು ಕಟ್ಟಡಕ್ಕೆ ಹಾನಿ ಅಥವಾ ಅಗ್ನಿ ಆಕಸ್ಮಿಕ‌ ಸಂಭವಿಸಿದರೆ ಇನ್ನೊಂದು ಕಟ್ಟಡಕ್ಕೂ ಹಾನಿಯಾಗುತ್ತದೆ. ಇಂತಹ ಹಲವು ಸಂಗತಿಗಳ ಬಗ್ಗೆ ನಾವು ಎಚ್ಚರಿಕೆ ವಹಿಸಲೇಬೇಕಿದೆ.

VISTARANEWS.COM


on

Fire Accident
Koo

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಭೀಕರ ಅಗ್ನಿ ದುರಂತ (Fire Accident) ಸಂಭವಿಸಿದ್ದು, ಮಹಿಳೆಯರು, ಮಕ್ಕಳು ಸೇರಿ 24 ಮಂದಿ ಮೃತಪಟ್ಟಿದ್ದಾರೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯು ಇಡೀ ಕಟ್ಟಡದ ತುಂಬ ಆವರಿಸಿಕೊಂಡಿದ್ದು, ಇನ್ನೂ ಹಲವರು ಅಗ್ನಿಯ ಕೆನ್ನಾಲಗೆಯಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ವೀಕೆಂಡ್ ಆದ ಕಾರಣ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ಇದೇ ವೇಳೆ ಏಕಾಏಕಿ ಅಗ್ನಿದುರಂತ ಸಂಭವಿಸಿದ ಕಾರಣ 24 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಘಟನೆ ಸಂಭವಿಸುತ್ತಲೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದುವರೆಗೆ 15-20 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದೊಂದು ದಾರುಣ ವಿಷಾದನೀಯ ದುರಂತ.

ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದರು. ಸುಮಾರು 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನ ಕೆಲಸ ಮಾಡುವಾಗಲೇ ಬಾಯ್ಲರ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದಾದ ಕ್ಷಣಮಾತ್ರದಲ್ಲೇ ಭೀಕರ ಸ್ಫೋಟ ಸಂಭವಿಸಿತ್ತು. ಈ ಪ್ರಕರಣಗಳಲ್ಲಿ ಆಕಸ್ಮಿಕಕ್ಕೆ ಕಾರಣ ಹುಡುಕುವುದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದು ಅಗತ್ಯ.

ಕಾರ್ಖಾನೆಗಳು, ಸಾರ್ವಜನಿಕ ತಾಣಗಳಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ್ಳುವುದು ನಮ್ಮಲ್ಲಿ ಇನ್ನೂ ರೂಢಿಯಾಗಿಲ್ಲ. ನಮ್ಮಲ್ಲಿ ನಗರಗಳು ಜನದಟ್ಟಣೆಯ ಕೇಂದ್ರಗಳಾಗಿವೆ. ಆದರೆ ಸೂಕ್ತ ನಗರ ಯೋಜನೆಯ ಕೊರತೆಯಿದೆ. ಕಟ್ಟಡಗಳ ನಡುವೆ ಸಾಕಷ್ಟು ಸೆಟ್‌ಬ್ಯಾಕ್ ಬಿಡಬೇಕು ಎಂಬುದು ನಿಯಮ. ಈ ನಿಯಮದ ಪಾಲನೆ ಆಗದಿರುವುದರಿಂದ, ಒಂದು ಕಟ್ಟಡಕ್ಕೆ ಹಾನಿ ಅಥವಾ ಅಗ್ನಿ ಆಕಸ್ಮಿಕ‌ ಸಂಭವಿಸಿದರೆ ಇನ್ನೊಂದು ಕಟ್ಟಡಕ್ಕೂ ಹಾನಿಯಾಗುತ್ತದೆ. ಮಾಲ್‌ಗಳು, ನಿಲ್ದಾಣಗಳು, ಹೆಚ್ಚು ಜನ ಸೇರುವ ಸಾರ್ವಜನಿಕ ತಾಣಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಕಡ್ಡಾಯ. ಆದರೆ ಎಷ್ಟು ಜನ ಇದನ್ನು ಪಾಲಿಸುತ್ತಾರೆ? ದೊಡ್ಡ ಕಂಪನಿಗಳ ಸಿಬ್ಬಂದಿಗೆ ಆಗಾಗ ಅಣಕು ಅಗ್ನಿ ಸುರಕ್ಷತಾ ಡ್ರಿಲ್‌ಗಳನ್ನು ಮಾಡಿಸುವುದು ಅಗತ್ಯ. ಆದರೆ ತುಂಬಾ ಕಡೆ ಮಾಡಿಸುವುದಿಲ್ಲ.

ಬೆಂಗಳೂರು ನಗರ ಕೂಡ ಅಡ್ಡಾದಿಡ್ಡಿಯಾಗಿ ಬೆಳೆದಿದೆ. ಇಂಥ ಆಕಸ್ಮಿಕಗಳು ನಮಗೆ ಎಚ್ಚರಿಕೆಯ ಪಾಠ ಆಗಬೇಕು. ದುರಂತಗಳು ನಮಗೆ ಸುರಕ್ಷತೆಯ ನಿಯಮಗಳನ್ನು ನೆನಪಿಸಬೇಕು. ಪ್ರತಿ ಕಟ್ಟಡದಲ್ಲೂ ಫೈರ್ ಎಕ್ಸಿಟ್‌ಗಳು, ಅಗ್ನಿಶಾಮಕ ಸಿಲಿಂಡರ್‌ಗಳು ಸೇರಿದಂತೆ ಸುರಕ್ಷತಾ ಸಾಧನಗಳಿರಬೇಕು. ಸೆಕ್ಯುರಿಟಿ ಸಿಬ್ಬಂದಿ ಹಾಗೂ ನಿವಾಸಿಗಳಿಗೆ ತರಬೇತಿ ನೀಡುತ್ತಿರಬೇಕು. ತುರ್ತು ಕಾರ್ಯಾಚರಣೆ ವ್ಯವಸ್ಥೆಯ ಅರಿವಿರಬೇಕು. ಗ್ಯಾಸ್ ಸಿಲಿಂಡರ್‌ಗಳು, ಎಲೆಕ್ಟ್ರಿಕ್ ವ್ಯವಸ್ಥೆಗಳ ಸುರಕ್ಷತೆಯನ್ನು ಕಾಲಕಾಲಕ್ಕೆ ಗಮನಿಸುತ್ತಿರಬೇಕು. ಹೀಗೆಲ್ಲ ಇದ್ದಾಗ ಮಾತ್ರ ಇಂಥ ದುರಂತಗಳಿಂದ ಪಾರಾಗಬಹುದು.

ಇದನ್ನೂ ಓದಿ: Chemical Factory: ಕೆಮಿಕಲ್‌ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ನಾಲ್ವರ ಸಾವು, 25 ಮಂದಿಗೆ ಗಾಯ

Continue Reading

ಪ್ರಮುಖ ಸುದ್ದಿ

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Election Commission: ಮಾರ್ಚ್​ನಲ್ಲಿ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುವಾಗ ಭದ್ರತಾ ಕಾರಣಗಳಿಂದಾಗಿ ವಿಧಾನಸಭಾ ಮತ್ತು ಸಂಸದೀಯ ಚುನಾವಣೆಗಳನ್ನು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ನಡೆಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಕುಮಾರ್ ಅವರು ಬಹಿರಂಪಡಿಸಿದರು.

VISTARANEWS.COM


on

election commission
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗರಿಷ್ಠ ಪ್ರಮಾಣದ ಮತದಾನದ ಆಗಿರುವುದರಿಂದ ಚೈತನ್ಯ ಪಡೆದಿರುವ ಚುನಾವಣಾ ಆಯೋಗವು (Election Commission) ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಪ್ರಕ್ರಿಯೆ ಆರಂಭಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಸುದ್ದಿ ಸಂಸ್ಥೆಯೊಂದರ ಜತೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನರು ತಮ್ಮದೇ ಸರ್ಕಾರದ ವ್ಯಾಪ್ತಿಗೆ ಸೇರಲು ಅರ್ಹರು ಎಂದು ಅವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಕ್ರಿಯೆಗಳು ಮತ್ತು ವಿಧಾನಸಭಾ ಚುನಾವಣೆ ಎಂದು ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಚುನಾವಣಾ ಆಯುಕ್ತ ಕುಮಾರ್, ಲೋಕಸಭಾ ಚುನಾವಣೆಯಲ್ಲಿ ಜನರ ಭಾಗವಹಿಸುವಿಕೆಯಿಂದ ಚುನಾವಣಾ ಆಯೋಗವು ತುಂಬಾ ಪ್ರೇರಣೆಗೊಂಡಿದೆ. ಅವರ ಉತ್ಸಾಹ ನಮಗೆ ಖುಷಿಯ ವಿಚಾರ. ಯುವಕರು, ಮಹಿಳೆಯರು ಸಂತೋಷದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಪ್ರಜಾಪ್ರಭುತ್ವದ ಬೇರುಗಳನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ. ಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಜಮ್ಮು ಕಾಶ್ಮೀರದ ಮಂದಿ ತಮ್ಮ ಸರ್ಕಾರಕ್ಕೆ ಅರ್ಹರು. ನಾವು ಶೀಘ್ರದಲ್ಲೇ ಆ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ. ಮತದಾನಕ್ಕಾಗಿ ತುಂಬಾ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.

ಮಾರ್ಚ್​ನಲ್ಲಿ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುವಾಗ ಭದ್ರತಾ ಕಾರಣಗಳಿಂದಾಗಿ ವಿಧಾನಸಭಾ ಮತ್ತು ಸಂಸದೀಯ ಚುನಾವಣೆಗಳನ್ನು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ನಡೆಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಕುಮಾರ್ ಅವರು ಬಹಿರಂಪಡಿಸಿದರು.

ಆಗಸ್ಟ್ 2019 ರಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ನಡೆಯುತ್ತಿರುವ ಮೊದಲ ಚುನವಾಣೆ ಇದಾಗಿದೆ. ಇಲ್ಲಿನ ಭಾಗವಹಿಸುವಿಕೆಯನ್ನು ನೋಡಿದ ಬಳಿಕ ಇದೀಗ ವಿಧಾನಸಭಾ ಚುನಾವಣೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election: 6ನೇ ಹಂತದಲ್ಲಿ 59% ಮತದಾನ ; ಬಂಗಾಳದಲ್ಲಿ ವೋಟಿಂಗ್‌ ಹೆಚ್ಚು, ಹಿಂಸೆಯ ಕಿಚ್ಚು

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಕ್ರಿಯೆಯು ಸಾಮಾನ್ಯವಾಗಿ ಒಂದು ತಿಂಗಳ ಕಾಲ ನಡೆಯುತ್ತದೆ. ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯ ನಂತರ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನಿಗದಿಪಡಿಸಿದ ಸ್ಥಾನಗಳನ್ನು ಹೊರತುಪಡಿಸಿ ವಿಧಾನಸಭಾ ಸ್ಥಾನಗಳ ಸಂಖ್ಯೆ 83 ರಿಂದ 90 ಕ್ಕೆ ಏರಿಕೆಯಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 30 ರೊಳಗೆ ವಿಧಾನಸಭಾ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್​ ಡಿಸೆಂಬರ್​ನಲ್ಲಿ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

Continue Reading

ಪ್ರಮುಖ ಸುದ್ದಿ

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ ಸಂಭವಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಅಗ್ನಿಯನ್ನು ನಂದಿಸಲು ಸಿಬ್ಬಂದಿಯು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದಾಗ್ಯೂ, ಬೆಂಕಿಯಲ್ಲಿ ಎಷ್ಟು ಜನ ಸಿಲುಕಿದ್ದಾರೆ? ಇನ್ನೂ ಎಷ್ಟು ಜನ ಕಾಣೆಯಾಗಿದ್ದಾರೆ ಎಂಬುದರ ಕುರಿತು ನಿಖರ ಮಾಹಿತಿ ದೊರೆತಿಲ್ಲ. ಗಾಳಿಯ ತೀವ್ರತೆ ಹಾಗೂ ಬೆಂಕಿಯ ಹಿನ್ನೆಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಕಾರಣ ರಕ್ಷಣಾ ಕಾರ್ಯಾಚರಣೆಯು ಕ್ಷಿಪ್ರವಾಗಿ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Fire Accident
Koo

ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ (Fire Accident) ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 27 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದೆ. ಈಗಲೂ ಅಗ್ನಿ ನಂದಿಸುವ ಕಾರ್ಯವನ್ನು ಅಗ್ನಿಶಾಮಕದ ದಳದ ಸಿಬ್ಬಂದಿಯು ಮುಂದುವರಿಸಿದ್ದಾರೆ. ಇನ್ನೂ ಹಲವು ಜನ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ನಿರಾಕ್ಷೇಪಣಾ ಪತ್ರವೇ (NOC) ಸಿಕ್ಕಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಹೌದು, ಎರಡು ಅಂತಸ್ತಿನ ಶೆಡ್‌ನಲ್ಲಿ ನಿರ್ಮಿಸಲಾಗಿದ್ದ ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವೇ ಸಿಕ್ಕಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ರಾಜ್‌ಕೋಟ್‌ ಮೇಯರ್‌ ನಯನಾ ಪೆಢಾದಿಯಾ ಅವರೇ ಮಾಹಿತಿ ನೀಡಿದ್ದಾರೆ. “ನೋ ಅಬ್ಜೆಕ್ಷನ್‌ ಸರ್ಟಿಫಿಕೇಟ್‌ ಇಲ್ಲದೆಯೇ ಗೇಮಿಂಗ್‌ ಜೋನ್‌ ಕಾರ್ಯನಿರ್ವಹಿಸುತ್ತಿದ್ದ ಕುರಿತು ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ನುಸುಳದಂತೆ ತನಿಖೆ ನಡೆಸಲಾಗುತ್ತದೆ. ಇದು ಸಣ್ಣ ಸಂಗತಿ ಅಲ್ಲ” ಎಂಬುದಾಗಿ ಮಾಹಿತಿ ನೀಡಿದ್ದಾರೆ.

“ಟಿಆರ್‌ಪಿ ಗೇಮಿಂಗ್‌ ಜೋನ್‌ನಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲಾಗುತ್ತಿದೆ. ಕಾರ್ಯಾಚರಣೆಯು ಕೊನೆಯ ಹಂತಕ್ಕೆ ಬಂದಿದೆ. ಇದುವರೆಗೆ 20 ಶವಗಳು ಪತ್ತೆಯಾಗಿವೆ. ಪ್ರಕರಣದ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು. ಯುವರಾಜ್‌ ಸಿಂಗ್‌ ಸೋಲಂಕಿ ಎಂಬುವವರಿಗೆ ಈ ಗೇಮಿಂಗ್‌ ಜೋನ್‌ ಸೇರಿದೆ. ನಿರ್ಲಕ್ಷ್ಯ ವಹಿಸಿದ ಕಾರಣ ಅವರ ವಿರುದ್ಧ ಕೇಸ್‌ ದಾಖಲಿಸಲಾಗುತ್ತದೆ. ರಕ್ಷಣಾ ಕಾರ್ಯಾಚರಣೆ ಬಳಿಕ ಸಮಗ್ರ ತನಿಖೆ ನಡೆಸಲಾಗುವುದು” ಎಂದು ರಾಜ್‌ಕೋಟ್‌ ಕಮಿಷನರ್‌ ರಾಜು ಭಾರ್ಗವ ಮಾಹಿತಿ ನೀಡಿದ್ದಾರೆ.

4 ಲಕ್ಷ ರೂ. ಪರಿಹಾರ

ರಾಜ್‌ಕೋಟ್‌ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ (SIT) ರಚಿಸಲಾಗಿದೆ. ಇನ್ನು ಕಾರ್ಯಾಚರಣೆ ಕ್ಷಿಪ್ರವಾಗಿ ನಡೆಸಿ, ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 25 ಮಂದಿ ದಾರುಣ ಸಾವು

Continue Reading

ದೇಶ

Lok Sabha Election: 6ನೇ ಹಂತದಲ್ಲಿ 59% ಮತದಾನ ; ಬಂಗಾಳದಲ್ಲಿ ವೋಟಿಂಗ್‌ ಹೆಚ್ಚು, ಹಿಂಸೆಯ ಕಿಚ್ಚು

Lok Sabha Election: ರಾಷ್ಟ್ರಪತಿ ದ್ರೌಪದಿ ಮುರ್ಮು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ಕ್ರಿಕೆಟಿಗ ಗೌತಮ್‌ ಗಂಭೀರ್‌, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್‌ ಗಾಂಧಿ ಸೇರಿ ಹಲವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದರು. ಇದರೊಂದಿಗೆ ಆರನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯು (Lok Sabha Election 2024) ಅಂತಿಮ ಹಂತಕ್ಕೆ ಬಂದಿದೆ. ಶನಿವಾರ ಆರನೇ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆದಿದ್ದು, ಸಂಜೆ 5 ಗಂಟೆ ಸುಮಾರಿಗೆ ಶೇ.59.05ರಷ್ಟು ಮತದಾನ (Voter Turnout) ನಡೆದಿದೆ. ದೆಹಲಿಯಲ್ಲಿ ಶೇ.54.48ರಷ್ಟು ಮತದಾನ ದಾಖಲಾದರೆ, ಪಶ್ಚಿಮ ಬಂಗಾಳದಲ್ಲಿ (West Bengal) 78.19ರಷ್ಟು ಮತದಾನ ದಾಖಲಾಗಿದೆ. ಆ ಮೂಲಕ ಆರನೇ ಹಂತದಲ್ಲಿ ಅತಿಹೆಚ್ಚು ಮತದಾನ ದಾಖಲಾದ ರಾಜ್ಯ ಎಂಬ ಖ್ಯಾತಿ ಪಶ್ಚಿಮ ಬಂಗಾಳದ್ದಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ಕ್ರಿಕೆಟಿಗ ಗೌತಮ್‌ ಗಂಭೀರ್‌, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್‌ ಗಾಂಧಿ ಸೇರಿ ಹಲವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದರು. ಇದರೊಂದಿಗೆ ಆರನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಸಾರ್ವತ್ರಿಕ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಯಾವ ರಾಜ್ಯದಲ್ಲಿ ಎಷ್ಟು ಮತದಾನ?

ರಾಜ್ಯಮತದಾನ ಪ್ರಮಾಣ
ಬಿಹಾರ53.30%
ಹರಿಯಾಣ58.37%
ಜಮ್ಮು-ಕಾಶ್ಮೀರ52.28%
ಜಾರ್ಖಂಡ್62.74%
ದೆಹಲಿ54.48%
ಒಡಿಶಾ60.07%
ಉತ್ತರ ಪ್ರದೇಶ54.03%
ಪಶ್ಚಿಮ ಬಂಗಾಳ78.19%

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದರು. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆದಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಪಶ್ಚಿಮ ಬಂಗಾಳದಲ್ಲಿ ಎಂದಿನಂತೆ ಕೆಲವೆಡೆ ಹಿಂಸಾಚಾರ ನಡೆದಿದೆ. ಅದರಲ್ಲೂ ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

Continue Reading
Advertisement
Fire Accident
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

election commission
ಪ್ರಮುಖ ಸುದ್ದಿ3 hours ago

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Fire Accident
ಪ್ರಮುಖ ಸುದ್ದಿ3 hours ago

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Virat kohli
ಪ್ರಮುಖ ಸುದ್ದಿ4 hours ago

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Union Minister Pralhad Joshi latest statement about channagiri case
ಕರ್ನಾಟಕ4 hours ago

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

childrens summer camp closing ceremony at yallapur
ಉತ್ತರ ಕನ್ನಡ5 hours ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ5 hours ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Siddaramaiah
ಕರ್ನಾಟಕ5 hours ago

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Shikhar Dhawan
ಪ್ರಮುಖ ಸುದ್ದಿ5 hours ago

Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

Union Minister Pralhad Joshi statement about Prajwal revanna case
ಕರ್ನಾಟಕ5 hours ago

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌