ಸಿಡಿಎಸ್‌ ನೇಮಕಾತಿ ನಿಯಮ ಬದಲಾವಣೆ, ಸೇನಾಪಡೆಗಳ ನಿವೃತ್ತ ಮುಖ್ಯಸ್ಥರಿಗೆ ಚಾನ್ಸಿಲ್ಲ - Vistara News

ದೇಶ

ಸಿಡಿಎಸ್‌ ನೇಮಕಾತಿ ನಿಯಮ ಬದಲಾವಣೆ, ಸೇನಾಪಡೆಗಳ ನಿವೃತ್ತ ಮುಖ್ಯಸ್ಥರಿಗೆ ಚಾನ್ಸಿಲ್ಲ

ಚೀಫ್‌ ಆಫ್‌ ಡಿಫೆನ್‌ ಸ್ಟಾಫ್‌ ಹುದ್ದೆಯ ನೇಮಕಾತಿಗೆ ಸಂಬಂಧಿಸಿ ರಕ್ಷಣಾ ಸಚಿವಾಲಯ ಹೊಸ ನಿಯಮಾವಳಿ ರೂಪಿಸಿದೆ. ಈ ಹುದ್ದೆಗೆ ಯಾರೆಲ್ಲ ಅರ್ಹರು? ಯಾರಿಗೆ ಅರ್ಹತೆ ಇಲ್ಲ ಎಂಬ ವಿವರ ಇಲ್ಲಿದೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಹುದ್ದೆಗೆ ಸಂಬಂಧಿಸಿದ ಮೂರು ಸಶಸ್ತ್ರ ಪಡೆಗಳ ನಿಯಮಗಳನ್ನು ತಿದ್ದುಪಡಿ ಮಾಡಲು ರಕ್ಷಣಾ ಸಚಿವಾಲಯ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಹೊಸ ಮಾರ್ಗಸೂಚಿಯ ಪ್ರಕಾರ, 62 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸೇವೆಯಲ್ಲಿರುವ ಅಥವಾ ನಿವೃತ್ತ ತ್ರಿ-ಸ್ಟಾರ್ ಶ್ರೇಣಿಯ ಯಾವುದೇ ಅಧಿಕಾರಿಯನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ. ವೈಸ್ ಅಡ್ಮಿರಲ್ ಮತ್ತು ಏರ್ ಮಾರ್ಷಲ್ ಶ್ರೇಣಿಯ ನಿವೃತ್ತ ಅಥವಾ ಸೇವೆಯಲ್ಲಿರುವ ಅಧಿಕಾರಿಗಳನ್ನು ಸೇರಿಸಲು ಅರ್ಹತೆಯ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ.

ಆರ್ಮಿ ಆಕ್ಟ್ 1950 ಮತ್ತು ನೇವಿ ಆಕ್ಟ್ 1957ರ ಅಡಿಯಲ್ಲಿ ಒಂದೇ ರೀತಿಯ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಮೂರು ಸೇವಾ ಮುಖ್ಯಸ್ಥರ ಅಧಿಕಾರಾವಧಿಯು ಮೂರು ವರ್ಷಗಳ ಸೇವೆಯಾಗಿದೆ ಅಥವಾ ಅವರಿಗೆ 62 ವರ್ಷವಾದಾಗ ಹುದ್ದೆಗೆ ಅರ್ಹರಾಗುತ್ತಾರೆ. ಪರಿಣಾಮವಾಗಿ, ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ನಿವೃತ್ತ ಮುಖ್ಯಸ್ಥರನ್ನು ಸಿಡಿಎಸ್‌ ಹುದ್ದೆಗೆ ಪರಿಗಣಿಸುವ ಸಾಧ್ಯತೆಯಿಲ್ಲ, ಏಕೆಂದರೆ ಹುದ್ದೆಗೆ ಅರ್ಹರಾಗಲು ವಯಸ್ಸು 62 ವರ್ಷಗಳು.

ಮಿಲಿಟರಿ ಸಲಹೆಯನ್ನು ನೀಡಲು ಸರ್ಕಾರಕ್ಕೆ ಸಂಪರ್ಕದ ಏಕೈಕ ಅಧಿಕಾರಿ ಸಿಡಿಎಸ್‌ ಆಗಿರುತ್ತಾರೆ. ಯೋಜಿತ ಥಿಯೇಟರ್ ಆಫ್ ಕಮಾಂಡ್‌ನ ಅಧ್ಯಕ್ಷತೆಯಂತಹ ಇತರ ಜವಾಬ್ದಾರಿಗಳು ಅವರಿಗಿರುತ್ತವೆ. ಥಿಯೇಟರ್ ಕಮಾಂಡ್‌ಗಳ ಸ್ಥಾಪನೆ ಸೇರಿದಂತೆ ಕಾರ್ಯಾಚರಣೆಗಳಲ್ಲಿ ಸಹಭಾಗಿತ್ವ ಮತ್ತು ಸಮನ್ವಯತೆ ತರುವ ಮೂಲಕ ಸಂಪನ್ಮೂಲಗಳ ಅತ್ಯುತ್ತಮ ಬಳಕೆಗಾಗಿ ಮಿಲಿಟರಿ ಆದೇಶ ವ್ಯವಸ್ಥೆಯ ಪುನಾರಚನೆ ಮಾಡುವುದನ್ನು ಸುಲಭಗೊಳಿಸುವುದು ಸಿಡಿಎಸ್‌ನ ಮತ್ತೊಂದು ಪ್ರಮುಖ ಕರ್ತವ್ಯವಾಗಿರುತ್ತದೆ.

ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್ ಸಾವನ್ನಪ್ಪಿದ ನಂತರ ಸಿಡಿಎಸ್ ಹುದ್ದೆ ಖಾಲಿಯಾಗಿದೆ. ಜನವರಿ 1, 2020 ರಂದು, ಜನರಲ್ ರಾವತ್ ಅವರು ಸೇನೆ, ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಕಾರ್ಯಚಟುವಟಿಕೆಗಳಲ್ಲಿ ಏಕತೆಯನ್ನು ತರಲು ಮತ್ತು ದೇಶದ ಒಟ್ಟಾರೆ ಮಿಲಿಟರಿ ಪರಾಕ್ರಮವನ್ನು ಹೆಚ್ಚಿಸುವ ಕಾರ್ಯಾದೇಶದೊಂದಿಗೆ ಭಾರತದ ಮೊದಲ ಸಿಡಿಎಸ್‌ ಆಗಿ ಅಧಿಕಾರ ವಹಿಸಿಕೊಂಡರು.

2021 ರ ಡಿಸೆಂಬರ್ 8ರಂದು ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 12 ರಕ್ಷಣಾ ಸಿಬ್ಬಂದಿಯೊಂದಿಗೆ ಸಾವನ್ನಪ್ಪಿದರು. ಮೂರೂ ದಳಗಳ ತನಿಖೆಯ ಬಳಿಕ ವರದಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಲ್ಲಿಸಿತ್ತು.

ಇದನ್ನೂ ಓದಿ| ʼಪರಾಕ್ರಮಿʼ ಮನೋಜ್‌ ಪಾಂಡೆ ನೂತನ ಸೇನಾ ಮುಖ್ಯಸ್ಥ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

British Journalist: “ವವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

British Journalist:ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

VISTARANEWS.COM


on

British Journalist
Koo

ನವದೆಹಲಿ: ಹಾವು ಆಡಿಸುವವರ ದೇಶ ಎಂದು ಭಾರತವನ್ನು ಜರಿಯುತ್ತಿದ್ದ ಪ್ರಪಂಚದ ದೊಡ್ಡ ದೊಡ್ಡ ರಾಷ್ಟ್ರಗಳು ಇತ್ತೀಚಿನ ಕೆಲವು ವರ್ಷಗಳಿಂದ ಭಾರತದ ಎದುರು ಮಂಡಿಯೂರಿದೆ ಎಂದರೆ ತಪ್ಪಾಗಲಾರದು. ಶತ್ರು ರಾಷ್ಟ್ರ ಪಾಕಿಸ್ತಾನ(Pakistan)ವೂ ಸೇರಿದಂತೆ ವಿವಿಧ ರಾಷ್ಟ್ರಗಳು ನಿರಂತರವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಭಾರತವನ್ನು ಹಾಡಿ ಹೊಗಳುತ್ತಿವೆ. ಇದೀಗ ಇಂಗ್ಲೆಂಡ್‌ನ ಪತ್ರಕರ್ತ(British Journalist)ನೋರ್ವ ಭಾರತ(India)ದ ಬಗ್ಗೆ ಬಹಳ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

ಭಾರತದ ಬಗ್ಗೆ ಇಂಗ್ಲೆಂಡ್‌ನಲ್ಲಿ ಕೆಲವೊಂದು ನಕಾರಾತ್ಮಕ ವಿಚಾರಗಳನ್ನು ತುಂಬಲಾಗುತ್ತಿದೆ. ಅದೂ ಅಲ್ಲದೇ ಇಡೀ ಯೂರೋಪ್‌ನಲ್ಲಿ ಭಾರತದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಹುಟ್ಟಿಸಿ ಹೇಳಲಾಗುತ್ತಿದೆ. ನಮಗೆ ಭಾರತದಲ್ಲಿ ಧಾರ್ಮಿಕ ಸಂಘರ್ಘ ಇರುವುದನ್ನೇ ಎತ್ತಿ ತೋರಿಸಲಾಗುತ್ತಿದೆ. ಆದರೆ ಭಾರತಕ್ಕೆ ಬಂದು ನೋಡದಾಗಲೇ ಕೇಳಿವ ವಿಚಾರಕ್ಕೂ ವಾಸ್ತವಕತೆಗೂ ಬಹಳಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗೆ ಸಂಪೂರ್ಣವಾಗಿ ಬುರ್ಖಾ ಧರಿಸಿ ಮುಸ್ಲಿಂ ಮಹಿಳೆಯರು ಭಾಗಿಯಾಗುವುದನ್ನು ನಾನು ನೋಡಿದ್ದೇನೆ. ವಿವಿಧತೆಯಲ್ಲಿ ಏಕತೆ ಎಂಬ ವಿಚಾರವನ್ನು ನಾವು ಇಲ್ಲಿ ಮಾತ್ರ ಕಾಣಬಹುದಾಗಿದೆ. ನಾವು ಇಲ್ಲಿ ಭಾರತದ ಬಗ್ಗೆ ಸುದ್ದಿ ಕವರೇಜ್‌ಗಾಗಿ ಬಂದಿದ್ದೇವೆ. ನಾವು ಇಲ್ಲಿ ಭಾರತದ ಬಗ್ಗೆ ಹಲವು ನಿಜಾಂಶವನ್ನು ಕಂಡುಕೊಂಡಿದ್ದು, ಅವುಗಳನ್ನು ಲಂಡನ್‌ಗೆ ಮರಳಿ ಕೊಂಡೊಯ್ಯವುದೇ ನಮ್ಮ ಗುರಿ. ವಿದೇಶಿ ಮಾಧ್ಯಮಗಳಲ್ಲಿ ಭಾರತ ಬಗೆಗಿನ ನಕಾರಾತ್ಮಕ ಸುದ್ದಿಗಳ ಬಿತ್ತರದಿಂದ ನಾವು ಬೇಸತ್ತಿದ್ದೇವೆ. ಇದು ನಿಜಕ್ಕೂ ನಾಚಿಗೇಡಿನ ವಿಚಾರ. ನಿಜಕ್ಕೂ ಜನ ಇಲ್ಲಿ ಬಂದು ಕಣ್ಣಾರೆ ನೋಡಬೇಕು, ಇಲ್ಲಿ ಕೆಲ ಕಾಲ ಜನರೊಡನೆ ಬೆರೆಯಬೇಕು. ಆಗ ಮಾತ್ರ ಭಾರತ ಏನು ಎಂಬ ವಿಚಾರ ಅರ್ಥವಾಗಲು ಸಾಧ್ಯ ಎಂದು ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20). ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20) (Job Alert). ಗಮನಿಸಿ ಸಂಜೆ 5 ಗಂಟೆಯೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.
Continue Reading

ದೇಶ

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

IT Raid:ರೇಡ್‌ ವೇಳೆ 40ಕೋಟಿ ರೂ. ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಅಕ್ರಮ ಹಣದ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇವಲ 500ರೂ. ಮುಖಬೆಲೆಯ ನೋಟುಗಳಾಗಿದ್ದು, ಅಧಿಕಾರಿಗಳು ನೋಟು ಎಣಿಕೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೂ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

IT Raid
Koo

ಉತ್ತರಪ್ರದೇಶ: ಶೂ ತಯಾರಿಕಾ ಉದ್ಯಮಿಗಳ ಮೇಲೆ ಆದಾಯ ತೆರಿಗೆ(IT Raid) ಅಧಿಕಾರಿಗಳು ದಾಳಿ ನಡೆಸಿ, ಬರೊಬ್ಬರಿ 40 ಕೋಟಿ ರೂ.ನಗದನ್ನು ವಶಕ್ಕೆ ಪಡೆದಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಆಗ್ರಾದಲ್ಲಿ ನಡೆದಿದೆ. ಶನಿವಾರ ಆಗ್ರಾದ ಮೂರು ಶೂ ವ್ಯಾಪಾರಿ(Shoe Business)ಗಳ ನಿವಾಸ ಮತ್ತು ಕಚೇರಿ ಮೇಲೆ ರೇಡ್‌ ಮಾಡಿರುವ ಐಟಿ, ಭಾರೀ ಶೋಧ ಕಾರ್ಯಾಚರಣೆ ನಡೆಸಿದೆ.

ರೇಡ್‌ ವೇಳೆ 40ಕೋಟಿ ರೂ. ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಅಕ್ರಮ ಹಣದ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇವಲ 500ರೂ. ಮುಖಬೆಲೆಯ ನೋಟುಗಳಾಗಿದ್ದು, ಅಧಿಕಾರಿಗಳು ನೋಟು ಎಣಿಕೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೂ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ವ್ಯಾಪಾರಿಗಳ ವಿವರ ಇನ್ನೂ ಬಹಿರಂಗಪಡಿಸಿಲ್ಲ. ಇನ್ನು ಮಂಚದ ಮೇಲೆ ಕಂತೆ ಕಂತೆ ನೋಟುಗಳನ್ನು ಅಧಿಕಾರಿಗಳು ಜೋಡಿಸಿಟ್ಟಿರುವ ಫೋಟೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಕೆಲವು ದಿನಗಳ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದರು. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರು ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

Continue Reading

ದೇಶ

Air India: ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಅವಘಡ; ತಪ್ಪಿದ ಭಾರೀ ದುರಂತ; ತುರ್ತು ಭೂ ಸ್ಪರ್ಶ

Air India:AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಬೆಂಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ.

VISTARANEWS.COM


on

Air india
Koo

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ(Emergency Landing) ಮಾಡಿದೆ. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ತುರ್ತು ಭೂ ಸ್ಪರ್ಶ ಮಾಡಲಾಗಿದ್ದು, ಭಾರೀ ಅವಘಡವೊಂದು ತಪ್ಪಿದೆ.

AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಬೆಂಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್‌ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

ಮೇ 16ರಂದು ಕೂಡ ಇಂತಹದ್ದೇ ಒಂದು ಘಟನೆ ಪುಣೆಯಲ್ಲಿ ನಡೆದಿತ್ತು,. 180 ಪ್ರಯಾಣಿಕರೊಂದಿಗೆ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನವು ಪುಣೆ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಗುರುವಾರ (ಮೇ 16) ಟಗ್‌ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯಿಂದಾಗಿ ವಿಮಾನಕ್ಕೆ ಹಾನಿಯಾಗಿದ್ದರೂ ಅದೃಷ್ಟವಶಾತ್‌ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.

ಅಪಘಾತದ ನಂತರ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಬಳಿಕ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ತನಿಖೆಯನ್ನು ಪ್ರಾರಂಭಿಸಿದೆ. ಟಗ್ ಟ್ರಕ್ ಟ್ಯಾಕ್ಸಿಂಗ್ ಪ್ರಕ್ರಿಯೆಯ ಸಮಯದಲ್ಲಿ ವಿಮಾನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಅದಾಗ್ಯೂ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆದವು. ಬಾಧಿತ ವಿಮಾನವನ್ನು ತಪಾಸಣೆಗೆ ಒಳಪಡಿಸಲಾಯಿತು. ದುರಸ್ತಿಗೆ ಒಳಗಾದ ವಿಮಾನ ಸದ್ಯ ಕಾರ್ಯಾಚರಣೆಗೆ ಸಿದ್ಧವಾಗಿದೆ.

ಇದನ್ನೂ ಓದಿ:Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

ಇದಕ್ಕೂ ಮುನ್ನ ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್‌ ಕರೆಯೊಂದು ಬಂದು ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು. ದಿಲ್ಲಿಯಿಂದ ವಡೋದರಾಕ್ಕೆ ಪ್ರಯಾಣ ಬೆಳೆಸಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಎಂದು ಬರೆದಿರುವ ಟಿಶ್ಯೂ ಪೇಪರ್‌ ಪತ್ತೆಯಾಗಿತ್ತು. ಶೌಚಾಲಯದಲ್ಲಿ ಈ ಟಿಶ್ಯೂ ಪೇಪರ್‌ ಪತ್ತೆಯಾಗಿ ಪ್ರಯಾಣಿಕರಲ್ಲಿ ಭಾರೀ ಆತಂಕ ಉಂಟು ಮಾಡಿತ್ತು. ಬೆಳಿಗ್ಗೆ 7.30ರ ವೇಳೆಗೆ ವಿಮಾನ ಇನ್ನೇನು ಟೇಕ್‌ ಆಫ್‌ ಆಗಬೇಕಿತ್ತು. ಈ ವೇಳೆ ವಿಮಾನ ಸಿಬ್ಬಂದಿಗೆ ಈ ಟಿಶ್ಯೂ ಸಿಕ್ಕಿತ್ತು ಎನ್ನಲಾಗಿದೆ.

Continue Reading
Advertisement
Prajwal Revanna Case
ಕರ್ನಾಟಕ3 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ10 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ13 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ15 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ21 mins ago

British Journalist: “ವವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ21 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್45 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ1 hour ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Viral News
ವೈರಲ್ ನ್ಯೂಸ್2 hours ago

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ21 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌