ಬೆಂಗಳೂರು: ಚಂದ್ರಯಾನ-3 (Chandrayaan 3)ರ ಭರ್ಜರಿ ಯಶಸ್ಸು ಕಂಡಿದೆ. ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ವಿಕ್ರಮ್ ಲ್ಯಾಂಡರ್ ಸೇಫ್ ಆಗಿ ಲ್ಯಾಂಡ್ ಆಗಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಅಮೆರಿಕ, ರಷ್ಯಾ ಮತ್ತು ಚೀನಾದ ಬಳಿಕ ಚಂದ್ರನಲ್ಲಿ ಇಳಿದ ನಾಲ್ಕನೇ ದೇಶ ಎನಿಸಿಕೊಂಡಿದೆ. ಅದರಲ್ಲೂ ಕ್ಲಿಷ್ಟಕರ ದಕ್ಷಿಣ ಧ್ರುವ ಪ್ರದೇಶದಲ್ಲಿ ಲ್ಯಾಂಡರ್ ಇಳಿಸಿದ ಮೊದಲ ದೇಶ ಎನಿಸಿಕೊಂಡಿದೆ.
ಕಳೆದ ಜುಲೈ 14ರಂದು ಶ್ರೀಹರಿ ಕೋಟಾದಿಂದ ನಭಕ್ಕೆ ಜಿಗಿದಿದ್ದ ಚಂದ್ರಯಾನ ಮಿಷನ್ ಅಲ್ಲಿಂದ ನಾನಾ ಹಂತಗಳನ್ನು ದಾಟಿ ಇದೀಗ ಚಂದ್ರನ ಮೇಲೆ ಕಾಲಿಟ್ಟಿದೆ. ಅತ್ಯಂತ ಕಡಿಮೆ ಖರ್ಚಿನದಲ್ಲಿ ಅಂತರಿಕ್ಷ ಯಾನ ಮಾಡಿದ ಹಾಗೂ ಚಂದ್ರನ ಮೇಲೆ ಕಾಲಿಟ್ಟಿರುವ ಮೊದಲ ದೇಶ ಭಾರತ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಚಂದ್ರನಿಗೆ ಸಾಕಷ್ಟು ಹತ್ತಿರ ಬಂದಿರುವ ಲ್ಯಾಂಡರ್. ಇನ್ನು ಕೇವಲ 2 ಕಿಲೋ ಮೀಟರ್ ಮಾತ್ರ ಬಾಕಿ ಇದೆ.
ಮೂರು ನಿಮಿಷಗಳ ಕಾಲ ನಡೆಯಲಿದೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ.
ಚಂದ್ರನಿಗಿಂತ ಸುಮಾರು 7 ಕಿಲೋ ಮೀಟರ್ ಮೇಲೆ ನಿಂತಿರುವ ಲ್ಯಾಂಡರ್
ಗಂಟೆಗೆ ಸುಮಾರು 700 ಕಿಲೋ ಮೀಟರ್ ವೇಗದಲ್ಲಿ ಸಾಗುತ್ತಿರುವ ವಿಕ್ರಮ್ ಲ್ಯಾಂಡರ್.
ಚಂದ್ರನ ಮೇಲ್ಮೈಗಿಂತ 17 ಕಿಲೋ ಮೀಟರ್ ಎತ್ತದಲ್ಲಿರುವ ವಿಕ್ರಮ್ ಲ್ಯಾಂಡರ್ ಮಾಡ್ಯೂಲ್