ಬೆಂಗಳೂರು: ಚಂದ್ರಯಾನ-3 (Chandrayaan 3)ರ ಭರ್ಜರಿ ಯಶಸ್ಸು ಕಂಡಿದೆ. ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ವಿಕ್ರಮ್ ಲ್ಯಾಂಡರ್ ಸೇಫ್ ಆಗಿ ಲ್ಯಾಂಡ್ ಆಗಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಅಮೆರಿಕ, ರಷ್ಯಾ ಮತ್ತು ಚೀನಾದ ಬಳಿಕ ಚಂದ್ರನಲ್ಲಿ ಇಳಿದ ನಾಲ್ಕನೇ ದೇಶ ಎನಿಸಿಕೊಂಡಿದೆ. ಅದರಲ್ಲೂ ಕ್ಲಿಷ್ಟಕರ ದಕ್ಷಿಣ ಧ್ರುವ ಪ್ರದೇಶದಲ್ಲಿ ಲ್ಯಾಂಡರ್ ಇಳಿಸಿದ ಮೊದಲ ದೇಶ ಎನಿಸಿಕೊಂಡಿದೆ.
ಕಳೆದ ಜುಲೈ 14ರಂದು ಶ್ರೀಹರಿ ಕೋಟಾದಿಂದ ನಭಕ್ಕೆ ಜಿಗಿದಿದ್ದ ಚಂದ್ರಯಾನ ಮಿಷನ್ ಅಲ್ಲಿಂದ ನಾನಾ ಹಂತಗಳನ್ನು ದಾಟಿ ಇದೀಗ ಚಂದ್ರನ ಮೇಲೆ ಕಾಲಿಟ್ಟಿದೆ. ಅತ್ಯಂತ ಕಡಿಮೆ ಖರ್ಚಿನದಲ್ಲಿ ಅಂತರಿಕ್ಷ ಯಾನ ಮಾಡಿದ ಹಾಗೂ ಚಂದ್ರನ ಮೇಲೆ ಕಾಲಿಟ್ಟಿರುವ ಮೊದಲ ದೇಶ ಭಾರತ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಯೋಜನೆ ಯಶಸ್ಸಿನ ಬಳಿಕ ಸಂಭ್ರಮ ಹಂಚಿಕೊಡ ಯೋಜನೆಯ ಪ್ರಮುಖ ವಿಜ್ಞಾನಿಗಳ ತಂಡ
ಚಂದ್ರಯಾನ ಯೋಜನೆಯಲ್ಲಿ ಕೆಲಸ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್
ಸಿಹಿ ಹಂಚಿ, ಚಪ್ಪಾಳೆ ತಟ್ಟಿ ಸಂಭ್ರಮಿಸಿದ ಜನ, ಎಲ್ಲೆಡೆ ಹಬ್ಬದ ಸಂಭ್ರಮ.
ದೇಶದ ಮೂಲೆ ಮೂಲೆಯಲ್ಲಿ ಸಂಭ್ರಮ, ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡುತ್ತಿರುವ ದೇಶವಾಸಿಗಳು.
ಚಂದ್ರಯಾನ ಯಶಸ್ಸುಗೊಳಿಸಿದ ಇಸ್ರೊಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಅಭಿನಂದನೆ.