ಪುಣೆ, ಮಹಾರಾಷ್ಟ್ರ: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ (Pune-Mumbai Expressway) ಮಂಗಳವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಕೆಮಿಕಲ್ ತುಂಬಿದ್ದ ಟ್ಯಾಂಕರ್‌ಗೆ (Chemical-Laden Tanker) ಬೆಂಕಿ ತಗುಲಿ ಈ ದುರ್ಘಟನೆ ನಡೆದಿದೆ. ಲೋನಾವಾಲಾ ಮತ್ತು ಖಂಡಾಲಾ ನಡುವಿನ ಎಕ್ಸ್‌ಪ್ರೆಸ್‌ವೇ ಮಾರ್ಗದಲ್ಲಿ ಈ ಅಪಘಾತ (Accident) ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ನಂತರ ಟ್ಯಾಂಕರ್‌ಗೆ (Explodes) ಬೆಂಕಿ ಹೊತ್ತಿಕೊಂಡಿತು ಮತ್ತು ಸ್ಫೋಟಗೊಂಡು ರಾಸಾಯನಿಕದ ಉರಿಯುತ್ತಿರುವ ಚೆಂಡುಗಳು ಕೆಳಗಿನ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವಾಹನ ಸವಾರರ ಮೇಲೆ ಬಿದ್ದವು ಎಂದು ಅವರು ಹೇಳಿದರು.
ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಕೆಮಿಕಲ್ ತುಂಬಿದ ಟ್ಯಾಂಕರ್
Pune mumbai expressway accident. Plan accordingly. pic.twitter.com/MUGRHKMfyZ
— Amâr (@amardeepn) June 13, 2023
ರಸ್ತೆಯಲ್ಲಿ ಸಾಗುತ್ತಿದ್ದ ನಾಲ್ವರು ವಾಹನ ಚಾಲಕರಿಗೆ ಗಾಯಗಳಾಗಿದ್ದು, ಅದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಟ್ಯಾಂಕರ್‌ನಲ್ಲಿದ್ದ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ವಾಹನದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ ಎಂದು ಲೋನಾವಾಲಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು, ಈ ಅಪಘಾತವನ್ನು ದುರದೃಷ್ಟಕರ ಎಂದು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಷೇರ್ ಮಾಡಿರುವ ಅವರು, ಈ ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Road Accident: ಕರಾಳ ಮಂಗಳವಾರ; ಮೂರು ಅಪಘಾತ, ಐದು ಸಾವು
ಅಪಘಾತದ ಹಿನ್ನಲ್ಲೆಯಲ್ಲಿ ಹೆದ್ದಾರಿ ಸಂಚಾರ ಸ್ಥಗಿತವಾಗಿತ್ತು. ಈಗ ಒಂದು ಕಡೆಯಿಂದ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಮತ್ತೊಂದು ಕಡೆಯ ಹೆದ್ದಾರಿಯನ್ನು ಶೀಘ್ರವೇ ಸಂಚಾರಕ್ಕೆ ಮುಕ್ತ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.