Site icon Vistara News

Chhatrapal Singh Gangwar: ಪ್ರಮಾಣ ವಚನದ ವೇಳೆ ʼಜೈ ಹಿಂದೂ ರಾಷ್ಟ್ರʼ ಘೋಷಣೆ ಮೊಳಗಿಸಿದ ಬಿಜೆಪಿ ಸಂಸದ!

Chhatrapal Singh Gangwar

ನವದೆಹಲಿ: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi) ಮಂಗಳವಾರ 18ನೇ ಲೋಕಸಭೆ(Loksabha)ಯ ಸದಸ್ಯರಾಗಿ ಪ್ರಮಾಣ ವಚನ(Oath taking)ದ ಬಳಿಕ “ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ನಾಯಕ ಚರ್ಚಾಸ್ಪದ ಘೋಷಣೆ ಮೊಳಗಿಸಿದ್ದಾರೆ. ಬಿಜೆಪಿ ಸಂಸದ ಛತ್ರಪಾಲ್‌ ಸಿಂಗ್‌ ಗಂಗ್ವಾರ್‌(Chhatrapal Singh Gangwar) ಪ್ರಮಾಣ ವಚನ ಸ್ವೀಕಾರದ ಬಳಿಕ ಜೈ ಹಿಂದೂ ರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ. ಇದು ಪ್ರತಿಪಕ್ಷ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಉತ್ತರಪ್ರದೇಶದ ಬರೇಲಿ ಕ್ಷೇತ್ರದ ಸಂಸದ ಛತ್ರಪಾಲ್‌ ಸಿಂಗ್‌ ಗಂಗ್ವಾರ್‌, ಇಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನದ ಬಳಿಕ ಅವರು ಜೈ ಹಿಂದೂ ರಾಷ್ಟ್ರ, ಜೈ ಭಾರತ್‌ ಎಂದು ಘೋಷಣೆ ಕೂಗಿದ್ದಾರೆ. ಇದರ ಬೆನ್ನಲ್ಲೇ ಈ ವಿಚಾರ ಭಾರೀ ವಿವಾದಕ್ಕೀಡಾಗಿತ್ತು. ಛತ್ರಪಾಲ್‌ ಸಿಂಗ್‌ ಹೇಳಿಕೆಗೆ ಪ್ರತಿಪಕ್ಷ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದರು. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದಕ್ಕೂ ಮುನ್ನ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗುವ ಮೂಲಕ ಮುಕ್ತಾಯಗೊಳಿಸಿದ್ದರು. ಐದನೇ ಬಾರಿಗೆ ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಓವೈಸಿ, ನಂತರ ಎಕ್ಸ್​ನಲ್ಲಿ ಪೋಸ್ಟ್ ಹಾಕಿದ್ದು. ಭಾರತದಲ್ಲಿ ಸಮಸ್ಯೆಗಳ ಅಂಚಿನಲ್ಲಿರುವವರ ಪರ ಪ್ರಾಮಾಣಿಕವಾಗಿ ಧ್ವನಿ ಎತ್ತುವುದಾಗಿ ಹೇಳಿದ್ದಾರೆ. ಅಸಾದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕರಿಸಲು ತೆರಳುತ್ತಿದ್ದಂತೆ ಬಿಜೆಪಿ ಸಂಸದರು ಜೈ ಶ್ರೀರಾಮ್ ಘೋಷಣೆ ಕೂಗಲು ಆರಂಭಿಸಿದ್ದರು.

2019ರಲ್ಲಿ, ಓವೈಸಿ ತಮ್ಮ ಪ್ರಮಾಣವಚನವನ್ನು “ಜೈ ಭೀಮ್, ಅಲ್ಲಾ-ಒ-ಅಕ್ಬರ್ ಮತ್ತು ಜೈ ಹಿಂದ್” ಎಂಬ ಪದಗಳೊಂದಿಗೆ ಮುಕ್ತಾಯಗೊಳಿಸಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಓವೈಸಿ ಹೈದರಾಬಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹಿಂದೂ ಫೈರ್ ಬ್ರಾಂಡ್​ ಮಾಧವಿ ಲತಾ ವಿರುದ್ಧ ಗೆಲುವು ಸಾಧಿಸಿದ್ದರು. ಓವೈಸಿಯವರ ಘೋಷಣೆಯ ಬಗ್ಗೆ ವಿವಾದ ಸೃಷ್ಟಿಯಾದ ಬಳಿಕ ಅವರು ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ. , ‘ಜೈ ಪ್ಯಾಲೆಸ್ತೀನ್​’ ಎಂದು ಹೇಳುವುದನ್ನು ನಿರ್ಬಂಧಿಸಲು ಸಂವಿಧಾನದಲ್ಲಿ ಯಾವುದೇ ಅವಕಾಶವಿಲ್ಲ ಎಂದು ಓವೈಸಿ ಹೇಳಿದ್ದಾರೆ

ಓವೈಸಿ ನೀಡಿರುವ ‘ಜೈ ಪ್ಯಾಲೆಸ್ತೀನ್​ ‘ ಘೋಷಣೆ ಕೂಗಿರುವುದು ಸಂಪೂರ್ಣ ತಪ್ಪು ಮತ್ತು ಸಂವಿಧಾನಕ್ಕೆ ವಿರುದ್ಧ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ:Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ನೂತನ ಚಿತ್ರ ‘ಈ ಪಾದ ಪುಣ್ಯ ಪಾದ’ ಶೀರ್ಷಿಕೆ ಅನಾವರಣ

Exit mobile version