ದೇಶ
ಉತ್ತರಾಖಂಡ್ನ ಎಲ್ಎಸಿ ಬಳಿ ಚೀನಾ ಅಧಿಕ ಪ್ರಸಂಗತನ; 250 ಮನೆಗಳುಳ್ಳ ಗಡಿ ರಕ್ಷಣಾ ಗ್ರಾಮಗಳ ನಿರ್ಮಾಣ
ಉತ್ತರಾಖಂಡ್ ಮತ್ತು ಚೀನಾ ಗಡಿ ಸುಮಾರು 350 ಕಿಮೀ ಉದ್ದವಿದೆ. ಈ ಗಡಿ ಭಾಗದಲ್ಲಿರುವ ಹಲವು ಗ್ರಾಮಗಳ ಜನರು ಇಲ್ಲೇನೂ ದುಡಿಮೆಯಿಲ್ಲದೆ, ಜೀವನ ಸಾಗಿಸಲು ಸಾಧ್ಯವಾಗದೆ ಬೇರೆಡೆಗೆ ವಲಸೆ ಹೋಗಿದ್ದಾರೆ.
ಅರುಣಾಚಲ ಪ್ರದೇಶ, ಲಡಾಖ್ನ ಗಡಿಗಳಲ್ಲಿ ಸದಾ ಉಪಟಳ ನೀಡುವ ಚೀನಾ ಇದೀಗ ಉತ್ತರಾಖಂಡ್ನ ವಾಸ್ತವಿಕ ನಿಯಂತ್ರಣ ರೇಖೆ (LAC-Line of Actual Control)ಯಿಂದ 11 ಕಿಮೀ ದೂರದಲ್ಲಿ ಗಡಿ ರಕ್ಷಣಾ ಹಳ್ಳಿ (Border Defence Villages)ಗಳನ್ನು ನಿರ್ಮಾಣ ಮಾಡುತ್ತಿದೆ. ಈ ಹಳ್ಳಿಗಳಲ್ಲಿ ಸುಮಾರು 250 ಮನೆಗಳು ಇವೆ ಎಂದು ಇಂಡಿಯಾ ಟುಡೆ ಮಾಧ್ಯಮ ವರದಿ ಮಾಡಿದೆ. ಇವಿಷ್ಟೇ ಅಲ್ಲ, ಈ ಉತ್ತರಾಖಂಡ್ನ ಎಲ್ಎಸಿಯಿಂದ (Uttarakhand LAC) 35ಕಿಮೀ ದೂರದಲ್ಲಿ 55-56 ಮನೆಗಳನ್ನು ನಿರ್ಮಾಣ ಮಾಡುತ್ತಿದೆ ಎನ್ನಲಾಗಿದೆ. ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ)ಯೇ ಖುದ್ದಾಗಿ ನಿಂತು ಈ ಹಳ್ಳಿಗಳ ನಿರ್ಮಾಣ ಮಾಡಿಸುತ್ತಿದೆ.
ಉತ್ತರಾಖಂಡ್ ಮತ್ತು ಚೀನಾ ಗಡಿ ಸುಮಾರು 350 ಕಿಮೀ ಉದ್ದವಿದೆ. ಈ ಗಡಿ ಭಾಗದಲ್ಲಿರುವ ಹಲವು ಗ್ರಾಮಗಳ ಜನರು ಇಲ್ಲೇನೂ ದುಡಿಮೆಯಿಲ್ಲದೆ, ಜೀವನ ಸಾಗಿಸಲು ಸಾಧ್ಯವಾಗದೆ ಬೇರೆಡೆಗೆ ವಲಸೆ ಹೋಗಿದ್ದಾರೆ. ಭಾರತ ಮತ್ತು ಚೀನಾ ನಡುವಿನ ಈ ಗಡಿ ಭಾಗದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಸುತ್ತಲಿನ ಸ್ಥಳಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ಈ ಹಿಂದೆ ಭಾರತೀಯ ಸೇನೆ ಹೇಳಿತ್ತು.
ಇದನ್ನೂ ಓದಿ: BRO Road At LAC: ಚೀನಾಗೆ ತಿರುಗೇಟು ನೀಡಲು ಲಡಾಕ್ ಗಡಿಯಲ್ಲಿ ಭಾರತ 135 ಕಿ.ಮೀ ಹೆದ್ದಾರಿ ನಿರ್ಮಾಣ
2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರು ಹೊಡೆದಾಡಿಕೊಂಡು, ಭಾರತದ 20ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆ. ಆಗಿನಿಂದಲೂ ಎರಡೂ ದೇಶಗಳ ನಡುವಿನ ಮಿಲಿಟರಿ ಸಂಬಂಧವಷ್ಟೇ ಅಲ್ಲ, ರಾಜತಾಂತ್ರಿಕ ಸಂಬಂಧವೂ ಹದಗೆಟ್ಟಿದೆ. ಎಲ್ಲ ಗಡಿಭಾಗಗಳಲ್ಲೂ ಚೀನಾ ಉಪಟಳ ಮಿತಿಮೀರುತ್ತಿದೆ. ಗಡಿ ಸಮೀಪವೇ ಬಂದು ಹಳ್ಳಿಗಳ-ಹೆದ್ದಾರಿಗಳನ್ನು ನಿರ್ಮಾಣ ಮಾಡುತ್ತಿದೆ. ಆ ಹಳ್ಳಿಗಳ ಜನರನ್ನು ಗಡಿ ರಕ್ಷಣೆಗೆ ಬಳಸಿಕೊಳ್ಳುತ್ತಿದೆ. ಅದರಲ್ಲೂ ಅರುಣಾಚಲ ಪ್ರದೇಶದಲ್ಲಂತೂ ಈಗಾಗಲೇ ಹಲವು ಹಳ್ಳಿಗಳನ್ನು ಚೀನಾ ನಿರ್ಮಾಣ ಮಾಡಿದ್ದಾಗಿ ವರದಿಯಾಗಿದೆ.
ಕರ್ನಾಟಕ
ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. Congress Guarantee: ಬಾಡಿಗೆಯವರಿಗೂ ಸಿಗುತ್ತೆ ಫ್ರೀ ಕರೆಂಟ್ ಎಂದ ಸರ್ಕಾರ: ಏನೇನು ದಾಖಲೆ ಬೇಕು? ಇಲ್ಲಿದೆ ವಿವರ
ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ಮಾಸಿಕ 200 ಯುನಿಟ್ ಉಚಿತ ವಿದ್ಯುತ್ ಯೋಜನೆಯು ಬಾಡಿಗೆ ಮನೆಯವರಿಗೂ ಅನ್ವಯ ಆಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಬಾಡಿಗೆ ಮನೆಯವರು ತಮ್ಮ ಆಧಾರ್ ಸಂಖ್ಯೆ, ಬಾಡಿಗೆ ಕರಾರು ಪತ್ರ, ವೋಟರ್ ಐಡಿಯನ್ನು ಆರ್‌ಆರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಬೇಕು. ಆಗ ಅವರಿಗೂ ಯೋಜನೆ ಅನ್ವಯ ಆಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Congress Guarantee : ತೆರಿಗೆ ಪಾವತಿಸುವವರ ಪತ್ನಿಗೆ ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂ. ಸಿಗೋದಿಲ್ಲ!
5 ಪ್ರಮುಖ ಗ್ಯಾರಂಟಿಗಳಲ್ಲಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ʼಗೃಹಲಕ್ಷ್ಮಿʼ ಯೋಜನೆಗೆ (Congress Guarantee) ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತೆರಿಗೆ ಪಾವತಿದಾರನ ಪತ್ನಿ ಹೊರತುಪಡಿಸಿ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್ ಗಿಮಿಕ್ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ ಇಂಥ ಚೀಪ್ ಗಿಮಿಕ್‌ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಇವರ ಈ ಹೇಳಿಕೆಯು ಸರ್ಕಾರಕ್ಕೆ ಮುಜುಗರವನ್ನು ತಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Caste Census: ಮತ್ತೆ ಜಾತಿ ಹುತ್ತಕ್ಕೆ ಕೈಹಾಕಿದ ಸಿದ್ದರಾಮಯ್ಯ?: ಒಕ್ಕಲಿಗ- ವೀರಶೈವ ಲಿಂಗಾಯತರು ವಿರೋಧಿಸಿದ್ದ ವರದಿ ಸ್ವೀಕಾರ?
ಈ ಹಿಂದೆ ಒಮ್ಮೆ ರಾಜ್ಯದಲ್ಲಿ ವಿವಾದಕ್ಕೀಡಾಗಿ ತಣ್ಣಗಾಗಿದ್ದ ವಿಚಾರವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ನಡೆಸಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು (ಜಾತಿ ಗಣತಿ) ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವರದಿಗೆ ರಾಜ್ಯದ ಎರಡು ಪ್ರಬಲ ಜಾತಿಗಳಾದ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿದ್ದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!
ರಾಜ್ಯದಲ್ಲಿ ಮುಂಗಾರು (Monsoon Season) ಇನ್ನೂ ವಿಳಂಬ ಆಗುವ ಸೂಚನೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಕಡೆ ಹಿಂಗಾರು ಮಳೆ ಭರ್ಜರಿಯಾಗಿಯೇ ಸುರಿಯುತ್ತಿದೆ. ಅಲ್ಲದೆ, ಈಗ ಬಿಪರ್‌ಜಾಯ್ ಚಂಡಮಾರುತದಿಂದಾಗಿ (Cyclone Biparjoy) ಇನ್ನೂ ಮೂರು ದಿನ (ಜೂನ್ 7, 8, 9) ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಇನ್ನು ಈ ಬಾರಿ ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಷ್ಟಾಗಿ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿದೆ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Weather Report: ಬಿಪರ್‌ಜಾಯ್ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
ಬಿಪರ್‌ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Wrestlers Protest: ಅನುರಾಗ್ ಠಾಕೂರ್ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ಭೂಷನ್ ಸಿಂಗ್ ಶರಣ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದೆ. ಇದರ ಬೆನ್ನಲ್ಲೇ ಕುಸ್ತಿಪಟುಗಳು ಸಚಿವ ಅನುರಾಗ್ ಠಾಕೂರ್ ಅವರ ನಿವಾಸಕ್ಕೆ ತೆರಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ; ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. WTC Final 2023: ಆಡುವ ಬಳಗದಿಂದ ಅಶ್ವಿನ್ ಕೈ ಬಿಡಲು ಕಾರಣ ಇದಂತೆ
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆರ್. ಅಶ್ವಿನ್ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್ ಶರ್ಮ ಅವರು ಅಶ್ವಿನ್ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. The Kerala Story: ʼದಿ ಕೇರಳ ಸ್ಟೋರಿʼ ನೋಡಲು ಸಾಧ್ವಿ ಪ್ರಜ್ಞಾ ಕರೆದೊಯ್ದು ಯುವತಿ ಮುಸ್ಲಿಂ ಲವರ್ ಜತೆ ಪರಾರಿ!
ಭೋಪಾಲ್‌ನ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ತನ್ನ ಮುಸ್ಲಿಂ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ. ಆದರೆ ಸ್ವಾರಸ್ಯಕರ ಸಂಗತಿ ಬೇರೊಂದಿದೆ. ಈಕೆಯನ್ನು ಬಿಜೆಪಿಯ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ʼದಿ ಕೇರಳ ಸ್ಟೋರಿʼ (The Kerala Story) ಫಿಲಂ ನೋಡಲು ಕರೆದೊಯ್ದಿದ್ದಳು ಹಾಗೂ ಮುಸ್ಲಿಂ ಬಾಯ್‌ಫ್ರೆಂಡ್‌ನಿಂದ ದೂರವಿರುವಂತೆ ತಾಕೀತು ಮಾಡಿದ್ದಳು ಎಂಬುದೇ ಅದು! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ದೇಶ
Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!
ಒಡಿಶಾದ ಜಜ್ಪುರ್ ರೋಡ್ ರೈಲ್ವೆ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದರೆ ನಾಲ್ವರು ಗಾಯಗೊಂಡಿದ್ದಾರೆ.
ನವದೆಹಲಿ: ಒಡಿಶಾದ ಜಜ್ಪುರ್ ರೋಡ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಗೂಡ್ಸ್ ರೈಲಿನಡಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ದುರದೃಷ್ಟವೆಂದರೆ ಇವರೆಲ್ಲರೂ ಕೆಲಸ ಮಾಡಿ ಸುಸ್ತಾಯಿತು ಎಂದು ನಿಂತಿದ್ದ ಗೂಡ್ಸ್ ರೈಲಿನಡಿ ಮಲಗಿದ್ದರು. ಏಕಾಏಕಿ ಟ್ರೈನ್ ಹೊರಟ ಕಾರಣ ಗಾಡ ನಿದ್ದೆಯಲ್ಲಿದ್ದ ನಾಲ್ವರು ಸ್ಥಳದಲ್ಲೇ ಅಪ್ಪಚ್ಚಿಯಾದರೆ, ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದಲ್ಲಿ (Odisha Train Accident) 288 ಜನರು ಮೃತಪಟ್ಟ ಘಟನೆ ನಡೆದು ನಾಲ್ಕು ದಿನಗಳ ಒಳಗೆ ಅದೇ ರಾಜ್ಯದಲ್ಲಿ ಘಟನೆ ನಡೆಸಿದೆ.
ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲು ಬೇಗ ಹೊರಡದು ಎಂದು ಅಂದುಕೊಂಡ ಕಾರ್ಮಿಕರು ಅದರಡಿಯಲ್ಲಿ ಮಲಗಿದ್ದರು. ಇದರ ಬಗ್ಗೆ ಅರಿವೇ ಇಲ್ಲದ ಲೋಕೋಪೈಲೆಟ್ ಸಿಗ್ನಲ್ ದೊರೆತ ತಕ್ಷಣ ರೈಲನ್ನು ಮುಂದಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಘಟನೆ ವಿಚಾರ ತಿಳಿದ ತಕ್ಷಣ ಸಾವಿರಾರು ಮಂದಿ ರೈಲ್ವೇ ಸ್ಟೇಷನ್ ಬಳಿ ಜಮಾಯಿಸಿದ್ದಾರೆ. ಹೀಗಾಗಿ ರೈಲ್ವೇ ಅಧಿಕಾರಿಗಳು ಘಟನೆ ನಡೆದ ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಕೋರಮಂಡಲ ಎಕ್ಸ್ಪ್ರೆಸ್ ಪ್ರಯಾಣ ಶುರು
ಕಳೆದ ಶುಕ್ರವಾರ ಅಪಘಾತಕ್ಕೆ ಈಡಾಗಿ ನೂರಾರು ಜನರ ಸಾವಿಗೆ ಕಾರಣವಾದ ಕೋರಮಂಡಲ ಎಕ್ಸ್ಪ್ರೆಸ್ ಟ್ರೈನ್ ಮತ್ತೆ ತನ್ನ ಸಂಚಾರ ಆರಂಭಿಸಿದೆ. ಬುಧವಾರ ಮಧ್ಯಾಹ್ನ ಚೆನ್ನೈನ ಶಾಲಿಮರ್ ಸ್ಟೇಷನ್ನಿಂದ ಸಂಚಾರ ಶುರುಮಾಡಿತು.
ಇದನ್ನೂ ಓದಿ : Goods Train Derails: ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಎಲ್‌ಪಿಜಿ ಸಾಗಿಸುತ್ತಿದ್ದ ರೈಲು; ಯಾರನ್ನು ‘ಹಳಿ’ಯಬೇಕು?
ಕೋರಮಂಡಲ್ ಎಕ್ಸ್ಪ್ರೆಸ್ ಶುಕ್ರವಾರ ಸಂಜೆ ವೇಳೆಗೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಗೂಡ್ಸ್ ರೈಲು ನಿಂತಿದ್ದ ಲೂಪ್ಲೈನ್ಗೆ ತಪ್ಪು ಸಿಗ್ನಲ್ ಸಿಕ್ಕಿದ್ದರಿಂದ ಪ್ರವೇಶಿಸಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿತ್ತು. ರೈಲಿನ ಬೋಗಿಗಳು ಎದುರಿನಿಂದ ಬರುತ್ತಿದ್ದ ಹೌರಾದಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಸಂಚರಿಸುತ್ತಿದ್ದದ ಹಳಿಗೆ ಬಿದ್ದ ಕಾರಣ ಆ ರೈಲು ಕೂಡ ಅಪಘಾತಕ್ಕೆ ಈಡಾಗಿತ್ತು.
ದೇಶ
ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ; ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಿಂದುಗಳು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಇದೇ ವೇಳೆ ಕಲ್ಲು ತೂರಾಟವೂ ನಡೆದಿದೆ.
ಕೊಲ್ಹಾಪುರ: ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ಅವರನ್ನು ವೈಭವೀಕರಿಸಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಹಿಂದು ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು. ಕೊಲ್ಹಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್‌ನಲ್ಲಿ ಪ್ರತಿಭಟನೆ ಆರಂಭಿಸುತ್ತಲೇ ಪೊಲೀಸರು ಗುಂಪು ಚದುರಿಸಲು ಲಾಠಿ ಪ್ರಹಾರ ಮಾಡಿದರು. ಇದರಿಂದ ಕೆರಳಿದ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾಯಿತು. ಲಾಠಿ ಚಾರ್ಜ್ ಹಾಗೂ ಹಿಂದು ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
Massive protest by Hindus in Kolhapur, Maharashtra over controversial social media posts glorifying Aurangzeb and Tipu Sultan. pic.twitter.com/1d6XH9iori
— Viक़as (@VlKASPR0NAM0) June 7, 2023
ಏನಿದು ಪ್ರಕರಣ?
ಮೈಸೂರು ಅರಸ ಟಿಪ್ಪು ಸುಲ್ತಾನ್ ಹಾಗೂ ಮೊಘಲ್ ಅರಸ ಔರಂಗಜೇಬ್ ಅವರನ್ನು ವೈಭವೀಕರಿಸಿ ಒಂದಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ಹಿಂದು ಸಂಘಟನೆಗಳು ಖಂಡಿಸಿದ್ದು, ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಕೊಲ್ಹಾಪುರ ಬಂದ್‌ಗೆ ಕರೆ ನೀಡಿದ್ದರು. ಅದರಂತೆ ಪ್ರತಿಭಟನೆ ನಡೆಸುವಾಗ ಗಲಾಟೆ ನಡೆದಿದೆ.
ಕಾನೂನು ಕೈಗೆತ್ತಿಕೊಳ್ಳದಂತೆ ಸಿಎಂ ಮನವಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಹಿಂದು ಸಂಘಟನೆಗಳಿಗೆ ಬೆಲೆ ಕೊಡುತ್ತಿಲ್ಲ ಎಂಬ ಆರೋಪವೂ ಇದೆ. ಇದಕ್ಕಾಗಿ, ಹಿಂದು ಸಂಘಟನೆಗಳು ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿವೆ. ಅದರಲ್ಲೂ, ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದು, ಇದರಿಂದ ಕಾರ್ಯಕರ್ತರ ಕೋಪ ಹೆಚ್ಚಾಗಿದೆ. ಆಗ ಪ್ರತಿಭಟನೆ ವೇಳೆ ಕಲ್ಲು ತೂರಾಟ ಕೂಡ ನಡೆದಿದೆ. ಪೊಲೀಸರು 21 ಜನರನ್ನು ಬಂಧಿಸಿದ್ದು, ಕೊನೆಗೆ ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದಾರೆ.
#WATCH | It's the government's responsibility to maintain law and order in the state. I also appeal to the public for peace and calm. Police investigation is underway and action will be taken against those found guilty: Maharashtra CM Eknath Shinde on Kolhapur incident pic.twitter.com/bzGBKXjkqT
— ANI (@ANI) June 7, 2023
ಇನ್ನು ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ, “ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಬಾರದು” ಎಂದು ಮನವಿ ಮಾಡಿದ್ದಾರೆ. ಸದ್ಯ, ಕೊಲ್ಹಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್‌ನಲ್ಲಿ ಪರಿಸ್ಥಿತಿ ತಹಬಂದಿಗೆ ಬಂದಿದೆ. ಆದರೂ ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ದೇಶ
Student Visa Day: ಉನ್ನತ ಶಿಕ್ಷಣಕ್ಕೆ ಅಮೆರಿಕ ವೀಸಾ; 3,500 ಭಾರತೀಯ ವಿದ್ಯಾರ್ಥಿಗಳ ಸಂದರ್ಶನ
Student Visa Day: ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿ ಸಹಯೋಗದಲ್ಲಿ ನವದೆಹಲಿ, ಚೆನ್ನೈ ಸೇರಿ ವಿವಿಧ ದೂತಾವಾಸ ಕಚೇರಿಗಳಲ್ಲಿ ವಿದ್ಯಾರ್ಥಿ ವೀಸಾ ದಿನ ಆಚರಿಸಲಾಗಿದೆ. ಈ ವೇಳೆ ವೀಸಾಗೆ ಅರ್ಜಿ ಸಲ್ಲಿಸಿದ್ದ 3,500 ಭಾರತೀಯ ವಿದ್ಯಾರ್ಥಿಗಳ ಸಂದರ್ಶನ ಮಾಡಲಾಗಿದೆ.
ನವ ದೆಹಲಿ: ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಯು 2023ರ ಬೇಸಿಗೆಯಲ್ಲಿ ದಾಖಲೆ ಸಂಖ್ಯೆಯ ವಿದ್ಯಾರ್ಥಿ ವೀಸಾಗಳನ್ನು ನೀಡಲು ಸಜ್ಜಾಗಿದೆ. ಹೀಗಾಗಿ ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಯು ತನ್ನ 7ನೇ ವಿದ್ಯಾರ್ಥಿ ವೀಸಾ ದಿನವನ್ನು ನವದೆಹಲಿ, ಚೆನ್ನೈ, ಹೈದರಾಬಾದ್, ಕೋಲ್ಕೊತಾ ಮತ್ತು ಮುಂಬೈ ದೂತಾವಾಸ ಕಚೇರಿಗಳಲ್ಲಿ ನಡೆಸಿದ್ದು, ಸುಮಾರು 3,500 ಭಾರತೀಯ ವಿದ್ಯಾರ್ಥಿ ವೀಸಾ ಅರ್ಜಿದಾರರ ಸಂದರ್ಶನ ನಡೆಸಲಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕೆ ಅಮೆರಿಕವನ್ನು ಆಯ್ಕೆ ಮಾಡಿಕೊಂಡು ವೀಸಾ ಪಡೆದಿರುವ ಭಾರತೀಯ ವಿದ್ಯಾರ್ಥಿಗಳನ್ನು ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮತ್ತು ಭಾರತದಾದ್ಯಂತ ಕಾನ್ಸುಲ್ ಜನರಲ್‌ಗಳು ಅಭಿನಂದಿಸಿದರು. “ನಾನು ಮೊದಲಿಗೆ ಯುವ ವಿದ್ಯಾರ್ಥಿಯಾಗಿ ಭಾರತಕ್ಕೆ ಬಂದಿದ್ದೆ. ಅನುಭವಗಳು ಹೇಗೆ ಪರಿವರ್ತನೆ ತರುತ್ತವೆ ಎನ್ನುವುದನ್ನು ಕಂಡಿದ್ದೇನೆ. ವಿದ್ಯಾರ್ಥಿ ವಿನಿಮಯವು ಅಮೆರಿಕ- ಭಾರತ ಬಾಂಧವ್ಯದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಅಮೆರಿಕ ಶಿಕ್ಷಣವು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದಲ್ಲದೆ, ಜ್ಞಾನದ ಜಾಗತಿಕ ಜಾಲಕ್ಕೆ ಲಭ್ಯತೆ ನೀಡುತ್ತದೆ. ಆದ್ದರಿಂದ ಈ ಅವಕಾಶಗಳನ್ನು ಎಷ್ಟು ಸಾಧ್ಯವೋ ಅಷ್ಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ನಾವು ಇಲ್ಲಿದ್ದೇವೆ” ಎಂದು ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದರು.
ಇದನ್ನೂ ಓದಿ | BSNL Revival: ಬಿಎಸ್ಸೆನ್ನೆಲ್ ಹಳಿಗೆ ತರಲು ಕೇಂದ್ರದಿಂದ 89 ಸಾವಿರ ಕೋಟಿ ರೂ. ಪ್ಯಾಕೇಜ್, ಸಿಗಲಿದೆಯೇ 5ಜಿ?
ವಿದ್ಯಾರ್ಥಿ ವೀಸಾ ದಿನವು ಅಮೆರಿಕ ಮತ್ತು ಭಾರತದ ನಡುವೆ ಉನ್ನತ ಶೈಕ್ಷಣಿಕ ಸಹಯೋಗಗಳ ಸುದೀರ್ಘ ಬಾಂಧವ್ಯವನ್ನು ಸಂಭ್ರಮಿಸುತ್ತದೆ. ಈ ವರ್ಷ 2,00,000 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಅಮೆರಿಕ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ, ಪ್ರಸ್ತುತ ಅಮೆರಿಕದಲ್ಲಿರುವರು ಶೇ. 20 ವಿದೇಶಿ ವಿದ್ಯಾರ್ಥಿಗಳನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ತಿಳಿಸಿದರು.
Education ties have been a cornerstone of the #USIndia partnership. In 2022, 1 out of every 5 U.S. student visas was issued right here in India! Today, I am thrilled to be here with these amazing young people to celebrate Student Visa Day. Congratulations to all students… pic.twitter.com/mJanvgPBqo
— U.S. Ambassador Eric Garcetti (@USAmbIndia) June 7, 2023
ಭಾರತದ ಕಾನ್ಸುಲರ್ ವ್ಯವಹಾರಗಳ ಪ್ರಭಾರ ಮಿನಿಸ್ಟರ್ ಕೌನ್ಸೆಲ್ಲರ್ ಬ್ರೆಂಡೆನ್ ಮುಲ್ಲಾರ್ಕೀ ಮಾತನಾಡಿ, “ಕಳೆದ ವರ್ಷ ದಾಖಲೆಯ 1,25,000 ಭಾರತೀಯರಿಗೆ ವಿದ್ಯಾರ್ಥಿ ವೀಸಾಗಳನ್ನು ನೀಡಲಾಗಿದೆ. ಇದು ಬೇರಾವುದೇ ದೇಶಗಳ ಪೌರರಿಗಿಂತ ಹೆಚ್ಚಾಗಿದೆ. ಕಳೆದ ವರ್ಷ ಪ್ರತಿ ಐದು ವಿದ್ಯಾರ್ಥಿ ವೀಸಾಗಳಲ್ಲಿ ಒಂದು ಭಾರತಕ್ಕೆ ನೀಡಲಾಗಿದೆ. ಈ ವರ್ಷ ಹಿಂದೆಂದಿಗಿಂತಲೂ ಹೆಚ್ಚು ವಿದ್ಯಾರ್ಥಿಗಳ ಸಂದರ್ಶನ ಮಾಡುತ್ತೇವೆ” ಎಂದು ಹೇಳಿದರು.
ಇದನ್ನೂ ಓದಿ | Narendra Modi: ಅಮೆರಿಕ ಸಂಸತ್‌ನಲ್ಲಿ ಮೋದಿ ಭಾಷಣದ ಮೋಡಿ; ಆಹ್ವಾನ ಸ್ವೀಕರಿಸಿದ ಪ್ರಧಾನಿ
ಅಮೆರಿಕ ರಾಯಭಾರ ಕಚೇರಿಯು ಅಮೆರಿಕದಲ್ಲಿ ಅಧ್ಯಯನ ಮಾಡಲು ಆಸಕ್ತಿ ಇರುವ ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶ ಮತ್ತು ವೀಸಾ ಪ್ರಕ್ರಿಯೆಗಳಿಗೆ ವಿಶ್ವಾಸಾರ್ಹ ಮತ್ತು ಸಮಗ್ರ ಮಾಹಿತಿಯೊಂದಿಗೆ ನೆರವಾಗಲು ಅಮೆರಿಕ ಸರ್ಕಾರದ ಪ್ರಾಯೋಜಿತ ಸಲಹಾ ಸೇವೆ ಎಜುಕೇಷನ್ ಯು.ಎಸ್.ಎ. ಸಂಪರ್ಕಿಸಲು ನೆರವಾಗುತ್ತದೆ. ಎಜುಕೇಷನ್ ಯುಎಸ್ಎ ಮಾನ್ಯತೆ ಪಡೆದ ಅಮೆರಿಕದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಪ್ರತಿನಿಧಿಸುತ್ತಿದ್ದು, ಭಾರತದಾದ್ಯಂತ 8 ಸಲಹಾ ಕೇಂದ್ರಗಳನ್ನು ಹೊಂದಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ವೆಬ್‌ಸೈಟ್ educationusa.state.gov ಭೇಟಿ ನೀಡಬಹುದು ಅಥವಾ ಫೇಸ್ ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ @educationUSAIndia ಭೇಟಿ ನೀಡಬಹುದು.
-
ಸುವಚನ16 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ11 hours ago
EPF e-passbook : UMANG ಆ್ಯಪ್ನಲ್ಲಿ ನಿಮ್ಮ ಪಿಎಫ್ ಪಾಸ್ಬುಕ್ ಸುಲಭವಾಗಿ ಪರಿಶೀಲಿಸಿ
-
ಪ್ರಮುಖ ಸುದ್ದಿ13 hours ago
Apply for ration card : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
-
ಅಂಕಣ24 hours ago
ವಿಧಾನಸೌಧ ರೌಂಡ್ಸ್: ರೌಂಡ್ ಟೇಬಲ್ ಸ್ನೇಹಿತರು ಮತ್ತು ವಿಧಾನಸೌಧದಲ್ಲಿ ಬದಲಾಗದ 40 % ಬ್ರಾಂಡ್!
-
ಉತ್ತರ ಕನ್ನಡ21 hours ago
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
-
ಪ್ರಮುಖ ಸುದ್ದಿ16 hours ago
Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!
-
ಉತ್ತರ ಕನ್ನಡ22 hours ago
Karwar Accident: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
-
ಪ್ರಮುಖ ಸುದ್ದಿ22 hours ago
ವಿಸ್ತಾರ ಸಂಪಾದಕೀಯ: ಶಾಲಾ ಬಾಲಕಿಯರಿಗೆ ವಿಷ: ಅಫಘಾನಿಸ್ತಾನದಲ್ಲಿ ಮನುಷ್ಯತ್ವ ಮರುಕಳಿಸುವುದು ಯಾವಾಗ?