ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯವು (JNU) ಸದಾ ಒಂದಿಲ್ಲೊಂದು ವಿಷಯಗಳಿಂದ ಸುದ್ದಿಯಲ್ಲಿರುತ್ತದೆ. ಈಗ ಮತ್ತೊಂದು ವಿಷಯದ ಮೂಲಕ ವಿವಿ ಸುದ್ದಿಯಾಗುತ್ತಿದೆ. ವಿಶ್ವವಿದ್ಯಾಲಯದ ಆವರಣದಲ್ಲಿ ಎರಡು ಗುಂಪುಗಳ ಮಧ್ಯೆ ಸಂಘರ್ಷ (Clash In JNU) ಉಂಟಾಗಿದ್ದು, ವಿದ್ಯಾರ್ಥಿಗಳು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ. ಗಲಾಟೆಯ ವಿಡಿಯೊ ಸಹ ವೈರಲ್ ಆಗಿದೆ.
ಶಾಂತವಾಗಿದ್ದ ಕ್ಯಾಂಪಸ್‌ನಲ್ಲಿ ಏಕಾಏಕಿ ಗಲಾಟೆ ನಡೆದಿದೆ. ಎರಡು ಗುಂಪುಗಳ ಮಧ್ಯೆ ನಡುವೆ ನಡೆದ ಗಲಾಟೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಲಾಟೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
“ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಗುಂಪುಗಳ ಮಧ್ಯೆ ವೈಯಕ್ತಿಕ ಕಾರಣಕ್ಕಾಗಿ ಗಲಾಟೆ ನಡೆದಿದೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದು, ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಯಾರೂ ದೂರು ನೀಡದ ಕಾರಣ ಪ್ರಕರಣ ದಾಖಲಿಸಿಕೊಂಡಿಲ್ಲ. ಹಾಗಾಗಿ, ವಿವಿ ಕ್ಯಾಂಪಸ್‌ನಲ್ಲಿ ಪರಿಸ್ಥಿತಿ ತಹಬಂದಿಗೆ ಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ | ಆಳಂದದ ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಸಾರ್ವಜನಿಕರ ಆತಂಕ