ನವದೆಹಲಿ: ರಾಷ್ಟ್ರ ರಾಜಧಾನಿ ಜನರಿಗೆ ಶಿಕ್ಷಣ ಸೇರಿ ಹಲವು ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಮತ್ತೊಂದು ಮಹತ್ವದ ತೀರ್ಮಾನ ಘೋಷಿಸಿದ್ದಾರೆ. “ದೆಹಲಿಯಲ್ಲಿ ವಾಸಿಸುವ ಪ್ರತಿಯೊಂದು ಕುಟುಂಬಕ್ಕೂ ನಿತ್ಯ 20 ಲೀಟರ್ ಶುದ್ಧ ಕುಡಿಯುವ ನೀರು (Reverse Osmosis Water ಅಥವಾ RO Water) ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.
ದೆಹಲಿ ಮಾಯಾಪುರಿ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು (Water ATM) ಪರಿಶೀಲಿಸಿದ ಬಳಿಕ ಅರವಿಂದ್ ಕೇಜ್ರಿವಾಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ದೆಹಲಿಯಲ್ಲಿ ಸುಮಾರು 500 ವಾಟರ್ ಎಟಿಎಂಗಳನ್ನು ಸ್ಥಾಪಿಸುವುದು ನಮ್ಮ ಗುರಿಯಾಗಿದೆ. ಹೀಗೆ ವಾಟರ್ ಎಟಿಎಂಗಳನ್ನು ಸ್ಥಾಪಿಸಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು” ಎಂದು ತಿಳಿಸಿದರು.
#WATCH | Delhi CM Arvind Kejriwal and state minister Saurabh Bharadwaj visited RO plants in Mayapuri area pic.twitter.com/BtwlB2yR9f
— ANI (@ANI) July 24, 2023
“ದೆಹಲಿಯಾದ್ಯಂತ 2 ಸಾವಿರ ಕುಟುಂಬಗಳಿಗೆ ವಾಟರ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಒಂದು ಕುಟುಂಬಕ್ಕೆ ಒಂದು ಕಾರ್ಡ್ ನೀಡಲಾಗುತ್ತಿದೆ. ಒಂದು ಕಾರ್ಡ್ ಬಳಸಿ ನಿತ್ಯ 20 ಲೀಟರ್ ಶುದ್ಧ ನೀರು ಪಡೆಯಬಹುದಾಗಿದೆ. ಇದರಿಂದಾಗಿ ಬಡವರು ಕೂಡ ಶುದ್ಧ ನೀರು ಕುಡಿಯುವಂತೆ ಆಗಲಿದೆ” ಎಂದು ವಿವರಿಸಿದರು.
ಇದನ್ನೂ ಓದಿ: ಸೋದರನ ಹುಡುಕುತ್ತ ಬಂದು ಸೋದರಿಯರನ್ನು ಕೊಂದ ಹಂತಕರು!; ಕೇಂದ್ರದ ವಿರುದ್ಧ ಕೇಜ್ರಿವಾಲ್ ಕಿಡಿ
ಬಡವರಿಗೆ ಹೇಗೆ ಅನುಕೂಲ?
ಬಡವರಿಗೂ ಶುದ್ಧ ಕುಡಿಯುವ ನೀರು ಪೂರೈಸುವ ದಿಸೆಯಲ್ಲಿ ಅರವಿಂದ್ ಕೇಜ್ರಿವಾಲ್ ಒಳ್ಳೆಯ ಯೋಜನೆ ರೂಪಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅದರಲ್ಲೂ, ಸ್ಲಂ ಪ್ರದೇಶಗಳು ಹಾಗೂ ಶುದ್ಧ ನೀರು ಪೂರೈಕೆಯಾಗದ ಪ್ರದೇಶಗಳಲ್ಲಿ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಇದರಿಂದ ಸ್ಲಮ್‌ಗಳಲ್ಲಿ ವಾಸಿಸುವ ಜನರಿಗೆ ಭಾರಿ ಅನುಕೂಲವಾಗಲಿದೆ.