Site icon Vistara News

Yuvajanotsava | ಯುವಜನೋತ್ಸವಕ್ಕೆ ಪ್ರಧಾನಿ ಮೋದಿಗೆ ಆಹ್ವಾನ: ಸಿಎಂ ಬೊಮ್ಮಾಯಿ

KMF Nandini

ನವ ದೆಹಲಿ: ರಾಜ್ಯದಲ್ಲಿ ಜನವರಿ 12 ರಂದು ಯುವಜನೋತ್ಸವವನ್ನು ಹಮ್ಮಿಕೊಳ್ಳಲು ಕೇಂದ್ರ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಮಾತುಕತೆ ನಡೆಯುತ್ತಿದೆ. ಕಾರ್ಯಕ್ರಮಕ್ಕೆ (Yuvajanotsava) ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಮಹಾರಾಷ್ಟ್ರದ ಸಚಿವರ ಜತೆ ನಡೆದ ಸಭೆ ಬಳಿಕ ಮಾತನಾಡಿ, ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚಿಸಲು ಕೇಂದ್ರ ಬಿಜೆಪಿ ನಾಯಕರ ಬಳಿ ಸಮಯ ಕೋರಲಾಗಿದೆ. ಸಚಿವ ಸಂಪುಟ ರಚನೆಯ ಅವಶ್ಯಕತೆಗಳ ಬಗ್ಗೆ ವಿವರಗಳನ್ನು ನೀಡಲಾಗಿದೆ. ಉಳಿದಂತೆ ಪಕ್ಷದ ಸಂಘಟನೆ, ಜನಸಂಕಲ್ಪ ಯಾತ್ರೆ, ಪ್ರಧಾನಿ ಹಾಗೂ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ದಿನಾಂಕಗಳ ಬಗ್ಗೆ ಚರ್ಚಿಸಲಾಗಿದೆ. ಪ್ರಧಾನಿಗಳು ಇನ್ನು ಮುಂದೆ ಹೆಚ್ಚಿನ ಸಮಯವನ್ನು ವಿವಿಧ ಕಾರ್ಯಕ್ರಮಗಳಿಗೆ ಸಹಜವಾಗಿ ನೀಡಲಿದ್ದಾರೆ. ಹೀಗಾಗಿ ಹಲವಾರು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದರು.

ಪೆನ್ನಾರ್‌ ಬಿಕ್ಕಟ್ಟು
ಪೆನ್ನಾರ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ 3 ತಿಂಗಳಲ್ಲಿ ನ್ಯಾಯಾಧಿಕರಣ ರಚನೆ ಮಾಡಲು ಸುಪ್ರೀಂ ಕೋರ್ಟ್ ತಿಳಿಸಿದೆ. ಇದು ಸಣ್ಣ ವಿಚಾರವಾಗಿದ್ದು, ಪ್ರಾಧಿಕಾರ ರಚನೆ ಬೇಡ ಎಂದಿದ್ದೇವೆ. ನಮ್ಮ ನಿಲುವಿಗೆ ತಕ್ಕಂತೆ ಸುಪ್ರೀಂ ಕೋರ್ಟ್‌ಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲಿದ್ದೇವೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಿದ್ದೇವೆ ಎಂದರು.

ಇದನ್ನೂ ಓದಿ | ಬಿ.ಎಸ್‌. ಯಡಿಯೂರಪ್ಪ ಕೋಪ ಶಮನಗೊಳಿಸಿದ ಬಿಜೆಪಿ; ಕೊಪ್ಪಳಕ್ಕೆ ಆಗಮಿಸಲು ಕೊನೆಗೂ ಒಪ್ಪಿಗೆ

Exit mobile version