Anantnag Encounter: ಕಾಶ್ಮೀರದಲ್ಲಿ ನಕ್ಸಲ್ ನಿಗ್ರಹ ರೀತಿಯ ಆಪರೇಷನ್? ಮೊದಲ ಬಾರಿಗೆ CoBRA ನಿಯೋಜನೆ Vistara News
Connect with us

ದೇಶ

Anantnag Encounter: ಕಾಶ್ಮೀರದಲ್ಲಿ ನಕ್ಸಲ್ ನಿಗ್ರಹ ರೀತಿಯ ಆಪರೇಷನ್? ಮೊದಲ ಬಾರಿಗೆ CoBRA ನಿಯೋಜನೆ

Anantnag Encounter: ಕಾಶ್ಮೀರ ಕಣಿವೆಯಲ್ಲಿ ಉಗ್ರರು ತಮ್ಮ ತಂತ್ರವನ್ನು ಬದಲಿಸಿದ್ದಾರೆ. ಅರಣ್ಯದ ಮೂಲಕ ಅವರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಾಗಾಗಿ, ಸರ್ಕಾರ ಕೂಡ ನಕ್ಸಲ್ ನಿಗ್ರಹ ಪಡೆಯನ್ನು ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಬಳಸುತ್ತಿದೆ.

VISTARANEWS.COM


on

CoBRA
ಸಾಂದರ್ಭಿಕ ಚಿತ್ರ.
Koo

ನವದೆಹಲಿ: ಉಗ್ರರನ್ನು ಸದೆ ಬಡಿಯಲು (Anti-Terrorist Operation) ಮುಂದಾಗಿರುವ ಭದ್ರತಾ ಪಡೆಗಳು (Security Forces) ಇದೇ ಮೊದಲ ಬಾರಿಗೆ ವಿಭಿನ್ನ ರೀತಿಯ ಕಾರ್ಯಾಚರಣೆಗೆ ಮುಂದಾಗಿದೆ. ಕಾಶ್ಮೀರ ಕಣಿವೆಯಲ್ಲಿ ಇದೇ (Jammu and Kashmir) ಮೊದಲ ಬಾರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯ ಎಲೈಟ್ ಕೋಬ್ರಾ(Central Reserve Police Force – CoBRA) ಘಟಕವನ್ನು ನಿಯೋಜನೆ ಮಾಡಲಾಗಿದೆ. ಕಾಶ್ಮೀರ ಕಣಿವೆಯಲ್ಲಿ ಈಗ ನಡೆಯುತ್ತಿರುವ ಉಗ್ರರನ್ನು ಸದೆ ಬಡೆಯುವ ಕಾರ್ಯಾಚರಣೆಯು ನಕ್ಸಲ್ ನಿಗ್ರಹ ಕಾರ್ಯಾಚರಣೆಯ ರೀತಿಯಲ್ಲಿದೆ. ಹಾಗಾಗಿ, ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತಜ್ಞತೆಯನ್ನು ಸಾಧಿಸಿರುವ ಕೋಬ್ರಾ ಘಟಕವನ್ನು ಬಳಸಿಕೊಳ್ಳಲಾಗುತ್ತಿದೆ(Anantnag Encounter).

ಈ ಹಿಂದೆ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಬೀಡುಬಿಟ್ಟಿದ್ದ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (CoBRA) ಘಟಕಗಳನ್ನು ಏಪ್ರಿಲ್‌ನಲ್ಲಿ ತರಬೇತಿಗಾಗಿ ಕರೆತಂದ ಬಳಿಕ, ಕಾಶ್ಮೀರದ ಕುಪ್ವಾರದಲ್ಲಿ ನಿಯೋಜನೆ ಮಾಡಲಾಗಿದೆ. ಆದಾಗ್ಯೂ, ಅವರಿಗೆ ಇನ್ನೂ ಯಾವುದೇ ಕಾರ್ಯಯೋಜನೆಗಳನ್ನು ನೀಡಲಾಗಿಲ್ಲ. ಹೀಗಿದ್ದಾಗ್ಯೂ ಘಟಕವು ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಅರಣ್ಯದಲ್ಲಿ ಗೆರಿಲ್ಲಾ ಮಾದರಿ ಹೋರಾಟವನ್ನು ನಡೆಸುವ ಸಾಮರ್ಥ್ಯವನ್ನು ಕೋಬ್ರಾ ಘಟಕ ಹೊಂದಿರುತ್ತದೆ. ಈ ಕೋಬ್ರಾ ಘಟಕದಲ್ಲಿರುವ ಯೋಧರಿಗೆ ಈ ಕುರಿತು ವ್ಯಾಪಕವಾದ ತರಬೇತಿಯನ್ನು ನೀಡಲಾಗಿರುತ್ತದೆ. ವಿಶೇಷವಾಗಿ ಅರಣ್ಯದಲ್ಲಿ ಅಡಗಿಕೊಂಡು ಹೋರಾಟ ಮಾಡುವುದು ಕರಗತವಾಗಿರುತ್ತದೆ.

ಈ ಸುದ್ದಿಯನ್ನೂ ಓದಿ: Anantnag Encounter: ಒಂದೆಡೆ ಕಾಡು, ಮತ್ತೊಂದೆಡೆ ಬೆಟ್ಟ; ಕಾಶ್ಮೀರದಲ್ಲಿ ಎನ್‌ಕೌಂಟರ್‌ ನಡೆಯುತ್ತಿರುವುದು ಹೇಗೆ?

ಕೇಂದ್ರ ಮೀಸಲು ಪೊಲೀಸ್ ಪಡೆಯು ಸುಮಾರು 3.25 ಲಕ್ಷ ಭದ್ರತಾ ಪಡೆ ಸಿಬ್ಬಂದಿಯನ್ನುಹೊಂದಿದೆ. ಸಿಆರ್‌ಪಿಎಫ್, ಜಮ್ಮು ಮತ್ತು ಕಾಶ್ಮೀರದ ಮೂರು ಪ್ರಮುಖ ಪ್ರದೇಶಗಳು, ಎಡಪಂಥೀಯ ಉಗ್ರಗಾಮಿ ಪೀಡಿತ ರಾಜ್ಯಗಳು ಮತ್ತು ಭಾರತದ ಈಶಾನ್ಯದಲ್ಲಿ ದಂಗೆ-ಪೀಡಿತ ಪ್ರದೇಶಗಳಲ್ಲಿ ಗರಿಷ್ಠ ನಿಯೋಜನೆಯೊಂದಿಗೆ ಪ್ರಮುಖ ಆಂತರಿಕ ಭದ್ರತಾ ಯುದ್ಧ ಘಟಕವಾಗಿ ಹೊರಹೊಮ್ಮಿದೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಗಡೋಳೆ ಅರಣ್ಯದಲ್ಲಿಅಡಗಿ ಕುಳಿತಿರುವ ಉಗ್ರರನ್ನು ವಿರುದ್ಧ ಕಾರ್ಯಾಚರಣೆ ಆರನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲೇ ಸಿಆರ್‌ಪಿಎಫ್‌ನ ಕೋಬ್ರಾ ನಿಯೋಜನೆಯ ಬೆಳವಣಿಗೆಯ ಭಾರೀ ಕುತೂಹಲವನ್ನು ಕೆರಳಿಸಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

India Canada Row: ಆನೆ ಜತೆ ಇರುವೆ ಜಗಳವಾಡುತ್ತಿದೆ! ಕೆನಡಾಗೆ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಗೇಲಿ!

India Canada Row: ಭಾರತ ಹಾಗೂ ಕೆನಡಾ ನಡುವಿನ ಬಿಕ್ಕಟ್ಟು ದಿನೇದಿನೆ ಜಾಸ್ತಿಯಾಗುತ್ತಿದೆ. ಅದರಲ್ಲೂ, ಹರ್ದೀಪ್‌ ಸಿಂಗ್‌ ನಿಜ್ಜರ್‌ ವಿಷಯದಲ್ಲಿ ಕೆನಡಾ ಭಾರತದ ವಿರುದ್ಧ ಆರೋಪ ಮಾಡಿರುವ ಕಾರಣ, ತನಿಖೆಗೆ ಭಾರತ ಸಹಕರಿಸಬೇಕು ಎಂದು ಅಮೆರಿಕ ಹೇಳಿದೆ. ಇದರ ಬೆನ್ನಲ್ಲೇ, ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿಯು ಕೆನಡಾವನ್ನು ಗೇಲಿ ಮಾಡಿದ್ದಾರೆ.

VISTARANEWS.COM


on

Edited by

Narendra Modi And Justin Trudeau
Koo

ವಾಷಿಂಗ್ಟನ್‌: ಭಾರತ ಹಾಗೂ ಕೆನಡಾ ನಡುವಿನ ಬಿಕ್ಕಟ್ಟು (India Canada Row) ದಿನೇದಿನೆ ಉಲ್ಬಣವಾಗುತ್ತಿರುವ ಕಾರಣ ಅಮೆರಿಕ ಮಧ್ಯಪ್ರವೇಶಿಸಲು ಯತ್ನಿಸುತ್ತಿದೆ. ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ (Hardeep Singh Nijjar) ಹತ್ಯೆಯ ತನಿಖೆ ವಿಚಾರದಲ್ಲಿ ಭಾರತ ಸಹಕರಿಸಬೇಕು ಎಂದೂ ಹೇಳಿದೆ. ಇದರ ಬೆನ್ನಲ್ಲೇ, ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಮೈಕಲ್‌ ರುಬಿನ್‌ (Michael Rubin) ಅವರು ಭಾರತದ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಹಾಗೆಯೇ, “ಕೆನಡಾ ಭಾರತದ ಜತೆ ಸಂಘರ್ಷಕ್ಕೆ ಇಳಿದಿದೆ ಎಂದರೆ, ಅದು ಇರುವೆಯೊಂದು ಆನೆಯ ಜತೆ ಕಾಳಗಕ್ಕೆ ಇಳಿದಂತೆ” ಎಂದು ಗೇಲಿ ಮಾಡಿದ್ದಾರೆ.

“ಯಾವುದೇ ಎರಡು ದೇಶಗಳು ಸಂಘರ್ಷಕ್ಕೆ ಇಳಿದಾಗ, ರಾಜತಾಂತ್ರಿಕ ಬಿಕ್ಕಟ್ಟು ಆರಂಭವಾದಾಗ ಮೂರನೇ ದೇಶವು ಮಧ್ಯಸ್ಥಿಕೆ ವಹಿಸುವುದು ಸುಲಭ. ಆದರೆ, ಯಾವುದೇ ಒಂದು ದೇಶದ ಪರ ನಿಲ್ಲುವುದು ಕಷ್ಟ. ಈಗ ಭಾರತ ಹಾಗೂ ಕೆನಡಾ ವಿಚಾರದಲ್ಲಿ ಅಮೆರಿಕಕ್ಕೂ ಇದೇ ಆಗುತ್ತಿದೆ. ಆದರೂ, ದ್ವಿಪಕ್ಷೀಯ ಹಾಗೂ ವ್ಯೂಹಾತ್ಮಕ ಸಂಬಂಧದ ವಿಚಾರದಲ್ಲಿ ಅಮೆರಿಕಕ್ಕೆ ಭಾರತವೇ ಪ್ರಮುಖವಾಗಿದೆ. ಅಷ್ಟಕ್ಕೂ, ಕೆನಡಾದ ಪರಿಸ್ಥಿತಿಯು ಆನೆ (ಭಾರತ) ಜತೆ ಇರುವೆ ಕದನಕ್ಕೆ ಇಳಿದಿದೆ” ಎಂದು ಕೆನಡಾಗೆ ಗೇಲಿ ಮಾಡಿದ್ದಾರೆ.

ಟ್ರುಡೋ ತುಂಬ ದಿನ ಅಧಿಕಾರದಲ್ಲಿ ಇರಲ್ಲ

ಭಾರತದ ಜತೆ ಏಕೆ ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು ಎಂಬುದಕ್ಕೂ ಮೈಕಲ್‌ ರುಬಿನ್‌ ಕಾರಣ ನೀಡಿದ್ದಾರೆ. “ಜಸ್ಟಿನ್‌ ಟ್ರುಡೋ ಅವರು ತುಂಬ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ. ಹಾಗಾಗಿ, ಅಮೆರಿಕವು ಭಾರತಕ್ಕೆ ಬೆಂಬಲ ನೀಡಿ, ಜಸ್ಟಿನ್‌ ಟ್ರುಡೋ ಅಧಿಕಾರದಿಂದ ಕೆಳಗಿಳಿದ ಬಳಿಕ ಉತ್ತಮ ಸಂಬಂಧ ಹೊಂದಬಹುದು” ಎಂದು ಹೇಳಿದ್ದಾರೆ. ಆ ಮೂಲಕ ಜಸ್ಟಿನ್‌ ಟ್ರುಡೋ ಅವರು ತುಂಬ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ಕೆನಡಾ ಪ್ರಧಾನಿಯದ್ದೇ ತಪ್ಪು

ಖಲಿಸ್ತಾನಿ ಉಗ್ರನ ಹತ್ಯೆ ವಿಚಾರದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಅವರದ್ದೇ ದೊಡ್ಡ ತಪ್ಪು ಎಂದು ಮೈಕಲ್‌ ರುಬಿನ್‌ ಹೇಳಿದ್ದಾರೆ. “ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಕುರಿತು ಜಸ್ಟಿನ್‌ ಟ್ರುಡೋ ಅವರಿಗೇ ಸ್ಪಷ್ಟತೆ ಇಲ್ಲ. ಅಷ್ಟಕ್ಕೂ, ಭಾರತದ ವಿರುದ್ಧ ಅವರು ಆರೋಪ ಮಾಡುವ ಮೊದಲು ಯೋಚಿಸಬೇಕಿತ್ತು. ಸಾಕ್ಷ್ಯಗಳೇ ಇಲ್ಲದೆ ಆರೋಪ ಮಾಡಬಾರದಿತ್ತು. ಅಷ್ಟಕ್ಕೂ ಹರ್ದೀಪ್‌ ಸಿಂಗ್‌ ನಿಜ್ಜರ್‌ ಒಬ್ಬ ಉಗ್ರ. ನಮಗೆ ಭಾರತ ಪ್ರಮುಖ, ನಮಗೆ ಭಾರತದ ಜತೆಗಿನ ಸಂಬಂಧ ಮುಖ್ಯವಾಗಬೇಕು” ಎಂದು ಎಂದಿದ್ದಾರೆ.

ಇದನ್ನೂ ಓದಿ: India Canada Row: ನಿಜ್ಜರ್‌ ಧಾರ್ಮಿಕ ನಾಯಕನಲ್ಲ, 200 ಜನರ ಕೊಲೆಗಾರ; ಕೆನಡಾಗೆ ಭಾರತ ಪ್ರತ್ಯುತ್ತರ

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ. ಭಾರತದ ಏಜೆಂಟ್‌ಗಳೇ ಹತ್ಯೆ ಮಾಡಿದ್ದಾರೆ ಎಂದು ಜಸ್ಟಿನ್‌ ಟ್ರುಡೋ ಆರೋಪ ಮಾಡಿರುವುದು ಹಾಗೂ ಇದಕ್ಕೆ ಯಾವುದೇ ಸಾಕ್ಷ್ಯ ಒದಗಿಸದಿರುವುದು ಭಾರತದ ಆಕ್ರೋಶಕ್ಕೆ ಕಾರಣವಾಗಿದೆ. ಭಾರತ ಕೂಡ ಸಾಕ್ಷ್ಯ ಕೊಡಿ ಎಂದು ಆಗ್ರಹಿಸುವ ಜತೆಗೆ ಕೆನಡಾ ನಾಗರಿಕರಿಗೆ ವೀಸಾ ರದ್ದು ಸೇರಿ ಹಲವು ಕ್ರಮ ತೆಗೆದುಕೊಂಡಿದೆ.

Continue Reading

ದೇಶ

India At UNGA: ‘ನಿಮ್ಮ ದೇಶ ನೋಡಿಕೊಳ್ಳಿ’; ವಿಶ್ವಸಂಸ್ಥೆಯಲ್ಲಿ ‘ಕಾಶ್ಮೀರ’ ಪ್ರಸ್ತಾಪಿಸಿದ ಪಾಕ್‌ಗೆ ಭಾರತ ಚಾಟಿ

India At UNGA: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಹಂಗಾಮಿ ಪ್ರಧಾನಿ ಅನ್ವರ್‌ ಉಲ್‌ ಹಕ್‌ ಕಾಕರ್‌ ಅವರು ಕಾಶ್ಮೀರ ವಿಷಯ ಪ್ರಸ್ತಾಪಿಸಿದರು. ಕಾಶ್ಮೀರದಲ್ಲಿ ಮೇಲ್ವಿಚಾರಣಾ ತಂಡವನ್ನು ನಿಯೋಜಿಸಬೇಕು ಎಂದಿದ್ದರು. ಹಾಗಾಗಿ, ಭಾರತ ಸರಿಯಾಗಿಯೇ ಪ್ರತ್ಯುತ್ತರ ನೀಡಿದೆ.

VISTARANEWS.COM


on

Edited by

Petal Gehlot At UNGA
Koo

ನ್ಯೂಯಾರ್ಕ್‌: ವಿಶ್ವಸಂಸ್ಥೆ ಸಾಮಾನ್ಯ ಸಭೆಯ (UNGA) 78ನೇ ಅಧಿವೇಶನದಲ್ಲಿ ಜಮ್ಮು-ಕಾಶ್ಮೀರದ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನ ಹಂಗಾಮಿ ಪ್ರಧಾನಿ ಅನ್ವರ್‌ ಉಲ್‌ ಹಕ್‌ ಕಾಕರ್‌ ಅವರಿಗೆ ಭಾರತ ತಿರುಗೇಟು ನೀಡಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆ ಭಾರತದ (India At UNGA) ಕಾರ್ಯದರ್ಶಿ ಪೆತಲ್‌ ಗೆಹ್ಲೋಟ್‌, “ಪಾಕಿಸ್ತಾನವು ಭಾರತದ ಅವಿಭಾಜ್ಯ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ ಹಾಗೂ ಲಡಾಕ್‌ ವಿಷಯದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ” ಎಂದು ಚಾಟಿ ಬೀಸಿದ್ದಾರೆ.

“ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಚಾಳಿಯನ್ನು ಪಾಕಿಸ್ತಾನ ಬಿಡಬೇಕು. ಪಾಕಿಸ್ತಾನವು ತನ್ನ ದೇಶದಲ್ಲಿ ಆಗುತ್ತಿರುವ ಮಾನವ ಹಕ್ಕುಗಳ ದಮನದ ವಿಷಯವನ್ನು ಜಗತ್ತಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಯಾವಾಗಲೂ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು-ಕಾಶ್ಮೀರ ವಿಷಯ ಪ್ರಸ್ತಾಪಿಸಿದೆ. ಆದರೆ, ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹಾಗಾಗಿ, ನೆರೆರಾಷ್ಟ್ರವು ಮೊದಲು ತನ್ನ ದೇಶದ ಹುಳುಕನ್ನು ಸರಿಪಡಿಸಿಕೊಳ್ಳಬೇಕು” ಎಂದು ಪೆತಲ್‌ ಗೆಹ್ಲೋಟ್‌ ಹೇಳಿದ್ದಾರೆ.

“ಪಾಕಿಸ್ತಾನವು ಭಾರತದ ವಿಚಾರದಲ್ಲಿ ಮೂಗು ತೂರಿಸುವ ಬದಲು ಗಡಿ ಭಯೋತ್ಪಾದನೆ ನಿಗ್ರಹಕ್ಕೆ ಕ್ರಮ ತೆಗೆದುಕೊಳ್ಳಬೇಕು. ಉಗ್ರರಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸ ಬಿಡಬೇಕು. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಮಾನವ ಹಕ್ಕುಗಳು ಜಗತ್ತಿನಲ್ಲೇ ಕೆಟ್ಟದಾಗಿದ್ದರೆ, ಅದು ಪಾಕಿಸ್ತಾನದಲ್ಲಿ ಮಾತ್ರ. ಪ್ರತಿ ವರ್ಷ ಪಾಕಿಸ್ತಾನದಲ್ಲಿ ಒಂದು ಸಾವಿರ ಅಲ್ಪಸಂಖ್ಯಾತ ಮಹಿಳೆಯರನ್ನು ಅಪಹರಿಸಿ, ಅವರನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ. ಇಂತಹ ಅನಿಷ್ಟಗಳನ್ನು ಪಾಕಿಸ್ತಾನ ನಿರ್ಮೂಲನೆ ಮಾಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: India retaliates to Pak | ಪ್ರಧಾನಿ ಮೋದಿ ಕಟುಕ ಎಂದ ಭುಟ್ಟೋಗೆ 1971ರ ನರಮೇಧ ನೆನಪಿಸಿ, ತಿರುಗೇಟು ನೀಡಿದ ಭಾರತ!

ಪಾಕ್‌ ಪ್ರಧಾನಿ ಹೇಳಿದ್ದೇನು?

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪಾಕ್‌ ಪ್ರಧಾನಿ ಅನ್ವರ್‌ ಉಲ್‌ ಹಕ್‌ ಕಾಕರ್‌, “ಭಾರತ ಹಾಗೂ ಪಾಕಿಸ್ತಾನದಲ್ಲಿ ಶಾಂತಿ ನೆಲೆಸಲು ಜಮ್ಮು-ಕಾಶ್ಮೀರವೇ ನಿರ್ಣಾಯಕವಾಗಿದೆ. ಇದರಿಂದ ಉಭಯ ದೇಶಗಳ ಅಭಿವೃದ್ಧಿಯೂ ಸಾಧ್ಯವಾಗಲಿದೆ. ಹಾಗೆಯೇ, ಜಮ್ಮು-ಕಾಶ್ಮೀರದಲ್ಲಿ ವಿಶ್ವಸಂಸ್ಥೆ ಮಿಲಿಟರಿ ಮೇಲ್ವಿಚಾರಣಾ ತಂಡವನ್ನು ನಿಯೋಜಿಸಬೇಕು. ಹಾಗೆಯೇ, ಭಾರತ ಹಾಗೂ ಪಾಕಿಸ್ತಾನ ಮಾತುಕತೆಗೆ ಸಂಬಂಧಿಸಿದಂತೆ ಜಗತ್ತಿನ ರಾಷ್ಟ್ರಗಳು ಭಾರತಕ್ಕೆ ಮನವರಿಕೆ ಮಾಡಬೇಕು” ಎಂದು ಹೇಳಿದ್ದರು.

Continue Reading

ದೇಶ

Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್

Kamal Haasan: ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಳಿಕ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ನಟ ಕಮಲ್‌ ಹಾಸನ್‌ ಅವರು ಉದಯನಿಧಿ ಸ್ಟಾಲಿನ್‌ ಪರ ನಿಂತಿದ್ದಾರೆ.

VISTARANEWS.COM


on

Edited by

Kamal Haasan And Udhayanidhi Stalin
Koo

ಚೆನ್ನೈ: “ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದ ಹಾಗೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಹೇಳಿಕೆ ನೀಡಿ ಭಾರಿ ಟೀಕೆಗೆ ಗುರಿಯಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರಿಗೆ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಕೂಡ ನೋಟಿಸ್‌ ನೀಡಿದೆ. ಇದರ ಬೆನ್ನಲ್ಲೇ, ನಟ, ಮಕ್ಕಳ್‌ ನೀಧಿ ಮೈಯಂ ಪಕ್ಷದ ಮುಖ್ಯಸ್ಥ ಕಮಲ್‌ ಹಾಸನ್‌ ಅವರು ಉದಯನಿಧಿ ಸ್ಟಾಲಿನ್‌ ಪರ ನಿಂತಿದ್ದಾರೆ. “ಸನಾತನ ಧರ್ಮದ ವಿಚಾರಕ್ಕೆ ಸಂಬಂಧಿಸಿದಂ‌ತೆ ‘ಚಿಕ್ಕ ಮಗು’ ಉದಯನಿಧಿ ಸ್ಟಾಲಿನ್‌ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

“ಸನಾತನ ಧರ್ಮದ ಕುರಿತಂತೆ ಇನ್ನೂ ಚಿಕ್ಕವನಾಗಿರುವ (Young Kid) ಉದಯನಿಧಿ ಸ್ಟಾಲಿನ್‌ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ. ಎಲ್ಲರೂ ಅವನ ಮೇಲೆ ಮುಗಿಬಿದ್ದಿದ್ದಾರೆ” ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ. ಆದರೆ, ಅವರು ಯಾವುದೇ ಪಕ್ಷ ಅಥವಾ ಸಂಘಟನೆಯ ಹೆಸರು ಹೇಳಿಲ್ಲ. ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ ಬಳಿಕ ಉದಯನಿಧಿ ಸ್ಟಾಲಿನ್‌ ವಿರುದ್ಧ ಕೇಳಿಬರುತ್ತಿರುವ ಆಕ್ರೋಶದ ಕುರಿತು ಕಮಲ್‌ ಹಾಸನ್‌ ಅವರು ಸಮಾರಂಭವೊಂದರಲ್ಲಿ ಈ ರೀತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸನಾತನ ಕುರಿತೂ ಕಮಲ್‌ ಹಾಸನ್‌ ಪ್ರತಿಕ್ರಿಯೆ

ಸನಾತನ ಧರ್ಮದ ಕುರಿತು ಕೂಡ ಕಮಲ್‌ ಹಾಸನ್‌ ಪ್ರತಿಕ್ರಿಯೆ ನೀಡಿದ್ದಾರೆ. “ನಾವೆಲ್ಲ ಪೆರಿಯಾರ್‌ ಅವರಿಂದ ಸನಾತನ ಎಂಬ ಪದವನ್ನು ಕೇಳಿದ್ದೇವೆ. ಪೆರಿಯಾರ್‌ ಅವರು ವಾರಾಣಸಿಯ ದೇವಾಲಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ತಿಲಕ ಇಟ್ಟುಕೊಂಡು ಪೂಜೆ ಮಾಡುತ್ತಿದ್ದರು. ಅಂತಹವರು ಎಲ್ಲವನ್ನೂ ಬಿಟ್ಟು ಸಮಾಜ ಸುಧಾರಣೆಗೆ ಇಳಿದರು. ಹಾಗಂತ, ಪೆರಿಯಾರ್‌ ಅವರನ್ನು ಡಿಎಂಕೆ ಸೇರಿ ಯಾವುದೇ ಪಕ್ಷವು ಸ್ವಂತ ಮಾಡಿಕೊಳ್ಳುವ ಹಾಗಿಲ್ಲ. ಅವರನ್ನು ಇಡೀ ತಮಿಳುನಾಡು ಸ್ವಂತ ಮಾಡಿಕೊಂಡಿದೆ” ಎಂದರು.

ಇದನ್ನೂ ಓದಿ: Udhayanidhi Stalin: ಸನಾತನ ಧರ್ಮ; ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್‌, ಎದುರಾಯ್ತು ಸಂಕಷ್ಟ

ಏನು ಹೇಳಿದ್ದರು ಉದಯನಿಧಿ ಸ್ಟಾಲಿನ್?

ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.

Continue Reading

ದೇಶ

India Canada Row: ನಿಜ್ಜರ್‌ ಹತ್ಯೆ ಕುರಿತು ಭಾರತಕ್ಕೆ ನಂಬಲರ್ಹ ಮಾಹಿತಿ ನೀಡಿದ್ದೇವೆ; ಕೆನಡಾ ಹೊಸ ರಾಗ

India Canada Row: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್ ನಿಜ್ಜರ್‌ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಮಾಡಿದ ಆರೋಪಕ್ಕೆ ಸಾಕ್ಷ್ಯ ನೀಡದ ಜಸ್ಟಿನ್‌ ಟ್ರುಡೋ ಈಗ ಹೊಸ ರಾಗ ತೆಗೆದಿದ್ದಾರೆ. ಭಾರತಕ್ಕೆ ಮೊದಲೇ ಈ ಕುರಿತು ಮಾಹಿತಿ ನೀಡಿದ್ದೇವೆ ಎಂದಿದ್ದಾರೆ. ಆದರೆ, ಯಾವ ಸಾಕ್ಷ್ಯ ನೀಡಲಾಗಿದೆ ಎಂಬುದನ್ನು ಅವರು ಹೇಳಿಲ್ಲ. ಹಾಗಾಗಿ, ಇದು ಬಿಕ್ಕಟ್ಟು ಬಿಗಡಾಯಿಸಲು ಕಾರಣವಾಗಿದೆ.

VISTARANEWS.COM


on

Edited by

narendra modi justi Trudeau
Koo

ಒಟ್ಟಾವ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ವಿಚಾರದಲ್ಲಿ ಸಾಕ್ಷ್ಯಾಧಾರಗಳನ್ನೂ ಕೊಡದೆ ಸುಖಾಸುಮ್ಮನೆ ಭಾರತದ ವಿರುದ್ಧ ಆರೋಪ (India Canada Row) ಮಾಡುತ್ತಿರುವ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಈಗ ಹೊಸ ರಾಗ ತೆಗೆದಿದ್ದಾರೆ. “ನಿಜ್ಜರ್‌ ಹತ್ಯೆ ವಿಷಯಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಹಲವು ವಾರಗಳ ಹಿಂದೆಯೇ ‘ನಂಬಲರ್ಹ ಆರೋಪಗಳ’ ಕುರಿತು (Credible Allegations) ಮಾಹಿತಿ ನೀಡಿದ್ದೇವೆ” ಎಂದು ಹೇಳಿರುವುದು ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟನ್ನು ಮತ್ತಷ್ಟು ಬಿಗಿಗೊಳಿಸಿದೆ.

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಸೋಮವಾರ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸುವ ವೇಳೆ ಜಸ್ಟಿನ್‌ ಟ್ರುಡೋ ಹೇಳಿದ್ದಾರೆ.

ಜಸ್ಟಿನ್‌ ಟ್ರುಡೋ ಆರೋಪ

ಇದರೊಂದಿಗೆ ಭಾರತಕ್ಕೆ ನಾವು ಈಗಾಗಲೇ ಸಾಕ್ಷ್ಯ ನೀಡಿದ್ದೇವೆ, ಆದರೆ ಭಾರತ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬಂತೆ ಜಸ್ಟಿನ್‌ ಟ್ರುಡೋ ಬಿಂಬಿಸಿದ್ದಾರೆ. ಆದರೆ, ಅವರು ಬೇರೊಂದು ಸುದ್ದಿಗೋಷ್ಠಿ ನಡೆಸುವ ವೇಳೆ ಭಾರತದ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ಇದೆಯೇ ಎಂಬ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿದ್ದಾರೆ. “ಭಾರತದ ವಿರುದ್ಧ ಆರೋಪ ಮಾಡಲು ಬಲವಾದ ಹಾಗೂ ವಿಶ್ವಾಸಾರ್ಹ ಕಾರಣಗಳಿವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದಾರೆ. ಆದರೆ, ಅವರು ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಹಾಗೂ ಇವೆ ಎಂದು ಕೂಡ ಉತ್ತರಿಸಿಲ್ಲ.

ಇದನ್ನೂ ಓದಿ: India Canada Row: ನಿಜ್ಜರ್‌ ಧಾರ್ಮಿಕ ನಾಯಕನಲ್ಲ, 200 ಜನರ ಕೊಲೆಗಾರ; ಕೆನಡಾಗೆ ಭಾರತ ಪ್ರತ್ಯುತ್ತರ

ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೆನಡಾದ ನಾಗರಿಕ ಎಂದು ಪರಿಗಣಿಸಿ ಜಸ್ಟಿನ್‌ ಟ್ರುಡೋ ಭಾರತದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. “ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನನ್ನ ಕರ್ತವ್ಯವಾಗಿದೆ” ಎಂದು ಅವರು ಹೇಳಿದ್ದಾರೆ. ಆದರೆ, ಅವರು ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ಹೇಳುತ್ತಲೇ ಇಂತಹ ಆರೋಪ ಮಾಡಿದ್ದಾರೆ. ಮತ್ತೊಂದೆಡೆ, ಜಸ್ಟಿನ್‌ ಟ್ರುಡೋ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅಮೆರಿಕ, ತನಿಖೆಗೆ ಭಾರತ ಸಹಕಾರ ನೀಡಬೇಕು ಎಂದಿದೆ. ಆದರೆ, ಸರಿಯಾದ ಸಾಕ್ಷ್ಯಾಧಾರ ಬೇಕು ಎಂದು ಭಾರತ ಸ್ಪಷ್ಟಪಡಿಸಿದೆ.

Continue Reading
Advertisement
Mannangatti Poster
South Cinema24 seconds ago

Actress Nayanthara: ಯೂಟ್ಯೂಬರ್ ಸಿನಿಮಾಗೆ ನಯನತಾರಾ ನಾಯಕಿ; ಅಚ್ಚರಿಗೊಂಡ ಫ್ಯಾನ್ಸ್‌!

Kannada Serials
ಕಿರುತೆರೆ2 mins ago

Kannada Serials TRP: ʻಅಮೃತಧಾರೆʼ ಬೀಟ್‌ ಮಾಡಿದ ʻಗಟ್ಟಿಮೇಳʼ; ಟಿಆರ್‌ಪಿ ರೇಸ್‌ನಲ್ಲಿ ʻಶ್ರೀರಸ್ತು ಶುಭಮಸ್ತುʼ!

Protest in Mandya over Cauvery water
ಕರ್ನಾಟಕ2 mins ago

Cauvery Protest : ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ; ಕಾವೇರಿ ನೀರಿಗಾಗಿ ವಿದ್ಯಾರ್ಥಿಗಳು ಸಾಥ್‌

CM Siddaramiah new
ಕರ್ನಾಟಕ21 mins ago

CM Siddaramaiah : ಶಾಸಕ, ಸಂಸದರಿಗೆ Good News; ಇನ್ನು ಮುಂದೆ ಪ್ರತಿ ಶನಿವಾರ ಸಿಎಂ ಸಿದ್ದರಾಮಯ್ಯ ನಿಮ್ಮನ್ನು ಭೇಟಿಯಾಗ್ತಾರೆ!

Narendra Modi And Justin Trudeau
ದೇಶ57 mins ago

India Canada Row: ಆನೆ ಜತೆ ಇರುವೆ ಜಗಳವಾಡುತ್ತಿದೆ! ಕೆನಡಾಗೆ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಗೇಲಿ!

Karnataka State Open University
ಕರ್ನಾಟಕ59 mins ago

KSOU Exam: ಪ್ರಶ್ನೆಪತ್ರಿಕೆ ಮಾರಾಟವಾದ ಕಂಪ್ಯೂಟರ್‌ ಇನ್‌ ಬ್ಯುಸಿನೆಸ್‌ ಮರು ಪರೀಕ್ಷೆಗೆ ನಿರ್ಧಾರ, ಯಾವಾಗ ReExam?

Vijay Raghavendra
South Cinema1 hour ago

Vijay Raghavendra: ವಿಜಯ್ ರಾಘವೇಂದ್ರ -ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್‌ ಔಟ್‌!

Bigg boss Kannada
ಬಿಗ್ ಬಾಸ್1 hour ago

Bigg Boss Kannada: ಬಿಗ್​ಬಾಸ್ ಕನ್ನಡ ಹತ್ತನೇ ಸೀಸನ್ ಆಟಕ್ಕೆ ದಿನಾಂಕ ಫಿಕ್ಸ್‌!

gold
ಕರ್ನಾಟಕ1 hour ago

Gold Rate Today: ಏರಿದ ಬಂಗಾರದ ದರ, ರಾಜ್ಯದಲ್ಲಿ ಇಂದು ಬೆಲೆ ಹೀಗಿದೆ

Rain day Girl enjoying
ಉಡುಪಿ1 hour ago

Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ7 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌