Site icon Vistara News

LPG Price Hike: ಬಜೆಟ್‌ ದಿನವೇ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ ಶಾಕ್‌, ಬೆಂಗಳೂರಿನಲ್ಲಿ ಇಷ್ಟಾಗಿದೆ ದರ

LPG

ಹೊಸದಿಲ್ಲಿ: ಇಂದು ಕೇಂದ್ರ ಬಜೆಟ್‌ (Budget 2024) ಘೋಷಣೆಗಳ ಮೇಲೆ ನಿರೀಕ್ಷೆ ಇಟ್ಟು ಕಾಯುತ್ತಿದ್ದ ಜನರಿಗೆ ಬೆಳ್ಳಂಬೆಳಗ್ಗೆಯೇ ದರ ಏರಿಕೆ (LPG Rate) ಶಾಕ್‌ ಎದುರಾಗಿದೆ. ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ (Commercial cylinder) ಬೆಲೆ (LPG Price Hike) ಮತ್ತೆ ಏರಿಕೆಯಾಗಿದೆ. ಸದ್ಯ ಮನೆಬಳಕೆ ಸಿಲಿಂಡರ್‌ (Domestic Cylinder) ಬೆಲೆ ಏರಿಲ್ಲ.

ತೈಲ ಮಾರ್ಕೆಟಿಂಗ್ ಕಂಪನಿಗಳು (OMC) ಫೆಬ್ರವರಿ 1ರಂದು 19 ಕಿಲೋ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳ ಮಾಡಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 14 ರೂಪಾಯಿ ಹೆಚ್ಚಿಸಲಾಗಿದ್ದು, ಪ್ರತಿ ಸಿಲಿಂಡರ್‌ ಬೆಲೆ 1,755.5 ರೂಪಾಯಿನಿಂದ 1,769.50 ರೂಪಾಯಿಗೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಪ್ರತಿ ತಿಂಗಳ ಮೊದಲನೆಯ ದಿನದಂದು ಅಡುಗೆ ಅನಿಲ ಮತ್ತು ಎಟಿಎಫ್‌ ಬೆಲೆಗಳನ್ನು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಯನ್ನು ಆಧರಿಸಿ ಪರಿಷ್ಕರಿಸುತ್ತವೆ. ಈ ಬಾರಿ, ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸುವ ದಿನವೇ ಬೆಲೆ ಏರಿಕೆ ಮಾಡಲಾಗಿದೆ.

ವಾಣಿಜ್ಯ ಬಳಕೆಯ 19 ಕೆಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದು, ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ 1760.50 ರೂಪಾಯಿಗೆ ಏರಿಕೆ ಆಗಿದೆ. ಕೋಲ್ಕತ್ತದಲ್ಲಿ 1,869 ರೂಪಾಯಿನಿಂದ 1,887 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1,708 ರೂಪಾಯಿಯಿಂದ 1,723 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1,924.70 ರೂಪಾಯಿಯಿಂದ 1,937 ರೂಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಇನ್ನು ಗೃಹ ಬಳಕೆಯ ಸಿಲಿಂಡರ್​ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ ಎನ್ನುವುದು ಸಮಾಧಾನದ ಸಂಗತಿ.

ಇದನ್ನೂ ಓದಿ: LPG Price: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಕಡಿತ

Exit mobile version