ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕರ್ನಾಟಕ ಪ್ರವಾಸಕ್ಕೆ ಆಗಮಿಸಲಿದ್ದಾರೆ. ಜೂನ್ 20 ಹಾಗೂ 21ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇದೀಗ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸಕ್ಕೆ ಆಗಮಿಸಿದ್ದಾರೆ. ಸೋಮವಾರ ಹಾಗೂ ಮಂಗಳವಾರ ಎರಡು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಜೂನ್ 20 ಹಾಗೂ 21ರಂದು ಮೋದಿಯವರ ಪ್ರವಾಸ ನಡೆಯಲಿದ್ದು, ಒಂದು ವಾರದ ಅವಧಿಯಲ್ಲಿ ಇಬ್ಬರು ವಿವಿಐಪಿ ಪ್ರವಾಸ ರಾಜ್ಯದಲ್ಲಿ ನಡೆದಂತಾಗುತ್ತದೆ.
ಪ್ರಧಾನಿ ಮೋದಿ ಪ್ರವಾಸದ ವಿವರ
ಜೂನ್: 20
- ಜೂನ್ 20 ರಂದು ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮನ
- ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟ ಹೆಲಿಪ್ಯಾಡ್ಗೆ ಆಗಮನ
- ಮಧ್ಯಾಹ್ನ 12.30ರಿಂದ 1.45 ರವರೆಗೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ, ರೈಲ್ವೇ ರೋಡ್ ಯೋಜನೆ ಮತ್ತು ಬಹು ಮಾದರಿ ಲಾಜಿಸ್ಟಿಕ್ ಪಾರ್ಕ್ ಶಂಕುಸ್ಥಾಪನೆ
- ಮಧ್ಯಾಹ್ನ 2.30 ರಿಂದ 3.30 ರವರೆಗೆ ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ, ಅಂಬೇಡ್ಕರ್ ಪ್ರತಿಮೆ ಅನಾವರಣ, 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐಗಳ ಲೋಕಾರ್ಪಣೆ
- ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ
- ಸಂಜೆ 4.50ಕ್ಕೆ ಮೈಸೂರಿಗೆ ಆಗಮನ
- ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ
- ಸಂಜೆ 6.3ಕ್ಕೆ ಸುತ್ತೂರು ಮಠಕ್ಕೆ ಭೇಟಿ, ವೇದ ಪಾಠಶಾಲಾ ಕಟ್ಟಡ ಲೋಕಾರ್ಪಣೆ
- ರಾತ್ರಿ 7.30 ಚಾಮುಂಡಿ ಬೆಟ್ಟಕ್ಕೆ ಭೇಟಿ
- ರಾತ್ರಿ 8.10ಕ್ಕೆ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ
ಜೂನ್ 21
- ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ
- ಬೆಳಗ್ಗೆ 8 ಗಂಟೆಗೆ ಅರಮನೆ ಮುಂಭಾಗದಲ್ಲಿ ವಸ್ತು ಪ್ರದರ್ಶನ ವೀಕ್ಷಣೆ
- ಬೆಳಗ್ಗೆ 8.30ಕ್ಕೆ ಮೈಸೂರು ಅರಮನೆಗೆ ಭೇಟಿ
- ಬೆಳಗ್ಗೆ 9.25 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ತಿರುವನಂತಪುರಕ್ಕೆ ಪ್ರಯಾಣ
ಇದನ್ನೂ ಓದಿ | PM Narendra Modi: ರಾಷ್ಟ್ರಸೇವೆ ವಿಚಾರದಲ್ಲಿ ರಾಜಿಯಾಗುವುದಿಲ್ಲ ಎಂದ ಪ್ರಧಾನಿ ಮೋದಿ