Site icon Vistara News

ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಮುನ್ನ ಭುಜ್‌ನಲ್ಲಿ ಕೋಮು ಗಲಭೆ

bhuj Communal clash

ಅಹಮದಾಬಾದ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಭೇಟಿ ನೀಡಲಿರುವ (narendra modi visit) ಗುಜರಾತ್‌ನ ಭುಜ್‌ನಲ್ಲಿ ಇದ್ದಕ್ಕಿದ್ದಂತೆ ಕೋಮು ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಕಛ್‌ ಜಿಲ್ಲೆಯ ಭುಜ್‌ನಲ್ಲಿ ಸ್ಥಳೀಯ ವ್ಯಕ್ತಿಯೊಬ್ಬನನ್ನು ಕೊಲೆಗೈದ ಹಿನ್ನೆಲೆಯಲ್ಲಿ ಕೋಮು ಚಕಮಕಿ ಸೃಷ್ಟಿಯಾಗಿದ್ದು, ಎರಡು ಗುಂಪುಗಳು ಹೊಡೆದಾಡಿಕೊಂಡಿವೆ.

ಭುಜ್‌ನ ಮಧಾಪುರ ಪ್ರದೇಶದಲ್ಲಿ ಹಾಲು ಮಾರುತ್ತಿದ್ದ ಯುವಕನೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಇದರಿಂದ ಆಕ್ರೋಶಗೊಂಡ ದುಷ್ಕರ್ಮಿಗಳ ಗುಂಪು ಸ್ಥಳೀಯ ಮಸೀದಿ ಹಾಗೂ ಅಂಗಡಿ ಮಳಿಗೆಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿತು. ಸ್ಥಳದಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಉದ್ವಿಗ್ನ ಪರಿಸ್ಥಿತಿ ತಹಬಂದಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಗಾಳಿಸುದ್ದಿಗಳಿಗೆ ಕಿವಿಕೊಡದಂತೆ ಹಾಗೂ ಶಾಂತಿ ಕಾಪಾಡಿಕೊಳ್ಳುವಂತೆ ಪೊಲೀಸರು ಜನತೆಗೆ ಮನವಿ ಮಾಡಿದ್ದಾರೆ.

ಭುಜ್‌ಗೆ ಪ್ರಧಾನಿ ಮೋದಿ ಶನಿವಾರ ಭೇಟಿ ನೀಡಲಿದ್ದು, ಸ್ಮೃತಿವನ ಸೇರಿದಂತೆ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನೂ ಓದಿ | ನವದೆಹಲಿಯಲ್ಲಿ ಮೋದಿ ಭೇಟಿ ಮಾಡಿದ ಯಡಿಯೂರಪ್ಪ; ಪಕ್ಷದ ಸಂಘಟನೆ ಕುರಿತು ಚರ್ಚೆ

Exit mobile version