ನವದೆಹಲಿ: ಪ್ರಸಕ್ತ ವರ್ಷದಲ್ಲಿ ನಡೆಯುವ ದೇಶದ ಒಂಬತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿಯಾಗಿಯೇ ಸಿದ್ಧವಾಗುತ್ತಿದೆ. ಫೆಬ್ರವರಿ ೨೪ರಿಂದ ೨೬ರವರೆಗೆ ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಕಾಂಗ್ರೆಸ್ ಮಹಾ ಅಧಿವೇಶನ (Congress Plenary Session) ನಡೆಯಲಿದ್ದು, ಸಾಲು ಸಾಲು ಚುನಾವಣೆಗೆ ರಣತಂತ್ರ ರೂಪಿಸುವುದು ಅಧಿವೇಶನದ ಪ್ರಮುಖ ಉದ್ದೇಶ ಎಂದು ಹೇಳಲಾಗುತ್ತಿದೆ.
“ಫೆಬ್ರವರಿ ೨೪ರಿಂದ ನವ ರಾಯ್‌ಪುರದಲ್ಲಿ ಮೂರು ದಿನ ಕಾಂಗ್ರೆಸ್ ಮಹಾ ಅಧಿವೇಶನ ನಡೆಯಲಿದೆ. ಪಕ್ಷದ ೧೫ ಸಾವಿರಕ್ಕೂ ಅಧಿಕ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ. ಮಹಾ ಅಧಿವೇಶನವನ್ನು ‘ಹಾಥ್ ಸೆ ಹಾಥ್ ಜೋಡೋ’ ಎಂದು ಕರೆಯಲಾಗಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಭೆಯು ಮಹತ್ವ ಪಡೆದಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದರು.
ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿ
“ಸಂಚಾಲನಾ ಸಮಿತಿ ಸಭೆಯಿಂದ ಮಹಾ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ರಾಬರ್ಟ್ ವಾದ್ರಾ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ” ಎಂದು ತಿಳಿಸಿದರು. ಮೂರು ದಿನದ ಮಹಾ ಅಧಿವೇಶನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ರಚನೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Congress Politics : ಕಾಂಗ್ರೆಸ್‌ನ 120 ಅಭ್ಯರ್ಥಿಗಳು ಫೈನಲ್: ಚುನಾವಣೆ ಸಮಿತಿ ಸಭೆಯಲ್ಲಿ ಅಸಮಾಧಾನದ ಹೊಗೆ