Site icon Vistara News

Election Result 2023: ಸನಾತನ ಧರ್ಮ ವಿರೋಧಿಸಿದ್ದಕ್ಕೇ ಕಾಂಗ್ರೆಸ್‌ಗೆ ಸೋಲು; ಪಕ್ಷದ ವಿರುದ್ಧವೇ ತಿರುಗಿ ಬಿದ್ದ ನಾಯಕ!

Acharya Pramod Krishnam

Congress finished in 15 years, Oppn will also be finished in 15 months: Acharya Pramod Krishnam

ನವದೆಹಲಿ: ಛತ್ತೀಸ್‌ಗಢ(Chhattisgarh), ಮಧ್ಯ ಪ್ರದೇಶ (Madhya Pradesh) ಹಾಗೂ ರಾಜಸ್ಥಾನ (Rajasthan) ಸೋಲಿಗೆ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ತಮ್ಮ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ(Election Result 2023). ಸನಾತನ ಧರ್ಮವನ್ನು (Sanatan Dhrama) ವಿರೋಧಿಸುತ್ತಿರುವುದರಿಂದಲೇ ಪಕ್ಷವು ಮುಳುಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ (Congress Party) ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ (Acharya Pramod Krishnam) ಅವರು ಹೇಳಿದ್ದಾರೆ. ಭಾರತವು ಎಂದೂ ಜಾತಿಯಾಧಾರಿತ ರಾಜಕಾರಣವನ್ನು ಒಪ್ಪಿಕೊಂಡಿಲ್ಲ. ಸನಾತನ ಧರ್ಮವನ್ನು ವಿರೋಧಿಸುತ್ತಿರುವುದರಿಂದಲೇ ಪಕ್ಷವು ಮುಳುಗುತ್ತಿದೆ. ಈ ಸೋಲುಗಳು ಸನಾತನ ಧರ್ಮದ ವಿರೋಧದ ಶಾಪ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಇನ್ನು ವಿಧಾನಸಭಾ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಆಚಾರ್ಯ ಪ್ರಮೋದ್ ಕೃಷ್ಣಂ, ಸೋತಿರುವುದು ಕಾಂಗ್ರೆಸ್ ಅಲ್ಲ, ಬದಲಿಗೆ ಪಕ್ಷದಲ್ಲಿರುವ ಎಡಪಂಥೀಯರು. ಇವರು ಪಕ್ಷವನ್ನು ಎಡಪಂಥೀಯ ಹಾದಿಯಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂದು ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಆರೋಪಿಸಿದರು.

ಕಾಂಗ್ರೆಸ್ ಪಕ್ಷವನ್ನು ಗಾಂಧೀಜಿಯ ಪಕ್ಷ ಎಂದು ಕರೆಯಲಾಗುತ್ತಿತ್ತು, ರಘುಪತಿ ರಾಘವ ರಾಜ ರಾಮ್… ಮತ್ತು ಈಗ ಅದು ಸನಾತನ ಧರ್ಮಕ್ಕೆ ವಿರುದ್ಧವಾದ ಪಕ್ಷ ಎಂದು ಕರೆಲಾಗುತ್ತಿತ್ತು. . ಕಾಂಗ್ರೆಸ್ ಈ ಎಡಪಂಥೀಯ ನಾಯಕರನ್ನು ಪಕ್ಷದಿಂದ ಹೊರಹಾಕದಿದ್ದರೆ, ಇದು ಎಐಎಂಐಎಂನಂತೆಯೇ ಆಗುತ್ತದೆ ಎಂದು ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಹೇಳಿದ್ದಾರೆ.

ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ ಎಂದ ರಾಹುಲ್; ಖರ್ಗೆ ಹೇಳಿದ್ದೇನು?

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶವು(Election Result 2023) ಕಾಂಗ್ರೆಸ್ ಪಕ್ಷದ (Congress Party) ಪಾಲಿಗೆ ಅಷ್ಟೇನೂ ಖುಷಿ ನೀಡಿಲ್ಲ. ತೆಲಂಗಾಣ (Telangana) ಹೊರತುಪಡಿಸಿದರೆ ರಾಜಸ್ಥಾನ(Rajasthan), ಛತ್ತೀಸ್‌ಗಢ (Chhattisgarh) ಮತ್ತು ಮಧ್ಯ ಪ್ರದೇಶದಲ್ಲಿ (Madhya Pradesh) ಸೋತಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಸೋಲು ಒಪ್ಪಿಕೊಳ್ಳುವುದಾಗಿ ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಅವರು, ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಅಲ್ಲದೇ, ಕಾಂಗ್ರೆಸ್‌ ಅಧಿಕಾರ ನೀಡಿರುವ ತೆಲಂಗಾಣದ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸೋಲು ತಾತ್ಕಾಲಿಕ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Rajasthan Election Result: ರಾಜಸ್ಥಾನದಲ್ಲಿ ನೆಕ್ಸ್ಟ್ ಸಿಎಂ ‘ರಾಜಕುಮಾರಿ’; ಆದರೆ, ವಸುಂಧರಾ ರಾಜೆ ಅಲ್ಲ!

ನಾವು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಜನಾದೇಶವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ. ಆದರೆ, ನಮ್ಮ ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ. ತೆಲಂಗಾಣ ಜನತೆಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ತೆಲಂಗಾಣ ಪ್ರಜೆಗಳಿಗೆ ನೀಡಿರುವ ಭರವಸೆಯನ್ನು ನಾವು ಖಂಡಿತವಾಗಿಯೂ ಈಡೇರಿಸುತ್ತೇವೆ. ಅವರ ಶ್ರಮ ಮತ್ತು ಬೆಂಬಲಕ್ಕಾಗಿ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ರಾಹುಲ್ ಗಾಂಧಿ ಅವರು ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಛತ್ತೀಸ್‌ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ನಮ್ಮ ಪ್ರದರ್ಶನ ನಿರಾಸೆ ಮಾಡಿದೆ. ಆದರೆ ಸಂಕಲ್ಪ ಮಾಡಿದ್ದೇವೆ. ಈ ಮೂರು ರಾಜ್ಯಗಳಲ್ಲಿ ನಮ್ಮನ್ನು ಪುನರ್ನಿರ್ಮಿಸಲು ಮತ್ತು ಪುನರುಜ್ಜೀವನಗೊಳಿಸುವ ನಮ್ಮ ಕೆಲಸವನ್ನು ಮಾಡುತ್ತೇವೆ. ಇದೊಂದು ತಾತ್ಕಾಲಿಕ ಹಿನ್ನಡೆ. ನಾವು ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Exit mobile version