Site icon Vistara News

ತೆಲಂಗಾಣ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಿದ ಕಾಂಗ್ರೆಸ್

Congress delegation met Telangana Governor and stake claim to form govt

ಹೈದ್ರಾಬಾದ್: ನಿರೀಕ್ಷೆಯಂತೆ ತೆಲಂಗಾಣದಲ್ಲಿ ಭರ್ಜರಿಯ ಜಯ ಸಾಧಿಸಿರುವ (Telangana Result 2023) ಕಾಂಗ್ರೆಸ್ ಪಕ್ಷವು(Congress Party), ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಕೆ ಚಂದ್ರಶೇಖರ ರಾವ್ (KCR) ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ನಿಯೋಗ (Revanth Reddy-led Congress delegation) ಭಾನುವಾರ ರಾಜ್ಯಪಾಲ ತಮಿಳಿಸಾಯಿ ಸೌಂದರರಾಜನ್(Governor Tamilisai Soundararajan) ಅವರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಹಕ್ಕು ಮಂಡಿಸಿತು. ಕೆಸಿಆರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಸೂಚಿಸಿದರು(Election Result 2023). ರೇವಂತ್ ರೆಡ್ಡಿ ನೇತೃತ್ವದ ನಿಯೋಗದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೂ ಇದ್ದರು.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

2014ರಲ್ಲಿ ರಚನೆಯಾದ ತೆಲಂಗಾಣ ಇದೇ ಮೊದಲ ಬಾರಿಗೆ ಬಿಆರ್‌ಎಸ್ ಹೊರತಾದ ಸರ್ಕಾರವನ್ನು ಕಾಣುತ್ತಿದೆ. ನವೆಂಬರ್ 30ರಂದು ತೆಲಂಗಾಣದಲ್ಲಿ ಚುನಾವಣೆ ನಡೆದಿದ್ದು, ಭಾನುವಾರ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 65 ಸ್ಥಾನಗಳನ್ನು ಗೆದ್ದರೆ, ಆಡಳಿತಾರೂಢ ಬಿಆರ್‌ಎಸ್ 39 ಸ್ಥಾನವನ್ನು ಗೆದ್ದು ಸೋಲೋಪ್ಪಿಕೊಂಡಿತು. ಇನ್ನು ಬಿಜೆಪಿ 8 ಮತ್ತು ಎಐಎಂಐಎ 7 ಸ್ಥಾನಗಳನ್ನು ಗೆದ್ದುಕೊಂಡಿವೆ.

ಡಿಸೆಂಬರ್ 4 ಅಥವಾ 9 ರಂದು ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ವ್ಯವಸ್ಥೆ ಮಾಡುವಂತೆ ರೆಡ್ಡಿ ಸ್ಥಳೀಯ ಪೊಲೀಸರಿಗೆ ಸೂಚಿಸಿದ್ದಾರೆ. ಅವರು ಡಿಜಿಪಿ ಅಂಜನಿ ಕುಮಾರ್, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಎಡಿಜಿ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ ಎಂದ ರಾಹುಲ್; ಖರ್ಗೆ ಹೇಳಿದ್ದೇನು?

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶವು(Election Result 2023) ಕಾಂಗ್ರೆಸ್ ಪಕ್ಷದ (Congress Party) ಪಾಲಿಗೆ ಅಷ್ಟೇನೂ ಖುಷಿ ನೀಡಿಲ್ಲ. ತೆಲಂಗಾಣ (Telangana) ಹೊರತುಪಡಿಸಿದರೆ ರಾಜಸ್ಥಾನ(Rajasthan), ಛತ್ತೀಸ್‌ಗಢ (Chhattisgarh) ಮತ್ತು ಮಧ್ಯ ಪ್ರದೇಶದಲ್ಲಿ (Madhya Pradesh) ಸೋತಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಸೋಲು ಒಪ್ಪಿಕೊಳ್ಳುವುದಾಗಿ ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಅವರು, ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಅಲ್ಲದೇ, ಕಾಂಗ್ರೆಸ್‌ ಅಧಿಕಾರ ನೀಡಿರುವ ತೆಲಂಗಾಣದ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸೋಲು ತಾತ್ಕಾಲಿಕ ಎಂದು ಹೇಳಿದ್ದಾರೆ.

ನಾವು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಜನಾದೇಶವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ. ಆದರೆ, ನಮ್ಮ ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ. ತೆಲಂಗಾಣ ಜನತೆಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ತೆಲಂಗಾಣ ಪ್ರಜೆಗಳಿಗೆ ನೀಡಿರುವ ಭರವಸೆಯನ್ನು ನಾವು ಖಂಡಿತವಾಗಿಯೂ ಈಡೇರಿಸುತ್ತೇವೆ. ಅವರ ಶ್ರಮ ಮತ್ತು ಬೆಂಬಲಕ್ಕಾಗಿ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ರಾಹುಲ್ ಗಾಂಧಿ ಅವರು ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೂ ಮೊದಲು ಮಧ್ಯ ಪ್ರದೇಶದ ಸೋಲಿನ ಕುರಿತು ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು, ನಾವು ಸೋಲನ್ನು ಸ್ವೀಕರಿಸುತ್ತೇವೆ. ಸೋಲಿಗೆ ಕಾರಣಗಳು ಏನು ಎಂದು ಕಂಡು ಹಿಡಿದು, ಕೊರತೆಗಳ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದು ಹೇಳಿದ್ದರು. ನಾವು ಲೋಪದೋಷಗಳನ್ನು ವಿಶ್ಲೇಷಿಸುತ್ತೇವೆ. ನಾವು ಪ್ರಸ್ತಾಪಿಸಿದ ವಿಷಯಗಳು ಮತದಾರರಿಗೆ ಏಕೆ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬ ಕಾರಣಗಳನ್ನು ಹುಡುಕುತ್ತೇವೆ. ನಾವು ಗೆಲ್ಲುವ ಅಥವಾ ಸೋತ ಅಭ್ಯರ್ಥಿಗಳೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಅಲ್ಲದೇ, ಬಿಜೆಪಿಯ ಭಾರಿ ಗೆಲುವಿಗೆ ಅಭಿನಂದನೆ ಸಲ್ಲಿಸಿದರು.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Exit mobile version