ಜೈಪುರ: ಕಾಂಗ್ರೆಸ್ ನಾಯಕ ಅಜಯ್ ಮಾಕೇನ್ ಅವರು ರಾಜಸ್ಥಾನ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಅವರು ಒಂದು ಪುಟದ ಪತ್ರವನ್ನು ಬರೆದು ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ(Ajay Maken Resigns).
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಸಂಬಂಧ ಸೆಪ್ಟೆಂಬರ್ 25ರಂದು ನಡೆದ ರಾಜಸ್ಥಾನದಲ್ಲಿ ನಡೆದ ಬೆಳವಣಿಗೆ ಸಂಬಂಧ ಕ್ರಮ ಕೈಗೊಳ್ಳಲು ಪಕ್ಷ ವಿಫಲವಾಗಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ದಿಲ್ಲಿಯ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಮುಂದಾಗಿರುವ ಅವರು, ಎನ್‌ಜಿಒ ಮತ್ತು ಟ್ರೇಡ್ ಯೂನಿಯನ್‌ಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ವಿಚಾರ ಮಂಡಿಸಿದ್ದಾರೆಂದು ತಿಳಿದು ಬಂದಿದೆ.
ಇದನ್ನೂ ಓದಿ | Election 2023 | ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಯಶವಂತಪುರಕ್ಕೆ ಭಾವನಾ ಅರ್ಜಿ