Site icon Vistara News

Congress Manifesto: ಮುಸಲ್ಮಾನರಿಗೆ ಸಂಪತ್ತು ಹಂಚಿಕೆ; ಮನಮೋಹನ್‌ ಸಿಂಗ್‌ ಹಳೆಯ ವಿಡಿಯೋ ಶೇರ್‌ ಮಾಡಿದ ಬಿಜೆಪಿ!

ನವದೆಹಲಿ: ಕೈ-ಕಮಲ ಪಾಳಯದಲ್ಲಿ ಪರಸ್ಪರ ವಾಕ್ಸಮರಕ್ಕೆ ಕಾರಣವಾಗಿರುವ ಕಾಂಗ್ರೆಸ್‌ ಪ್ರಣಾಳಿಕೆ (Congress Manifesto) ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿ (Narendra Modi)ಗೆ ಪತ್ರ ಬರೆದಿರುವ ಬೆನ್ನಲ್ಲೇ ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ (Manamohan Singh) ಅವರ ಹಳೆಯ ವಿಡಿಯೋವೊಂದನ್ನು ಶೇರ್‌ ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ವಿಡಿಯೋದಲ್ಲಿ ಅಲ್ಪಸಂಖ್ಯಾತರು ಇತರರಿಗಿಂತ ಹೆಚ್ಚು ವಿಶೇಷ ಸವಲತ್ತು ಪಡೆಯಲು ಅರ್ಹರು ಎಂದು ಮನಮೋಹನ್‌ ಸಿಂಗ್‌ ಹೇಳುತ್ತಿರುವುದು ಸ್ಪಷ್ಟವಾಗಿದೆ.

ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಂಗ್ರೆಸ್‌ ಸಂಪತ್ತಿನ ಮರು ಹಂಚಿಕೆ ಭರವಸೆ ನೀಡಿರುವ ವಿಚಾರವನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್‌ ಮುಸ್ಲಿಂ ಓಲೈಕೆ ಪಕ್ಷ ಎಂಬುದನ್ನು ಮತ್ತೆ ಸಾಬೀತು ಪಡಿಸಿದೆ ವಾಗ್ದಾಳಿ ನಡೆಸಿದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇದೇ ವಿಚಾರದ ಬಗ್ಗೆ ಮತ್ತೆ ಮತ್ತೆ ಪ್ರಸ್ತಾಪಿಸಿ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನ ಕಷ್ಟ ಪಟ್ಟು ದುಡಿದ ಹಣ, ಸಂಪತ್ತನ್ನು ತನ್ನ ಸ್ವಾರ್ಥಕ್ಕಾಗಿ ಒಳ ನುಸುಳುಕೋರರು ಮತ್ತು ಅತಿ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಲಿದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮಲ್ಲಿಕಾರ್ಜುನ ಖರ್ಗೆ, ಮುಖತಃ ಭೇಟಿಯಾಗಿ ಕಾಂಗ್ರೆಸ್‌ ಪ್ರಣಾಳಿಕೆಯನ್ನು ತಮಗೆ ವಿವರಿಸುವುದಾಗಿ ಹೇಳಿದ್ದರು.

ಇದರ ಬೆನ್ನಲ್ಲೇ ಬಿಜೆಪಿ 2009ರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದೆ. ಈ ವಿಡಿಯೋದಲ್ಲಿ ಅಲ್ಪಸಂಖ್ಯಾತರು, ಅದರಲ್ಲೂ ಮುಸ್ಲಿಂ ಅಲ್ಪ ಸಂಖ್ಯಾತರು ಒಂದು ವೇಳೆ ಬಡವರಾಗಿದ್ದರೆ ಅವರಿಗೆ ಮೊದಲ ಆದ್ಯತೆ ಕೊಟ್ಟು ಸವಲತ್ತುಗಳನ್ನು ಕೊಡಬೇಕು. ರಾಷ್ಟ್ರೀಯ ಸಂಪತ್ತಿನ ಹಂಚಿಕೆ ವಿಚಾರ ಬಂದಾಗ ಮುಸ್ಲಿಮರಿಗೆ ಮೊದಲ ಆದ್ಯತೆ ಕೊಡಬೇಕು. ರಾಷ್ಟ್ರೀಯ ಸಂಪತ್ತಿನಲ್ಲಿ ಮೊದಲ ಹಕ್ಕು ಮುಸ್ಲಿಮರದ್ದು ಎಂದು ಮನಮೋಹನ್‌ ಸಿಂಗ್‌ ಹೇಳಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸಂಪತ್ತಿನ ಹಂಚಿಕೆ ಬಗ್ಗೆ ನೀಡಿರುವ ಹೇಳಿಕೆಗೆ ಸ್ಪಷ್ಟನೆ ನೀಡುತ್ತಿರುವ ಕಾಂಗ್ರೆಸ್‌ ನಿಜವಾದ ಉದ್ದೇಶ ಏನಿದೆ ಏಂಬುದಕ್ಕೆ ಈ ವಿಡಿಯೋ ಸಾಕ್ಷಿ. ಎಲ್ಲಾ ವಿಚಾರದಲ್ಲಿ ಕಾಂಗ್ರೆಸ್‌ ಮುಸ್ಲಿಂ ಓಲೈಕೆ ಮನಸ್ಥಿತಿಹ ಹೊಂದಿರುರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್‌ ಇದೀಗ ಮೀಸಲಾತಿಯಿಂದ ಸಂಪನ್ಮೂಲ ಹಂಚಿಕೆಯತ್ತ ತನ್ನ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದ್ದಾರೆ.

ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೇ ಮೊದಲ ಅಧಿಕಾರ ಇತ್ತು. ಕಾಂಗ್ರೆಸ್‌ನವರು ದೇಶದ ಸಂಪತ್ತನ್ನು ಒಟ್ಟುಗೂಡಿಸಿ ಅಕ್ರಮ ವಲಸಿಗರು, ಹೆಚ್ಚು ಮಕ್ಕಳನ್ನು ಹೊಂದಿರುವ ಸಮುದಾಯಕ್ಕೆ ನೀಡಲಿದೆ. ನಿಮ್ಮ ಶ್ರಮದ ಹಣವನ್ನು ಅಕ್ರಮ ವಲಸಿಗರಿಗೆ ನೀಡಬೇಕೆ? ನೀವು ಇದನ್ನು ಒಪ್ಪುವಿರೇ? ಕಾಂಗ್ರೆಸ್‌ ಪ್ರಣಾಳಿಕೆ ಇದನ್ನು ಹೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿದ್ದರು.

ಇದನ್ನು ಓದಿ: Palki Sharma: ಬ್ರಿಟನ್‌ನಲ್ಲಿ ಭಾರತದ ಏಳಿಗೆ ಬಿಚ್ಚಿಟ್ಟ ಪತ್ರಕರ್ತೆ ಪಾಲ್ಕಿ ಶರ್ಮಾಗೆ ಮೋದಿ ಮೆಚ್ಚುಗೆ!

ಈ ವಿಚಾರ ರಾಜಕೀಯ ತಿರುವು ಪಡ್ದುಕೊಳ‍್ಳುತಿದ್ದಂತೆ ಸ್ಪಷ್ಟನೆ ಕೊಟ್ಟ ಕಾಂಗ್ರೆಸ್‌, ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಅಂತಹ ಯಾವುದೇ ಭರವಸೆ ನೀಡಿಲ್ಲ ಎಂದು ಹೇಳಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಷ್ಟ್ರ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಸಮೀಕ್ಷೆ ನಡೆಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಿದೆ.

Exit mobile version