ನವ ದೆಹಲಿ: ದೇಶದಲ್ಲಿ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದು, ಜಿಎಸ್ಟಿ ಹೆಚ್ಚಳ ಸೇರಿ ಇಂಥ ಹತ್ತು-ಹಲವು ವಿಷಯಗಳನ್ನು ವಿರೋಧಿಸಿ ಇಂದು ಕಾಂಗ್ರೆಸ್ ನಾಯಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಮುಖ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ಪಿ.ಚಿದಂಬರಂ, ಅಶೋಕ್ ಗೆಹ್ಲೋಟ್ ಸೇರಿ ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ದೆಹಲಿಯಲ್ಲಿ ಪೊಲೀಸರು ಕಾಂಗ್ರೆಸ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ, ಕಾರ್ಯಕರ್ತರು, ನಾಯಕರು ಮಾತು ಕೇಳಲಿಲ್ಲ. ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಮೆರವಣಿಗೆ ನಡೆಸುತ್ತಿದ್ದಾರೆ.
ಪ್ರತಿಭಟಿಸಲು ಬಿಡುತ್ತಿಲ್ಲ !
ನಮಗೆ ಯಾರಿಗೂ ಪ್ರತಿಭಟನೆ ನಡೆಸಲು ಬಿಡುತ್ತಿಲ್ಲ. ಸೆಕ್ಷನ್ 144 ನೆಪ ಹೇಳಿ ನಮ್ಮನ್ನೆಲ್ಲ ಅರೆಸ್ಟ್ ಮಾಡುತ್ತಿದ್ದಾರೆ. ನಾವು ಜನರ ಸಮಸ್ಯೆಗಳನ್ನು ಪರಿಹಾರ ಮಾಡಲು ಹೊರಟಿದ್ದರೆ, ನಮ್ಮನ್ನೇ ಬಂಧಿಸಲಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಜೀವ್ ಶುಕ್ಲಾ ಹೇಳಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಸೆಕ್ಷನ್ 144 ಜಾರಿ ಮಾಡಿದ್ದರೂ ಅದನ್ನು ಉಲ್ಲಂಘಿಸಿ ರಾಷ್ಟ್ರಪತಿ ಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದರು, ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಸಂಸದ ರಾಹುಲ್ ಗಾಂಧಿ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
मगर @RahulGandhi की जंग तो जारी है… pic.twitter.com/T08AEmhR1k
— Congress (@INCIndia) August 5, 2022
ರಾಷ್ಟ್ರಪತಿ ಭವನ ಚಲೋ
ನವ ದೆಹಲಿ: ಕಾಂಗ್ರೆಸ್ ಸಂಸದರು ಸಂಸತ್ತಿನಿಂದ ರಾಷ್ಟ್ರಪತಿ ಭವನದವರೆಗೆ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸದ್ದು, ಬಿಜೆಪಿ ಸರ್ಕಾರ, ಬೆಲೆ ಏರಿಕೆ, ಜಿಎಸ್ಟಿ ಹೆಚ್ಚಳ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ.