Site icon Vistara News

Opposition Meet: ಕೇಂದ್ರದ ‘ದಿಲ್ಲಿ ಸುಗ್ರೀವಾಜ್ಞೆ’ಗೆ ಕಾಂಗ್ರೆಸ್ ವಿರೋಧ; ಖುಷಿಯಾದ ಆಪ್!

Donations from companies to BJP after raids, congress party demands probe

ನವದೆಹಲಿ: ದೆಹಲಿಯ ಕೆಲವು ಸೇವೆಗಳ ಮೇಲೆ ಕೇಂದ್ರಕ್ಕೆ ಬಲ ನೀಡುವ ಸುಗ್ರೀವಾಜ್ಞೆಗೆ (Delhi ordinance) ಕಾಂಗ್ರೆಸ್ ಕೊನೆಗೂ (Congress Party) ತನ್ನ ವಿರೋಧ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್‌ (Supreme Court) ದಿಲ್ಲಿಯ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಅಧಿಕಾರ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಅಧಿಕಾರಗಳನ್ನು ತನ್ನಲ್ಲೇ ಕೇಂದ್ರೀಕರಿಸಿತ್ತು. ಕೇಂದ್ರದ ಈ ನಡೆ ವಿರುದ್ಧ ದಿಲ್ಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿ (AAP) ಪ್ರತಿಭಟನೆ ನಡೆಸಿತ್ತು. ಅಲ್ಲದೇ, ಈ ಸುಗ್ರೀವಾಜ್ಞೆ ವಿರೋಧಿಸುವ ಸಂಬಂಧ ಪ್ರತಿಪಕ್ಷಗಳ ಬೆಂಬಲವನ್ನು ಕೋರಿತ್ತು. ಆದರೆ, ಈ ವರೆಗೂ ಕಾಂಗ್ರೆಸ್ ಬಗ್ಗೆ ತನ್ನ ನಿಲುವು ಪ್ರಕಟಿಸಿರಲಿಲ್ಲ. ಇದೀಗ, ಬೆಂಗಳೂರನಲ್ಲಿ ಪ್ರತಿಪಕ್ಷಗಳ ಸಭೆಗೆ ವೇದಿಕೆ ಸಿದ್ಧವಾಗುತ್ತಿದ್ದಂತೆ (Opposition Meet) ಕಾಂಗ್ರೆಸ್ ಪಕ್ಷವು, ಕೇಂದ್ರಕ್ಕೆ ಸರ್ಕಾರದ ಸುಗ್ರೀವಾಜ್ಞೆಗೆ ತನ್ನ ವಿರೋಧ ದಾಖಲಿಸಿದೆ.

ನಿರ್ಣಾಯಕ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಮೈತ್ರಿ ಮಾಡಿಕೊಳ್ಳುವ ಉದ್ದೇಶದಿಂದ ಜುಲೈ 17ರಂದು ನಡೆಯಲಿರುವ ಪ್ರಮುಖ ಪ್ರತಿಪಕ್ಷಗಳ ಸಭೆಯನ್ನು ಬಹಿಷ್ಕರಿಸುವುದಾಗಿ ಆಮ್ ಆದ್ಮಿ ಪಾರ್ಟಿ ಹೇಳಿತ್ತು. ಈಗ ಕಾಂಗ್ರೆಸ್ ಸುಗ್ರೀವಾಜ್ಞೆಗೆ ಬೆಂಬಲ ನೀಡಿದ್ದು, ಬೆದರಿಕೆ ಹಾಕಿದ್ದ ಅರವಿಂದ್ ಕೇಜ್ರಿವಾಲ್ ಅವರ ಪಕ್ಷಕ್ಕೆ ಇದು ದೊಡ್ಡ ಬೆಂಬಲವಾಗಿದೆ.

ದಿಲ್ಲಿ ಸೇವೆಗಳ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ತೆಗೆದುಕೊಳ್ಳುವ ಪ್ರಯತ್ನಗಳನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವ ಕೇಂದ್ರ ಸರ್ಕಾರದ ಯಾವುದೇ ಪ್ರಯತ್ನಗಳನ್ನು ಕಾಂಗ್ರೆಸ್ ಪಕ್ಷವು ವಿರೋಧಿಸುವುದಾಗಿ ಹೇಳಿದೆ. ಕಾಂಗ್ರೆಸ್ ಪಕ್ಷದ ಈ ಹೇಳಿಕೆಯು ಆಮ್ ಆದ್ಮಿ ಪಾರ್ಟಿಗೆ ಭಾರೀ ಬಲ ನೀಡಿದೆ.

ಇಷ್ಟಾಗಿಯೂ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ ಚಿದಂಬರಂ ಅವರು ಈ ವಿಷಯ ಕುರಿತು ನಡೆದುಕೊಂಡ ರೀತಿಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಾಟ್ನಾದಲ್ಲಿ ಇತ್ತೀಚೆಗೆ ನಡೆದ ಪ್ರತಿಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ ಆಪ್ ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಕೈಗೆತ್ತಿಕೊಂಡ ರೀತಿ ದುರದೃಷ್ಟಕರವಾಗಿತ್ತು ಎಂದು ಅವರು ಟೀಕಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Opposition Meet: ನಾಳೆ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ; ಜೆಡಿಎಸ್‌, ಆಪ್‌ ಭಾಗಿ? ತಿರುಗೇಟಿಗೆ ಬಿಜೆಪಿ ಸಜ್ಜು

ಬೆಂಗಳೂರಲ್ಲಿ ನಾಳೆ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಅವರು (ಆಮ್ ಆದ್ಮಿ ಪಾರ್ಟಿ) ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದ ಈ ನಡೆಯನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಹೇಳಿದ್ದಾರೆ. ಕೇಂದ್ರ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದು ಸಕಾರಾತ್ಮಕ ಬೆಳವಣಿಗೆ ಎಂದು ಆಮ್ ಆದ್ಮಿ ಪಾರ್ಟಿಯ ರಾಘವ್ ಛಡ್ಡಾ ಅವರು ಹೇಳಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version