Site icon Vistara News

Congress Party: ಕಾಂಗ್ರೆಸ್‌ನಲ್ಲಿ ಪ್ರಿಯಾಂಕಾ ಗಾಂಧಿಗೆ ಫುಲ್ ಜವಾಬ್ದಾರಿ! ಶೀಘ್ರ ಸಿಡಬ್ಲ್ಯೂಸಿ ಪುನರ್ ರಚನೆ

Rahul Gandhi, Priyanka Gandhi and Mallikarjun Kharge

ನವದೆಹಲಿ: ಹಿಮಾಚಲ ಪ್ರದೇಶ (Himachal Pradesh) ಮತ್ತು ಕರ್ನಾಟಕ (Karnataka) ರಾಜ್ಯಗಳಲ್ಲಿನ ಭರ್ಜರಿ ಜಯದಿಂದ ಉತ್ಸಾಹಿತವಾಗಿರುವ ಗ್ರ್ಯಾಂಡ್ ಓಲ್ಡ್ ಪಾರ್ಟಿ ಕಾಂಗ್ರೆಸ್ (Congress Party) 2024ರ ಲೋಕಸಭೆ ಚುನಾವಣೆಗೆ (Lok Sabha Election) ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಪಕ್ಷದ ನೀತಿ ನಿರ್ಧಾರಗಳನ್ನು ನಿರೂಪಿಸುವ ಕಾಂಗ್ರೆಸ್ ವರ್ಕಿಂಗ್ ಕಮೀಟಿ(CWC)ಯನ್ನು ಪುನರ್ ರಚಿಸಲು ತಯಾರಿ ಮಾಡಿಕೊಳ್ಳುತ್ತಿದೆ. ವಿಶೇಷವಾಗಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡುವ ಸಾಧ್ಯತೆಗಳಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ರಾಹುಲ್ ಗಾಂಧಿ (Rahul Gandhi) ಅವರು ಈಗಾಗಲೇ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಕಳೆದ ಫೆಬ್ರವರಿ ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ನ ಮಹಾಧಿವೇಶನ ನಡೆದಿತ್ತು. ಈ ವೇಳೆ, ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳಲ್ಲಿ ಎಸ್ ಸಿ, ಎಸ್ ಟಿ, ಒಬಿಸಿ, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು 50 ವರ್ಷದ ಕೆಳಗಿನ ಯುವಕರಿಗೆ ಮೀಸಲು ಕಲ್ಪಿಸುವ ಬಗ್ಗೆ ಘೋಷಿಸಲಾಗಿತ್ತು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ತಯಾರಿ ಮಾಡಿಕೊಳ್ಳುತ್ತಿದೆ. 35 ಸದಸ್ಯರನ್ನು ಒಳಗೊಂಡಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಈ ನೀತಿಯ ಅನ್ವಯ ನೇಮಕ ಮಾಡಲಾಗುತ್ತದೆ.

ಕಳೆದ ಎರಡು ವರ್ಷದಲ್ಲಿ ಹಿಮಾಚಲ ಪ್ರದೇಶ, ಕರ್ನಾಟಕ, ಗುಜರಾತ್, ಪಂಜಾಬ್, ಅಸ್ಸಾಮ್‌ ಚುನಾವಣೆಗಳಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವ್ಯಾಪಕ ಪ್ರಚಾರ ಕೈಗೊಂಡಿದ್ದರು. ಈ ಪೈಕಿ ಕಾಂಗ್ರೆಸ್ ಪಕ್ಷವು ಹಿಮಾಚಲ ಪ್ರದೇಶ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವ ಸಾಧಿಸಿತ್ತು. ಹಾಗಾಗಿ, ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ವಹಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ತೆಲಂಗಾಣದಲ್ಲಿ ಒಮ್ಮ ಸಾರ್ವಜನಿಕ ಸಭೆಯನ್ನು ಕೈಗೊಂಡಿರುವ ಪ್ರಿಯಾಂಕಾ ಅವರು, ಜೂನ್ 12ರಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ಮತ್ತೊಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಿಡಬ್ಲ್ಯೂಸಿ ಪುನರ್ ರಚನೆ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷವು ಹಲವು ರಾಜ್ಯ ಘಟಕಗಳ ಮುಖ್ಯಸ್ಥರು ಹಾಗೂ ಉಸ್ತುವಾರಿಗಳನ್ನು ಬದಲು ಮಾಡಲಿದೆ. ಚುನಾವಣೆ ನಡೆಯಲಿರುವ ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ ಮತ್ತು ತೆಲಂಗಾಣದಿಂದ ಪ್ರಕ್ರಿಯೆ ಶುರುವಾಗಲಿದೆ.

ಈ ಸುದ್ದಿಯನ್ನೂ ಓದಿ: Yuva Kranti: ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಉದ್ಯೋಗ ಭರ್ತಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಶೀಘ್ರವೇ ತಮಿಳುನಾಡು, ದಿಲ್ಲಿ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಜಾರ್ಖಂಡ್ ಕಾಂಗ್ರೆಸ್ ಮುಖ್ಯಸ್ಥರನ್ನು ಬದಲಿಸಲಾಗುತ್ತದೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ವೆಸ್ಟ್ ಬೆಂಗಾಲ್, ಒಡಿಶಾ, ಪುದುಚೆರಿ, ಬಿಹಾರ ಮತ್ತು ಬಿಹಾರ ರಾಜ್ಯಗಳಿಗೆ ಶೀಘ್ರವೇ ಉಸ್ತುವಾರಿಗಳು ಸಿಗಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ತೀವ್ರ ಬಿಕ್ಕುಟ್ಟು ಎದುರಿಸುತ್ತಿರುವ ರಾಜಸ್ಥಾನದಲ್ಲೂ ಶೀಘ್ರವೇ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ.

ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version