ನವ ದೆಹಲಿ: ಕರ್ನಾಟಕ, ಅರುಣಾಚಲ ಪ್ರದೇಶ , ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ, ಪುದುಚೇರಿ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು (Congress Candidate List) ಕಾಂಗ್ರೆಸ್ ಗುರುವಾರ ರಾತ್ರಿ ಪ್ರಕಟಗೊಂಡಿದೆ. ಕರ್ನಾಟಕದ (Karnataka) 17 ಸೇರಿದಂತೆ ಒಟ್ಟು 57 ಅಭ್ಯರ್ಥಿಗಳ ಹೆಸರನ್ನು ಈ ಪಟ್ಟಿಯಲ್ಲಿ ಅಂತಿಮಗೊಳಿಸಲಾಗಿದೆ.
कांग्रेस अध्यक्ष श्री @kharge की अध्यक्षता में आयोजित 'केंद्रीय चुनाव समिति' की बैठक में लोकसभा चुनाव, 2024 के लिए 57 लोकसभा सीटों पर कांग्रेस उम्मीदवारों के नाम की तीसरी लिस्ट जारी की गई। pic.twitter.com/7TMkx4faZ4
— Congress (@INCIndia) March 21, 2024
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ‘ಕೇಂದ್ರ ಚುನಾವಣಾ ಸಮಿತಿ’ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರುಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ತಿಳಿಸಿದೆ. ಪ್ರಮುಖವಾಗಿ ಅಧೀರ್ ರಂಜನ್ ಚೌಧರಿ ಅವರನ್ನು ಪಶ್ಚಿಮ ಬಂಗಾಳದ ಬೆಹರಾಂಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.
ಕಾಂಗ್ರೆಸ್‌ನ 17 ಟಿಕೆಟ್ ಘೋಷಣೆ; ರಾಜ್ಯದ ಐವರು ಸಚಿವರ ಮಕ್ಕಳು ಲೋಕ ಕಣಕ್ಕೆ
ಬೆಂಗಳೂರು: ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ. ಇದರಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬೆಳಗಾವಿ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಮತ್ತು ಬೀದರ್‌ನಿಂದ ಈಶ್ವರ್ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಅವರಿಗೆ ಟಿಕೆಟ್ ನೀಡಲಾಗಿದೆ. ಇದಲ್ಲದೆ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್, ಎಸ್.ಎಸ್. ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್ ನೀಡಲಾಗಿದೆ.
ಇದನ್ನೂ ಓದಿ : Lok Sabha Election : ಬಿಜೆಪಿಯ 3ನೇ ಪಟ್ಟಿ ಬಿಡುಗಡೆ, ಅಣ್ಣಾಮಲೈ ಚುನಾವಣಾ ಕಣಕ್ಕೆ ಎಂಟ್ರಿ
ಮಾರ್ಚ್ 8ರಂದು ಬಿಡುಗಡೆಯಾದ ಮೊದಲ ಪಟ್ಟಿಯಲ್ಲಿ ಏಳು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ 17 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇನ್ನು ನಾಲ್ಕು ಕ್ಷೇತ್ರಗಳ ಟಿಕೆಟ್ ಪೆಂಡಿಂಗ್ ಇಡಲಾಗಿದೆ.
ರಾಜ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗಳಿಸಿದ್ದ ಕಾಂಗ್ರೆಸ್ ಈ ಬಾರಿ 20 ಸ್ಥಾನಗಳ ಟಾರ್ಗೆಟ್ ಇಟ್ಟುಕೊಂಡು ಅಳೆದೂ ತೂಗಿ ಟಿಕೆಟ್ ಹಂಚಿಕೆ ನಡೆಸಿದೆ. ರಾಜ್ಯಮಟ್ಟದಲ್ಲಿ ತಲಾ ಎರಡು ಅಥವಾ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕೇಂದ್ರೀಯ ಚುನಾವಣಾ ಸಮಿತಿಯನ್ನು ಮುಕ್ತ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ. ಎಐಸಿಸಿ ಅಧ್ಯಕ್ಷ (AICC president) ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಇತರ ಹಿರಿಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಟಿಕೆಟ್ ಫೈನಲ್ ಮಾಡಲಾಗಿದೆ.