Site icon Vistara News

ಭಾರತ್‌ ಜೋಡೋ ನ್ಯಾಯ ಯಾತ್ರೆಗೂ ದೇಣಿಗೆ ಕೊಡಿ ಎಂದ ಕಾಂಗ್ರೆಸ್;‌ ವಿಶೇಷ ಆಫರ್‌

Rahul Gandhi

Bharat Jodo Nyay Yatra To Be Paused For 5 Days, Here Is The Reason

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಜನರಿಂದ ದೇಣಿಗೆ ಸಂಗ್ರಹಿಸಲು ಮುಂದಾಗಿರುವ ಕಾಂಗ್ರೆಸ್‌ (Congress) ಈಗ ರಾಹುಲ್‌ ಗಾಂಧಿ ಅವರು ಕೈಗೊಳ್ಳುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಗೂ (Bharat Jodo Nyay Yatra) ದೇಣಿಗೆ ಕೊಡಿ ಎಂದು ಮನವಿ ಮಾಡಿದೆ. ಈ ಕುರಿತು ಕಾಂಗ್ರೆಸ್‌ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಹೆಚ್ಚು ಹಣ ಕೊಟ್ಟವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಹಿ ಮಾಡಿರುವ ಟಿ-ಶರ್ಟ್‌ ಉಡುಗೊರೆ ಸಿಗಲಿದೆ ಎಂದು ಹೇಳಿದ್ದಾರೆ.

“ಸುಮಾರು 6,700 ಕಿಲೋಮೀಟರ್‌ವರೆಗೆ ಭಾರತ್‌ ಜೋಡೋ ನ್ಯಾಯ ಯಾತ್ರೆ ನಡೆಯಲಿದೆ. ಯಾತ್ರೆಯ ಒಂದು ಕಿಲೋಮೀಟರ್‌ಗೆ ತಲಾ 70 ಪೈಸೆ ದೇಣಿಗೆ ನೀಡುವವರಿಗೆ ಅಂದರೆ, 670 ರೂ. ದೇಣಿಗೆ ನೀಡುವವರಿಗೆ ರಾಹುಲ್‌ ಗಾಂಧಿ ಅವರು ಸಹಿ ಮಾಡಿರುವ ಟಿ-ಶರ್ಟ್‌ ಸಿಗಲಿದೆ. ಇನ್ನು 67 ರೂ. ದೇಣಿಗೆ ನೀಡಿದರೆ ರಾಹುಲ್‌ ಗಾಂಧಿ ಅವರು ಸಹಿ ಮಾಡಿರುವ ಪತ್ರ ಸಿಗಲಿದೆ” ಎಂದು ಕಾಂಗ್ರೆಸ್‌ ತಿಳಿಸಿದೆ. ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಆರಂಭಿಸಿದ ಒಂದೇ ದಿನದಲ್ಲಿ ಸುಮಾರು 2 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.

ರಾಹುಲ್‌ ಗಾಂಧಿ ಅವರು ಕೈಗೊಳ್ಳುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಮಣಿಪುರದಿಂದ ಆರಂಭವಾಗಿದ್ದು, ಈಗ ಪಶ್ಚಿಮ ಬಂಗಾಳ ತಲುಪಿದೆ. ಪಶ್ಚಿಮ ಬಂಗಾಳದಲ್ಲೂ ನ್ಯಾಯ ಯಾತ್ರೆಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ. ರಾಜ್ಯದ ಹಲವೆಡೆ ಸಾರ್ವಜನಿಕ ಸಭೆ, ಯಾತ್ರೆ ಕೈಗೊಳ್ಳಲು ಅನುಮತಿ ನೀಡುತ್ತಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ. ಮಮತಾ ಬ್ಯಾನರ್ಜಿ ಅವರು ಈಗಾಗಲೇ ಇಂಡಿಯಾ ಒಕ್ಕೂಟದಿಂದ ಹೊರಬಂದಿದ್ದಾರೆ.

ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳುವ ಮೊದಲು ಯಾತ್ರೆಯು 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳ ಮೂಲಕ ಸಂಚರಿಸಲಿದೆ. ಮಣಿಪುರದ ಜತೆಗೆ, ಯಾತ್ರೆಯು ನಾಲ್ಕು ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್ (ಎರಡು ದಿನಗಳಲ್ಲಿ 257 ಕಿಮೀ), ಅರುಣಾಚಲ ಪ್ರದೇಶ (55 ಕಿ.ಮೀ. ಒಂದು ದಿನ), ಮೇಘಾಲಯ (ಒಂದು ದಿನದಲ್ಲಿ ಐದು ಕಿಮೀ) ಮತ್ತು ಅಸ್ಸಾಂ (ಎಂಟು ದಿನಗಳಲ್ಲಿ 833 ಕಿಮೀ)ಗಳನ್ನು ಕವರ್ ಮಾಡಲಿದೆ.

ಇದನ್ನೂ ಓದಿ: ರಾಹುಲ್‌ ಗಾಂಧಿ ಯಾತ್ರೆಗೆ ಬಂಗಾಳದಲ್ಲಿ ದೀದಿ ಅಡ್ಡಿ; ನ್ಯಾಯ ಯಾತ್ರೆಗೆ ಇದೆಂಥ ಅನ್ಯಾಯ?

ಬಳಿಕ ಭಾರತ್ ಜೋಡೋ ನ್ಯಾಯ ಯಾತ್ರೆಯು ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ನಡೆಯಲಿದೆ. ಒಟ್ಟು100 ಲೋಕಸಭಾ ಕ್ಷೇತ್ರಗಳಲ್ಲಿ ಈ ಯಾತ್ರೆ ನಡೆಯಲಿದ್ದು, ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಯಾತ್ರೆಯು ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version