ನೆಹರು-ಗಾಂಧಿ ಸಂಕೋಲೆಯಿಂದ ಕಾಂಗ್ರೆಸ್‌ ಹೊರಬರಲಿ; ಪ್ರಣಬ್‌ ಮುಖರ್ಜಿ ಪುತ್ರಿ ಆಗ್ರಹ - Vistara News

ದೇಶ

ನೆಹರು-ಗಾಂಧಿ ಸಂಕೋಲೆಯಿಂದ ಕಾಂಗ್ರೆಸ್‌ ಹೊರಬರಲಿ; ಪ್ರಣಬ್‌ ಮುಖರ್ಜಿ ಪುತ್ರಿ ಆಗ್ರಹ

ಒಬ್ಬ ನಾಯಕನು ಪಕ್ಷ ಮುನ್ನಡೆಸಿದಾಗ ಪದೇಪದೆ ಪಕ್ಷ ಸೋಲುಂಡರೆ ಆಗ ಆ ಪಕ್ಷವು ನಾಯಕತ್ವ ಬದಲಾವಣೆ ಕುರಿತು ಚಿಂತನೆ ನಡೆಸಬೇಕು ಎಂದು ಶರ್ಮಿಷ್ಠಾ ಮುಖರ್ಜಿ ಹೇಳಿದ್ದಾರೆ.

VISTARANEWS.COM


on

Rahul Gandi And Sharmistha Mukherjee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ಲೋಕಸಭೆ ಚುನಾವಣೆಗೆ (Lok Sabha Election 2024) ಕೆಲವೇ ತಿಂಗಳು ಬಾಕಿ ಇವೆ. ಬಿಜೆಪಿಯನ್ನು ಸೋಲಿಸಲು ಸಕಲ ರೀತಿಯಲ್ಲಿ ಇಂಡಿಯಾ ಒಕ್ಕೂಟ ಪ್ರಯತ್ನಿಸುತ್ತಿದೆ. ರಾಹುಲ್‌ ಗಾಂಧಿ (Rahul Gandhi) ಅವರು ಭಾರತ್‌ ಜೋಡೋ ನ್ಯಾಯ ಯಾತ್ರೆ (Bharat Jodo Nyay Yatra) ಮೂಲಕ ಜನರ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ, “ಕಾಂಗ್ರೆಸ್‌ ಪಕ್ಷವು ನೆಹರು-ಗಾಂಧಿ ಕುಟುಂಬದ ನಾಯಕತ್ವದಿಂದ ಹೊರಬರಬೇಕು” ಎಂದು ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ (Sharmistha Mukherjee) ಸಲಹೆ ನೀಡಿದ್ದಾರೆ.

ಜೈಪುರ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಶರ್ಮಿಷ್ಠಾ ಮುಖರ್ಜಿ, “ನಾನೊಬ್ಬ ಕಾಂಗ್ರೆಸ್‌ ಬೆಂಬಲಿಗಳಾಗಿ, ದೇಶದ ಜವಾಬ್ದಾರಿಯುತ ನಾಗರಿಕಳಾಗಿ ಕಾಂಗ್ರೆಸ್‌ ಸ್ಥಿತಿಯ ಬಗ್ಗೆ ಮರುಕವಿದೆ. 2014 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲನುಭವಿಸಿತು. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಪಕ್ಷವು ಹಿನ್ನಡೆ ಅನುಭವಿಸಿತು. ಯಾವುದೇ ಒಬ್ಬ ನಾಯಕನ ನೇತೃತ್ವದಲ್ಲಿ ಪಕ್ಷ ಸೋಲನುಭವಿಸಿದೆ ಎಂತಾದರೆ, ಆ ಪಕ್ಷದ ನಾಯಕತ್ವವನ್ನು ಬದಲಿಸಬೇಕು. ನೆಹರು-ಗಾಂಧಿ ಕುಟುಂಬದಿಂದ ಕಾಂಗ್ರೆಸ್‌ ಹೊರಬರಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಹಾಗಂತ ನಾನು ರಾಹುಲ್‌ ಗಾಂಧಿ ನಾಯಕತ್ವವನ್ನು ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಯಾರ ನಾಯಕತ್ವವನ್ನು ಕೂಡ ಒಮ್ಮೆಗೆ ವಿಶ್ಲೇಷಣೆ ಮಾಡಬಾರದು. ನನ್ನ ತಂದೆಯ ಬಗ್ಗೆ ಕೇಳಿದರೂ ನಾನು ಎಲ್ಲವನ್ನೂ ವಿಶ್ಲೇಷಿಸಲು ಸಾಧ್ಯವಾಗುವುದಿಲ್ಲ. ಆದರೆ, ಕಾಂಗ್ರೆಸ್‌ ಬೆಂಬಲಿಗಳಾಗಿ ನಾನು ಪಕ್ಷದ ಏಳಿಗೆ ಬಗ್ಗೆ ಕಾಳಜಿ ಹೊಂದಿದ್ದೇನೆ. ಹಾಗಾಗಿ, ನಾಯಕತ್ವ ಬದಲಾವಣೆ ಬಗ್ಗೆ ಪಕ್ಷವು ಆಸಕ್ತಿ ತೋರಿಸಬೇಕು. ನಾಯಕತ್ವ ಬದಲಾವಣೆಯಿಂದ ಪಕ್ಷದ ವರ್ಚಸ್ಸು ಬದಲಾಗಬಹುದು” ಎಂದಿದ್ದಾರೆ.

ಇದನ್ನೂ ಓದಿ: ʼರಾಹುಲ್‌ ಗಾಂಧಿಗೆ ರಾಜಕೀಯದಲ್ಲಿ ಪ್ರಬುದ್ಧತೆ ಇಲ್ಲʼ ಎಂದಿದ್ದರು ಪ್ರಣಬ್‌ ಮುಖರ್ಜಿ!

ನನ್ನ ತಂದೆಗೆ ಬಿಟ್ಟಿಯಾಗಿ ಸ್ಥಾನಮಾನ ಸಿಕ್ಕಿದ್ದಲ್ಲ

ಕಾಂಗ್ರೆಸ್‌ ಕುರಿತು ಶರ್ಮಿಷ್ಠಾ ಅವರು ನೀಡಿದ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿದ್ದು, “ಪ್ರಣಬ್‌ ಮುಖರ್ಜಿ ಅವರು ರಾಜಕೀಯ ಏಳಿಗೆ ಹೊಂದಿದ್ದು ಕಾಂಗ್ರೆಸ್‌ ಹಾಗೂ ನೆಹರು-ಗಾಂಧಿ ಕುಟುಂಬದ ಆಶೀರ್ವಾದದಿಂದ” ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದಾರೆ. ‌

ಇದಕ್ಕೆ ಪ್ರತಿಕ್ರಿಯಿಸಿದ ಶರ್ಮಿಷ್ಠಾ ಮುಖರ್ಜಿ, “ನನ್ನ ತಂದೆಗೆ ಕಾಂಗ್ರೆಸ್‌ ಯಾವುದೇ ಜವಾಬ್ದಾರಿಯನ್ನು ಬಿಟ್ಟಿಯಾಗಿ ಕೊಟ್ಟಿದ್ದಲ್ಲ. ನನ್ನ ತಂದೆಯು ಗೌರವ, ಸ್ಥಾನವನ್ನು ಗಳಿಸಿಕೊಂಡಿದ್ದೇ ಹೊರತು, ದಾನವಾಗಿ ಪಡೆದುಕೊಂಡಿದ್ದಲ್ಲ. ಅಷ್ಟಕ್ಕೂ, ಈಗ ಕಾಂಗ್ರೆಸ್‌ಗೆ ಯಾವ ಸಿದ್ಧಾಂತವಿದೆ? ಚುನಾವಣೆ ಬಂದಾಗ ಶಿವನ ದೇವಾಲಯಕ್ಕೆ ಹೋಗುವುದು ಸಿದ್ಧಾಂತವೇ” ಎಂದು ಪ್ರಶ್ನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Viral Video: ರೈಲಿನಲ್ಲಿ ಊಟ ಸೇವಿಸುವ ಮುನ್ನ ಎಚ್ಚರ…ಎಚ್ಚರ..! ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

Viral Video:ರೈಲು ಪ್ರಯಾಣಿಕರೊಬ್ಬರು ರೈಲಿನಲ್ಲಿ ಊಟ ಆರ್ಡರ್‌ ಮಾಡಿದ್ದರು. ಅನ್ನ, ಸಾಂಬಾರ್‌, ದಾಲ್‌ ಹಾಗೂ ಎರಡು ವಿಧದ ಪಲ್ಯವನ್ನು ಊಟದಲ್ಲಿ ಬಯಸಿದ್ದರು. ಊಟ ಬರುತ್ತಿದ್ದಂತೆ ಬಹಳ ಉತ್ಸಾಹದಿಂದ ಊಟದ ಬಾಕ್ಸ್‌ ತೆರೆಯುತ್ತಿದ್ದಂತೆ ಅದರಲ್ಲಿದ್ದ ಗುಲಾಬ್‌ ಜಾಮೂನಿನಲ್ಲಿ ಜೀವಂತ ಜಿರಳೆ ಇರುವುದನ್ನು ಕಂಡು ಪ್ರಯಾಣಿಕರು ಹೌಹಾರಿದ್ದಾರೆ.

VISTARANEWS.COM


on

Viral Video
Koo

ನವದೆಹಲಿ: ರೈಲು ಪ್ರಯಾಣಿಕರೇ ಎಚ್ಚರ…ಎಚ್ಚರ.. ರೈಲಿನಲ್ಲಿ ಪೂರೈಸುವ ಆಹಾರಗಳನ್ನು ಸೇವಿಸುವ ಮುನ್ನ ಈ ಸುದ್ದಿಯನ್ನೊಮ್ಮೆ ಓದಿ. ರೈಲಿನಲ್ಲಿ ಶುಚಿ-ರುಚಿಯಾದ ಆಹಾರ ಸಿಗೋದು ಕೊನೇಯ ಕ್ಷಣದಲ್ಲಿ ಟಿಕೆಟ್‌ ಸಿಗುವಷ್ಟೇ ಕಷ್ಟಸಾಧ್ಯ. ಅಂತಹದ್ದೇ ಒಂದು ಘಟನೆ ವರದಿಯಾಗಿದ್ದು, ರೈಲಿನಲ್ಲಿ ಪ್ರಯಾಣಿಕರಿಗೆ ನೀಡಲಾಗಿದ್ದ ಊಟದಲ್ಲಿ ಜೀವಂತ ಜಿರಳೆ ಪತ್ತೆಯಾಗಿದೆ. ಈ ವಿಡಿಯೋ(Viral Video)ವನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣ(Social Media)ದಲ್ಲಿ ಹಂಚಿಕೊಂಡಿದ್ದು, ಬಹಳ ವೈರಲ್‌ ಆಗುತ್ತಿದೆ.

ವಿಡಿಯೋದಲ್ಲಿ ಏನಿದೆ?

ರೈಲು ಪ್ರಯಾಣಿಕರೊಬ್ಬರು ರೈಲಿನಲ್ಲಿ ಊಟ ಆರ್ಡರ್‌ ಮಾಡಿದ್ದರು. ಅನ್ನ, ಸಾಂಬಾರ್‌, ದಾಲ್‌ ಹಾಗೂ ಎರಡು ವಿಧದ ಪಲ್ಯವನ್ನು ಊಟದಲ್ಲಿ ಬಯಸಿದ್ದರು. ಊಟ ಬರುತ್ತಿದ್ದಂತೆ ಬಹಳ ಉತ್ಸಾಹದಿಂದ ಊಟದ ಬಾಕ್ಸ್‌ ತೆರೆಯುತ್ತಿದ್ದಂತೆ ಅದರಲ್ಲಿದ್ದ ಗುಲಾಬ್‌ ಜಾಮೂನಿನಲ್ಲಿ ಜೀವಂತ ಜಿರಳೆ ಇರುವುದನ್ನು ಕಂಡು ಪ್ರಯಾಣಿಕರು ಹೌಹಾರಿದ್ದಾರೆ.

ತಕ್ಷಣ ಕೋಪಗೊಂಡ ಪ್ರಯಾನಿಕ ಆ ಊಟದ ವಿಡಿಯೋ ಮಾಡಿ ರೆಡ್ಡಿಟ್‌ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾರೆ. ವಿಡಿಯೋ ಶೇರ್‌ ಆಗುತ್ತಿದ್ದಂತೆ ರೈಲ್ವೆ ಸಿಬ್ಬಂದಿಯ ಭಾರೀ ನಿರ್ಲಕ್ಷ್ಯಕ್ಕೆ ನೆಟ್ಟಿಗರು ಅಕ್ರೋಸ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕ ಆರೋಗ್ಯದ ಜೊತೆ ಆಟವಾಡುತ್ತಿದ್ದೀರಾ ಎಂದು ಕಿಡಿ ಕಾರಿದ್ದಾರೆ. ಇನ್ನು ಕೆಲವರು ಇದೊಂದು ದುಬಾರಿ ಮಾಂಸಾಹಾರಿ ಊಟ ಎಂದು ವ್ಯಂಗ್ಯವಾಡಿದ್ದಾರೆ.

Cockroach in food
byu/Aggravating-Wrap-266 inindianrailways

ರೈಲಿನಲ್ಲಿ ಇಂತಹ ಅನುಭವ ಮೊದಲೇನಲ್ಲ. ಕಾಶಿ ಎಕ್ಸ್‌ಪ್ರೆಸ್‌ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಇತ್ತೀಚೆಗೆ ಇದೇ ರೀತಿಯ ಅನುಭವವನ್ನು ಹಂಚಿಕೊಂಡಿದ್ದರು. ಪರ್ವೇಜ್ ಹಶ್ಮಿ ಅವರು ತಮ್ಮ ಊಟದಲ್ಲಿ ಕೀಟ ಕಂಡುಬಂದ ನಂತರ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ದಾಲ್ ಮತ್ತು ಸಬ್ಜಿಯಲ್ಲಿ ಹುಳ ಪತ್ತೆಯಾಗಿರುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದರು. ಈ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಟ್ಯಾಗ್ ಮಾಡಿದ್ದರು.

ಇನ್ನು ಕೆಲವು ದಿನಗಳ ಹಿಂದೆ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲೂ ಇಂತಹ ಒಂದು ಘಟನೆ ವರದಿಯಾಗಿತ್ತು. ಪ್ರಯಾಣಿಕರೊಬ್ಬರ ಊಟದಲ್ಲಿ ಸತ್ತ ಜಿರಳೆ ಪತ್ತೆ ಆಗಿದ್ದು. ಆ ಪ್ರಯಾಣಿಕರು ಊಟ, ಸತ್ತ ಜಿರಳೆ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ವೈರಲ್ ಆಗಿತ್ತು. ಡಾ. ಶುಭೇಂದು ಕೇಶಾರಿ ಅವರು, ‘ಫೆಬ್ರವರಿ 1ರಂದು ರೈಲು ನಂ. 20173 RKMP ನಲ್ಲಿ ಐಆರ್‌ಸಿಸಿ ಅವರು ನೀಡಿದ ಆಹಾರದ ಪ್ಯಾಕೆಟ್‌ನಲ್ಲಿ ಸತ್ತ ಜಿರಳೆಯನ್ನು ನೋಡಿ ನಾನು ಆಘಾತಕ್ಕೊಳಗಾಗಿದ್ದೇನೆ, ರಾಣಿ ಕಮಲಾಪತಿಯಿಂದ ಜಬಲ್‌ಪುರ ಜಂಕ್ಷನ್‌ಗೆ ಪ್ರಯಾಣಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಬಳಿಕವೇ ಘಟನೆ ಮುನ್ನೆಲೆಗೆ ಬಂದಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ತಮ್ಮ ಐಷಾರಾಮಿ ಸೇವೆಗಳು, ಉತ್ತಮ ಗುಣಮಟ್ಟದ ಸುರಕ್ಷತೆ ಮತ್ತು ವೇಗಕ್ಕೆ ಹೆಸರುವಾಸಿ ಆಗಿದೆ. ಇನ್ನೂ ಈ ಘಟನೆ ಗಮನಿಸಿರುವ IRCTC ತನ್ನ X ಹ್ಯಾಂಡಲ್ ಮೂಲಕ ವೈರಲ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ಆದ ಪ್ರಮಾದಕ್ಕೆ, ಅನಾನುಕೂಲತೆಗೆ ಪ್ರಯಾಣಿಕರಿಗೆ ಕ್ಷಮೆ ಕೇಳಿದೆ.

ಇದನ್ನೂ ಓದಿ: Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

Continue Reading

ದೇಶ

Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

Narendra Modi: ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಎನ್‌ಡಿಎ ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ(Narendra Modi) ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಇನ್ನು ಈ ಕಾರ್ಯಕ್ರಮದಲ್ಲಿ ದೇಶ-ವಿದೇಶದ ಗಣ್ಯರು ಭಾಗಿಯಾಗಲಿದ್ದಾರೆ.

ಭಾನುವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಏಳು ವಿದೇಶಿ ನಾಯಕರು ಸೇರಿದಂತೆ ಒಟ್ಟು 8000 ಗಣ್ಯರು ಉಪಸ್ಥಿತರಿರಲಿದ್ದಾರೆ. ಇನ್ನು ಗಣ್ಯರಲ್ಲಿ ವಿವಿಧ ವೃತ್ತಿಪರರು, ಸಾಂಸ್ಕೃತಿಕ ಕಲಾವಿದರು ಸೇರಿದ್ದಾರೆ. ಇನ್ನು ಇಂದು ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

7 ವಿದೇಶಿ ನಾಯಕರ ಉಪಸ್ಥಿತಿ

ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ದೆಹಲಿಗೆ ಬಂದಿಳಿದ ಶೇಖ್‌ ಹಸೀನಾ

ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಅಬಿನಂದನೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಅವರನ್ನು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಹೀಗಾಗಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಬಾಂಗ್ಲಾದಿಂದ ದೆಹಲಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ನಂತರ ಜೂನ್ 10 ರಂದು ವಾಪಸಾಗಲಿದ್ದಾರೆ.

ಇದಕ್ಕೂ ಮೊದಲು ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಎನ್‌ಡಿಎ ನಾಯಕನಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಈ ವೇಳೆ ಎನ್‌ಡಿಎ ಮಿತ್ರಪಕ್ಷಗಳ ನಾಯಕರು ಸಹ ಮೋದಿಗೆ ಸಾಥ್‌ ನೀಡಿದ್ದರು. ಇನ್ನು ನೆರೆಯ ರಾಷ್ಟ್ರಗಳ ಜೊತೆಗಿನ ಬಾಂದವ್ಯ ಹೆಚ್ಚಿಸುವ ನಿಟ್ಟಿನಲ್ಲಿ ಭಾರತದ ನೈಬರ್‌ಹುಡ್ ಫಸ್ಟ್ ನೀತಿಯ ಭಾಗವಾಗಿ ಈ ನಾಯಕರನ್ನು ಆಹ್ವಾನಿಸಿದೆ. ಮಾಲ್ಢೀವ್ಸ್‌ ಅಧ್ಯಕ್ಷ ಮುಯಿಝು ಭಾರತಕ್ಕೆ ಬಂದರೆ, ಎರಡು ಸಾಂಪ್ರದಾಯಿಕ ಪಾಲುದಾರರ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading

ಪ್ರಮುಖ ಸುದ್ದಿ

Modi 3.0 Cabinet: ಮೋದಿ 3ನೇ ಅವಧಿಯಲ್ಲಿ ಯಾರಿಗೆಲ್ಲ ಮಂತ್ರಿ ಭಾಗ್ಯ? ರೇಸ್‌ನಲ್ಲಿ ಯಾರಿದ್ದಾರೆ? ಇಲ್ಲಿದೆ ಪಟ್ಟಿ

Modi 3.0 Cabinet: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಯಾರಿಗೆಲ್ಲ ಸಚಿವ ಸ್ಥಾನ ಭಾಗ್ಯ ಸಿಗಲಿದೆ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿದೆ. ಸಂಪುಟ ದರ್ಜೆ ಸಚಿವರನ್ನು ತೀರ್ಮಾನಿಸುವ ನಿಟ್ಟಿನಲ್ಲಿ ಇಂದು (ಶನಿವಾರ) ಮತ್ತೆ ಎನ್‌ಡಿಎ ಸಂಸದರ ಸಭೆ ಕರೆದಿದೆ. ಇಲ್ಲಿದೆ ನೋಡಿ ಸಚಿವ ಸ್ಥಾನ ಅಲಂಕರಿಸಲಿರುವ ಸಂಭಾವ್ಯ ನಾಯಕರ ಪಟ್ಟಿ.

VISTARANEWS.COM


on

Modi 3.0 Cabinet
Koo

ನವದೆಹಲಿ: ಬಹುಮತ ಪಡೆದ ಎನ್‌ಡಿಎ (NDA) ಮತ್ತೊಂದು ಅವಧಿಗೆ ಸರ್ಕಾರ ರಚಿಸಲಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಯಾರಿಗೆಲ್ಲ ಸಚಿವ ಸ್ಥಾನ ಭಾಗ್ಯ ಸಿಗಲಿದೆ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿದೆ. ಸಂಪುಟ ದರ್ಜೆ ಸಚಿವರನ್ನು ತೀರ್ಮಾನಿಸುವ ನಿಟ್ಟಿನಲ್ಲಿ ಎನ್‌ಡಿಎ ಸಂಸದರ ಸಭೆ ನಡೆಸಿದೆ (Modi 3.0 Cabinet).

ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಪ್ರಧಾನಿ ಮೋದಿ ಅವರೊಂದಿಗೆ ಹಲವು ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜವಾಹರಲಾಲ್ ನೆಹರೂ ನಂತರ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಈ ಐತಿಹಾಸಿಕ ಸಮಾರಂಭಕ್ಕೆ ವಿವಿಧ ದೇಶಗಳ ಗಣ್ಯರೂ ಹಾಜರಾಗಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದೆ. ಇನ್ನು ಚಂದ್ರಬಾಬು ನಾಯ್ಡು ಅವರ ಟಿಡಿಪಿ 16 ಸ್ಥಾನಗಳನ್ನು, ನಿತೀಶ್ ಕುಮಾರ್ ಅವರ ಜೆಡಿಯು (12), ಏಕನಾಥ್ ಶಿಂಧೆ ಅವರ ಶಿವಸೇನೆ (7) ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) (5) ಸ್ಥಾನಗಳನ್ನು ಗೆದ್ದುಕೊಂಡು ಸರ್ಕಾರ ರಚಿಸಲು ಎನ್‌ಡಿಎಗೆ ಬೆಂಬಲ ನೀಡಿವೆ. ಹೀಗಾಗಿ ಇದೀಗ ಮೋದಿ ಸಂಪುಟದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ಭಾಗ್ಯ ಲಭಿಸಲಿದೆ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿದೆ.

ಮೋದಿ ಸಂಪುಟ ಸೇರುವ ಸಂಭ್ಯಾವ ಸಚಿವರು

ಬಿಜೆಪಿ

  • ಅಮಿತ್ ಶಾ (ಗುಜರಾತ್ )
  • ರಾಜನಾಥ್ ಸಿಂಗ್ (ಉತ್ತರ ಪ್ರದೇಶ)
  • ನಿತಿನ್ ಗಡ್ಕರಿ (ಮಹಾರಾಷ್ಟ್ರ )
  • ನಿರ್ಮಲಾ ಸೀತಾರಾಮನ್ (ರಾಜ್ಯಸಭೆ )
  • ಜೈ ಶಂಕರ್ (ರಾಜ್ಯಸಭೆ )
  • ಶಿವರಾಜ್ ಸಿಂಗ್ ಚೌಹಾನ್ (ಮಧ್ಯಪ್ರದೇಶ )
  • ಪಿಯೂಷ್‌ ಗೋಯಲ್‌ (ಮಹಾರಾಷ್ಟ್ರ )
  • ಸ್ಮೃತಿ ಇರಾನಿ (ಸೋಲು, ರಾಜ್ಯಸಭೆಗೆ ಆಯ್ಕೆಯಾಗಬಹುದು)
  • ಜ್ಯೋತಿರಾದಿತ್ಯ ಸಿಂಧಿಯಾ (ಮಧ್ಯಪ್ರದೇಶ )
  • ಅರ್ಜುನ್ ಮುಂಡಾ (ಜಾರ್ಖಂಡ್ )
  • ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ )
  • ಅನುರಾಗ್ ಠಾಕೂರ್ (ಹಿಮಾಚಲ ಪ್ರದೇಶ )
  • ಪರಶೋತ್ತಮ್ ರೂಪಲಾ (ರಾಜ್ಯಸಭೆ )
  • ಪ್ರಲ್ಹಾದ್ ಜೋಶಿ (ಕರ್ನಾಟಕ )
  • ಗಿರಿರಾಜ್ ಸಿಂಗ್ (ಬಿಹಾರ)
  • ಬಾನ್ಸೂರಿ ಸ್ವರಾಜ್ (ದೆಹಲಿ)
  • ಗಜೇಂದ್ರ ಸಿಂಗ್ ಶೇಖಾವತ್ (ರಾಜಸ್ಥಾನ)
  • ಭೂಪೇಂದ್ರ ಯಾದವ್ (ರಾಜಸ್ಥಾನ)

ಮೈತ್ರಿ ಪಕ್ಷದ ನಾಯಕರು

  • ಚಿರಾಗ್ ಪಾಸ್ವಾನ್ ( ಎಲ್‌ಜೆಪಿ- ಬಿಹಾರ)
  • ಲಾಲನ್ ಸಿಂಗ್ (ಜೆಡಿಯು- ಬಿಹಾರ)
  • ಎಚ್.ಡಿ.ಕುಮಾರಸ್ವಾಮಿ (ಜೆಡಿಎಸ್- ಕರ್ನಾಟಕ)
  • ಅನುಪ್ರಿಯಾ ಪಟೇಲ್ (ಅಪ್ನಾದಳ್- ಉತ್ತರಪ್ರದೇಶ)
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)

ಎನ್‌ಡಿಎ ಮೈತ್ರಿಕೂಟದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ (ಜೂನ್‌ 7) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಬೆಂಬಲ ನೀಡಿರುವ ಪತ್ರದೊಂದಿಗೆ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದ ಅವರು ಹಕ್ಕು ಮಂಡಿಸಿದ್ದಾರೆ. ಇನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿ ಅವರಿಗೆ ದ್ರೌಪದಿ ಮುರ್ಮು ಅವರು ಸಕ್ಕರೆ ಮಿಶ್ರಣ ಆಗಿರುವ ಮೊಸರನ್ನು ತಿನ್ನಿಸಿ, ಶುಭ ಕೋರಿದ್ದಾರೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading

ದೇಶ

Narendra Modi: ಮೋದಿ ಪ್ರಮಾಣವಚನ; ಇಂದಿನ ಕಾರ್ಯಕ್ರಮ ಏನೇನು? ಹೇಗಿದೆ ಭದ್ರತೆ, ಸಿದ್ಧತೆ?

Narendra Modi: ನರೇಂದ್ರ ಮೋದಿ ಅವರು ಇಂದು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ದೆಹಲಿಯಲ್ಲಿ ಅಭೂತಪೂರ್ವ ಸಿದ್ಧತೆಯ ಜತೆಗೆ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ದೇಶ-ವಿದೇಶಗಳ ಸಾವಿರಾರು ಗಣ್ಯರು ಮೋದಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಅಂದಹಾಗೆ, ಪ್ರಮಾಣವಚನದ ಶಿಷ್ಟಾಚಾರ ಹೇಗಿರುತ್ತದೆ? ಮೋದಿ ಇಂದು ಏನೆಲ್ಲ ಮಾಡಲಿದ್ದಾರೆ ಎಂಬುದರ ಸಂಕ್ಷಿಪ್ತ ಮಾಹಿತಿ ಹೀಗಿದೆ…

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಇಂದು (ಜೂನ್‌ 9) ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಜವಾಹರ ಲಾಲ್‌ ನೆಹರು ಅವರ ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಖ್ಯಾತಿಗೆ ಭಾಜನರಾಗಲಿದ್ದಾರೆ. ಇಂದು ಸಂಜೆ 7.15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ಜತೆಗೆ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಹಾಗಾದರೆ, ಇಡೀ ದಿನ ಏನೆಲ್ಲ ಕಾರ್ಯಕ್ರಮ ನಡೆಯಲಿವೆ? ಮೋದಿ ಏನೆಲ್ಲ ಮಾಡಲಿದ್ದಾರೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

ಗಾಂಧೀಜಿ ಸಮಾಧಿ ಸ್ಥಳಕ್ಕೆ ಭೇಟಿ

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಮೊದಲು ಮಹಾತ್ಮ ಗಾಂಧೀಜಿ ಅವರ ಸಮಾಧಿಸ್ಥಳವಾದ ರಾಜ್‌ಘಾಟ್‌ಗೆ ತೆರಳಿ ನಮನ ಸಲ್ಲಿಸಲಿದ್ದಾರೆ. ಇದಾದ ನಂತರ ತಮ್ಮ ರಾಜಕೀಯ ಗುರುವಾದ ಅಟಲ್‌ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳವಾದ ಸದೈವ ಅಟಲ್‌ಗೆ ಭೇಟಿ ನೀಡಿ, ಅವರಿಗೆ ಪುಷ್ಪನಮನ ಸಲ್ಲಿಸಲಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಭವನ ಸಜ್ಜು

ಸಂಜೆ 7.15ಕ್ಕೆ ಕಾರ್ಯಕ್ರಮ

ಭಾನುವಾರ ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ. ಸುಮಾರು 8 ಸಾವಿರ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಸಚಿವರಾಗಿ ಪ್ರಮಾಣವಚನ

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಜತೆಗೆ ಟಿಡಿಪಿಯ ರಾಮ್‌ ಮೋಹನ್‌ ನಾಯ್ಡು, ಲಾಲನ್‌ ಸಿಂಗ್‌, ಸಂಜಯ್‌ ಝಾ, ಜೆಡಿಯುನ ರಾಮನಾಥ್‌ ಠಾಕೂರ್‌, ಲೋಕ ಜನ ಶಕ್ತಿ ಪಕ್ಷದ ಚಿರಾಗ್‌ ಪಾಸ್ವಾನ್‌, ಕರ್ನಾಟಕದ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿಗಿ ಬಂದೋಬಸ್ತ್‌

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ದೆಹಲಿಯ ಎಲ್ಲೆಡೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಸುಮಾರು 500 ಸಿಸಿಟಿವಿಗಳ ಕಣ್ಗಾವಲು ಇದೆ. ನೋ ಫ್ಲೈಯಿಂಗ್‌ ಜೋನ್‌ ಎಂದು ಘೋಷಿಸಿದ ಕಾರಣ ಯಾವುದೇ ಡ್ರೋನ್‌ಗಳ ಹಾರಾಟ ನಡೆಸುವಂತಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಷ್ಟ್ರಪತಿ ಭವನಕ್ಕೂ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading
Advertisement
Uttarakaanda Movie in bhavana menon
ಸ್ಯಾಂಡಲ್ ವುಡ್8 mins ago

Uttarakaanda Movie: ‘ಉತ್ತರಕಾಂಡ’ದ ವೀರವ್ವ ಪಾತ್ರದಲ್ಲಿ ಭಾವನಾ‌ ಮೆನನ್!

AUS vs ENG
ಕ್ರೀಡೆ12 mins ago

AUS vs ENG: ಆಸೀಸ್​ ಬ್ಯಾಟಿಂಗ್​ ಆರ್ಭಟಕ್ಕೆ ಮಣಿದ ಹಾಲಿ ಚಾಂಪಿಯನ್​ ಇಂಗ್ಲೆಂಡ್​

Robbery Case
ಬೆಂಗಳೂರು26 mins ago

Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

Aishwarya Arjun Marriage Haldi Ceremony
ಟಾಲಿವುಡ್27 mins ago

Aishwarya Arjun:  ಅರ್ಜುನ್ ಸರ್ಜಾ ಪುತ್ರಿಯ ಮದುವೆ ಸಮಾರಂಭ ಶುರು: ಹಳದಿ ಶಾಸ್ತ್ರದ ಫೋಟೊ ವೈರಲ್‌!

Viral Video
ದೇಶ33 mins ago

Viral Video: ರೈಲಿನಲ್ಲಿ ಊಟ ಸೇವಿಸುವ ಮುನ್ನ ಎಚ್ಚರ…ಎಚ್ಚರ..! ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

IND vs PAK
ಪ್ರಮುಖ ಸುದ್ದಿ42 mins ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

Narendra Modi
ದೇಶ1 hour ago

Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

Modi 3.0 Cabinet
ಪ್ರಮುಖ ಸುದ್ದಿ2 hours ago

Modi 3.0 Cabinet: ಮೋದಿ 3ನೇ ಅವಧಿಯಲ್ಲಿ ಯಾರಿಗೆಲ್ಲ ಮಂತ್ರಿ ಭಾಗ್ಯ? ರೇಸ್‌ನಲ್ಲಿ ಯಾರಿದ್ದಾರೆ? ಇಲ್ಲಿದೆ ಪಟ್ಟಿ

Eating Style
ಲೈಫ್‌ಸ್ಟೈಲ್2 hours ago

Eating Style: ಉಣ್ಣುವ ರೀತಿ ನಾವು ಎಂಥವರು ಎನ್ನುವುದನ್ನು ಬಯಲು ಮಾಡುತ್ತದೆ! ಅದು ಹೇಗೆ?

Narendra Modi
ದೇಶ2 hours ago

Narendra Modi: ಮೋದಿ ಪ್ರಮಾಣವಚನ; ಇಂದಿನ ಕಾರ್ಯಕ್ರಮ ಏನೇನು? ಹೇಗಿದೆ ಭದ್ರತೆ, ಸಿದ್ಧತೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌