Site icon Vistara News

Gujarat Election | ಗುಜರಾತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 125 ಸೀಟು: ಗೆಹ್ಲೋಟ್ ವಿಶ್ವಾಸ

Ashok Gehlot and Sachin Pilot

ಸೂರತ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ (Gujarat Election) ಕಾಂಗ್ರೆಸ್ 125 ಸೀಟುಗಳನ್ನು ಗೆಲ್ಲುವ ವಿಶ್ವಾಸವನ್ನು ರಾಜಸ್ಥಾನ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರವು ಕೋವಿಡ್-19 ಸಾಂಕ್ರಾಮಿಕ ಮತ್ತು ಆರ್ಥಿಕತೆಯನ್ನು ಸರಿಯಾಗಿ ನಿರ್ವಹಿಸಿಲ್ಲ. ಅದೇ ಕಾರಣಕ್ಕೆ ಜನರು ಬಿಜೆಪಿ ಸರ್ಕಾರದ ವಿರುದ್ಧ ಇದ್ದಾರೆ. ಹಾಗಾಗಿ, ಈ ಬಾರಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ನಮ್ಮ ಪಕ್ಷವು ಸುಮಾರು 125 ಸೀಟು ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಮೋರ್ಬಿ ಬ್ರಿಡ್ಜ್ ದುರಂತ ಸಂಭವಿಸಿತು. ಈ ಕುರಿತು ನಾವು ಹಾಲಿ ಅಥವಾ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಒತ್ತಾಯಿಸಿದೆವು. ಆದರೆ, ಬಿಜೆಪಿಯವರು ಆ ಕೆಲಸ ಮಾಡಲಿಲ್ಲ. ಅಂತಿಮವಾಗಿ ಗುಜರಾತ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಕಳ್ಳಭಟ್ಟಿ ಸಾರಾಯಿಯಿಂದ ಜನರು ಸಾಯುತ್ತಿದ್ದಾರೆ. ಸರ್ಕಾರದ ರಾಜಕೀಯ ಗಿಮಿಕ್‌ಗಳು ಈ ಬಾರಿ ಕೆಲಸ ಮಾಡುವುದಿಲ್ಲ. ಹಾಗಾಗಿ, ಅಚ್ಚರಿ ಫಲಿತಾಂಶವು ಖಂಡಿತ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಿರಂತರವಾಗಿ ಗುಜರಾತ್‌ಕ್ಕೆ ಭೇಟಿ ನೀಡುತ್ತಿದ್ದಾರೆ. ಇದರರ್ಥ, ಈ ಬಾರಿ ಗುಜರಾತ್‌ನಲ್ಲಿ ಬಿಜೆಪಿ ಖಂಡಿತವಾಗಿಯೂ ಸೋಲಲಿದೆ ಎಂಬುದು ಅವರಿಗೆ ಗೊತ್ತಾಗಿದೆ. ಹಾಗಾಗಿ, ವಾರಕ್ಕೊಂದು ಸಾರಿ ಅವರು ಭೇಟಿ ನೀಡುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಿದರು.

ಇದನ್ನೂ ಓದಿ | Opinion Poll | ಗುಜರಾತ್‌, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಅಧಿಕಾರ? ಸಮೀಕ್ಷೆ ಹೇಳುವುದೇನು?

Exit mobile version