Coronavirus | ಕೋವಿಡ್‌ ಪ್ರೊಟೋಕಾಲ್‌ ಗಾಳಿಗೆ ತೂರಿದ ರಾಹುಲ್‌ ಗಾಂಧಿ, ಮಾಸ್ಕ್‌ ಇಲ್ಲದೇ ಪಾದಯಾತ್ರೆ - Vistara News

ಕೋವಿಡ್

Coronavirus | ಕೋವಿಡ್‌ ಪ್ರೊಟೋಕಾಲ್‌ ಗಾಳಿಗೆ ತೂರಿದ ರಾಹುಲ್‌ ಗಾಂಧಿ, ಮಾಸ್ಕ್‌ ಇಲ್ಲದೇ ಪಾದಯಾತ್ರೆ

ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಭಾರತ್ ಜೋಡೋ ಪಾದಯಾತ್ರೆ ನವ ದೆಹಲಿಯನ್ನು ಪ್ರವೇಶಿಸಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಭರವಸೆ ನೀಡಿದಂತೆ ಮಾಸ್ಕ್‌ ಧಾರಣೆ, ಸಾಮಾಜಿಕ ಅಂತರ ಇತ್ಯಾದಿಗಳು ಈ ಯಾತ್ರೆಯಲ್ಲಿ ಕಂಡುಬಂದಿಲ್ಲ.

VISTARANEWS.COM


on

bharat jodo in delhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಭಾರತ್ ಜೋಡೋ ಪಾದಯಾತ್ರೆ ನವ ದೆಹಲಿಯನ್ನು ಪ್ರವೇಶಿಸಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಭರವಸೆ ನೀಡಿದಂತೆ ಮಾಸ್ಕ್‌ ಧಾರಣೆ, ಸಾಮಾಜಿಕ ಅಂತರ ಇತ್ಯಾದಿಗಳು ಈ ಯಾತ್ರೆಯಲ್ಲಿ ಕಂಡುಬಂದಿಲ್ಲ.

ಚೀನಾದಲ್ಲಿ ಕೋವಿಡ್‌ನ ಹೊಸ ಓಮಿಕ್ರಾನ್‌ ರೂಪಾಂತರಿಯಿಂದಾಗಿ ಸೃಷ್ಟಿಯಾಗಿರುವ ಸಾಂಕ್ರಾಮಿಕ ಅಲೆಯ ಹಿನ್ನೆಲೆಯಲ್ಲಿ, ಭಾರತದಲ್ಲಿ ಅದನ್ನು ತಡೆಯಲು ಕೇಂದ್ರ ಸರ್ಕಾರ ಏರ್‌ಪೋರ್ಟ್‌ಗಳಲ್ಲಿ ಬಿಗಿ ತಪಾಸಣೆ, ಯಾದೃಚ್ಛಿಕ ಪರೀಕ್ಷೆ ಇತ್ಯಾದಿಗಳನ್ನು ಏರ್ಪಡಿಸಿದೆ. ಇದೇ ಹಿನ್ನೆಲೆಯಲ್ಲಿ, ಹಿಮಾಚಲ ಪ್ರದೇಶದಿಂದ ದೆಹಲಿಯತ್ತ ಆಗಮಿಸಿರುವ ಭಾಋತ್‌ ಜೋಡೋ ಪಾದಯಾತ್ರೆಯಲ್ಲಿ ಕೋವಿಡ್‌ ತಡೆ ಉಪಕ್ರಮಗಳನ್ನು ಅಳವಡಿಸಿಕೊಳ್ಳುವಂತೆ, ಇಲ್ಲವೇ ಪಾದಯಾತ್ರೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು.

ಇದು ಕಾಂಗ್ರೆಸ್‌ನ ಪಾದಯಾತ್ರೆಯನ್ನು ನಿಲ್ಲಿಸಲು ಆಡಳಿತ ಪಕ್ಷ ಮಾಡುತ್ತಿರುವ ಹುನ್ನಾರ, ಪಾದಯಾತ್ರೆ ನಿಲ್ಲಿಸಲು ಬಿಜೆಪಿ ಕಾರಣಗಳನ್ನು ಹುಡುಕುತ್ತಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು. ತದನಂತರ, ಪಾದಯಾತ್ರೆಯಲ್ಲಿ ಎಲ್ಲರಿಗೂ ಮಾಸ್ಕ್‌ ಧರಿಸುವ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಭರವಸೆ ನೀಡಿದ್ದರು.

ಇದನ್ನೂ ಓದಿ | coronavirus | ಒಮಿಕ್ರಾನ್ ಬಿಎಫ್.7ನಿಂದ ಭಾರತೀಯರಿಗೆ ಗಂಭೀರ ಅಪಾಯ ಇಲ್ಲ ಎಂದ ತಜ್ಞರು

ಆದರೆ ನವ ದೆಹಲಿಯನ್ನು ಪ್ರವೇಶಿಸಿರುವ ಪಾದಯಾತ್ರೆಯ ಫೋಟೋ ಅಥವಾ ವಿಡಿಯೋಗಳನ್ನು ಪರಿಶೀಲಿಸಲಾಗಿ, ಅಂಥ ಯಾವುದೇ ಮಾಸ್ಕ್‌ ಧಾರಣೆ ಕಂಡುಬಂದಿಲ್ಲ. ರಾಹುಲ್‌ ಗಾಂಧಿಯವರೂ ಸೇರಿದಂತೆ ಹಲವು ಪ್ರಮುಖ ನಾಯಕರು ಹೆಗಲಿಗೆ ಹೆಗಲು ತಾಗಿಸಿ ನಡೆಯುತ್ತಿದ್ದು, ಯಾರೂ ಮಾಸ್ಕ್‌ ಧರಿಸಿಲ್ಲ.

ನವ ದೆಹಲಿಗೆ ಮುನ್ನ ಪಾದಯಾತ್ರೆ ಹಿಮಾಚಲ ಪ್ರದೇಶ ರಾಜ್ಯವನ್ನು ಹಾದು ಬಂದಿದೆ. ಅಲ್ಲಿನ ಮುಖ್ಯಮಂತ್ರಿ ಸುಕ್ವಿಂದರ್‌ ಸಿಂಗ್‌ ಸುಖು ಅವರು ಕೋವಿಡ್‌ ಸೋಂಕಿತರಾಗಿದ್ದಾರೆ. ಯಾತ್ರೆಯಲ್ಲಿ ಅವರು ಹಾಗೂ ರಾಹುಲ್‌ ಗಾಂಧಿ ಅಕ್ಕಪಕ್ಕದಲ್ಲಿ ನಡೆದಿದ್ದರು. ಈ ಹಿನ್ನೆಲೆಯಲ್ಲಿ, ರಾಹುಲ್‌ ಅವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದಾರೆಯೇ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರು ಪ್ರಶ್ನಿಸಿದ್ದರು.

ಇದನ್ನೂ ಓದಿ | Coronavirus | ಭಾರತದಲ್ಲಿ ಹೊಸ ರೂಪಾಂತರಿಯ ಅಲೆ ಬಾರದು: ವೈರಾಣುತಜ್ಞೆ ಅಭಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋರ್ಟ್

Padarayanapura Riots : ಪಾದರಾಯನಪುರ ಗಲಭೆ; ಪ್ರಕರಣ ರದ್ದತಿಗೆ ಹೈಕೋರ್ಟ್‌ ಕೊಟ್ಟ ಕಾರಣಗಳೇನು

Padarayanapura Riots : ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದವರನ್ನು ವಶಕ್ಕೆ ಪಡೆಯಲು ಹೋದ ಅಧಿಕಾರಿಗಳನ್ನೇ ಅಟ್ಟಾಡಿಸಿದ ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲ ಕೇಸುಗಳನ್ನು ಹೈಕೋರ್ಟ್‌ ರದ್ದುಪಡಿಸಿದೆ.

VISTARANEWS.COM


on

Padarayanapura Violence
Koo

ಬೆಂಗಳೂರು : 2020ರಲ್ಲಿ ಕೋವಿಡ್-19 ಲಾಕ್ ಡೌನ್ (Covid 19 Lock down) ಸಂದರ್ಭ ಬೆಂಗಳೂರಿನ (Bangalore News) ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ (Padarayanapura Riots) ಸಂಬಂಧಿಸಿ 375 ಮಂದಿ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಗೊಳಿಸಿದೆ. ಆವತ್ತು ಕೋವಿಡ್‌ ನಿಯಮಾವಳಿಗಳನ್ನು ಉಲ್ಲಂಘಿಸಿ (Violation of Covid 19 Rules) ಓಡಾಡುತ್ತಿದ್ದ 51 ಮಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆಯಲು ಹೋದಾಗ ದೊಡ್ಡ ಹಿಂಸಾಚಾರವೇ ನಡೆದಿತ್ತು.

ಸಾಕ್ಷಿಗಳ ಹೇಳಿಕೆಗಳನ್ನು ಒಂದೇ ರೀತಿಯಲ್ಲಿ ದಾಖಲಿಸಲಾಗಿದೆ. ಪೊಲೀಸರು 120ಕ್ಕೂ ಅಧಿಕ ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದರೂ ಸಹ ಗಲಭೆ ನಡೆದಿದೆ ಎನ್ನಲಾದ ಸಮಯದಲ್ಲಿ ಯಾವುದೇ ಆಸ್ತಿ ಪಾಸ್ತಿ ನಷ್ಟವಾಗಿಲ್ಲ, ಪೊಲೀಸರು ಯಾವುದೇ ವಸ್ತು ವಶಪಡಿಸಿಕೊಂಡಿಲ್ಲ. ಹೀಗಾಗಿ ಅಕ್ರಮವಾಗಿ ಗುಂಪುಗೂಡಿ ಬಿಬಿಎಂಪಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಎನ್ನಲಾದ ಆರೋಪದಡಿ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣಗಳನ್ನು ನ್ಯಾಯಾಲಯವು ರದ್ದುಪಡಿಸಿದೆ. ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ನವಾಜ್ ಪಾಷಾ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು  ಮಾನ್ಯ ಮಾಡಿ ಈ ಆದೇಶ ಹೊರಡಿಸಿದೆ.

Padarayanapura Riots : ಪಾದರಾಯನಪುರದಲ್ಲಿ ಅಂದು ಏನಾಗಿತ್ತು?

2020ರ ಏ.19ರಂದು ಸಂಜೆಯ ಸಮಯ ಬಿಬಿಎಂಪಿ ಅಧಿಕಾರಿಗಳು ಕೋವಿಡ್ ಸೋಂಕು ತಗುಲಿದ್ದ 51 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲು ಹೋಗಿದ್ದರು. ಆಗ ಅಲ್ಲಿದ್ದ ಕೆಲವರು ಕೈಯಲ್ಲಿ ಚಾಕು, ದೊಣ್ಣೆ, ರಾಡ್ ಹಿಡಿದುಕೊಂಡು ಆಶಾ ಕಾರ್ಯಕರ್ತರು, ವೈದ್ಯಾಧಿಕಾರಿಗಳು, ಪಾಲಿಕೆ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು. ಆರೋಪಿಗಳು ಚೇರು, ಟೇಬಲ್‌ಗಳನ್ನು ಒಡೆದು ಟೆಂಟ್ ಕಿತ್ತು ಹಾಕಿ ಅಕ್ಕ ಪಕ್ಕದ ರಸ್ತೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟು ಮಾಡಿದ್ದರು.

ಈ ಸಂಬಂಧ ಪ್ರಕರಣಗಳನ್ನು ದಾಖಲಿಸಿ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣಾ ನ್ಯಾಯಾಲಯವು ವಿಚಾರಣೆ ನಡೆಸುತ್ತಿತ್ತು. ಈ ನಡುವೆ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿ ಪ್ರಕರಣ ರದ್ದುಪಡಿಸಲು ಕೋರಿದ್ದರು.

Padarayanapura Violence1

ಪ್ರಾಸಿಕ್ಯೂಷನ್‌ ಮತ್ತು ಪೊಲೀಸರು ದಾಖಲಿಸಿಕೊಂಡಿದ್ದ ದೂರೇನು?

ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರು “2020ರ ಏಪ್ರಿಲ್‌ 19ರಂದು ಸಂಜೆ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಕೋವಿಡ್ ಸೋಂಕು ತಗುಲಿದ್ದ 58 ಮಂದಿಯನ್ನು ವಶಕ್ಕೆ ತೆಗೆದಕೊಳ್ಳಲು ಪಾದರಾಯನಪುರದಲ್ಲಿ ಹೋಗಿದ್ದಾಗ ಅಲ್ಲಿ ಅಕ್ರಮವಾಗಿ ಗುಂಪು ಗೂಡಿದ್ದವರು ಕೈಯಲ್ಲಿ ಚಾಕು, ದೊಣ್ಣೆ ಮತ್ತು ರಾಡ್‌ಗಳನ್ನು ಹಿಡಿದುಕೊಂಡು ಆಶಾ ಕಾರ್ಯಕರ್ತರು, ವೈದ್ಯಾಕಾರಿಗಳು ಹಾಗೂ ಬಿಬಿಎಂಪಿ ಅಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು” ಎಂದು ವಾದಿಸಿದ್ದರು. ಅಲ್ಲದೇ, “ಆರೋಪಿಗಳು ಖುರ್ಚಿ, ಟೇಬಲ್‌ಗಳನ್ನು ಒಡೆದು ಟೆಂಟ್ ಕಿತ್ತು ಹಾಕಿ ಅಕ್ಕ ಪಕ್ಕದ ರಸ್ತೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟು ಮಾಡಿದ್ದರು. ಹೀಗಾಗಿ, ಪ್ರಕರಣ ದಾಖಲಿಸಲಾಗಿತ್ತು” ಎಂದು ತಿಳಿಸಿದ್ದರು.

ಅರ್ಜಿದಾರರ ವಾದ ಏನಾಗಿತ್ತು?

ಅರ್ಜಿದಾರರು, ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ. ತಮ್ಮ ಮನೆ ಬೇರೆ ಕಡೆಯಿವೆ. ನಿಜವಾದ ಆರೋಪಿಗಳನ್ನು ಗುರುತಿಸದೆ ಪೊಲೀಸರು ಸಿಕ್ಕ ಸಿಕ್ಕವರ ಮೇಲೆ ಕೇಸ್ ಹಾಕಿದ್ದಾರೆ. ಪಾಲಿಕೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದಾಗ ಅವರಲ್ಲಿ ಸೋಂಕಿ ತರ ಪಟ್ಟಿಯೇ ಇರಲಿಲ್ಲ. ಗಲಭೆ ನಡೆದಿದೆ ಎಂದು ಹೇಳಿದ್ದರೂ ಯಾರಿಗೂ ಗಾಯವಾಗಿಲ್ಲ. ಹಾಗಾಗಿ, ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದ್ದರು.

ಇದನ್ನೂ ಓದಿ : Ban on dogs : ಅಪಾಯಕಾರಿ ನಾಯಿ ತಳಿಗಳಿಗೆ ಕೇಂದ್ರ ನಿಷೇಧ ; ಕರ್ನಾಟಕದಲ್ಲಿ ತಡೆ

ಹೈಕೋರ್ಟ್‌ ಗಮನಿಸಿದ ತಾಂತ್ರಿಕ ಸಮಸ್ಯೆಗಳೇನು?

  1. ಐಪಿಸಿ ಸೆಕ್ಷನ್‌ 172ರಿಂದ 188ರವರೆಗೆ ಮತ್ತು ವಿಪತ್ತು ನಿರ್ವಹಣಾ ಕಾಯಿದೆ ವಿವಿಧ ಸೆಕ್ಷನ್‌ ಉಲ್ಲಂಘಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಸಕ್ಷಮ ಪ್ರಾಧಿಕಾರ ದೂರು ದಾಖಲಿಸಿಲ್ಲ.
  2. ಬಿಬಿಎಂಪಿ ಅಧಿಕಾರಿಗಳು ಪಾದರಾಯನಪುರಕ್ಕೆ ಸೀಲ್ ಡೌನ್ ಮಾಡಲು ಹೋದಾಗ 51 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು ಎಂದು ಹೇಳುತ್ತಾರೆ. ಆದರೆ, ಯಾರಿಗೆ ಸೋಂಕು ತಗುಲಿತ್ತು ಎಂಬ ಬಗ್ಗೆ ಯಾವುದೇ ವಿವರಗಳನ್ನು ಆರೋಪ ಪಟ್ಟಿಯಲ್ಲಿ ದಾಖಲಿಸಿಲ್ಲ.
  3. ಬಿಬಿಎಂಪಿ ಅಧಿಕಾರಿಗಳು ಆ ಪ್ರದೇಶವನ್ನು ಸೀಲ್ ಡೌನ್ ಮಾಡಲು ಮುಂದಾದಾಗ ಅಲ್ಲಿನ ಜನರು ಹಾಲು, ತರಕಾರಿ ಮತ್ತಿತರ ಅಗತ್ಯ ವಸ್ತುಗಳನ್ನು ತರಲು ತೊಂದರೆ ಆಗಬಹುದು ಎಂದು ಪ್ರತಿರೋಧ ಮಾಡಿರಬಹುದು, ಆಗ ಒಂದು ರೀತಿಯ ಬಿಗುವಿನ ವಾತಾವರಣ ನಿರ್ಮಾಣವಾಗಿರಬಹುದು.
  4. ಮ್ಯಾಜಿಸ್ಟ್ರೇಟ್ ಐಪಿಸಿ ಸೆಕ್ಷನ್ 188ರ ಅಡಿ ಸಂಜ್ಞೆ ತೆಗೆದುಕೊಳ್ಳಲು ನಿರ್ಬಂಧವಿದೆ. ಆದರೂ ಸಂಜ್ಞೆ ತೆಗೆದುಕೊಂಡು ಮುಂದುವರಿದಿರುವುದು ಸರಿಯಲ್ಲ.
Continue Reading

ಕರ್ನಾಟಕ

Coronavirus News: ಬುಧವಾರ 201 ಕೋವಿಡ್ ಕೇಸ್‌; ರಾಜ್ಯದಲ್ಲಿ ಸೋಂಕು ತುಸು ಇಳಿಕೆ

Coronavirus News: ಅಲ್ಪಾವಧಿಯಲ್ಲೇ ಸಾವಿರ ಗಡಿ ದಾಡಿದ್ದ ಕೋವಿಡ್‌ ಸಕ್ರಿಯ ಪ್ರಕರಣಗಳಲ್ಲಿ ತುಸು ಇಳಿಕೆ ಕಂಡುಬಂದಿದೆ. ಬುಧವಾರ ಒಬ್ಬರು ಮೃತಪಟ್ಟಿದ್ದು, 257 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

VISTARANEWS.COM


on

covid 19
Koo

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 201 ಕೋವಿಡ್ ಪ್ರಕರಣಗಳು (Coronavirus News) ಪತ್ತೆಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ಸೋಂಕಿನಿಂದ ಗುಣಮುಖರಾಗಿ 257 ಮಂದಿ ಡಿಸ್ಚಾರ್ಜ್ ಆಗಿದ್ದು, ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಇಳಿಕೆಯಾಗಿದೆ.

ರಾಜ್ಯಾದ್ಯಂತ ಬುಧವಾರ ಒಟ್ಟು 7315 ಮಂದಿಗೆ ಕೋವಿಡ್‌ 19 ತಪಾಸಣೆ (RTPCR – 6557, RAT – 758) ನಡೆಸಲಾಗಿತ್ತು. ಈ ಪೈಕಿ 201 ಮಂದಿಗೆ ಸೋಂಕು ತಗುಲಿದ್ದು, ಮೈಸೂರಿನಲ್ಲಿ ಒಂದು ಸಾವು ದಾಖಲಾಗಿದೆ. ಒಟ್ಟು 974 ಕೋವಿಡ್‌ ಸಕ್ರಿಯ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 507 ಪ್ರಕರಣಗಳು ಇವೆ. 915 ಮಂದಿ ಹೋಮ್ ಐಸೋಲೇಷನ್‌ನಲ್ಲಿದ್ದು, ಆಸ್ಪತ್ರೆಯಲ್ಲಿ 59 ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಮಂಗಳವಾರ 252 ಕೊರೊನಾ ಪ್ರಕರಣಗಳು (coronavirus News) ಪತ್ತೆಯಾಗಿದ್ದವು. ಸೋಂಕಿನಿಂದ ಇಬ್ಬರು ಮೃತಪಟ್ಟು, 441 ಮಂದಿ ಡಿಸ್ಚಾರ್ಜ್ ಆಗಿದ್ದರು.

ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ

ರಾಜ್ಯದಲ್ಲಿ ಮಂಗಳವಾರದವರೆಗೆ ಒಟ್ಟು ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 1031 ಇತ್ತು. ಆದರೆ, ಬುಧವಾರ 257 ಮಂದಿ ಡಿಸ್ಚಾರ್ಜ್‌ ಆಗಿರುವುದರಿಂದ ಪ್ರಕರಣಗಳಲ್ಲಿ ತುಸು ಇಳಿಕೆ ಕಂಡುಬಂದಿದೆ. ಸದ್ಯ 974 ಕೊರೊನಾ ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ಇದನ್ನೂ ಓದಿ | Home Remedies For Winter Sickness: ಚಳಿಗಾಲದ ಸೋಂಕಿಗೆ ಉಪಯುಕ್ತ ಮನೆಮದ್ದು ಇಲ್ಲಿದೆ

ಬಳ್ಳಾರಿಯಲ್ಲಿ ಮಹಿಳೆ ಸಾವು

ಬಳ್ಳಾರಿ: ಬಳ್ಳಾರಿಯಲ್ಲಿ ಕರೊನಾ ಸೋಂಕಿನಿಂದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದರು. ಬಳ್ಳಾರಿಯ 50 ವರ್ಷದ ಮಹಿಳೆ ಅಜುಂ ಮೃತರು. ಇವರು ಕೊಮಾರ್ಬಿಡಿಟೀಸ್‌ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕೋವಿಡ್‌ ಸೋಂಕಿಗೆ ತುತ್ತಾಗಿ ಒಂದು ವಾರದಲ್ಲೇ ಅವರು ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಜಿಲ್ಲೆಯಲ್ಲಿ ಒಟ್ಟು 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಮಂಗಳವಾರ ಬಳ್ಳಾರಿಯಲ್ಲಿ 5, ಸಂಡೂರಿನಲ್ಲಿ 1 ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಕ್ರಿಯ ಕೇಸ್‌ಗಳ ಸಂಖ್ಯೆ 34ಕ್ಕೆ ಏರಿಕೆ ಕಂಡಂತೆ ಆಗಿದೆ. ಬಳ್ಳಾರಿ 21, ಕಂಪ್ಲಿ 1, ಸಂಡೂರು 9, ಸಿರುಗುಪ್ಪದಲ್ಲಿ 3 ಕೇಸ್ ಸಕ್ರಿಯವಾಗಿದೆ. ಹೀಗಾಗಿ ಕೋವಿಡ್ ಟೆಸ್ಟ್ ಹೆಚ್ಚಳ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ನೂರಾರು ಕೈಗಾರಿಕೆಗಳನ್ನು ಹೊಂದಿರುವ ಬಳ್ಳಾರಿಯಲ್ಲಿ ಹೊರ ರಾಜ್ಯದವರು ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಬುಧವಾರ 6 ಮಂದಿಗೆ ಸೋಂಕು ದೃಢಪಟ್ಟಿದೆ.

Continue Reading

ಆರೋಗ್ಯ

Coronavirus News: ಬಳ್ಳಾರಿಯಲ್ಲಿ ಕೋವಿಡ್‌ಗೆ ಮಹಿಳೆ ಬಲಿ

Coronavirus News: ಬಳ್ಳಾರಿಯ 50 ವರ್ಷದ ಮಹಿಳೆ ಅಜುಂ ಮೃತ ಮಹಿಳೆಯಾಗಿದ್ದಾರೆ. ಇವರು ಕೊಮಾರ್ಬಿಡಿಟೀಸ್‌ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕೋವಿಡ್‌ ಸೋಂಕಿಗೆ ತುತ್ತಾಗಿ ಒಂದು ವಾರದಲ್ಲೇ ಅವರು ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಜಿಲ್ಲೆಯಲ್ಲಿ ಒಟ್ಟು 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

VISTARANEWS.COM


on

COVID 19 test
Koo

ಬಳ್ಳಾರಿ: ರಾಜ್ಯದಲ್ಲಿ ಮಂಗಳವಾರ 252 ಕೊರೊನಾ ಪ್ರಕರಣಗಳು (coronavirus News) ಪತ್ತೆಯಾಗಿದ್ದು, ಸೋಂಕಿನಿಂದ ಇಬ್ಬರು (Death in Corona) ಮೃತಪಟ್ಟಿದ್ದರು. ಇದೀಗ ಬಳ್ಳಾರಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಬಳ್ಳಾರಿಯ 50 ವರ್ಷದ ಮಹಿಳೆ ಅಜುಂ ಮೃತ ಮಹಿಳೆಯಾಗಿದ್ದಾರೆ. ಇವರು ಕೊಮಾರ್ಬಿಡಿಟೀಸ್‌ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕೋವಿಡ್‌ ಸೋಂಕಿಗೆ ತುತ್ತಾಗಿ ಒಂದು ವಾರದಲ್ಲೇ ಅವರು ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಜಿಲ್ಲೆಯಲ್ಲಿ ಒಟ್ಟು 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಮಂಗಳವಾರ ಬಳ್ಳಾರಿಯಲ್ಲಿ 5, ಸಂಡೂರಿನಲ್ಲಿ 1 ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಕ್ರಿಯ ಕೇಸ್‌ಗಳ ಸಂಖ್ಯೆ 34ಕ್ಕೆ ಏರಿಕೆ ಕಂಡಂತೆ ಆಗಿದೆ. ಬಳ್ಳಾರಿ 21, ಕಂಪ್ಲಿ 1, ಸಂಡೂರು 9, ಸಿರುಗುಪ್ಪದಲ್ಲಿ 3 ಕೇಸ್ ಸಕ್ರಿಯವಾಗಿದೆ. ಹೀಗಾಗಿ ಕೋವಿಡ್ ಟೆಸ್ಟ್ ಹೆಚ್ಚಳ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ನೂರಾರು ಕೈಗಾರಿಕೆಗಳನ್ನು ಹೊಂದಿರುವ ಬಳ್ಳಾರಿಯಲ್ಲಿ ಹೊರ ರಾಜ್ಯದವರು ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮರಣ ಪ್ರಮಾಣ ದರ ಶೇ. 0.79

ರಾಜ್ಯದಾದ್ಯಂತ ಒಟ್ಟು 7359 ಮಂದಿಗೆ COVID 19 ತಪಾಸಣೆ (RTPCR – 6514, RAT – 845) ನಡೆಸಲಾಗಿದ್ದು, ಈ ಪೈಕಿ 252 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 470 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಕೋವಿಡ್‌ ಪಾಸಿಟಿವಿಟಿ ದರ ಶೇ.3.42 ಇದ್ದು, ಮರಣ ಪ್ರಮಾಣ ದರ ಶೇ. 0.79 ವರದಿಯಾಗಿದೆ.

ಒಟ್ಟು 1031 ಸಕ್ರಿಯ ಪ್ರಕರಣಗಳ ಪೈಕಿ 962 ಮಂದಿ ಹೋಮ್ ಐಸೋಲೇಟ್‌ ಆಗಿದ್ದು, 69 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಮವಾರ ರಾಜ್ಯದಲ್ಲಿ 279 ಕೋವಿಡ್‌ ಪ್ರಕರಣ ದಾಖಲಾಗಿತ್ತು. 235 ಮಂದಿ ಡಿಸ್ಚಾರ್ಜ್‌ ಆಗಿದ್ದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಕೊರೊನಾ; ಕಾರ್ಯಕ್ರಮ ಕ್ಯಾನ್ಸಲ್

Governor Thaawar Chand Gehlot tests positive for COVID 19

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ (Thaawar Chand Gehlot) ಕೊರೊನಾ ಧೃಡಪಟ್ಟಿದೆ. ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯಪಾಲರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಎಲ್ಲ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Hit and Run Case: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ಸಾವು

ಶೀಘ್ರ ಗುಣಮುಖರಾಗುವಂತೆ ಆರ್.‌ ಅಶೋಕ್‌ ಟ್ವೀಟ್

“ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

Continue Reading

ಕರ್ನಾಟಕ

Coronavirus News: ರಾಜ್ಯದಲ್ಲಿಂದು 252 ಮಂದಿಗೆ ಕೊರೊನಾ ಸೋಂಕು, ಇಬ್ಬರ ಸಾವು

coronavirus News‌: ರಾಜ್ಯದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1031ಕ್ಕೆ ಏರಿಕೆಯಾಗಿದೆ.

VISTARANEWS.COM


on

Covid 19
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 252 ಕೊರೊನಾ ಪ್ರಕರಣಗಳು (coronavirus News) ಪತ್ತೆಯಾಗಿವೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಗುಣಮುಖರಾಗಿ 441 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1031ಕ್ಕೆ ಏರಿಕೆಯಾಗಿದೆ.

ರಾಜ್ಯದಾದ್ಯಂತ ಒಟ್ಟು 7359 ಮಂದಿಗೆ COVID 19 ತಪಾಸಣೆ (RTPCR – 6514, RAT – 845) ನಡೆಸಲಾಗಿದ್ದು, ಈ ಪೈಕಿ 252 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 470 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಕೋವಿಡ್‌ ಪಾಸಿಟಿವಿಟಿ ದರ ಶೇ.3.42 ಇದ್ದು, ಮರಣ ಪ್ರಮಾಣ ದರ ಶೇ. 0.79 ವರದಿಯಾಗಿದೆ.

ಒಟ್ಟು 1031 ಸಕ್ರಿಯ ಪ್ರಕರಣಗಳ ಪೈಕಿ 962 ಮಂದಿ ಹೋಮ್ ಐಸೋಲೇಟ್‌ ಆಗಿದ್ದು, 69 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಮವಾರ ರಾಜ್ಯದಲ್ಲಿ 279 ಕೋವಿಡ್‌ ಪ್ರಕರಣ ದಾಖಲಾಗಿತ್ತು. 235 ಮಂದಿ ಡಿಸ್ಚಾರ್ಜ್‌ ಆಗಿದ್ದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಕೊರೊನಾ; ಕಾರ್ಯಕ್ರಮ ಕ್ಯಾನ್ಸಲ್

Governor Thaawar Chand Gehlot tests positive for COVID 19

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೋವಿಡ್‌ 19ರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸೋಮವಾರ ರಾಜ್ಯದಲ್ಲಿ 328 ಕೊರೊನಾ ಪ್ರಕರಣಗಳು (Coronavirus News) ಪತ್ತೆಯಾಗಿತ್ತು. ಹೀಗಾಗಿ 1159 ಕೋವಿಡ್‌ ಕೇಸ್‌ಗಳು ದೃಢಪಟ್ಟಂತೆ ಆಗಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ (Thaawar Chand Gehlot) ಕೊರೊನಾ ಧೃಡಪಟ್ಟಿದೆ.

ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯಪಾಲರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಎಲ್ಲ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Hit and Run Case: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ಸಾವು

ಶೀಘ್ರ ಗುಣಮುಖರಾಗುವಂತೆ ಆರ್.‌ ಅಶೋಕ್‌ ಟ್ವೀಟ್

“ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

Continue Reading
Advertisement
Implement the work without damaging the drinking water pipelines says ZP CEO Sadashiva Prabhu
ವಿಜಯನಗರ4 hours ago

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Congress leader Rahul Gandhi speech in Ballari
ಕರ್ನಾಟಕ4 hours ago

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

lok sabha election
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ5 hours ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

IPL 2024
ಪ್ರಮುಖ ಸುದ್ದಿ5 hours ago

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

Bike Accident
ಕರ್ನಾಟಕ5 hours ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 20245 hours ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ6 hours ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ6 hours ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಕರ್ನಾಟಕ6 hours ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ16 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202417 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202418 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ24 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌