Site icon Vistara News

H3N2 Virus: ಎಚ್‌3ಎನ್‌2 ಸೋಂಕಿನ ಬೆನ್ನಲ್ಲೇ ಕೊರೊನಾ ಕೇಸ್‌ ಹೆಚ್ಚಳ, ರಾಜ್ಯಗಳಿಗೆ ಕೇಂದ್ರ ಹಲವು ಸೂಚನೆ

73-Year-Old Man Who Tested Positive For H3N2 Virus Dies In Maharashtra

73-Year-Old Man Who Tested Positive For H3N2 Virus Dies In Maharashtra

ನವದೆಹಲಿ: ದೇಶಾದ್ಯಂತ ಎಚ್‌3ಎನ್‌2 ಸೋಂಕಿನ (H3N2 Virus) ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಕೊರೊನಾ ಪಾಸಿಟಿವಿಟಿ ದರವೂ ಜಾಸ್ತಿಯಾಗಿದೆ. ಹಾಗಾಗಿ, ಎರಡೂ ಸೋಂಕಿನ ನಿಯಂತ್ರಣಕ್ಕಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ.

ಶನಿವಾರ ಒಂದೇ ದಿನ ದೇಶಾದ್ಯಂತ 456 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,406ಕ್ಕೆ ಏರಿಕೆಯಾಗಿದೆ. ಇನ್ನೂ ಕೆಲವು ರಾಜ್ಯಗಳಲ್ಲಿ ಪಾಸಿಟಿವಿಟಿ ಪ್ರಮಾಣವು ದಿಢೀರನೆ ಜಾಸ್ತಿಯಾಗಿದೆ. ಎಚ್‌3ಎನ್‌2 ಸೋಂಕಿನ ಲಕ್ಷಣಗಳೂ ಜ್ವರ, ನೆಗಡಿ, ಕೆಮ್ಮು ಆಗಿರುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

“ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿರುವ ಕಾರಣ ಪಾಸಿಟಿವಿಟಿ ಪ್ರಮಾಣ ಹೆಚ್ಚಿರುವ ರಾಜ್ಯಗಳು ತಪಾಸಣೆಯನ್ನು ಹೆಚ್ಚಿಸಬೇಕು. ಎಚ್‌3ಎನ್‌2 ಹಾಗೂ ಕೊರೊನಾ ಕುರಿತು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧಾರಣೆ, ಸಾಮಾಜಿಕ ಅಂತರ, ಎಲ್ಲ ವೈದ್ಯಕೀಯ ಸೌಲಭ್ಯಗಳ ಸಿದ್ಧತೆ, ತುರ್ತು ಪರಿಸ್ಥಿತಿ ಎದುರಿಸಲು ಸಕಲ ಕ್ರಮ ತೆಗೆದುಕೊಳ್ಳಬೇಕು” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ರಾಜ್ಯಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: H3N2 Virus : ಹಾಸನದ ವ್ಯಕ್ತಿ H3N2ಗೆ ಬಲಿ, ಕೋವಿಡ್‌ನಂತೆ ದೇಶದ ಮೊದಲ ಸಾವು ರಾಜ್ಯದಲ್ಲೆ, ಹರಿಯಾಣದಲ್ಲಿ 2ನೇ ಮೃತ್ಯು

Exit mobile version