ನವದೆಹಲಿ: ಕೋವಿಡ್-19(Covid-19) ಲಸಿಕೆಗೆ ನೀಡಲಾಗಿದ್ದ ಕೋವಿನ್ ಪ್ರಮಾಣಪತ್ರ(CoWIN Certificates)ಗಳಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ(Union Health Ministry) ಮಹತ್ವದ ಬದಲಾವಣೆಯೊಂದನ್ನು ಮಾಡಿದ್ದು, ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಭಾವಚಿತ್ರವನ್ನು ತೆಗೆದುಹಾಕಿದೆ. ಈ ಹಿಂದೆ ಈ ಪ್ರಮಾಣಪತ್ರಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರದ ಜೊತೆಗೆ ಭಾರತ ಒಟ್ಟಾಗಿ ಕೋವಿಡ್-19ನನ್ನು ಸೋಲಿಸಲಿದೆ ಎಂಬ ಘೋಷವಾಕ್ಯ ಕಾಣಬಹುದಾಗಿತ್ತು. ಇದೀಗ ಅವರ ಭಾವಚಿತ್ರವನ್ನು ತೆಗೆದು ಹಾಕುವ ಮೂಲಕ ಆರೋಗ್ಯ ಇಲಾಖೆ ಮಹತ್ವದ ಬದಲಾವಣೆ ಮಾಡಿತ್ತು.
ಈ ಮಹತ್ವದ ಬದಲಾವಣೆ ಬಗ್ಗೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆ ಆಗುತ್ತಿದ್ದು, ಕೋವಿನ್ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ಮೋದಿಯ ಭಾವಚಿತ್ರ ಮಾಯವಾಗಿದೆ. ಬೇಕಿದ್ದರೆ ಡೌನ್‌ಲೋಡ್ ಮಾಡಿ ಚೆಕ್ ಮಾಡಿ ಎಂದು ಎಕ್ಸ್ ಬಳಕೆದಾರ ಸಂದೀಪ್ ಹೇಳಿದ್ದಾರೆ. ಇನ್ನೊಬ್ಬ ಬಳಕೆದಾದ ಇರ್ಫಾನ್ ಅಲಿ ಟ್ವೀಟ್ ಮಾಡಿದ್ದು, ಹೌದು ಪ್ರಧಾನಿ ಮೋದಿ ಫೋಟೋ ಪ್ರಮಾಣ ಪತ್ರದಲ್ಲಿ ಇಲ್ಲ. ಅದರ ಬದಲು ಅಲ್ಲಿ ಕ್ಯೂ ಆರ್ ಕೋಡನ್ನು ಕಾಣಬಹುದಾಗಿದೆ. ಇನ್ನು ಈ ಹಿಂದೆಯೇ ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ಪ್ರಧಾನಿ ಮೋದಿಯ ಭಾವಚಿತ್ರವನ್ನು ಪ್ರಮಾಣಪತ್ರದಿಂದ ತೆಗೆದುಹಾಕಲಾಗಿತ್ತು. ಇನ್ನು ಈ ಬಗ್ಗೆ ಸ್ವತಃ ಆರೋಗ್ಯ ಇಲಾಖೆ ಪ್ರತಿಕ್ರಿಯಿಸಿದ್ದು, ಕೋವಿನ್ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ತೆಗೆದು ಹಾಕಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅವರ ಫೋಟೋ ತೆಗೆದುಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದೆ.
Hi @BhavikaKapoor5 ,
— Irfan Ali (@TweetOfIrfan) May 1, 2024
Yes, I just checked and PM Modi’s photo has disappeared and there is only QR code instead of his photo.
Guys, please check your covid vaccination certificate. #LokSabhaElections2024 #covidshield https://t.co/tyhQ12oIhI
ಇನ್ನು ಮತ್ತೊಂದೆಡೆ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಳ್ಳುವ ಮೂಲಕ ಜನರನ್ನು ಆತಂಕಕ್ಕೆ ತಳ್ಳಿತ್ತು. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯದಲ್ಲಿ ಹೇಳಿದ್ದರು.
ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತು ಮತ್ತು ದೇಶದಲ್ಲಿ ವ್ಯಾಪಕವಾಗಿ ನೀಡುತ್ತಿದೆ. AstraZeneca ಯುಕೆಯಲ್ಲಿ ತನ್ನ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವುಗಳು ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು ಎಂಬ ಆರೋಪದ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಯನ್ನು ಎದುರಿಸುತ್ತಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ನಷ್ಟ ಪರಿಹಾರ ಬಯಸಿದ್ದಾರೆ.
ಇದನ್ನೂ ಓದಿ:Parineeti Chopra: ಪರಿಣಿತಿ ಚೋಪ್ರಾ ಪತಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ: ವೈದ್ಯರು ಹೇಳೋದೇನು?
ಇನ್ನು ಜನರನ್ನು ಆತಂಕಕ್ಕೀಡು ಮಾಡಿರುವ ಈ ವಿಚಾರದ ಬಗ್ಗೆ ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಸ್ಪಷ್ಟನೆ ನೀಡಿದ್ದು, ಭಾರತದಲ್ಲಿ ಕೊರೊನಾ ವೈರಸ್‌ಎದುರಿಸಲು ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ ಅಡ್ಡ ಪರಿಣಾಮದ ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಹೇಳಿದ್ದಾರೆ. ಮೊದಲ ಡೋಸ್ ಅನ್ನು ಪಡೆದಾಗ ಅಡ್ಡ ಪರಿಣಾಮದ ರಿಸ್ಕ್ ಅತ್ಯಧಿಕವಾಗಿರುತ್ತದೆ. ಆದರೆ ಎರಡನೇ ಡೋಸ್‌ನೊಂದಿಗೆ ಕಡಿಮೆಯಾಗುತ್ತದೆ; ಮೂರನೆಯದರೊಂದಿಗೆ ಮತ್ತೂ ಕಡಿಮೆಯಾಗುತ್ತದೆ. ಅಡ್ಡ ಪರಿಣಾಮ ಸಂಭವಿಸುವುದಾದಲ್ಲಿ, ಲಸಿಕೆ ಪಡೆದ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ” ಎಂದು ಗಂಗಾಖೇಡ್ಕರ್ ತಿಳಿಸಿದ್ದಾರೆ