Site icon Vistara News

CWC Meeting: ಇಂದು ದೆಹಲಿಯಲ್ಲಿ CWC ಸಭೆ; ಇಂದೇ ನಿರ್ಧಾರ ಆಗುತ್ತಾ ವಿಪಕ್ಷ ನಾಯಕ ಸ್ಥಾನ?

CWC Meeting

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ(Election Results 2024) ಹೊರಬಿದ್ದ ನಂತರ ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್‌ ಕನಸು ಮತ್ತೊಮ್ಮೆ ಭಗ್ನವಾಗಿದೆ. ಸರ್ಕಾರ ರಚಿಸುವ ಕನಸು ಸ್ವಲ್ಪದರಲ್ಲೇ ಮಿಸ್‌ ಆಗಿರುವುದರಿಂದ ಕಾಂಗ್ರೆಸ್(Congress) ಇದೀಗ ಫಲಿತಾಂಶ ಪರಾಮರ್ಶೆಗೆ ಮುಂದಾಗಿದೆ. ಹೀಗಾಗಿ ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆ(CWC Meeting) ನಡೆಯಲಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಬಗ್ಗೆ ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 11:00 ಗಂಟೆಗೆ ನಡೆಯಬೇಕಿದ್ದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯನ್ನು ಸಂಜೆ 5:30ಕ್ಕೆ ಮುಂದೂಡಲಾಗಿದೆ. ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಸಬೆ ನಡೆಯಲಿದ್ದು, ಬಳಿಕ ಅಶೋಕ ಹೊಟೇಲ್‌ನಲ್ಲಿ ಸಂಜೆ 7ಗಂಟೆಗೆ ರಾತ್ರಿ ಡಿನ್ನರ್‌ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ CWC ಸದಸ್ಯರು ಭಾಗಿಯಾಗಲಿದ್ದಾರೆ. ಇನ್ನು ಈ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಿಕ್ಕ ಜಯ ಹಾಗೂ ಕೆಲ ರಾಜ್ಯದಲ್ಲಿ ಕಾಂಗ್ರೆಸ್ ಗೆ ಆದ ನಷ್ಟದ ಬಗ್ಗೆ ಅವಲೋಕನ ನಡೆಯಲಿದೆ. ಇಂಡಿಯಾ ಮೈತ್ರಿಕೂಟವನ್ನ ರಾಜ್ಯಗಳಲ್ಲಿ ಹೇಗೆ ಬಳಸಿಕೊಳ್ಳಬೇಕು. ರಾಜ್ಯವಾರು ಚುನಾವಣೆಗಳಲ್ಲಿ ಏನೆಲ್ಲಾ ಬದಲಾವಣೆ ಆಗಬೇಕು ಹಾಗೂ ರಾಜ್ಯವಾರು ಬಂದಿರುವ ಚುನಾವಣೆ ಫಲಿತಾಂಶದ ಬಗ್ಗೆಯೂ ಚರ್ಚೆ ಇಂದು ನಡೆಯಲಿದೆ.

ಇನ್ನು ರಾಜ್ಯದಿಂದ ಈ ಸಭೆಯಲ್ಲಿ ಕರ್ನಾಟಕ ದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ರಾಜ್ಯ ಸಚಿವರ ಜೊತೆಗೆ ಪ್ರತ್ಯೇಕ ಸಭೆಯನ್ನು ನಡೆಸಿದ್ದರು. ಯಾವ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಮತದಾನ ಆಗಿದೆ. ಈ ಎಲ್ಲಾ ಮಾಹಿತಿ ಸಂಗ್ರಹಿಸಿದ್ದಾರೆ. ಸಚಿವರ ಕ್ಷೇತ್ರದಲ್ಲಿ ಲೀಡ್ ಕಡಿಮೆ ಬಂದಿರುವ ಬಗ್ಗೆಯೂ ಚರ್ಚೆ ನಡೆಸುತ್ತೇವೆ. ರಾಹುಲ್ ಗಾಂಧಿ ಈ ಬಗ್ಗೆ ವರದಿ ಕೇಳಿದ್ದಾರೆ. ಕ್ಷೇತ್ರವಾರು ವರದಿಯನ್ನು ನೀಡುತ್ತೇವೆ ಎಂದರು.

ಚನ್ನಪಟ್ಟಣದಲ್ಲಿ ಡಿಕೆ ಸುರೇಶ್ ಸ್ಪರ್ಧೆಗೆ ನಾವು ಆತುರದಲ್ಲಿ ಇಲ್ಲ. ಈ ಬಗ್ಗೆ ಇನ್ನೂ ಯೋಚನೆ ಮಾಡಲು ಹೋಗಿಲ್ಲ. ಸೋಲಿನ ದುಖಃದಿಂದ ಈಚೆಗೆ ಬಂದಿಲ್ಲ ಎಂದರು. ಚುನಾವಣೆ ಸೋಲಿಗೆ ಸಚಿವರನ್ನು ಕೈಬಿಡುವ ಬಗ್ಗೆ ಸದ್ಯಕ್ಕೆ ಚರ್ಚೆಯಾಗಿಲ್ಲ. ಮುಂದಿನ ದಿನಗಳಲ್ಲಿ ಹೈಕಮಾಂಡ ನಿರ್ಧಾರ ಮಾಡಿಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ:Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Exit mobile version