Site icon Vistara News

Cyclone Remal: ʼರೆಮಾಲ್‌ʼ ಅಬ್ಬರಕ್ಕೆ ಬಂಗಾಳ, ಬಾಂಗ್ಲಾ ತತ್ತರ-ಭೂಕುಸಿತ, ಪ್ರವಾಹ ಸ್ಥಿತಿ ನಿರ್ಮಾಣ

Cyclone Remal

ಕೋಲ್ಕತ್ತಾ: ಪಶ್ಚಿಮ ಬಂಗಾಳ(West Bengal) ಮತ್ತು ಬಾಂಗ್ಲಾದೇಶ(Bangladesh)ಗಳಲ್ಲಿ ರೆಮಾಲ್‌ ಚಂಡಮಾರುತ(Cyclone Remal)ದ ಅಬ್ಬರ ಜೋರಾಗಿದೆ. ಪ್ರತಿ ಗಂಟೆಗೆ 135 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ತಡರಾತ್ರಿ ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಇನ್ನು ಬಾಂಗ್ಲಾದೇಶದ ಮೋಂಗ್ಲಾ ಭಾಗದ ಸಾಗರ್‌ ದ್ವೀಪ ಮತ್ತು ಖೇಪುಪರಾ ಸಮೀಪ ಬಿರುಗಾಳಿ ಬೀಸುತ್ತಿದ್ದು, ಭಾರೀ ಮಳೆಯಾಗುತ್ತಿದೆ. ಇನ್ನು ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮನೆ, ಹೊಲ ಗದ್ದೆಗಳಿಗೆ ನೀರು ನುಗ್ಗಿದೆ.

ಇನ್ನು ಪಶ್ಚಿಮ ಬಂಗಾಳ ರೆಮಾಲ್‌ ಚಂಡಮಾರುತದ ಹಿನ್ನೆಲೆ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಅಸ್ಸಾಂ, ಮೇಘಾಲಯ, ತ್ರಿಪುರಾ, ಮಣಿಪುರ ಮತ್ತು ಮಿಜೋರಾಂ ಜಿಲ್ಲಾಡಳಿತಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 21 ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವುದರಿಂದ ಅಂತಾರಾಷ್ಟ್ರೀಯ ಮತ್ತು ದೇಶೀಯ ಒಟ್ಟು 394 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಪ್ರತಿಕೂಲ ಹವಾಮಾನವನ್ನು ಪರಿಗಣಿಸಿ ಹಲವಾರು ರೈಲುಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

ಪ್ರಧಾನಿ ಮೋದಿ ಮಹತ್ವದ ಸಭೆ

ರೆಮಾಲ್ ಚಂಡಮಾರುತ ಅಪ್ಪಳಿಸುವ ಮುನ್ನವೇ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ತುರ್ತು ಭಾನುವಾರ ಸಭೆ ನಡೆಸಿದರು. ರೆಮಾಲ್ ಚಂಡಮಾರುತ ಪಶ್ಚಿಮ ಬಂಗಾಳ ಕರಾವಳಿಗಳ ಮತ್ತು ಬಾಂಗ್ಲಾದೇಶ ನಡುವೆ ಮಧ್ಯರಾತ್ರಿಯ ವೇಳೆಗೆ ಭೂಕುಸಿತವನ್ನು ಉಂಟು ಮಾಡಲಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಂಭವಿಸಲಿರುವ ಪರಿಸ್ಥಿತಿಯನ್ನು ನಿಭಾಯಿಸಲು ಯಾವ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಖುದ್ದು ಮೋದಿ ಅವರು ಪರಿಶೀಲಿಸಿದರು.

ಇದನ್ನೂ ಓದಿ: FIR Filed: ದೇಗುಲದಲ್ಲಿ ಸ್ತ್ರೀಯರು ಬಟ್ಟೆ ಬದಲಿಸೋ ಜಾಗದಲ್ಲಿ ಸಿಸಿಟಿವಿ ಇಟ್ಟ ಅರ್ಚಕ; ಕೀಚಕ ಕೃತ್ಯಕ್ಕೆ ಬಿತ್ತು ಕೇಸ್!

IMD ಪ್ರಕಾರ, ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಶನಿವಾರ ಸಂಜೆ ಚಂಡಮಾರುತವಾಗಿ ಮಾರ್ಪಟ್ಟಿದೆ. ಪಶ್ಚಿಮ ಬಂಗಾಳದ ಕ್ಯಾನಿಂಗ್ ಪಟ್ಟಣದ ದಕ್ಷಿಣಕ್ಕೆ 200 ಕಿಮೀ ದೂರದಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕೇಂದ್ರೀಕೃತವಾಗಿದೆ. ಇದು ಉತ್ತರದ ಕಡೆಗೆ ಚಲಿಸುತ್ತಿದ್ದು, ಪಶ್ಚಿಮ ಬಂಗಾಳದ ಸಾಗರ್ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರ ನಡುವಿನ ಕರಾವಳಿಗೆ ಅಪ್ಪಳಿಸುತ್ತಲೇ ಇರುತ್ತದೆ ಎಂದು ಹವಾಮಾನ ಇಲಾಖೆಯ ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

Exit mobile version