ಜೈಪುರ: ಉತ್ತರ ಪ್ರದೇಶದಿಂದ ಜೈಪುರಕ್ಕೆ ಬರುತ್ತಿದ್ದ ಚಲಿಸುವ ಬಸ್ನಲ್ಲಿ 20 ವರ್ಷದ ದಲಿತ ಯುವತಿಯ ಮೇಲೆ ಇಬ್ಬರು ಚಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ (Physical abuse) ಅಮಾನವೀಯ ಕೃತ್ಯ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಡಿಸೆಂಬರ್ 9 ಮತ್ತು 10 ರ ಮಧ್ಯರಾತ್ರಿ ಖಾಸಗಿ ಬಸ್ ಉತ್ತರ ಪ್ರದೇಶದಿಂದ ಜೈಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರದಿಂದ ಜೈಪುರಕ್ಕೆ ಪ್ರಯಾಣಿಸುತ್ತಿದ್ದ ಸಂತ್ರಸ್ತೆ ಬಸ್ನ ಕುಳಿತು ಪ್ರಯಾಣ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಆರಿಫ್ ಮತ್ತು ಲಲಿತ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರಿಬ್ಬರು ಬಸ್ ಚಲಿಸುತ್ತಿರುವಾಗಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಆರಿಫ್ನನ್ನು ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಕನೋಟಾ ಪೊಲೀಸ್ ಠಾಣೆಯ ಎಸ್ ಎಚ್ ಒ ಭಗವಾನ್ ಸಹಾಯ್ ಮೀನಾ ತಿಳಿಸಿದ್ದಾರೆ. ಲಲಿತ್ ತಲೆಮರೆಸಿಕೊಂಡಿದ್ದು ಆತನನ್ನು ಹುಡುಕಲಾಗುತ್ತಿದೆ ಎಂದು ಅವರು ಹೇಳಿದರು.
ಬಸ್ ಒಳಗೆ ಕೆಲವು ಪ್ರಯಾಣಿಕರು ಇದ್ದರು. ಆದರೆ, ಚಾಲಕರು ಪ್ರಯಾಣಿಕರ ಕ್ಯಾಬಿನ್ ಅನ್ನು ಹೊರಗಿನಿಂದ ಲಾಕ್ ಮಾಡಿದ್ದರು ಎಂದು ಸ್ಟೇಷನ್ ಹೌಸ್ ಅಧಿಕಾರಿ ತಿಳಿಸಿದ್ದಾರೆ. ಅತ್ಯಾಚಾರ ನಡೆದ ಬಳಿಕ ಯುವತಿ ಕಿರುಚಾಡಿದ್ದು, ಪ್ರಯಾಣಿಕರು ಬಸ್ ನಿಲ್ಲಿಸಿ ಆರಿಫ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಲ್ಲಿ ಯುವತಿ ಪ್ರಜ್ಞೆ ತಪ್ಪಿಸಿ ಗ್ಯಾಂಗ್ ರೇಪ್!
ಬೆಂಗಳೂರು: ರಾಜಧಾನಿ ಬೆಂಗಳೂರು ಹಗಲು-ರಾತ್ರಿ ಯಾವುದೇ ಸಮಯವಾದರೂ ಹೆಣ್ಮಕ್ಕಳು ಓಡಾಡಲು ಸೇಫ್ ಸಿಟಿ ಎಂಬ ಅಭಿಪ್ರಾಯವಿದೆ. ಆದರೆ ಇದೀಗ ಖಾಸಗಿ ಕಂಪೆನಿಯೊಂದರ ಯುವತಿಯೊಬ್ಬಳು ಪ್ರಜ್ಞೆ ತಪ್ಪಿಸಿ ತನ್ನ ಮೇಲೆ ಗ್ಯಾಂಗ್ ರೇಪ್ (Physical Abuse) ನಡೆದಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಇದನ್ನೂ ಓದಿ : Viral video | 1000 ರೂಪಾಯಿ ಟೀ ಶರ್ಟ್ ವಿಚಾರವಾಗಿ ಮೆಟ್ರೊ ರೈಲಿನಲ್ಲೇ ಯುವಕ- ಯುವತಿ ಹೊಡೆದಾಟ
ಕಳೆದ ಡಿ.12ರ ರಾತ್ರಿ ಸಂತ್ರಸ್ತೆ ಕೋರಮಂಗಲದ ಪಬ್‌ವೊಂದಕ್ಕೆ ಹೋಗಿದ್ದಾಳೆ. ಬಳಿಕ ಏನು ಆಯಿತೋ ಏನೋ ಆಕೆಗೆ ಪ್ರಜ್ಞೆ ಬಂದಾಗ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದುದ್ದಾಗಿ ಹೇಳಿದ್ದಾಳೆ. ತಾನು ಅಲ್ಲಿಗೆ ಹೇಗೆ ಬಂದೆ ಎಂಬುದೇ ತಿಳಿದಿಲ್ಲ ಎಂದಿದ್ದಾಳೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ವೇಳೆ ತನ್ನ ದೇಹದ ಮೇಲೆ ತರಚು ಗಾಯಗಳಾಗಿದ್ದು, ಗ್ಯಾಂಗ್ ರೇಪ್ ಆಗಿದೆ ಎಂಬ ಶಂಕೆ ಇದೆ ಎಂದು ದೂರು ನೀಡಿದ್ದಾಳೆ.
ಯುವತಿಯೊಬ್ಬಳ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂಬ ಆರೋಪ ಹಿನ್ನೆಲೆ ದೂರು ದಾಖಲಿಸಿಕೊಂಡಿರುವ ಕೋರಮಂಗಲ ಠಾಣೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈಗಾಗಲೇ ಬೇಸಿಕ್ ಪ್ರೊಸೀಝರ್ ಮುಗಿಸಿದ್ದು, ಯುವತಿ ಹೇಳಿದ ಘಟನೆ ನಡೆದ ಸ್ಥಳದ ಸುಮಾರು 60 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ.