ನವದೆಹಲಿ: ಮುಂಬೈ ಸರಣಿ ಬಾಂಬ್ ಸ್ಫೋಟದ (Bombay Blast) ಆರೋಪಿ, ಭೂಗತ ದೊರೆ ದಾವೂದ್ ಇಬ್ರಾಹಿಂ (Dawood Ibrahim) ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಡಿ-ಕಂಪನಿಯಿಂದ (D-company) ಭಯೋತ್ಪಾದನೆಗೆ ಹಣ ಸಹಾಯ ಮತ್ತು ಡ್ರಗ್ಸ್ ಕಳ್ಳ ಸಾಗಣೆಗೆ ಸಂಬಂಧಿಸಿದಂತೆ ತನಿಖೆಗೆ ನಡೆಸಲು ರಾಷ್ಟ್ರೀಯ ತನಿಖಾ ದಳ(National Investigation Agency-NIA)) ಐವರು ಸದಸ್ಯರ ತಂಡವನ್ನು ದುಬೈಗೆ ಕಳುಹಿಸಿದೆ.
ಬಹು ಸಂಸ್ಥೆಗಳ ಸದಸ್ಯರನ್ನು ಒಳಗೊಂಡಿರುವ ಈ ತಂಡವು ಭೂಗತ ದೊರೆ ದಾವೂದ್ ಇಬ್ರಾಹಿಂ ದುಬೈನಲ್ಲಿ ನಡೆಸುತ್ತಿರುವ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಲಿದೆ. ಈ ತಂಡದಲ್ಲಿ ಇಂಟೆಲಿಜೆನ್ಸ್ ಬ್ಯೂರೋ(IB), ಫೈನಾನ್ಷಿಯಲ್ ಇಂಟೆಲಿಜೆನ್ಸ್ ಯುನಿಟ್(FIU) ಮತ್ತು ನಾರ್ಕೊಟಿಕ್ ಕಂಟ್ರೋಲ್ ಬ್ಯೂರೋ(NCB)ಯ ಅಧಿಕಾರಿಗಳಿದ್ದಾರೆ.
ಅಪರಾಧ ಚಟುವಟಿಕೆಗಳು ಮತ್ತು ಭಯೋತ್ಪಾದನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ಕಳೆದ ನವಂಬರ್‌ನಲ್ಲಿ ತಲೆಮರೆಸಿಕೊಂಡಿರುವ ಗ್ಯಾಂಗಸ್ಟರ್ ದಾವೂದ್ ಇಬ್ರಾಹಿಂ ಹಾಗೂ ಆತನ ನಿಕಟವರ್ತಿ ಛೋಟಾ ಶಕೀಲ್ ಮತ್ತು ಇತರ ಮೂವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದರು.
ಇದನ್ನೂ ಓದಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ತಲೆಗೆ 25 ಲಕ್ಷ ರೂ ಬಹುಮಾನ ಘೋಷಿಸಿದ ರಾಷ್ಟ್ರೀಯ ತನಿಖಾ ದಳ
ಅನೇಕ ಕಾನೂನು ಬಾಹಿರ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಡಿ ಗ್ಯಾಂಗ್ ತನ್ನ ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುವ ಸಂಬಂಧ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ತನಿಖಾ ಸಂಸ್ಥೆಗಳು ಗ್ಯಾಂಗಸ್ಟರ್‌ಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. 1992ರ ಸರಣಿ ಮುಂಬೈ ಬಾಂಬ್ ಸ್ಫೋಟದ ಬಳಿಕ, ದಾವೂದ್ ಇಬ್ರಾಹಿಂ ದೇಶ ತೊರೆದು ತಲೆ ಮರೆಸಿಕೊಂಡಿದ್ದಾನೆ. ಆತ ಪಾಕಿಸ್ತಾನದ ಕರಾಚಿಯಲ್ಲೇ ಇದ್ದಾನೆಂದು ಹೇಳಲಾಗುತ್ತಿದೆ.