Site icon Vistara News

Maratha Quota: ನಾಳೆ 11 ಗಂಟೆಯೊಳಗೆ ಬೇಡಿಕೆ ಈಡೇರಿಸಿ! ಮಹಾ ಸಿಎಂಗೆ ಗಡುವು ವಿಧಿಸಿದ ಮರಾಠ ನಾಯಕ

Decide By 11 Am Tomorrow Says Maratha Quota protest Manoj Jarange Patil

ಮುಂಬೈ: ಉದ್ಯೋಗ (Employment) ಮತ್ತು ಶಿಕ್ಷಣದಲ್ಲಿ (Education) ಮರಾಠ ಸಮುದಾಯಕ್ಕೆ (Maratha Community) ಇತರ ಹಿಂದುಳಿದ ವರ್ಗಗಳಡಿಯಲ್ಲಿ ಮೀಸಲು ಬೇಡಿಕೆಯನ್ನು ನಾಳೆ(ಶನಿವಾರ) ಬೆಳಗಿನ 11 ಗಂಟೆಯೊಳಗೆ ಈಡೇರಿಸಬೇಕು ಎಂದು ಮರಾಠ ಮೀಸಲು ಪ್ರತಿಭಟನೆಯ ನಾಯಕ ಮನೋಜ್ ಜಾರಂಗೆ ಪಾಟೀಲ್, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ (Maharashtra CM Eknath Shinde) ಅವರಿಗೆ ಗಡುವು ನೀಡಿದ್ದಾರೆ.

ಸರ್ಕಾರ ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮುಂಬೈನ ಆಜಾದ್ ಮೈದಾನಕ್ಕೆ ತೆರಳಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಪಾಟೀಲ್ ಅವರು ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮರಾಠ ನಾಯಕ ಪಾಟೀಲ್, ನಾಳೆ ಮಧ್ಯಾಹ್ನ 12 ಗಂಟೆಗೆ ನನ್ನ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ. ಆದರೆ ಒಮ್ಮೆ ನಾನು ಆಜಾದ್ ಮೈದಾನಕ್ಕೆ ಹೋದರೆ ನಾನು ನನ್ನ ಮನಸ್ಸನ್ನು ಬದಲಾಯಿಸುವುದಿಲ್ಲ ಎಂದು ಹೇಳಿದರು.

ಮರಾಠ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಸಿಗುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಮನೋಜ್ ಜಾರಂಗೆ ಪಾಟೀಲ್ ಅವರು ಹೇಳಿದ್ದಾರೆ. ಈ ಮಧ್ಯೆ, ಮಹಾರಾಷ್ಟ್ರದ ಸಚಿವ ದೀಪಕ್ ಕೇಸರ್ಕರ್ ಅವರು ಮರಾಠಾ ಸಮುದಾಯದ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿಕೊಂಡಿದ್ದಾರೆ.

ಸರ್ಕಾರದ ಪ್ರತಿನಿಧಿಗಳ ಜತೆ ಸಭೆ ನಡೆಸಿದ ನಂತರ ನವಿ ಮುಂಬೈನ ವಾಶಿಯಲ್ಲಿ ಪ್ರತಿಭಟನಾಕಾರರೊಂದಿಗೆ ಜಾರಂಗೆ ಮಾತನಾಡಿದರು. ಅವರಿಂದ ಕೆಲವು ದಾಖಲೆಗಳನ್ನು ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ಬೆಂಬಲಿಗರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಮರಾಠ ಸಮುದಾಯಕ್ಕೆ ಮೀಸಲು ನೀಡೋವರೆಗೆ ಪ್ರತಿಭಟನೆಯನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮನೋಜ್ ಜಾರಂಗೆ ಪಾಟೀಲ್ ಹೇಳಿದ್ದಾರೆ. ಈ ಮಧ್ಯೆ, ಮುಂಬೈನಲ್ಲಿ ಪ್ರತಿಭಟನೆಯನ್ನು ಕೈಗೊಳ್ಳದಂತೆ ಸರ್ಕಾರವು ಮನೋಜ್ ಅವರನ್ನು ಮನವೊಲಿಸುತ್ತಿದೆ. ಮಹಾರಾಷ್ಟ್ರ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಅವರು, ಬೇಡಿಕೆಗಳನ್ನು ಒಪ್ಪಿಕೊಳ್ಳಲಾಗಿದ್ದು, ಸರ್ಕಾರದ ಪ್ರಕ್ರಿಯೆಗಳ ಅನುಸಾರ ಅವುಗಳನ್ನು ಈಡೇರಿಸಲಾಗುವುದು ಎಂದು ಹೇಳಿದ್ದಾರೆ.

ಈ ಮಧ್ಯೆ ಮನೋಜ್ ಜಾರಂಗೆ ಪಾಟೀಲ್ ಅವರು ಸರ್ಕಾರದ ಮುಂದೆ ಮತ್ತೊಂದು ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಮಹಾರಾಷ್ಟ್ರ ಸರ್ಕಾರವು ತನ್ನ ಉಚಿತ ಶಿಕ್ಷಣ ನೀತಿಯನ್ನು ಎಲ್ಲಾ ಮರಾಠರನ್ನು ಸೇರಿಸಲು ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಓದಿ: Eknath Shinde: ಪತ್ರಿಕೋದ್ಯಮದಲ್ಲಿ ಪದವಿ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ

Exit mobile version