ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ವ್ಯಕ್ತಿಯೊಬ್ಬ ಜೀವ ಬೆದರಿಕೆ ಕರೆ ಮಾಡಿದ್ದು, ಪೊಲೀಸರು ಕೂಡಲೇ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರ ತಡರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ (PCR) ವ್ಯಕ್ತಿಯೊಬ್ಬ ಕರೆ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲೆ ಮಾಡುತ್ತೇನೆ ಎಂಬುದಾಗಿ ಹೇಳಿದ್ದಾನೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಮಾನಸಿಕ ಅಸ್ವಸ್ಥನಾಗಿದ್ದು, ದೆಹಲಿಯ ಗುಲಾಬಿ ಬಾಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಹಾಗಾಗಿ, ಆತನನ್ನು ಬಂಧಿಸಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Nitin Gadkari : ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಗಡ್ಕರಿಗೆ ಜೀವ ಬೆದರಿಕೆಯೊಡ್ಡಿದ್ದು ಕೊಲೆ ಅಪರಾಧಿ; ಡೈರಿ ವಶ