ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ (Delhi Liquor Scam) ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಜಾಮೀನು ಮಂಜೂರು ಕೋರಿ ಆರೋಪಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ರೋಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.
ಆರೋಪಿಗಳಾದ ವಿಜಯ್ ನಾಯರ್, ಅಭಿಷೇಕ್ ಬೋನಿಪಳ್ಳಿ, ಸಮೀರ್ ಮಹೇಂದ್ರು, ಶರತ್ ಪಿ. ರೆಡ್ಡಿ ಹಾಗೂ ವಿನಯ್ ಬಾಬು ಎಂಬುವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ದೆಹಲಿ ಸರ್ಕಾರದ ಅಬಕಾರಿ ನೀತಿ ಜಾರಿ ವೇಳೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ಬಂಧಿಸಿದ್ದಾರೆ.
ಅಬಕಾರಿ ನೀತಿ ಜಾರಿ ವೇಳೆ ಕೋಟ್ಯಂತರ ರೂಪಾಯಿ ಗೋಲ್‌ಮಾಲ್ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಇ.ಡಿ ವಿಚಾರಣೆ ನಡೆಸಿದೆ. ಅಲ್ಲದೆ, ಇವರ ಆಪ್ತ ಕಾರ್ಯದರ್ಶಿಯನ್ನು ಬಂಧಿಸಲಾಗಿದೆ. ಅಬಕಾರಿ ನೀತಿ ಪ್ರಕರಣವು ಕೇಂದ್ರ ಹಾಗೂ ದೆಹಲಿ ಸರ್ಕಾರದ ನಡುವಿನ ತಿಕ್ಕಾಟಕ್ಕೂ ಕಾರಣವಾಗಿದೆ.
ಇದನ್ನೂ ಓದಿ: Kejriwal Government | ಅಬಕಾರಿ ನೀತಿ ಹಗರಣ: ವಕೀಲರಿಗೆಂದೇ 25 ಕೋಟಿಗೂ ಹೆಚ್ಚು ವೆಚ್ಚ ಮಾಡಿದ ಕೇಜ್ರಿವಾಲ್ ಸರ್ಕಾರ!