Delhi Crime | ಲಿವ್ ಇನ್ ಸಂಗಾತಿಯನ್ನು 35 ಭಾಗಗಳಾಗಿ ಕತ್ತರಿಸಿ, 18 ದಿನಗಳ ಕಾಲ ದಿಲ್ಲಿಯ ವಿವಿಧೆಡೆ ಎಸೆದ! - Vistara News

ದಿಲ್ಲಿ ಮರ್ಡರ್

Delhi Crime | ಲಿವ್ ಇನ್ ಸಂಗಾತಿಯನ್ನು 35 ಭಾಗಗಳಾಗಿ ಕತ್ತರಿಸಿ, 18 ದಿನಗಳ ಕಾಲ ದಿಲ್ಲಿಯ ವಿವಿಧೆಡೆ ಎಸೆದ!

ತನ್ನ ಲಿವ್ ಇನ್ ಸಂಗಾತಿಯನ್ನು ಕೊಂದು, ದೇಹವನ್ನು 35 ಭಾಗಗಳಾಗಿ ಕತ್ತರಿಸಿ, 18 ದಿನಗಳ ಕಾಲ ದಿಲ್ಲಿಯ ಅರಣ್ಯ ಪ್ರದೇಶದಲ್ಲಿ ಎಸೆದ ಆರೋಪಿ ಅಫ್ತಾಬ್‌ನನ್ನು ಪೊಲೀಸರು ಬಂಧಿಸಿದ್ದಾರೆ(Delhi Crime).

VISTARANEWS.COM


on

Delhi Crime
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ತನ್ನ ಸಂಗಾತಿಯನ್ನು 35 ಭಾಗಗಳಾಗಿ ಕತ್ತರಿಸಿ, 18 ದಿನಗಳ ಕಾಲ ದಿಲ್ಲಿಯ ವಿವಿಧೆಡೆ ಎಸೆದ ವ್ಯಕ್ತಿಯೊಬ್ಬನನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನ ಹೆಸರು ಅಫ್ತಾಬ್ ಅಮೀನ್ ಪೂನಾವಾಲಾ. ಈತ ತನ್ನ ಲಿವ್ ಇನ್ ಪಾರ್ಟನರ್ ಶ್ರದ್ಧಾಳನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ(Delhi Crime).

ದಿಲ್ಲಿ ಪೊಲೀಸರ ಪ್ರಕಾರ, ಅಫ್ತಾಬ್ ಮತ್ತು ಶ್ರದ್ಧಾ ಇಬ್ಬರು ಲಿವ್ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದರು. ಮೇ 18ರಂದು ಇಬ್ಬರ ಮಧ್ಯೆ ಜಗಳವಾಗಿದೆ. ಆಗ ಸಿಟ್ಟಿಗೆದ್ದ ಅಫ್ತಾಬ್, ಶ್ರದ್ಧಾಳನ್ನು ಕೊಲೆ ಮಾಡಿ, ದೇಹವನ್ನು 35 ಭಾಗಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಸುಮಾರು 18 ದಿನಗಳ ಬಳಿಕ ಮಧ್ಯ ರಾತ್ರಿ 2ಕ್ಕೆ ಮನೆಯಿಂದ ಹೊರಟು ದಿಲ್ಲಿಯ ವಿವಿಧೆಡೆ ಶವದ ತುಣುಕುಗಳನ್ನು ಎಸಿದಿದ್ದಾನೆ.

26 ವರ್ಷದ ಶ್ರದ್ಧಾ ಮುಂಬೈನಲ್ಲಿ ಬಹುರಾಷ್ಟ್ರೀಯ ಕಂಪನಿಯ ಕಾಲ್‌ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿ ಈ ಅಫ್ತಾಬ್‌ನ ಪರಿಚಯವಾಗಿ ಡೇಟಿಂಗ್ ಮಾಡುತ್ತಿದ್ದಳು. ಆದರೆ, ಈ ಸಂಬಂಧಕ್ಕೆ ಶ್ರದ್ಧಾಳ ಕುಟುಂಬ ಒಪ್ಪಿಗೆ ನೀಡಲಿಲ್ಲ. ಬಳಿಕ ಇಬ್ಬರೂ ಮುಂಬೈನಿಂದ ದಿಲ್ಲಿಗೆ ಓಡಿ ಬಂದು, ಮೆಹ್ರುಲಿ ಪ್ರದೇಶದ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು.

ಆದರೆ, ಕೆಲವು ದಿನಗಳ ನಂತರ ಶ್ರದ್ಧಾ ಫೋನ್ ಸ್ವೀಕರಿಸುವುದನ್ನು ನಿಲ್ಲಿಸಿದ ಬಳಿಕ ಅವರ ಕುಟುಂಬಸ್ಥರಿಗೆ ಅನುಮಾನ ಬಂದಿದೆ. ಅದೇ ಕಾರಣಕ್ಕೆ ಶ್ರದ್ಧಾಳ ತಂದೆ ವಿಕಾಸ್ ಮದಾನ್ ಅವರು ನವೆಂಬರ್ 8ರಂದು ದಿಲ್ಲಿಗೆ ಆಗಮಿಸಿ, ಶ್ರದ್ಧಾ ವಾಸವಿದ್ದ ಫ್ಲ್ಯಾಟ್‌ಗೆ ಹೋಗಿದ್ದಾರೆ. ಫ್ಲ್ಯಾಟ್ ಲಾಕ್ ಆಗಿದ್ದು ಕಂಡಿದ್ದಾರೆ. ಬಳಿಕ ಅವರು ಸೀದಾ ಪೊಲೀಸ್ ಸ್ಟೇಷನ್‌ಗೆ ದೂರು ಸಲ್ಲಿಸಿದ್ದಾರೆ. ಶ್ರದ್ಧಾಳ ತಂದೆಯ ದೂರು ಆಧರಿಸಿ ದಿಲ್ಲಿ ಪೊಲೀಸರು, ಅಫ್ತಾಬ್‌ನನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಇಡೀ ಘಟನೆಯ ಮಾಹಿತಿಯ ಬಯಲಾಗಿದೆ.

ಇದನ್ನೂ ಓದಿ | Delhi Triple Murder | 10 ದಿನಗಳ ಹಿಂದೆ ಆಗಿದ್ದ ಅವಮಾನಕ್ಕೆ ಸೇಡು; ಮನೆಗೆ ನುಗ್ಗಿ ದಂಪತಿ, ಕೆಲಸದಾಕೆಯ ಬರ್ಬರ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದಿಲ್ಲಿ ಮರ್ಡರ್

Murder: ಕಪಾಟಿನಲ್ಲಿತ್ತು ಯುವತಿಯ ಶವ; ಲಿವ್ ಇನ್‌ ಸಂಬಂಧದಲ್ಲಿದ್ದ ಗೆಳೆಯ ನಾಪತ್ತೆ!

Murder: ಮಗಳ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ತಂದೆ ಆಕೆಯನ್ನು ಹುಡುಕಿಕೊಂಡು ಆಕೆ ವಾಸವಿದ್ದ ದೆಹಲಿಯ ದ್ವಾರಕಾ ಪ್ರದೇಶದಲ್ಲಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಯ ಕಪಾಟಿನಲ್ಲಿ ಮಗಳ ಶವ ಪತ್ತೆಯಾಗಿದೆ. ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಆಕೆಯ ಸಂಗಾತಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

VISTARANEWS.COM


on

By

Murder
Koo

ಹೊಸದಿಲ್ಲಿ: ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ (Leave in relationship) ಯುವತಿಯೊಬ್ಬಳು ಶವವಾಗಿ (Murder) ಮನೆಯ ಕಪಾಟಿನಲ್ಲಿ ಪತ್ತೆಯಾಗಿರುವ ಘಟನೆ ಹೊಸದಿಲ್ಲಿಯ (delhi) ದ್ವಾರಕಾದಲ್ಲಿ (dwaraka) ನಡೆದಿದೆ.

ದ್ವಾರಕಾದ ದಾಬ್ರಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ರುಖ್ಸರ್ ರಜಪೂತ್ (26) ಕೊಲೆಯಾದ ಯುವತಿ. ಗೆಳೆಯ ವಿಪಾಲ್ ಟೈಲರ್ ಆಕೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ.

ಮೀರತ್‌ನಲ್ಲಿ ವಾಸವಾಗಿರುವ ರುಖ್ಸರ್ ರಜಪೂತ್ ಳ ತಂದೆ ಮಗಳನ್ನು ಹುಡುಕಿಕೊಂಡು ಬುಧವಾರ ರಾತ್ರಿ ಬಂದಾಗ ಆಕೆ ಕೊಲೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Assault Case : ಆಫೀಸ್‌ನಲ್ಲಿ ಟಾರ್ಚರ್‌ ಕೊಟ್ಟ ಮೇಲಾಧಿಕಾರಿಗೆ ಸುಪಾರಿ ಕೊಟ್ಟು ಹೊಡೆಸಿದ್ರು ಸಿಬ್ಬಂದಿ!

ಒಂದೂವರೆ ವರ್ಷಗಳ ಹಿಂದೆ ಭೇಟಿ

ರಜಪೂತ್ ಗುಜರಾತ್‌ನಲ್ಲಿ ಕರಕುಶಲ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಳು. ಒಂದೂವರೆ ವರ್ಷಗಳ ಹಿಂದೆ ಅಲ್ಲಿ ಆಕೆ ವಿಪಾಲ್‌ನನ್ನು ಭೇಟಿಯಾಗಿದ್ದಳು. ದೆಹಲಿಗೆ ಬಂದ ಬಳಿಕ ಅವರಿಬ್ಬರೂ ಒಟ್ಟಿಗೆ ವಾಸಿಸುತ್ತಿರುವ ವಿಷಯ ಆಕೆಯ ತಂದೆ ಮುಸ್ತಾಕಿನ್ ಮತ್ತು ಅವರ ಕುಟುಂಬಕ್ಕೆ ತಿಳಿದಿತ್ತು.

ತಂದೆಗೆ ಕೊನೆಯ ಕರೆ

ರುಖ್ಸರ್ ರಜಪೂತ್ ಬುಧವಾರ ಮಧ್ಯಾಹ್ನ ತಂದೆ ಮೊಹಮ್ಮದ್ ಮುಸ್ತಾಕಿನ್ ಅವರಿಗೆ ಕರೆ ಮಾಡಿದ್ದರು. ಆಗ ಆಕೆ ತುಂಬಾ ಅಸಮಾಧಾನದಿಂದ ಇದ್ದಿದ್ದು ಕಂಡು ಬಂದಿತ್ತು. ಸಂಜೆ ವೇಳೆಗೆ ಆಕೆಯ ಫೋನ್ ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಆತಂಕದಿಂದ ಮುಸ್ತಾಕಿನ್ ಅವರು ರಾತ್ರಿಯೇ ರುಖ್ಸಾರ್‌ನನ್ನು ಹುಡುಕಿಕೊಂಡು ತಮ್ಮ ಸಂಬಂಧಿಕರೊಂದಿಗೆ ದೆಹಲಿಗೆ ಬಂದಿದ್ದರು.

ಅವರು ರಜಪೂತ್ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಗೆ ಹೊರಗಿನಿಂದ ಬೀಗ ಹಾಕಲಾಗಿತ್ತು. ಅವರು ಬೀಗ ಎಲ್ಲಿ ಇಡುತ್ತಾರೆ ಎಂಬುದು ತಿಳಿದಿದ್ದ ಮುಸ್ತಾಕಿನ್ ಮನೆಯ ಬೀಗ ತೆರೆದು ಒಳಗೆ ಬಂದು ಹುಡುಕಿದಾಗ ಕಪಾಟಿನಲ್ಲಿ ರಜಪೂತ್ ಅವರ ಶವ ಪತ್ತೆಯಾಗಿದೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೇಹದ 15ಕ್ಕೂ ಹೆಚ್ಚು ಕಡೆ ಗಾಯ

ರುಖ್ಸರ್ ರಜಪೂತ್ ನ ಮುಖದ ಮೇಲೆ ಆಳವಾದ ಗಾಯಗಳು ಸೇರಿ ದೇಹದಾದ್ಯಂತ 15ಕ್ಕೂ ಹೆಚ್ಚು ಗಾಯಗಳಿದ್ದವು. ಮೇಲ್ನೋಟಕ್ಕೆ, ಮಹಿಳೆಯನ್ನು ಕತ್ತು ಹಿಸುಕಿ ಕೊಂದು ಹಾಕಲಾಗಿದೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೆಳೆಯ ನಾಪತ್ತೆ

ರುಖ್ಸರ್ ರಜಪೂತ್ ನ ಗೆಳೆಯ ವಿಪಾಲ್ ಟೈಲರ್ ನಾಪತ್ತೆಯಾಗಿರುವುದರಿಂದ ಆತನೇ ಪ್ರಮುಖ ಆರೋಪಿಯಾಗಿರಬಹುದು ಎಂದು ಶಂಕಿಸಲಾಗಿದೆ. ವಿಪಾಲ್ ಟೈಲರ್ ಎಂಬಾತನೊಂದಿಗೆ ಸುಮಾರು ಒಂದೂವರೆ ತಿಂಗಳಿನಿಂದ ಈ ಅಪಾರ್ಟ್ ಮೆಂಟ್ ನಲ್ಲಿ ರುಖ್ಸರ್ ರಜಪೂತ್ ವಾಸವಾಗಿದ್ದಳು. ರುಖ್ಸರ್ ರಜಪೂತ್ ಮದುವೆಯಾಗಿರುವುದಾಗಿ ಹೇಳಲಾಗಿದ್ದು, ಈ ಕುರಿತು ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಉಪ ಆಯುಕ್ತ (ದ್ವಾರಕಾ) ಅಂಕಿತ್ ಸಿಂಗ್ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ದಾಬ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದ ಎಂದು ಸಿಂಗ್ ಹೇಳಿದರು.

ಮುಸ್ತಾಕಿಮ್ ಹೇಳಿಕೆಯನ್ನು ಆಧರಿಸಿ ಕೊಲೆ ಪ್ರಕರಣವನ್ನು ದಾಖಲಿಸಿರುವ ಪೊಲೀಸರು ಆರೋಪಿಗಾಗಿ ಪತ್ತೆ ಹಚ್ಚಲು ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆಗಾಗಿ ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದಿಲ್ಲಿ ಮರ್ಡರ್

ಶ್ರದ್ಧಾ ವಾಳ್ಕರ್​ ಹತ್ಯೆ ಪ್ರಕರಣದಲ್ಲಿ ಸಿದ್ಧವಾಯ್ತು 3000 ಪುಟಗಳ ಕರಡು ಆರೋಪ ಪಟ್ಟಿ; ಕಾನೂನು ತಜ್ಞರಿಂದ ಪರಿಶೀಲನೆ

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂದು ಬಿಂಬಿಸಿದ್ದ.

VISTARANEWS.COM


on

draft chargesheet of Shraddha Walkar murder case Ready By Delhi Police
ಅಫ್ತಾಬ್​ ಮತ್ತು ಶ್ರದ್ಧಾ ವಾಳ್ಕರ್​
Koo

ನವ ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ಧಾ ವಾಳ್ಕರ್ (Shraddha Walkar)​ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಸುಮಾರು 3000 ಪುಟಗಳ ಕರಡು ಚಾರ್ಜ್​ಶೀಟ್​ ಸಿದ್ಧಪಡಿಸಿ ಇಟ್ಟಿದ್ದಾರೆ. ವಿಧಿವಿಜ್ಞಾನ ವರದಿಗಳು ಮತ್ತು ಎಲೆಕ್ಟ್ರಾನಿಕ್ ಪುರಾವೆಗಳು ಅಂದರೆ ಇಮೇಲ್​, ಮೊಬೈಲ್ ಫೋಟೋಗ್ರಾಫ್​, ಹಣ ವರ್ಗಾವಣೆ ದಾಖಲೆಗಳನ್ನು ಒಳಗೊಂಡಂತೆ ಸುಮಾರು 100 ಸಾಕ್ಷಿಗಳನ್ನು ಈ ಚಾರ್ಜ್​​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಈ ಕರಡು ದಾಖಲೆಯನ್ನು ಕಾನೂನು ತಜ್ಞರು ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಂತಿಮ ಆರೋಪ ಪಟ್ಟಿ ಸಿದ್ಧವಾಗಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ದೆಹಲಿಯಲ್ಲಿ 2022ರ ಮೇ ತಿಂಗಳಲ್ಲಿ ನಡೆದಿದ್ದ ಶ್ರದ್ಧಾ ವಾಳ್ಕರ್​ ಭೀಕರ ಹತ್ಯೆ ಪ್ರಕರಣ ಇತ್ತೀಚೆಗಷ್ಟೇ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ನ್ಯಾಯಾಂಗ ಬಂಧನದಲ್ಲಿಯೇ ಇದ್ದಾನೆ. ಈತ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದು, ಆಕೆಯ ಶವವನ್ನು 35ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿದ್ದ. ಬಳಿಕ 300 ಲೀಟರ್​ ಸಾಮರ್ಥ್ಯದ ಫ್ರಿಜ್​ ಖರೀದಿಸಿ ಆ ಶವದ ತುಂಡುಗಳನ್ನು ಅದರಲ್ಲಿ ಇಟ್ಟಿದ್ದ. ನಂತರ ತಮ್ಮ ಅಪಾರ್ಟ್​ಮೆಂಟ್​ ಸಮೀಪವೇ ಇದ್ದಿದ್ದ ಮೆಹ್ರೌಲಿ ಅರಣ್ಯದ ಹಲವು ಭಾಗಗಳಲ್ಲಿ ಅವುಗಳನ್ನು ಎಸೆದಿದ್ದ. ಮೆಹ್ರೌಲಿ ಅರಣ್ಯವನ್ನು ಜಾಲಾಡಿದಾಗ ಹಲವು ಮೂಳೆಗಳು ಪತ್ತೆಯಾಗಿದ್ದು, ಅವೆಲ್ಲ ಶ್ರದ್ಧಾಳದ್ದೇ ಎಂದೂ ಡಿಎನ್​ಎ ಪರೀಕ್ಷೆಯಲ್ಲಿ.

ಇದನ್ನೂ ಓದಿ: Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂಬುದನ್ನು ಬಿಂಬಿಸಲು ಹೋಗಿದ್ದ. ಶ್ರದ್ಧಾ ತಂದೆ-ತಾಯಿಯಿಂದ ದೂರವಾಗಿದ್ದರೂ, ಕೆಲವು ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಳು. ಆದರೆ ಬರುಬರುತ್ತ ಆಕೆ ಸಂಪರ್ಕಕ್ಕೆ ಸಿಗದಂತಾದಾಗ ಶ್ರದ್ಧಾಳ ತಂದೆಯ ಸ್ನೇಹಿತರೊಬ್ಬರು ಅನುಮಾನ ವ್ಯಕ್ತಪಡಿಸಿದ್ದರು. ಆಕೆಯ ತಂದೆಗೆ ಈ ವಿಚಾರವನ್ನು ಹೇಳಿದ್ದರು. ಅದರ ಬೆನ್ನಲ್ಲೇ ಶ್ರದ್ಧಾಳ ಅಪ್ಪ ದೂರು ದಾಖಲು ಮಾಡಿದ್ದರು. ತನಿಖೆ ನಡೆಸಿದಾಗ ಆಕೆ ಕೊಲೆಯಾಗಿದ್ದು ಗೊತ್ತಾಗಿದೆ. ನವೆಂಬರ್​ 12ರಂದು ಅಫ್ತಾಬ್​ ಅರೆಸ್ಟ್​ ಆಗಿದ್ದಾನೆ ಮತ್ತು ಕೊಲೆಯನ್ನು ತಾನೇ ಮಾಡಿದ್ದಾಗಿಯೂ ಒಪ್ಪಿಕೊಂಡಿದ್ದಾನೆ.

Continue Reading

ಕ್ರೈಂ

Shraddha Murder Case | ಶ್ರದ್ಧಾಳ ದೇಹ ಕತ್ತರಿಸಲು ಅಫ್ತಾಬ್​ ಬಳಸಿದ್ದು ಯಾವ ಆಯುಧ?-ಕೊನೆಗೂ ಬಯಲಾಯ್ತು ಸತ್ಯ!

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು.

VISTARANEWS.COM


on

Shraddha Murder Case
Koo

ನವ ದೆಹಲಿ: ಲಿವ್​ ಇನ್​ ಸಂಗಾತಿಯಿಂದ ಬರ್ಬರವಾಗಿ ಹತ್ಯೆಗೀಡಾದ ಶ್ರದ್ಧಾ ವಾಳ್ಕರ್​​ ಕೇಸ್​ ತನಿಖೆ ಮುಂದುವರಿದೆ. ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ದೆಹಲಿಯ ತಿಹಾರ್​ ಜೈಲಿನಲ್ಲಿದ್ದು, ಮತ್ತೊಂದೆಡೆ ಅವನ ವಿಚಾರಣೆಯೂ ನಡೆಯುತ್ತಿದೆ. ಅಫ್ತಾಬ್ ಮತ್ತು ಶ್ರದ್ಧಾ ಬೇರೆ ಧರ್ಮದವರು. ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್​ ಜತೆ ಬದುಕುತ್ತಿದ್ದಳು. ಕಳೆದ ಮೇ ತಿಂಗಳಲ್ಲಿ ಅಫ್ತಾಬ್​ ಆಕೆಯನ್ನು ಕೊಂದು, 35 ತುಂಡುಗಳಾಗಿ ಕತ್ತರಿಸಿ, ಅವುಗಳನ್ನೆಲ್ಲ ಫ್ರಿಜ್​​ನಲ್ಲಿಟ್ಟುಕೊಂಡಿದ್ದ. ಬಳಿಕ ತಮ್ಮ ಅಪಾರ್ಟ್​​ಮೆಂಟ್​​ಗೆ ಸಮೀಪದಲ್ಲೇ ಇರುವ ಮೆಹ್ರೌಲಿ ಅರಣ್ಯದಲ್ಲಿ ಎಸೆದಿದ್ದ. ಗುರುಗ್ರಾಮದ ಬಳಿಯ ಅರಣ್ಯದಲ್ಲೂ ಕೆಲವು ತುಂಡುಗಳನ್ನು ಎಸೆದಿದ್ದ.

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು. ಅಫ್ತಾಬ್​ ಶ್ರದ್ಧಾಳ ದೇಹವನ್ನು ಯಾವ ಆಯುಧದಿಂದ ಕತ್ತರಿಸಿದ್ದಾನೆ ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಆ ಮೂಳೆಗಳನ್ನು ಇನ್ನಷ್ಟು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಈಗ ಹೊರಬಿದ್ದಿದೆ. ಅಫ್ತಾಬ್​ ಪೂನಾವಾಲಾ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಕೊಂದು, ಬಳಿಕ ಗರಗಸದಲ್ಲಿ ಆಕೆಯ ದೇಹವನ್ನು ತುಂಡರಿಸಿದ್ದಾನೆ ಎಂಬುದು ಗೊತ್ತಾಗಿದೆ.

ಅಫ್ತಾಬ್​ ಪೂನಾವಾಲಾ ಅಪಾರ್ಟ್​ಮೆಂಟ್​​ನಿಂದ ಪೊಲೀಸರು ಹಲವು ಬಗೆಯ ಮಾರಕಾಸ್ತ್ರಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಆದರೆ ಅದರಲ್ಲಿ ಶ್ರದ್ಧಾಳನ್ನು ತುಂಡರಿಸಲು ಆತ ಯಾವ ಆಯುಧ ಬಳಸಿದ್ದ ಗೊತ್ತಾಗಿರಲಿಲ್ಲ. ಅಫ್ತಾಬ್​ ಮಂಪರು ಪರೀಕ್ಷೆ ವೇಳೆ, ತಾನು ಚೀನಿ ಕ್ಲೀವರ್ (ಮಾಂಸವನ್ನು ಕತ್ತರಿಸಲು ಬಳಸುವ ದೊಡ್ಡ ಚಾಕು) ಬಳಸಿದ್ದಾಗಿ ಹೇಳಿಕೊಂಡಿದ್ದಾನೆ ಎಂಬ ವರದಿ ಬಂದಿದ್ದರೂ, ಅದು ಸ್ಪಷ್ಟವಾಗಿರಲಿಲ್ಲ.

ಇದನ್ನೂ ಓದಿ: Shraddha Murder Case| ಹೌದು ನಾನೇ ಶ್ರದ್ಧಾಳ ಕೊಲೆ ಮಾಡಿದೆ; ಮಂಪರು ಪರೀಕ್ಷೆಯಲ್ಲೂ ಅದೇ ಉತ್ತರ ಕೊಟ್ಟ ಅಫ್ತಾಬ್​

Continue Reading

ದಿಲ್ಲಿ ಮರ್ಡರ್

Shraddha Walkar | ತನ್ನ ಕುಟುಂಬದ ಸದಸ್ಯರ ಭೇಟಿಗೆ ನಿರಾಕರಿಸುತ್ತಿರುವ ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್

ಶ್ರದ್ಧಾ ವಾಳ್ಕರ್ (Shraddha Walkar) ಕೊಲೆ ಆರೋಪಿ, 28 ವರ್ಷದ ಅಫ್ತಾಬ್ ಪೂನಾವಾಲ ನವೆಂಬರ್ 26ರಿಂದ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ.

VISTARANEWS.COM


on

Aaftab used Chinese knife To Cut Shraddha Body
Koo

ನವದೆಹಲಿ: ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಳ್ಕರಳನ್ನು (Shraddha Walkar) ತುಂಡು ತುಂಡಾಗಿ ಕತ್ತರಿಸಿ ಭಯಾನಕವಾಗಿ ಕೊಲೆ ಮಾಡಿದ್ದ ಆರೋಪಿ ಅಫ್ತಾಬ್ ಪೂನಾವಾಲ (Aftab Poonawala) ಈಗ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಆತನನ್ನು ಭೇಟಿಯಾಗಲು ಬಂದ ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲು ನಿರಾಕರಿಸುತ್ತಿದ್ದಾನೆಂದು ತಿಳಿದು ಬಂದಿದೆ.

28 ವರ್ಷದ ಅಫ್ತಾಬ್‌ ನವೆಂಬರ್ 26ರಿಂದ ತಿಹಾರ್ ಜೈಲಿನಲ್ಲಿದ್ದಾನೆ. ಆತ ತನ್ನನ್ನು ಯಾರು ಭೇಟಿ ಮಾಡಬೇಕೆಂಬ ಕುರಿತು ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ಇನ್ನಷ್ಟೇ ನೀಡಬೇಕಿದೆ. ನಿಯಮಗಳ ಪ್ರಕಾರ, ಜೈಲಿನಲ್ಲಿರುವ ವ್ಯಕ್ತಿ ವಾರಕ್ಕೆ ಎರಡು ಸಾರಿ, ತನ್ನ ಕುಟುಂಬದವರನ್ನು ಭೇಟಿ ಮಾಡಲು ಅವಕಾಶವಿದೆ.

ಸದ್ಯ ಜೈಲಿನಲ್ಲಿ ತನ್ನ ಪಾಡಿಗೆ ತಾನು ಇರುತ್ತಿರುವ ಆರೋಪಿ ಪೂನಾವಾಲ ಈ ವಾರದ ಬಳಿಕ, ಯಾರನ್ನೋ ಭೇಟಿಯಾಗುವ ಬಗ್ಗೆ ಸಹ ಕೈದಿಗಳ ಜತೆಗೆ ಮಾತನಾಡಿಕೊಂಡಿದ್ದಾನೆಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಆತ ಇದವರೆಗೂ ಯಾರನ್ನು ಭೇಟಿ ಮಾಡಬೇಕೆಂಬ ಮಾಹಿತಿಯನ್ನು ಹಂಚಿಕೊಂಡಿಲ್ಲ. ಜತೆಗೆ, ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲೂ ಮುಂದಾಗುತ್ತಿಲ್ಲ.

ಇದನ್ನೂ ಓದಿ | Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

Continue Reading
Advertisement
assault case in bengaluru
ಬೆಂಗಳೂರು50 mins ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ1 hour ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

pakistan team
ಕ್ರೀಡೆ1 hour ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Gold Rate Today
ಕರ್ನಾಟಕ1 hour ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Puttakkana makkalu sahana dead
ಕಿರುತೆರೆ2 hours ago

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Rekha Jhunjhunwala
ವಾಣಿಜ್ಯ2 hours ago

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

viral news
ಕ್ರಿಕೆಟ್2 hours ago

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Sunita Williams
ವಿದೇಶ2 hours ago

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Namma Metro
ಬೆಂಗಳೂರು2 hours ago

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ20 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ22 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ22 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌